Warm Water: ಬೆಳಗ್ಗೆ ಎದ್ದು 1 ಲೋಟ ಬೆಚ್ಚನೆಯ ನೀರು ಕುಡಿಯುವುದರಿಂದ ಏನೆಲ್ಲಾ ಪ್ರಯೋಜನ?

warm Water Benefits:ಆರೋಗ್ಯ( Health) ಕಾಪಾಡಿಕೊಳ್ಳಲು ಜನರು ಏನೆಲ್ಲಾ ಸಾಹಸಗಳನ್ನು ಮಾಡುತ್ತಾರೆ, ಹಾಗೆಯೇ ಬೆಳಗ್ಗೆ ಎದ್ದು ಒಂದು ಲೋಟ ಬೆಚ್ಚನೆಯ ನೀರು ಕುಡಿಯುವುದರಿಂದ ಏನೆಲ್ಲಾ ಪ್ರಯೋಜನವಿದೆ ಎಂಬುದು ತಿಳಿದಿದೆಯೇ?.

Warm Water: ಬೆಳಗ್ಗೆ ಎದ್ದು 1 ಲೋಟ ಬೆಚ್ಚನೆಯ ನೀರು ಕುಡಿಯುವುದರಿಂದ ಏನೆಲ್ಲಾ ಪ್ರಯೋಜನ?
Warm Water
Follow us
TV9 Web
| Updated By: ನಯನಾ ರಾಜೀವ್

Updated on: Jun 01, 2022 | 10:14 AM

ಆರೋಗ್ಯ( Health) ಕಾಪಾಡಿಕೊಳ್ಳಲು ಜನರು ಏನೆಲ್ಲಾ ಸಾಹಸಗಳನ್ನು ಮಾಡುತ್ತಾರೆ, ಹಾಗೆಯೇ ಬೆಳಗ್ಗೆ ಎದ್ದು ಒಂದು ಲೋಟ ಬೆಚ್ಚನೆಯ ನೀರು( Water) ಕುಡಿಯುವುದರಿಂದ ಏನೆಲ್ಲಾ ಪ್ರಯೋಜನವಿದೆ ಎಂಬುದು ತಿಳಿದಿದೆಯೇ?.

ಬೆಳಗ್ಗೆ ಎದ್ದ ತಕ್ಷಣ ನೀರು ಕುಡಿಯುವುದರಿಂದ ಸಿಗುವ ಪ್ರಯೋಜನಗಳು: ನೀರು ದೇಹಕ್ಕೆ ಅತಿ ಮುಖ್ಯವಾದದ್ದು. ಉತ್ತಮ ಆರೋಗ್ಯಕ್ಕೆ ನೀರು ಅತ್ಯಗತ್ಯ ಎಂಬುದರಲ್ಲಿ ಸಂದೇಹವಿಲ್ಲ. ಮೆದುಳಿನ ಕಾರ್ಯ, ದೈಹಿಕ ಕಾರ್ಯಕ್ಷಮತೆಯಿಂದ ಜೀರ್ಣಕ್ರಿಯೆಯವರೆಗೆ ಎಲ್ಲವನ್ನೂ ನಿಯಂತ್ರಿಸುವಲ್ಲಿ ನೀರು ಪ್ರಮುಖ ಪಾತ್ರ ವಹಿಸುತ್ತದೆ.

ವಿಷ ಜೀವಾಣುಗಳನ್ನು ದೇಹದಿಂದ ಹೊರಹಾಕುತ್ತದೆ: ಪ್ರತಿದಿನ ಬೆಳಿಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರು ಕುಡಿಯುವುದರಿಂದ ನಮ್ಮ ದೇಹದಲ್ಲಿರುವಂತಹ ವಿಷ ಜೀವಾಣುಗಳು ದೇಹದಿಂದ ಹೊರ ಹೋಗುತ್ತವೆ. ಈ ಬಿಸಿ ನೀರು ನಮ್ಮ ದೇಹದಲ್ಲಿರುವಂತಹ ನಾವು ಸೇವಿಸಿರುವ ಆಹಾರವನ್ನು ತುಂಡರಿಸಿ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ಬೆಳಿಗ್ಗೆ ಚಹಾ ಮತ್ತು ಕಾಫಿ ಕುಡಿಯಬೇಡಿ: ಹಲವು ಮಂದಿ ತಮ್ಮ ದಿನವನ್ನು ಚಹಾ ಅಥವಾ ಕಾಫಿಯೊಂದಿಗೆ ಆರಂಭಿಸುತ್ತಾರೆ. ಆದರೆ ನೀವು ಒಂದು ಲೋಟ ಬೆಚ್ಚಗಿನ ನೀರಿನಿಂದ ದಿನವನ್ನು ಪ್ರಾರಂಭಿಸಿದರೆ, ಅದು ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಇದರಿಂದ ಉದರ ಸಂಬಂಧಿಸಿದ ಸಮಸ್ಯೆಗಳಿಂದ ದೂರ ಇರುವುದರ ಜೊತೆಗೆ ಒತ್ತಡದಿಂದಲೂ ಪರಿಹಾರ ಪಡೆಯಬಹುದು ಎಂದು ಹೇಳಲಾಗುತ್ತದೆ.

ಮಲಬದ್ಧತೆ ನಿವಾರಣೆ : ಒಂದು ಲೋಟ ಬಿಸಿ ನೀರು ಮುಂಜಾನೆ ಕುಡಿಯೋದರಿಂದ ದೀರ್ಘಕಾಲದ ವರೆಗೆ ನಿಮ್ಮನ್ನು ಭಾದಿಸುತ್ತಿರುವ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ಪ್ರತಿದಿನ ಒಂದು ಲೋಟ ಬಿಸಿ ನೀರು ಕುಡಿಯುವುದನ್ನು ಅಭ್ಯಾಸ ಮಾಡಿಕೊಂಡರೆ ನಮ್ಮ ಜೀರ್ಣಕ್ರಿಯೆಗೂ ಸಹ ತುಂಬಾ ಸಹಾಯಕವಾಗುತ್ತದೆ.

ಬೆಚ್ಚನೆಯ ನೀರು ಕುಡಿಯುವುದರಿಂದಾಗುವ ಇತರೆ ಪ್ರಯೋಜನಗಳು -ಮುಂಜಾನೆ ಎದ್ದೊಡನೆ ನೀರು ಕುಡಿಯುವುದರಿಂದ ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ.

-ಹೊಟ್ಟೆ ನೋವು ನಿವಾರಣೆ: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬೆಚ್ಚಗಿನ ನೀರು ಕುಡಿಯುವುದರಿಂದ ನಿಮಗಿರುವ ಹೊಟ್ಟೆ ನೋವು ಸಹ ನಿವಾರಣೆಯಾಗುತ್ತದೆ.

– ಪ್ರತಿದಿನ ಬೆಳಿಗ್ಗೆ ಎದ್ದ ಬಳಿಕ ಒಂದು ಲೋಟ ಬಿಸಿನೀರು ಕುಡಿಯುವುದರಿಂದ ಜೀರ್ಣಶಕ್ತಿ ಬಲಗೊಳ್ಳುತ್ತದೆ, ಅಂದರೆ ಬಿಸಿನೀರು ಕುಡಿದ ನಂತರ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ.

– ಇದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

– ನೀವು ಎದ್ದ ತಕ್ಷಣ ನೀರು ಕುಡಿಯುವುದು ನಿಮ್ಮ ದೇಹವನ್ನು ಪುನರ್ಜಲೀಕರಣಗೊಳಿಸಲು ಸಹಾಯ ಮಾಡುತ್ತದೆ.

-ಬೆಳಗಿನ ಉಪಾಹಾರದ ಮೊದಲು ಒಂದು ಲೋಟ ನೀರು ದಿನವಿಡೀ ನಿಮ್ಮ ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತದೆ.

– ಬೆಳಿಗ್ಗೆ ನೀರು ಕುಡಿಯುವುದರಿಂದ ತೂಕ ಕಡಿಮೆಯಾಗುತ್ತದೆ.

– ಎದ್ದ ನಂತರ ನೀರು ಕುಡಿಯುವುದರಿಂದ ಮಾನಸಿಕ ಕಾರ್ಯಕ್ಷಮತೆ ಸುಧಾರಿಸುತ್ತದೆ

– ನಿಂಬೆ ಸೇರಿಸಿ ಕುಡಿದರೆ ದೇಹದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!