Eye Care: ಕಣ್ಣುಗಳ ಆರೋಗ್ಯ ಕಾಪಾಡಲು ಹೀಗೆ ಮಾಡಿ

Health Tips In Kannada: ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಗಂಭೀರ ರೋಗಗಳು ನಿಮ್ಮ ಕಣ್ಣುಗಳ ಮೇಲೆ ಪರಿಣಾಮ ಬೀರುತ್ತವೆ.

Eye Care: ಕಣ್ಣುಗಳ ಆರೋಗ್ಯ ಕಾಪಾಡಲು ಹೀಗೆ ಮಾಡಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 08, 2021 | 5:41 PM

ಮನುಷ್ಯನ ಅತ್ಯಂತ ಪ್ರಮುಖ ಅಂಗಗಳಲ್ಲಿ ಕಣ್ಣುಗಳು ಕೂಡ ಸೇರಿವೆ. ಹೀಗಾಗಿಯೇ ನಯನಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸ ಬೇಕಾಗುತ್ತದೆ. ಅದರಲ್ಲೂ ಇಂದಿನ ಡಿಜಿಟಲ್ ಯುಗದಲ್ಲಿ ಗ್ಯಾಜೆಟ್​ಗಳ ವೀಕ್ಷಣೆಯಿಂದ ಕಣ್ಣುಗಳ ಮೇಲೆ ದುಷ್ಫರಿಣಾಮಗಳು ಬೀರುತ್ತವೆ. ಇದರಿಂದ ದೃಷ್ಟಿದೋಷದ ಸಮಸ್ಯೆ ಕಾಡಬಹುದು. ಆದರೆ ಆರಂಭದಿಂದಲೂ ಕಣ್ಣುಗಳ ಬಗ್ಗೆ ವಿಶೇಷ ಕಾಳಜಿವಹಿಸಿದರೆ ದೃಷ್ಟಿ ಹೀನದಂತಹ ಸಮಸ್ಯೆಯಿಂದ ಪಾರಾಗಬಹುದು. ಹೀಗೆ ನಯನಗಳನ್ನು ಆರೋಗ್ಯವಾಗಿಡಲು ಕೆಳಗೆ ನೀಡಲಾದ ಸಲಹೆಗಳನ್ನು ಅನುಸರಿಸಬಹುದು.

ಪೌಷ್ಟಿಕ ಆಹಾರ ಸೇವಿಸಿ: ನಿಮ್ಮ ಜೀವನಶೈಲಿಯನ್ನು ಆರೋಗ್ಯಕರವಾಗಿಡಲು ಉತ್ತಮ ಆಹಾರ ಪದ್ಧತಿ ಬಹಳ ಮುಖ್ಯ. ಜೀವಸತ್ವಗಳು, ಖನಿಜಗಳು ಮತ್ತು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರಿಂದ ಅನೇಕ ಸಮಸ್ಯೆಗಳನ್ನು ದೂರ ಮಾಡಬಹುದು. ಇದರಲ್ಲಿ, ವಿಟಮಿನ್ ಎ, ಸಿ, ಇ, ಖನಿಜಗಳು, ಸತು, ಒಮೆಗಾ -3 ಕೊಬ್ಬಿನಾಮ್ಲಗಳು ಸಮೃದ್ಧವಾಗಿರುವ ಆಹಾರವನ್ನು ಹೆಚ್ಚಾಗಿ ಸೇವಿಸಿ. ಇದು ನಿಮ್ಮ ಕಣ್ಣುಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ, ತರಕಾರಿಗಳು, ಸಮುದ್ರಾಹಾರ ಮತ್ತು ಗಿಡಮೂಲಿಕೆಗಳು ಸಮೃದ್ಧವಾಗಿರುವ ಆಹಾರಗಳನ್ನು ಸೇವಿಸುವ ಮೂಲಕ ಕಣ್ಣಿನ ಆರೋಗ್ಯವನ್ನು ಹೆಚ್ಚಿಸಬಹುದು.

ಕ್ಯಾರೊಟಿನಾಯ್ಡ್​ಗಳು ಕಣ್ಣುಗಳಿಗೆ ಪ್ರಯೋಜನಕಾರಿ: ಕಣ್ಣಿನ ದೃಷ್ಟಿ ಹೆಚ್ಚಿಸಲು, ಕ್ಯಾರೋಟಿನ್ ಹೊಂದಿರುವ ವಸ್ತುಗಳನ್ನು ಸೇವಿಸಬೇಕು. ಇದು ನಮ್ಮ ರೆಟಿನಾದಲ್ಲಿ ಇರುವ ಕ್ಯಾರೊಟಿನಾಯ್ಡ್‌ಗಳಲ್ಲಿರುವ ಲುಟೀನ್ ಮತ್ತು ಕ್ಸಾಂಥೈನ್ ಅನ್ನು ಹೆಚ್ಚಿಸುತ್ತದೆ. ಕ್ಯಾರೋಟಿನಾಯ್ಡ್​ಗಳನ್ನು ಪಡೆಯಲು ಹಸಿರು ಎಲೆಗಳ ತರಕಾರಿಗಳು ಮತ್ತು ಮೊಟ್ಟೆಗಳನ್ನು ಹೆಚ್ಚಾಗಿ ಸೇವಿಸಿ. ಕ್ಯಾರೊಟಿನಾಯ್ಡ್​ ಕಣ್ಣುಗಳಲ್ಲಿನ ವರ್ಣದ್ರವ್ಯದ ಸಾಂದ್ರತೆಯನ್ನು ಸುಧಾರಿಸುವಲ್ಲಿ ಸಹ ಪ್ರಯೋಜನಕಾರಿ. ಇಂತಹ ಆಹಾರ ಪದ್ಧತಿಯನ್ನು ಅನುಸರಿಸುವ ಮುನ್ನ ವೈದ್ಯರ ಸಲಹೆ ಪಡೆಯಿರಿ.

ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಗಂಭೀರ ರೋಗಗಳು ನಿಮ್ಮ ಕಣ್ಣುಗಳ ಮೇಲೆ ಪರಿಣಾಮ ಬೀರುತ್ತವೆ. ಆಪ್ಟಿಕ್ ನರದ ಉರಿಯೂತದಂತಹ ಕೆಲವು ಪರಿಸ್ಥಿತಿಗಳು ದೃಷ್ಟಿಯ ಮೇಲೆ ಪರಿಣಾಮ ಬೀರಬಹುದು. ಅದಕ್ಕಾಗಿಯೇ ನೀವು ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಮುಖ್ಯ.

ಕಣ್ಣುಗಳ ಸುರಕ್ಷತೆ: ಮೊಬೈಲ್ ಹಾಗೂ ಲ್ಯಾಪ್ ಟಾಪ್ ಮುಂದೆ ಗಂಟೆಗಟ್ಟಲೇ ಸಮಯ ಕಳೆಯುವವರೇ ಹೆಚ್ಚು. ಆದಾಗ್ಯೂ, ಇದು ನಮ್ಮ ಕಣ್ಣುಗಳ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳಬೇಕು. ಇದಕ್ಕಾಗಿ ಕನ್ನಡಕಗಳನ್ನು ಧರಿಸಬಹುದು. ಕಂಪ್ಯೂಟರ್ ಗ್ಲಾಸ್​ಗಳು ಈಗ ಎಲ್ಲೆಡೆ ಲಭ್ಯ. ಇದಲ್ಲದೆ ಬಿಸಿಲಿಗೆ ಕಾಲಿಡುವ ಮುನ್ನ ಸನ್ ಗ್ಲಾಸ್ ಧರಿಸಿ. UV A ಮತ್ತು UV B ಯ ಹಾನಿಕಾರಕ ಕಿರಣಗಳಿಂದ ನಿಮ್ಮ ಕಣ್ಣುಗಳನ್ನು ರಕ್ಷಿಸಲು ಇಂತಹ ಸನ್​ಗ್ಲಾಸ್​ಗಳು ಅತ್ಯಗತ್ಯ.

20-20-20 ನಿಯಮ ಅನುಸರಿಸಿ: ಕಂಪ್ಯೂಟರ್​ನಲ್ಲಿ ಕೆಲಸ ಮಾಡುವಾಗ 20-20-20 ಸೂತ್ರವನ್ನು ಅನುಸರಿಸಿ. ಇದರರ್ಥ ಪ್ರತಿ ನಿಮಿಷವೂ ನಿಮ್ಮ ಕಣ್ಣುಗಳಿಂದ 20 ಅಡಿ ದೂರದಲ್ಲಿರುವ ಯಾವುದನ್ನಾದರೂ 20 ಸೆಕೆಂಡುಗಳ ಕಾಲ ನೋಡಿ. ಇದರಿಂದ ಸಮಯಕ್ಕೆ ಸರಿಯಾಗಿ ವಿರಾಮಗಳನ್ನು ತೆಗೆದುಕೊಳ್ಳುವ ಮೂಲಕ ನೀವು ಕಣ್ಣಿನ ಒತ್ತಡವನ್ನು ಕಡಿಮೆ ಮಾಡಬಹುದು.

ಇದನ್ನೂ ಓದಿ: Health Tips: ಕೊತ್ತಂಬರಿ ನೆನೆಸಿದ ನೀರು ಕುಡಿದ್ರೆ ಸಿಗುವ ಆರೋಗ್ಯಕರ ಪ್ರಯೋಜನ ಒಂದಾ ಎರಡಾ..!

ಇದನ್ನೂ ಓದಿ: Health Tips: ನೀವು ಹಸಿ ಹಾಲು ಕುಡಿತೀರಾ? ಹಾಗಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ

(know these natural tips to improve eye vision)

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್