AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ವಚೆಗೆ ನಿಂಬೆ ಮತ್ತು ಜೇನುತುಪ್ಪವನ್ನು ಹಚ್ಚುವುದರಿಂದ ದೊರಕುವ ಅದ್ಭುತ ಪ್ರಯೋಜನಗಳು

Lemon and Honey: ಪ್ರತಿ ಋತುವಿನಲ್ಲೂ ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಈ ಸಮಸ್ಯೆಗಳಿಗೆ ಮಾರುಕಟ್ಟೆಗಳಲ್ಲಿ ಸಿಗುವ ದುಬಾರಿ ಉತ್ಪನ್ನಗಳನ್ನು ಬಳಸುವ ಬದಲು, ಮನೆಮದ್ದುಗಳಾಗಿ ಉಪಯೋಗಿಸುವ ನಿಂಬೆ ಮತ್ತು ಜೇನುತುಪ್ಪವನ್ನು ಬೆರೆಸಿ ತ್ವಚೆಗೆ ಹಚ್ಚಿಕೊಳ್ಳಬಹುದು. ಇದು ಹಲವು ರೀತಿಯಲ್ಲಿ ನಿಮ್ಮ ತ್ವಚೆಗೆ ಪ್ರಯೋಜನಕಾರಿಯಾಗಿದೆ.

ತ್ವಚೆಗೆ ನಿಂಬೆ ಮತ್ತು ಜೇನುತುಪ್ಪವನ್ನು ಹಚ್ಚುವುದರಿಂದ ದೊರಕುವ ಅದ್ಭುತ ಪ್ರಯೋಜನಗಳು
Lemon and honey
ಮಾಲಾಶ್ರೀ ಅಂಚನ್​
| Edited By: |

Updated on: Aug 02, 2023 | 8:33 PM

Share

ಜೇನುತುಪ್ಪ ಮತ್ತು ನಿಂಬೆ ಎರಡೂ ಹಲವು ವಿಧದಲ್ಲಿ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಜೇನುತುಪ್ಪವು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿದ್ದರೆ, ನಿಂಬೆ ಆ್ಯಂಟಿವೈರಲ್ ಗುಣಲಕ್ಷಣಗಳನ್ನು ಹೊಂದಿದೆ. ನಮ್ಮನ್ನು ಭಾದಿಸುವ ಹಲವು ರೀತಿಯ ಸೋಂಕುಗಳನ್ನು ತಡೆಗಟ್ಟಲು ಮತ್ತು ಸೋಂಕುಗಳ ಕಾಯಿಲೆಯನ್ನು ಗುಣಪಡಿಸಲು ಈ ಎರಡೂ ವಸ್ತುಗಳನ್ನು ಹಿಂದಿನಿಂದಲೂ ಮನೆಮದ್ದಾಗಿ ಬಳಸಲಾಗುತ್ತಿದೆ. ಇದಲ್ಲದೆ ಜೇನುತುಪ್ಪ ಮತ್ತು ನಿಂಬೆ ಚರ್ಮಕ್ಕೂ ಕೂಡ ವಿವಿಧ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಇವೆರಡೂ ಚರ್ಮದ ಸೋಂಕನ್ನು ಕಡಿಮೆ ಮಾಡುವುದರ ಜೊತೆಗೆ ಪಿಗ್ಮೆಂಟೇಷನ್ ಕಡಿಮೆ ಮಾಡಲು ಸಹಕಾರಿ. ಇದಲ್ಲದೆ, ನಿಂಬೆಯಲ್ಲಿರುವ ವಿಟಮಿನ್ ಸಿ ಅಂಶ ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ ಮತ್ತು ಮುಖದಲ್ಲಿ ಕಂಡುಬರುವ ವಯಸ್ಸಾಗುವಿಕೆ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ. ನಿಂಬೆ ಮತ್ತು ಜೇನುತುಪ್ಪ ಇವೆರಡನ್ನೂ ಒಟ್ಟಿಗೆ ಮುಖಕ್ಕೆ ಹಚ್ಚುವುದರಿಂದ ತ್ವಚೆಗೆ ಯಾವ ರೀತಿಯ ಲಾಭವಾಗುತ್ತದೆ ಎಂಬುದನ್ನು ನೋಡೋಣ.

ತ್ವಚೆಗೆ ನಿಂಬೆ ಮತ್ತು ಜೇನುತುಪ್ಪದ ಪ್ರಯೋಜನಗಳು:

ಸನ್ಬರ್ನ್ ತಡೆಗಟ್ಟಲು ಸಹಕಾರಿ:

ಇತೀಚಿನ ದಿನಗಳಲ್ಲಿ ಸನ್ ಬರ್ನ್ ಸಮಸ್ಯೆ ಹೆಚ್ಚಾಗುತ್ತಿದೆ. ನಿಂಬೆ ಮತ್ತು ಜೇನುತುಪ್ಪ ಇವೆರಡೂ ಮುಖದ ಮೇಲೆ ಸನ್ಬರ್ನ್ ಸಮಸ್ಯೆಯಿಂದ ಉಂಟಾಗುವ ಸುಡುವ ಸಂವೇದನೆಯನ್ನು ಶಮನಗೊಳಿಸುತ್ತದೆ. ಮತ್ತು ಚರ್ಮ ಕೆಂಪು ಬಣ್ಣಕ್ಕೆ ತಿರುಗುವುದನ್ನು ಕಡಿಮೆ ಮಾಡುತ್ತದೆ. ಹೀಗೆ ನಿಂಬೆ ಮತ್ತು ಜೇನುತುಪ್ಪದ ಪೇಸ್ಟ್ ಸೂರ್ಯನ ಬೆಳಕಿನಿಂದ ಉಂಟಾಗುವ ಸನ್ಬರ್ನ್ ನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ನಿಂಬೆಯಲಿನ್ಲ ವಿಟಮಿನ್ ಸಿ ಅಂಶ ಸನ್ಬರ್ನ್ ನ್ನು ತಡೆಯುತ್ತದೆ ಮತ್ತು ಜೇನುತುಪ್ಪವು ಚರ್ಮವನ್ನು ತಂಪಾಗಿರಿಸುತ್ತದೆ.

ಕಪ್ಪು ವರ್ತುಲಗಳನ್ನು ಕಡಿಮೆ ಮಾಡಲು ಸಹಕಾರಿ:

ಹೆಚ್ಚಿನವರಿಗೆ ಡಾರ್ಕ್ ಸರ್ಕಲ್ ಸಮಸ್ಯೆ ಕಾಡುತ್ತಿರುತ್ತದೆ. ಇದು ಅತಿಯಾದರೆ ಸೌಂದರ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಈ ಸಮಸ್ಯೆಯನ್ನು ಕಡಿಮೆ ಮಾಡಲು ನೀವು ನಿಂಬೆ ಮತ್ತು ಜೇನುತುಪ್ಪದ ಪೇಸ್ಟ್ ನ್ನು ಕಣ್ಣಿನ ಕೆಳಭಾಗಕ್ಕೆ ಹಚ್ಚಿಕೊಳ್ಳಬಹುದು. ಇದು ಕಪ್ಪು ವರ್ತುಲಗಳನ್ನು ಕಡಿಮೆ ಮಾಡುವುದರ ಜೊತೆಗೆ ಮುಖವನ್ನು ತೇವಾಂಶಭರಿತವಾಗಿ ಇರಿಸುತ್ತದೆ.

ಇದನ್ನೂ ಓದಿ: ನಿಮಗೆ ಉಗುರು ಕಚ್ಚುವ ಅಭ್ಯಾಸವಿದೆಯಾ? ಇದು ನಿಮ್ಮ ಹಲ್ಲಿನ ಆರೋಗ್ಯಕ್ಕೆ ಮಾರಕ

ಪಿಗ್ಮೆಂಟೇಶನ್ ನ್ನು ತೊಡೆದುಹಾಕಲು ಸಹಕಾರಿ ನಿಂಬೆ ಮತ್ತು ಜೇನುತುಪ್ಪ:

ಪಿಗ್ಮೆಂಟೇಶನ್ ನ್ನು ಕಡಿಮೆ ಮಾಡಲು ಜೇನುತುಪ್ಪ ಮತ್ತು ನಿಂಬೆ ಎರಡೂ ಸಹಕಾರಿ. ನಿಂಬೆ ವಿಟಮಿನ್ ಸಿ ಮತ್ತು ಸಿಟ್ರಿಕ್ ಆಮ್ಲವನ್ನು ಹೊಂದಿರುತ್ತದೆ, ಇದು ಮುಖದ ಮೇಲಿನ ಕಪ್ಪು ಕಲೆಗಳನ್ನು ಕಡಿಮೆಗೊಳಿಸುತ್ತದೆ ಮತ್ತು ಚರ್ಮದ ಬಣ್ಣವನ್ನು ನ್ನು ಸುಧಾರಿಸುತ್ತದೆ.

ಒಣ ಚರ್ಮದ ಚಿಕಿತ್ಸೆಗಾಗಿ ನಿಂಬೆ ಮತ್ತು ಜೇನುತುಪ್ಪ:

ಒಣ ತ್ವಚೆಯ ಸಮಸ್ಯೆಗೆ ಜೇನುತುಪ್ಪ ಮತ್ತು ನಿಂಬೆ ಬಳಕೆ ಪ್ರಯೋಜನಕಾರಿ. ನಿಂಬೆಯಲ್ಲಿರುವ ಉತ್ಕರ್ಷಣ ನಿರೋಧಕ ಗುಣ ಚರ್ಮದಲ್ಲಿ ಕಾಲಜಿನ್ ಅಂಶವನ್ನು ಉತ್ತೇಜಿಸುತ್ತದೆ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ಕಡಿಮೆ ಮಾಡುತ್ತದೆ. ಜೊತೆಗೆ ಜೇನುತುಪ್ಪವು ಚರ್ಮವನ್ನು ತೇವಗೊಳಿಸುತ್ತದೆ. ಇವೆರಡರ ಪೇಸ್ಟ್ ನ್ನು ಮುಖಕ್ಕೆ ಹಚ್ಚುವುರಿಂದ ಚರ್ಮದಲ್ಲಿ ಕಾಣಿಸಿಕೊಳ್ಳುವ ಸುಕ್ಕುಗಳನ್ನು ಕೂಡಾ ನಿವಾರಣೆ ಮಾಡಬಹುದು.

ಇದನ್ನೂ ಓದಿ: ಪದೇ ಪದೇ ತಲೆನೋವು ನಿಮ್ಮನ್ನು ಕಾಡುತ್ತಿದೆಯಾ? ಹಾಗಾದರೆ ಇಲ್ಲಿದೆ ಸರಳ ಮನೆಮದ್ದು!

ಮೊಡವೆಗಳ ನಿವಾರಣೆಗೆ ನಿಂಬೆ ಮತ್ತು ಜೇನುತುಪ್ಪ:

ಮೊಡವೆಗಳಿಗೆ ಚಿಕಿತ್ಸೆ ನೀಡಲು ಜೇನುತುಪ್ಪ ಮತ್ತು ನಿಂಬೆಯ ಬಳಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಈ ಎರಡೂ ವಸ್ತುಗಳು ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿಫಂಗಲ್ ಗುಣಗಳಿಂದ ಸಮೃದ್ಧವಾಗಿದೆ. ಇದು ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ ಮೊಡವೆಗಳ ಕಲೆ ಗುರುತುಗಳನ್ನು ಕಡಿಮೆ ಮಾಡಲು ಕೂಡ ಸಹಕಾರಿಯಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ