Lemon Grass: ಜೀರ್ಣಕಾರಿ ಸಮಸ್ಯೆಗಳಿಂದ ಹೈರಾಣವಾಗಿದ್ದರೆ ಮಜ್ಜಿಗೆ ಹುಲ್ಲನ್ನು ಈ ರೀತಿ ಬಳಸಿ

ಮಜ್ಜಿಗೆ ಹುಲ್ಲು ನೈಸರ್ಗಿಕ ಗುಣಗಳನ್ನು ಹೊಂದಿದ್ದು, ಬಹಳಷ್ಟು ಆರೋಗ್ಯ ಪ್ರಯೋಜನಗಳನ್ನು ಕೂಡ ಒಳಗೊಂಡಿದೆ. ನಿಮ್ಮ ಮನೆಯ ಅಂಗಳದಲ್ಲಿಯೂ ಸುಲಭವಾಗಿ ಯಾವುದೇ ಆರೈಕೆ ಇಲ್ಲದೆ ಬೆಳೆಸಬಹುದಾಗಿದೆ. ಹಾಗಾದರೆ ಮಜ್ಜಿಗೆ ಹುಲ್ಲಿನ ಪ್ರಯೋಜನಗಳೇನು? ಮನೆಯಲ್ಲಿ ಬೆಳೆಸುವುದರಿಂದ ಸಿಗುವ ಉಪಯೋಗಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

Lemon Grass: ಜೀರ್ಣಕಾರಿ ಸಮಸ್ಯೆಗಳಿಂದ ಹೈರಾಣವಾಗಿದ್ದರೆ ಮಜ್ಜಿಗೆ ಹುಲ್ಲನ್ನು ಈ ರೀತಿ ಬಳಸಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Jun 13, 2024 | 9:51 AM

ಲೆಮನ್ ಗ್ರಾಸ್ ಅಥವಾ ಮಜ್ಜಿಗೆ ಹುಲ್ಲಿನ (Lemon Grass) ಬಗ್ಗೆ ನೀವು ಕೇಳಿರಬಹುದು. ಈ ಹುಲ್ಲು ಬಹಳ ವಿಭಿನ್ನವಾದ ಪರಿಮಳ ಮತ್ತು ಅತ್ಯಧಿಕ ರುಚಿಯನ್ನು ಹೊಂದಿರುತ್ತದೆ. ಜೊತೆಗೆ ನೈಸರ್ಗಿಕ ಗುಣಗಳನ್ನು ಹೊಂದಿದ್ದು, ಬಹಳಷ್ಟು ಆರೋಗ್ಯ ಪ್ರಯೋಜನಗಳನ್ನು ಕೂಡ ಒಳಗೊಂಡಿದೆ. ನಿಮ್ಮ ಮನೆಯ ಅಂಗಳದಲ್ಲಿಯೂ ಸುಲಭವಾಗಿ ಯಾವುದೇ ಆರೈಕೆ ಇಲ್ಲದೆ ಬೆಳೆಸಬಹುದಾಗಿದೆ. ಹಾಗಾದರೆ ಮಜ್ಜಿಗೆ ಹುಲ್ಲಿನ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ತಲೆನೋವನ್ನು ಕಡಿಮೆ ಮಾಡುತ್ತದೆ:

ಇದು ನಿಮ್ಮ ಮನಸ್ಥಿತಿಯನ್ನು ಸುಧಾರಿಸುತ್ತದೆ. ನಿಮಗೆ ಬೇಸರ ಅಥವಾ ಒತ್ತಡ ಏನೇ ಇರಲಿ ಇದರ ಒಂದು ಕಪ್ ಚಹಾ ಅಥವಾ ಇದನ್ನು ಸೇರಿಸಿ ಮಾಡಿದ ಮಜ್ಜಿಗೆ ಕುಡಿಯುವುದರಿಂದ ಇದೆಲ್ಲಾ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಅಲ್ಲದೆ ತಲೆನೋವನ್ನು ಕೂಡ ಕಡಿಮೆ ಮಾಡುತ್ತದೆ. ಇದರ ಎಣ್ಣೆಯನ್ನು ಬಳಸುವುದರಿಂದ, ನಿಮ್ಮ ಮನೆಯಲ್ಲಿ ಇಡುವುದರಿಂದ ಸುಂದರವಾದ ಸುಂಗಧ ಹರಡುತ್ತದೆ. ಮನೆಯ ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ.

ರೋಗನಿರೋಧಕ ಶಕ್ತಿ:

ನೀವು ಮಜ್ಜಿಗೆ ಹುಲ್ಲಿನ ಚಹಾವನ್ನು ತಯಾರಿಸಿ ಅಥವಾ ಮಜ್ಜಿಗೆ ಜೊತೆಗೆ ಬೆರೆಸಿ ಕುಡಿಯಬಹುದು. ಈ ರೀತಿ ಮಾಡುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.

ಇದನ್ನೂ ಓದಿ: ನೆನೆಸಿದ ಖರ್ಜೂರ ತಿನ್ನುವುದರಿಂದ ಹೃದಯಕ್ಕೆ ಒಳ್ಳೆಯದು

ಜೀರ್ಣಕಾರಿ ಸಮಸ್ಯೆಗಳು:

ಮಜ್ಜಿಗೆ ಹುಲ್ಲಿನ ರಸವು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ. ಮಜ್ಜಿಗೆ ಹುಲ್ಲಿನ ಚಹಾ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದು ಹೊಟ್ಟೆ ಉಬ್ಬರ ಮತ್ತು ಅಜೀರ್ಣದಂತಹ ಸಾಮಾನ್ಯ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ. ಇದನ್ನು ಮಸಾಲಾ ಮಜ್ಜಿಗೆ ರೀತಿಯಲ್ಲಿ ಮಾಡಿ ಕುಡಿಯಬಹುದು. ಇದು ಬಾಯಿಗೆ ರುಚಿ ಕೊಡುವುದಲ್ಲದೆ ಆರೋಗ್ಯಕ್ಕೂ ಒಳ್ಳೆಯದು.

ಚರ್ಮಕ್ಕೆ ಒಳ್ಳೆಯದು:

ನಿಂಬೆ ಹುಲ್ಲು ಅಥವಾ ಮಜ್ಜಿಗೆ ಹುಲ್ಲು ಆರೋಗ್ಯಕ್ಕೆ ಮಾತ್ರವಲ್ಲದೆ ನಿಮ್ಮ ಚರ್ಮಕ್ಕೂ ಒಳ್ಳೆಯದು. ಮೊಡವೆ ಮತ್ತು ಎಣ್ಣೆಯುಕ್ತ ಚರ್ಮದಿಂದ ಬಳಲುತ್ತಿರುವವರು ತಮ್ಮ ಚರ್ಮದ ಆರೈಕೆಯಲ್ಲಿ ಈ ಹುಲ್ಲನ್ನು ಸೇರಿಸಿಕೊಳ್ಳಬಹುದು. ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ನೈಸರ್ಗಿಕ ಕ್ಲೆನ್ಸರ್ ಆಗಿ ಕಾರ್ಯನಿರ್ವಹಿಸುತ್ತದೆ. ನೀವು ಈ ನೀರಿನಿಂದ ನಿಮ್ಮ ಮುಖವನ್ನು ತೊಳೆಯಬಹುದು ಅಥವಾ ಇದನ್ನು ರುಬ್ಬಿ ಫೇಸ್ ಪ್ಯಾಕ್ ನಂತೆ ಹಚ್ಚಿಕೊಳ್ಳಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:15 pm, Tue, 11 June 24

ತಾಜಾ ಸುದ್ದಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!