AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Constipation In Children : ಮಕ್ಕಳಲ್ಲಿ ಮಲಬದ್ಧತೆ: ಮಕ್ಕಳಲ್ಲಿ ಮಲಬದ್ಧತೆ ಸಮಸ್ಯೆ ಕಂಡುಬಂದರೆ ಏನು ಮಾಡಬೇಕು? ಸರಳವಾದ ಗೃಹ ಸಲಹೆಗಳು ಇಲ್ಲಿವೆ

Constipation: ಹೆಚ್ಚಿನ ಮಕ್ಕಳು ದಿನವಿಡೀ ಕೆಲವೇ ಲೋಟ ನೀರು ಕುಡಿಯುತ್ತಾರೆ. ಇದು ಅವರ ಒಟ್ಟಾರೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಮಕ್ಕಳಿಗೆ ನಿಯಮಿತವಾಗಿ ನೀರು ಕುಡಿಯುವಂತೆ ಮಾಡಿ.

Constipation In Children : ಮಕ್ಕಳಲ್ಲಿ ಮಲಬದ್ಧತೆ: ಮಕ್ಕಳಲ್ಲಿ ಮಲಬದ್ಧತೆ ಸಮಸ್ಯೆ ಕಂಡುಬಂದರೆ ಏನು ಮಾಡಬೇಕು? ಸರಳವಾದ ಗೃಹ ಸಲಹೆಗಳು ಇಲ್ಲಿವೆ
ಮಕ್ಕಳಲ್ಲಿ ಮಲಬದ್ಧತೆ ಸಮಸ್ಯೆ ಕಂಡುಬಂದರೆ ಏನು ಮಾಡಬೇಕು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 02, 2023 | 10:42 AM

Share

ಮಲಬದ್ಧತೆ ದೊಡ್ಡವರಲ್ಲಷ್ಟೇ ಅಲ್ಲ; ಮಕ್ಕಳಿಗೂ (Children) ಕಾಡುವ ಸಮಸ್ಯೆ. ನಿಮ್ಮ ಮಗುವು ಶೌಚಾಲಯಕ್ಕೆ ಹೋಗಿ ದೀರ್ಘಕಾಲ ಕುಳಿತುಕೊಂಡರೆ, ಮಲವನ್ನು ಹೊರಹಾಕಲು ತೊಂದರೆ ಪಡುತ್ತಿದೆ ಎಂದು ಅರ್ಥ ಮಾಡಿಕೊಳ್ಳಿ. ನಂತರ ಮಗುವಿಗೆ ಹೊಟ್ಟೆ ನೋವು, ಹಸಿವಿನ ಕೊರತೆ, ಉಬ್ಬುವುದು ಭಾಸವಾಗುತ್ತದೆ. ಮಲಬದ್ಧತೆ ಒಂದು ಸಾಮಾನ್ಯ ಸಮಸ್ಯೆಯಾಗಿದ್ದರೂ, ಮಗುವಿಗೆ (Kids) ವಾರಕ್ಕೆ ಮೂರು ಅಥವಾ ಕಡಿಮೆ ಕರುಳಿನ ಚಲನೆ ಇದ್ದರೆ, ಅದನ್ನು ಮಲಬದ್ಧತೆ (Constipation) ಎಂದು ಪರಿಗಣಿಸಲಾಗುತ್ತದೆ. ಮಲಬದ್ಧತೆ ಉಂಟಾದಾಗ, ಮಲವು ಗಟ್ಟಿಯಾಗುತ್ತದೆ. ಇದರಿಂದಾಗಿ ಮಲ ಹೊರಹಾಕಲು ತುಂಬಾ ಕಷ್ಟವಾಗುತ್ತದೆ.

ಕೆಲವೊಮ್ಮೆ ಮಕ್ಕಳಲ್ಲಿ ಕಡಿಮೆ ನೀರು ಕುಡಿಯುವುದು, ಆಹಾರದಲ್ಲಿ ಹೆಚ್ಚಿನ ಕೊಬ್ಬು ಸೇರಿದಂತೆ ಫೈಬರ್ ಸಮೃದ್ಧವಾಗಿರುವ ಆಹಾರವನ್ನು ಸೇವಿಸದಿರುವುದು, ವ್ಯಾಯಾಮವನ್ನು ಕಡಿಮೆ ಮಾಡುವುದು ಇತ್ಯಾದಿಗಳಿಂದ ಉಂಟಾಗುತ್ತದೆ. ಆದರೆ ಗಾಬರಿಯಾಗುವ ಅಗತ್ಯವಿಲ್ಲ. ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವುದರಿಂದ ಮಕ್ಕಳಲ್ಲಿ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಬಹುದು. ಒತ್ತಡದಿಂದಲೂ ಕೆಲವೊಮ್ಮೆ ಮಕ್ಕಳಲ್ಲಿ ಮಲಬದ್ಧತೆ ಉಂಟಾಗುತ್ತದೆ.

ಹೆಚ್ಚಿನ ಮಕ್ಕಳು ದಿನವಿಡೀ ಕೆಲವೇ ಲೋಟ ನೀರು ಕುಡಿಯುತ್ತಾರೆ. ಇದು ಅವರ ಒಟ್ಟಾರೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಮಕ್ಕಳಿಗೆ ನಿಯಮಿತವಾಗಿ ನೀರು ಕುಡಿಯುವಂತೆ ಮಾಡಿ. ದಿನಕ್ಕೆ 6 ರಿಂದ 7 ಗ್ಲಾಸ್ ನೀರು ಕುಡಿಯುವುದು ಅವಶ್ಯಕ. ಮಕ್ಳಳಿಗೆ ಮಲಬದ್ಧತೆ ಇದ್ದರೆ, ನೀವು ಕುಡಿಯುವ ನೀರಿನ ಪ್ರಮಾಣವನ್ನು ಹೆಚ್ಚಿಸಬಹುದು. ಈ ಕಾರಣದಿಂದಾಗಿ, ದೇಹದಿಂದ ವಿಷಯುಕ್ತಗಳನ್ನು ಸುಲಭವಾಗಿ ತೆಗೆದುಹಾಕಲಾಗುತ್ತದೆ.

ನಾರಿನಂಶವಿರುವ ಆಹಾರವನ್ನು ಸೇವಿಸುವುದರಿಂದ ಮಲಬದ್ಧತೆ ನಿವಾರಣೆ: ಸುಗಮ ಕರುಳಿನ ಚಲನೆಗೆ ಫೈಬರ್ ಭರಿತ ಆಹಾರವನ್ನು ಸೇವಿಸುವುದು ಸಹ ಅಗತ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆಚ್ಚಾಗಿ ಮ್ಯಾಗಿ, ಜಂಕ್ ಫುಡ್, ಚಿಪ್ಸ್ ಮತ್ತು ಬಿಸ್ಕತ್‌ಗಳನ್ನು ತಿನ್ನುತ್ತಾರೆ. ಇದು ಮಲಬದ್ಧತೆಗೆ ಕಾರಣವಾಗುತ್ತದೆ. ಫೈಬರ್ನಲ್ಲಿ ಸಮೃದ್ಧವಾಗಿರುವ ಆಹಾರಗಳು ದೇಹದಿಂದ ಕರುಳಿನ ಚಲನೆಗೆ ಸಹಾಯ ಮಾಡುತ್ತದೆ. ಧಾನ್ಯಗಳು, ಹಸಿರು ತರಕಾರಿಗಳು, ನಾರಿನ ಹಣ್ಣುಗಳು, ಬೀನ್ಸ್ ಮತ್ತು ಬೇಳೆಕಾಳುಗಳನ್ನು ತಿನ್ನಬೇಕು.

ಅಗಸೆ ಬೀಜ ಮಲಬದ್ಧತೆಯನ್ನು ನಿವಾರಿಸುತ್ತದೆ: ಅಗಸೆ ಬೀಜಗಳು ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಏಕೆಂದರೆ ಅವು ಬಹಳಷ್ಟು ಫೈಬರ್ ಅನ್ನು ಹೊಂದಿರುತ್ತವೆ. ಇದನ್ನು ಪುಡಿ ಮಾಡಿ ಜ್ಯೂಸ್ ಮಾಡಬಹುದು. ಸಲಾಡ್, ಮೊಸರು, ಸೂಪ್ ಇತ್ಯಾದಿಗಳಿಗೆ ಸೇರಿಸಬಹುದು.

ಬೆಚ್ಚಗಿನ ಹಾಲಿನೊಂದಿಗೆ ಬಾಳೆಹಣ್ಣು ತಿನ್ನಿಸಿ: ಮಕ್ಕಳು ಬಾಳೆಹಣ್ಣುಗಳನ್ನು ತಿನ್ನಲು ಇಷ್ಟಪಡುತ್ತಾರೆ. ಆದರೆ ಬೆಚ್ಚಗಿನ ಹಾಲಿನೊಂದಿಗೆ ತಿನ್ನಲು ಬಾಳೆಹಣ್ಣುಗಳನ್ನು ನೀಡಿ. ಮಗುವು ಅದನ್ನು ನಿಧಾನವಾಗಿ ಅಗಿಯುತ್ತಿದ್ದರೆ ಮತ್ತು ಬೆಚ್ಚಗಿನ ಹಾಲಿನೊಂದಿಗೆ ತಿಂದರೆ ಅದು ದೇಹದಿಂದ ಮಲವನ್ನು ಸುಲಭವಾಗಿ ಹೊರಹಾಕಲು ಸಹಾಯ ಮಾಡುತ್ತದೆ.

ವೀಡಿಯೋ ಗೇಮ್‌ಗಳನ್ನು ಆಡುವುದಕ್ಕಿಂತ ಮತ್ತು ಟಿವಿ ನೋಡುವುದಕ್ಕಿಂತ ದೈಹಿಕ ಆಟಗಳನ್ನು ಆಡಲು ಮಕ್ಕಳನ್ನು ಪ್ರೋತ್ಸಾಹಿಸುವುದು ಆರೋಗ್ಯಕರ ಅಭ್ಯಾಸಗಳನ್ನು ಹೊಂದಲು ಮತ್ತು ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಅಲ್ಲದೇ ಮಕ್ಕಳಿಗೆ ಆಗಾಗ್ಗೆ ಹೊಟ್ಟೆನೋವು ಎಂದರೆ ಅದು ಜಂತು ಹುಳುಗಳ ಸಮಸ್ಯೆ ಎಂದರ್ಥ. ಇಂತಹ ಸಂದರ್ಭದಲ್ಲಿ ವೈದ್ಯರ ಸಲಹೆಯಂತೆ ಚಿಕಿತ್ಸೆ ಆರಂಭಿಸುವುದು ಉತ್ತಮ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್