AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Water: ಎಳನೀರಿಗೆ ನಿಂಬೆ ರಸವನ್ನು ಮಿಶ್ರಣ ಮಾಡಿ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದೋ, ಕೆಟ್ಟದ್ದೋ?

ಎಳನೀರಿನಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ, ಅನೇಕ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಎಳನೀರು ಕುಡಿಯಲು ಸಲಹೆ ನೀಡಲಾಗುತ್ತದೆ. ಎಳನೀರು ಅನೇಕ ಆರೋಗ್ಯ ಪ್ರಯೋಜನಕಾರಿ ಗುಣಗಳನ್ನು ಹೊಂದಿದೆ.

Coconut Water: ಎಳನೀರಿಗೆ ನಿಂಬೆ ರಸವನ್ನು ಮಿಶ್ರಣ ಮಾಡಿ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದೋ, ಕೆಟ್ಟದ್ದೋ?
ಎಳನೀರು
Follow us
ನಯನಾ ರಾಜೀವ್
|

Updated on:Feb 21, 2023 | 9:18 AM

ಎಳನೀರಿನಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ, ಅನೇಕ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಎಳನೀರು ಕುಡಿಯಲು ಸಲಹೆ ನೀಡಲಾಗುತ್ತದೆ. ಎಳನೀರು ಅನೇಕ ಆರೋಗ್ಯ ಪ್ರಯೋಜನಕಾರಿ ಗುಣಗಳನ್ನು ಹೊಂದಿದೆ. ಅದಕ್ಕಾಗಿಯೇ ಇದನ್ನು ಸೂಪರ್‌ಫುಡ್ ಎಂದು ಪರಿಗಣಿಸಲಾಗುತ್ತದೆ. ತೆಂಗಿನ ನೀರಿಗೆ ನಿರ್ಜಲೀಕರಣದ ವಿರುದ್ಧ ಹೋರಾಡುವ ಶಕ್ತಿ ಮಾತ್ರವಲ್ಲದೆ, ತ್ವರಿತ ಶಕ್ತಿಯನ್ನು ನೀಡುವ ಮತ್ತು ಚರ್ಮವನ್ನು ಆರೋಗ್ಯವಾಗಿಡುವ ಸಾಮರ್ಥ್ಯವೂ ಇದೆ.

ತೆಂಗಿನ ನೀರಿನಂತೆ, ನಿಂಬೆ ಸೇವನೆಯು ಸಹ ಅನೇಕ ಪ್ರಯೋಜನಗಳನ್ನು ಹೊಂದಿದೆ. ಇದರಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಆದರೆ ಈಗ ಈ ಎರಡು ಆರೋಗ್ಯಕರ ಆಹಾರಗಳು ಒಂಟಿಯಾಗಿ ಸೇವಿಸಿದಾಗ ನೀಡುವಷ್ಟು ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ? ಇದಕ್ಕೆ ಉತ್ತರ ಏನೆಂದು ತಿಳಿಯೋಣ.

ಮತ್ತಷ್ಟು ಓದಿ: Coconut Water Disadvantages: ನಿತ್ಯ ಎಳನೀರು ಕುಡಿಯಬೇಡಿ, ಈ ಆರೋಗ್ಯ ಸಮಸ್ಯೆಗಳು ಉದ್ಭವಿಸಬಹುದು

ವಾಸ್ತವವಾಗಿ, ಎಳನೀರು ಮತ್ತು ನಿಂಬೆ ರಸದ ಸಂಯೋಜನೆಯ ಬಗ್ಗೆ ಇತ್ತೀಚೆಗೆ ಟ್ವಿಟ್ಟರ್‌ನಲ್ಲಿ ಟ್ವೀಟ್ ವೈರಲ್ ಆಗಿರುವಾಗ ಚರ್ಚೆ ಹುಟ್ಟಿಕೊಂಡಿತು. ಅರುಣ್ ದೇವ್ ಎಂಬ ವ್ಯಕ್ತಿ ಟ್ವಿಟ್ಟರ್‌ನಲ್ಲಿ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ ವ್ಯಾಪಾರಿಯೊಬ್ಬರು ಎಳನೀರಿಗೆ ನಿಂಬೆ ರಸವನ್ನು ಹಿಂಡುತ್ತಿರುವುದನ್ನು ಕಾಣಬಹುದು.

ಇದು (ತೆಂಗಿನ ನೀರು ಮತ್ತು ನಿಂಬೆ ರಸ) ಇಷ್ಟೊಂದು ಜನಪ್ರಿಯ ಸಂಯೋಜನೆ ಎಂದು ನನಗೆ ತಿಳಿದಿರಲಿಲ್ಲ ಎಂದು ಅರುಣ್ ದೇವ್ ಟ್ವಿಟರ್‌ನಲ್ಲಿ ಬರೆದಿದ್ದಾರೆ. ಬಹುಶಃ ನೀವೂ ಕೂಡ ಈ ಸಂಯೋಜನೆಯ ಬಗ್ಗೆ ಕೇಳಿರಬಹುದು. ಆದರೆ ಈಗ ಈ ಸಂಯೋಜನೆಯು ಆರೋಗ್ಯಕ್ಕೆ ಪ್ರಯೋಜನಕಾರಿ ಅಥವಾ ಹಾನಿಕಾರಕವೇ ಎಂದು ತಿಳಿಯುವುದು ಮುಖ್ಯವಾಗಿದೆ.

ತಜ್ಞರು ಏನು ಹೇಳುತ್ತಾರೆ? ಈ ಪೋಸ್ಟ್‌ಗೆ ಹಲವರು ವಿಭಿನ್ನ ಕಾಮೆಂಟ್‌ಗಳು ಮತ್ತು ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಈ ಕಾಂಬಿನೇಷನ್ ಮಂಗಳೂರಿನಲ್ಲಿ ಸಾಕಷ್ಟು ಜನಪ್ರಿಯವಾಗಿದೆ ಎಂದು ಕೆಲವರು ಹೇಳಿದ್ದಾರೆ. ಇಂಡಿಯನ್ ಎಕ್ಸ್ ಪ್ರೆಸ್ ವರದಿಯ ಪ್ರಕಾರ, ತಜ್ಞರು ಹೇಳುವಂತೆ ಬೇಸಿಗೆ ಶುರುವಾಗಿದೆ ದೇಹವನ್ನು ಹೈಡ್ರೇಟ್​ ಆಗಿರಿಸಿಕೊಳ್ಳುವುದು ಮುಖ್ಯವಾಗುತ್ತದೆ.

ನಿಂಬೆ ಮತ್ತು ತೆಂಗಿನ ನೀರಿನ ಸಂಯೋಜನೆಯು ಉತ್ತಮ ಆಯ್ಕೆಯಾಗಿದೆ. ಇದು ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿರುವ ಕಾರಣ. ಈ ಸಂಯೋಜನೆಯನ್ನು ಸಾಮಾನ್ಯ ನೀರಿನ ಜಗ್ಗೆ ಬಳಸಬಹುದು. ಈ ಸಂಯೋಜನೆಯು ಕ್ರೀಡಾಪಟುಗಳಿಗೆ ಉತ್ತಮ ಆಯ್ಕೆಯಾಗಿದೆ, ಏಕೆಂದರೆ ಇದು ನೈಸರ್ಗಿಕ ಶಕ್ತಿ ಪಾನೀಯದಂತೆ ಕಾರ್ಯನಿರ್ವಹಿಸುತ್ತದೆ.

ಯಾವ ಜನರು ದೂರವಿರಬೇಕು? ತಜ್ಞರ ಪ್ರಕಾರ, ತೆಂಗಿನ ನೀರು ಮತ್ತು ನಿಂಬೆ ಎರಡೂ ತಮ್ಮದೇ ಆದ ಪ್ರಯೋಜನಗಳನ್ನು ಹೊಂದಿವೆ. ಇವೆರಡೂ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ. ತೆಂಗಿನ ನೀರು ಪೊಟ್ಯಾಸಿಯಮ್ ಮತ್ತು ಇತರ ವಿದ್ಯುದ್ವಿಚ್ಛೇದ್ಯಗಳಲ್ಲಿ ಸಮೃದ್ಧವಾಗಿದೆ, ಇದು ನಿರ್ಜಲೀಕರಣಕ್ಕೆ ಬಹಳಷ್ಟು ಸಹಾಯ ಮಾಡುತ್ತದೆ. ನಿಂಬೆ ವಿಟಮಿನ್ ಸಿ ಯ ಉತ್ತಮ ಮೂಲವಾಗಿದೆ ಮತ್ತು ಸಿಟ್ರಿಕ್ ಆಮ್ಲದಲ್ಲಿ ಸಮೃದ್ಧವಾಗಿದೆ, ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ತೆಂಗಿನ ನೀರಿನಲ್ಲಿ ನಿಂಬೆ ರಸವನ್ನು ಬೆರೆಸಿ ಕುಡಿಯುವುದು ಹೆಚ್ಚು ಆರೋಗ್ಯಕರ ಪಾನೀಯವಾಗಿದೆ. ಆದಾಗ್ಯೂ, ಎಲೆಕ್ಟ್ರೋಲೈಟ್ ಅಸಮತೋಲನ, ಅಧಿಕ ರಕ್ತದೊತ್ತಡ, ಮೂತ್ರಪಿಂಡದ ಅಪಸಾಮಾನ್ಯ ಕ್ರಿಯೆಯಿಂದ ಬಳಲುತ್ತಿರುವ ಜನರು ಇದನ್ನು ಬಳಸುವುದನ್ನು ತಪ್ಪಿಸಬೇಕು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:00 am, Tue, 21 February 23

ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್