ಬಿಳಿ ಜಂಬೂ ಅಥವಾ ಪನ್ನೇರಳೆ ಹಣ್ಣು ರುಚಿಯಷ್ಟೇ ಆರೋಗ್ಯಕರ; ರೋಗನಿರೋಧಕ ಶಕ್ತಿ ಹೆಚ್ಚಿಸುವ ಈ ಹಣ್ಣನ್ನು ಒಮ್ಮೆ ತಿಂದು ನೋಡಿ

ಬಿಳಿ ಜಂಬೂ ಹಣ್ಣಿನಲ್ಲಿರುವ ವಿಟಮಿನ್ ಸಿ ಅಂಶವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಚರ್ಮದ ಹೊಳಪನ್ನು ಕಾಪಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಬಿಳಿ ಜಂಬೂ ಅಥವಾ ಪನ್ನೇರಳೆ ಹಣ್ಣು ರುಚಿಯಷ್ಟೇ ಆರೋಗ್ಯಕರ; ರೋಗನಿರೋಧಕ ಶಕ್ತಿ ಹೆಚ್ಚಿಸುವ ಈ ಹಣ್ಣನ್ನು ಒಮ್ಮೆ ತಿಂದು ನೋಡಿ
ಬಿಳಿ ಜಂಬೂ ಅಥವಾ ಪನ್ನೇರಳೆ
Follow us
preethi shettigar
| Updated By: Skanda

Updated on: Jun 07, 2021 | 8:57 AM

ಜಂಬೂ ಹಣ್ಣು ಎಂದು ಹೆಚ್ಚು ಜನಪ್ರಿಯವಾಗಿರುವ ಈ ಹಣ್ಣನ್ನು ಸಾಮಾನ್ಯವಾಗಿ ಪನ್ನೇರಳೆ ಎಂದು ಕರೆಯುತ್ತಾರೆ. ಹಲವು ಬಾರಿ ನಾವು ಒಂದು ಹಣ್ಣಿನ ವಿಶೇಷತೆಯನ್ನು ಹೇಳುವ ಕಾಲಕ್ಕೆ ಅದರ ಹೆಸರು ಗೊತ್ತಿದ್ದರೂ ಮಾಹಿತಿ ಇಲ್ಲದಂತಾಗುತ್ತದೆ. ಇದಕ್ಕೆ ಕಾರಣ ಆ ಹಣ್ಣಿನ ಹೆಸರು ಒಂದೊಂದು ಭಾಗದಲ್ಲಿ ಒಂದೊಂದು ರೀತಿಯಾಗಿರುತ್ತದೆ. ಹಾಗೆಯೇ ಬಿಳಿ ಜಂಬೂ ಹಣ್ಣು ಕೂಡ. ಜಂಬೂ ಹಣ್ಣು ಕೆಂಪು, ಬಿಳಿ, ಗುಲಾಬಿ ಮತ್ತು ಹಸಿರು ಬಣ್ಣದಲ್ಲಿ ಲಭ್ಯವಿದೆ. ಅದರಲ್ಲೂ ಬಿಳಿ ಬಣ್ಣದ ಜಂಬೂ ಹಣ್ಣು ವಿಶೇಷವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೊಂದಿದೆ.

ಆಗ್ನೇಯ ಏಷ್ಯಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕೆಲವು ಸ್ಥಳಗಳಲ್ಲಿ ಬಿಳಿ ಜಂಬೂ ಹಣ್ಣನ್ನು ಹೆಚ್ಚು ಬೆಳೆಯಲಾಗುತ್ತದೆ. ಇನ್ನು ಕರ್ನಾಟಕ್ಕೆ ಬಂದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತು ಇನ್ನಿತರ ಭಾಗಗಳಲ್ಲಿ ಈ ಹಣ್ಣುಗಳನ್ನು ಬೇಸಿಗೆ ಕಾಲದಲ್ಲಿ ಬೆಳೆಯಲಾಗುತ್ತದೆ. ಈ ಹಣ್ಣು ತಿನ್ನಲು ಎಷ್ಟು ರುಚಿಕರವಾಗಿದೆಯೋ ಅಷ್ಟೇ ಆರೋಗ್ಯಕ್ಕೂ ಒಳ್ಳೆಯದು. ಹೀಗಾಗಿ ಬಿಳಿ ಜಂಬೂ ಹಣ್ಣಿನ ಆರೋಗ್ಯಯುತ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.

ಬಿಳಿ ಜಂಬೂ ಹಣ್ಣಿನ ಆರೋಗ್ಯಯುತ ಪ್ರಯೋಜನಗಳು ಬಿಳಿ ಜಂಬೂವಿನಲ್ಲಿ ವಿಟಮಿನ್ ಸಿ ಮತ್ತು ಎ, ಫೈಬರ್, ಕ್ಯಾಲ್ಸಿಯಂ, ಥಯಾಮಿನ್, ನಿಯಾಸಿನ್ ಮತ್ತು ಕಬ್ಬಿಣದ ಅಂಶವಿದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಬಿಳಿ ಜಂಬೂ ಹಣ್ಣಿನಲ್ಲಿರುವ ವಿಟಮಿನ್ ಸಿ ಅಂಶವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಚರ್ಮದ ಹೊಳಪನ್ನು ಕಾಪಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ ತೂಕದ ನಿರ್ವಹಣೆಗೆ ಸಹಾಯಕವಾಗಿದ್ದು, ಬಿಳಿ ಜಂಬೂವಿನಲ್ಲಿರುವ ಫೈಬರ್ ಅಂಶ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ. ಅಲ್ಲದೆ ಈ ಹಣ್ಣಿನಲ್ಲಿ ನೀರಿನ ಅಂಶ ಹೆಚ್ಚಾಗಿರುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಅತಿಸಾರದಂತಹ ಸಮಸ್ಯೆಯನ್ನು ದೂರ ಮಾಡುತ್ತದೆ.

ಉಷ್ಣತೆಯನ್ನು ಕಡಿಮೆ ಮಾಡುತ್ತದೆ ಶೇಕಡಾ 93 ರಷ್ಟು ನೀರಿನ ಅಂಶವನ್ನು ಹೊಂದಿರುವ ಬಿಳಿ ಜಂಬೂ ಹಣ್ಣು ಬೇಸಿಗೆಯಲ್ಲಿ ದೇಹವನ್ನು ದೂರವಿರಿಸುತ್ತದೆ ಮತ್ತು ದೇಹವನ್ನು ತಂಪಾಗಿಡುತ್ತದೆ. ಹೀಗಾಗಿ ಇದು ದೇಹದಲ್ಲಿ ನೀರಿನಾಂಶವನ್ನು ಹೆಚ್ಚಿಸುತ್ತದೆ ಮತ್ತು ಡಿಹೈಡ್ರೇಷನ್ ಸಮಸ್ಯೆಯನ್ನು ದೂರ ಮಾಡುತ್ತದೆ.

ಹೃದಯದ ಆರೋಗ್ಯವನ್ನು ಕಾಪಾಡುತ್ತದೆ ಬಿಳಿ ಜಂಬೂವಿನಲ್ಲಿರುವ ಫೈಬರ್ ಅಂಶವು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ. ಇದರಿಂದ ಹೃದಯಾಘಾತ ಅಥವಾ ಪಾರ್ಶ್ವವಾಯು ಮುಂತಾದ ಹೃದಯ ಸಂಬಂಧಿ ಕಾಯಿಲೆಗಳು ದೂರವಾಗುತ್ತದೆ.

ಸೋಂಕನ್ನು ತಡೆಯುತ್ತದೆ ಈ ಹಣ್ಣಿನಲ್ಲಿ ಆ್ಯಂಟಿಮೈಕ್ರೊಬಿಯಲ್ ಗುಣಗಳಿವೆ. ಇದು ಸೋಂಕು ನಿಯಂತ್ರಣ ಶಕ್ತಿ ಹೊಂದಿದ್ದು, ಕೊವಿಡ್​ನಂತಹ ಈ ಸಮಯದಲ್ಲಿ ಹೆಚ್ಚು ಉಪಯುಕ್ತಕಾರಿಯಾಗಿದೆ.

ಪಿತ್ತಜನಕಾಂಗ ಮತ್ತು ಮೂತ್ರಪಿಂಡವನ್ನು ಶುದ್ಧೀಕರಿಸುತ್ತದೆ ಜಂಬೂ ಹಣ್ಣಿನ ಕಷಾಯ ಮತ್ತು ರಸವು ಯಕೃತ್ತು ಮತ್ತು ಮೂತ್ರಪಿಂಡಗಳನ್ನು ವಿಷಕಾರಿ ವಸ್ತುಗಳಿಂದ ಶುದ್ಧೀಕರಿಸಲು ಉಪಯುಕ್ತವಾಗಿದೆ. ಈ ಮೂಲಕ ಪಿತ್ತಜನಕಾಂಗ ಮತ್ತು ಮೂತ್ರಪಿಂಡದ ಆರೋಗ್ಯವನ್ನು ಸುಧಾರಿಸುತ್ತದೆ.

ಇದನ್ನೂ ಓದಿ:

ಒಂದೇ ತೆರನಾದ ಅಭ್ಯಾಸ ಬಿಡಿ; ರೋಗನಿರೋಧಕ ಶಕ್ತಿ ಹೆಚ್ಚಿಸಲು ಆಹಾರ ಪದ್ಧತಿಯಲ್ಲಿ ವೈವಿಧ್ಯತೆ ಇರಲಿ

ಖಾಲಿ ಹೊಟ್ಟೆಯಲ್ಲಿ ಬಾಳೆ ದಿಂಡಿನ ರಸ ಸೇವಿಸಿ; ವರ್ಷಕ್ಕೆ ಎರಡು ಬಾರಿಯಾದರು ಊಟದ ಜೊತೆಗೆ ಪಲ್ಯ ಮಾಡಿ ಬಡಿಸಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ