AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವು ಮಧುಮೇಹಿಗಳಿಗೆ ಮಾತ್ರವಲ್ಲ, ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ

ಮಾವಿನ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುವ ಹಣ್ಣು. ಅದರ ಅದ್ಭುತ ರುಚಿಗೆ ಎಲ್ಲರೂ ಮನಸೋಲುತ್ತಾರೆ. ಆದರೆ ಮಧುಮೇಹ ಇರುವವರು ಈ ಹಣ್ಣನ್ನು ಆದಷ್ಟು ಮಿತ ಪ್ರಮಾಣದಲ್ಲಿ ಸೇವಿಸಬೇಕು ಎಂದು ಹೇಳುತ್ತಾರೆ. ಆದರೆ ಅವರ ಹೊರತಾಗಿಯೂ ಕೆಲವು ಆರೋಗ್ಯ ಸಮಸ್ಯೆಗಳಿರುವವರು ಇದನ್ನು ಸೇವನೆ ಮಾಡುವಾಗ ಎಚ್ಚರಿಕೆ ವಹಿಸಬೇಕು. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ, ಯಾಕೆ ಸೇವಿಸಬಾರದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಾವು ಮಧುಮೇಹಿಗಳಿಗೆ ಮಾತ್ರವಲ್ಲ, ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ
ಮಾವಿನಹಣ್ಣು ತಿನ್ನುವಾಗ ಈ ಅಂಶಗಳನ್ನು ನೆನಪಿಟ್ಟುಕೊಳ್ಳಿImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jul 13, 2026 | 9:14 PM

Share

ಮುಖ್ಯಾಂಶಗಳು

  • ಈ ಆರೋಗ್ಯ ಸಮಸ್ಯೆಗಳಿದ್ದರೆ ಮಾವು ತಿನ್ನುವ ಮೊದಲು ತಿಳಿಯಲೇಬೇಕಾದ ವಿಷಯಗಳು
  • ಮಧುಮೇಹ ಮಾತ್ರವಲ್ಲ, ಫ್ಯಾಟಿ ಲಿವರ್ ಸೇರಿದಂತೆ ಈ ಸಮಸ್ಯೆಗಳಲ್ಲೂ ಮಾವು ತಿನ್ನುವಾಗ ಎಚ್ಚರ ವಹಿಸಿ
  • ಅತಿಯಾಗಿ ಮಾವು ತಿಂದರೆ ಏನಾಗಬಹುದು? ಈ ಸಮಸ್ಯೆ ಇದ್ದಾಗ ಎಚ್ಚರ ವಹಿಸಿ

ಮಳೆಗಾಲವಾದರೂ ಮಾವಿನ ಹಣ್ಣಿನ ಸೀಸನ್ ಇನ್ನೂ ಮುಗಿದಿಲ್ಲ. ರುಚಿ, ಸುವಾಸನೆ ಮತ್ತು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಮಾವು ಬಹುತೇಕರ ನೆಚ್ಚಿನ ಹಣ್ಣು. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಎ, ಫೈಬರ್, ಪೊಟ್ಯಾಸಿಯಂ, ಫೋಲೇಟ್ ಹಾಗೂ ಹಲವು ಆಂಟಿಆಕ್ಸಿಡೆಂಟ್‌ಗಳು ಇರುವುದರಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಆದರೆ ಮಾವು ಆರೋಗ್ಯಕರವಾದರೂ ಎಲ್ಲರೂ ಸೇವನೆ ಮಾಡಬಹುದೇ ಎಂಬ ಪ್ರಶ್ನೆಗೆ ಹುಟ್ಟುಕೊಳ್ಳುತ್ತದೆ. ಆರೋಗ್ಯ ತಜ್ಞರ ಪ್ರಕಾರ ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ ಇದು ಒಳ್ಳೆಯದಲ್ಲ. ಯಾರಿಗೆ, ಯಾಕೆ ಒಳ್ಳೆಯದಲ್ಲ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಈ ಆರೋಗ್ಯ ಸಮಸ್ಯೆ ಇರುವವರು ಮಾವು ತಿನ್ನುವಾಗ ಎಚ್ಚರಿಕೆ ವಹಿಸಿ;

ಮಧುಮೇಹ ಇರುವವರು ಮಾವನ್ನು ಸಂಪೂರ್ಣವಾಗಿ ಬಿಡಬೇಕಾಗಿಲ್ಲ. ಆದರೆ ಒಂದೇ ಬಾರಿಗೆ ಹೆಚ್ಚು ಪ್ರಮಾಣದಲ್ಲಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಬಹುದು. ಆದ್ದರಿಂದ ವೈದ್ಯರು ಅಥವಾ ಪೌಷ್ಟಿಕ ತಜ್ಞರು ಸೂಚಿಸುವ ಪ್ರಮಾಣದಲ್ಲಿಯೇ ಸೇವಿಸುವುದು ಉತ್ತಮ. ಇದೇ ಸಲಹೆ ಪ್ರೀ-ಡಯಾಬಿಟಿಸ್, ಇನ್ಸುಲಿನ್ ರೆಸಿಸ್ಟೆನ್ಸ್ ಹಾಗೂ ಮೆಟಾಬಾಲಿಕ್ ಸಿಂಡ್ರೋಮ್ ಇರುವವರಿಗೂ ಅನ್ವಯಿಸುತ್ತದೆ. ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರು ಸಹ ಎಚ್ಚರಿಕೆ ವಹಿಸಬೇಕು. ಮಾವಿನಲ್ಲಿ ನೈಸರ್ಗಿಕ ಸಕ್ಕರೆ ಮತ್ತು ಕ್ಯಾಲೊರಿ ಇರುವುದರಿಂದ ಅತಿಯಾಗಿ ತಿಂದರೆ ತೂಕ ಮಾಡಿಕೊಳ್ಳುವುದಕ್ಕೆ ಅಡ್ಡಿಯಾಗಬಹುದು. ಫ್ಯಾಟಿ ಲಿವರ್ ಸಮಸ್ಯೆ ಇರುವವರು ಮಾವನ್ನು ಸಮತೋಲಿತ ಆಹಾರದ ಭಾಗವಾಗಿ ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು.

ಇದನ್ನೂ ಓದಿ: ಗರ್ಭಾವಸ್ಥೆಯಲ್ಲಿ ಕ್ಯಾಲ್ಸಿಯಂ ಅಗತ್ಯವನ್ನು ಪೂರೈಸಿಕೊಳ್ಳಲು ಈ ಆಹಾರಗಳ ಸೇವನೆ ಮಾಡಿ!

ಮಾವು ತಿನ್ನುವ ಸರಿಯಾದ ವಿಧಾನ ಯಾವುದು?

ಸಾಮಾನ್ಯವಾಗಿ ಮಾವಿನ ಜ್ಯೂಸ್, ಮಿಲ್ಕ್‌ಶೇಕ್ ಅಥವಾ ಹೆಚ್ಚು ಸಕ್ಕರೆ ಸೇರಿಸಿದ ಮಾವಿನ ಸಿಹಿ ಪದಾರ್ಥಗಳಿಗಿಂತ ಹಣ್ಣನ್ನೇ ತಿನ್ನುವುದು ಆರೋಗ್ಯಕರ. ಮೊಸರು ಅಥವಾ ಒಂದು ಮುಷ್ಟಿ ಬಾದಾಮಿ, ಗೋಡಂಬಿ ಅಥವಾ ಇತರ ನಟ್ಸ್ ಜೊತೆಗೆ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ವೇಗವಾಗಿ ಏರುವ ಸಾಧ್ಯತೆ ಕಡಿಮೆಯಾಗಬಹುದು.

ತಜ್ಞರು ನೀಡಿರುವ ಹೆಚ್ಚುವರಿ ಸಲಹೆ

ಮಾವು ತಿನ್ನುವ ಮೊದಲು ಚೆನ್ನಾಗಿ ತೊಳೆದು 20–30 ನಿಮಿಷ ನೀರಿನಲ್ಲಿ ನೆನೆಸಿಡುವುದು ಉತ್ತಮ ಎಂದು ಕೆಲವು ತಜ್ಞರು ಸಲಹೆ ನೀಡುತ್ತಾರೆ. ಇದರಿಂದ ಮೇಲ್ಮೈಯಲ್ಲಿರುವ ಧೂಳು, ಕಲ್ಮಶಗಳು ಹಾಗೂ ಕೆಲವು ಲ್ಯಾಟೆಕ್ಸ್ ಅಂಶಗಳು ಕಡಿಮೆಯಾಗಬಹುದು. ಆದರೆ ಇದರಿಂದ ಸಕ್ಕರೆ ಪ್ರಮಾಣ ಕಡಿಮೆಯಾಗುತ್ತದೆ ಎಂಬುದಕ್ಕೆ ವೈಜ್ಞಾನಿಕ ಸಾಕ್ಷ್ಯವಿಲ್ಲ.

ಅತಿಯಾಗಿ ಹಣ್ಣಾದ ಮಾವಿಗಿಂತ ಸಹಜವಾಗಿ ಹಣ್ಣಾದ ಹಣ್ಣನ್ನು ಆಯ್ಕೆ ಮಾಡುವುದು ಉತ್ತಮ. ಒಂದು ದಿನಕ್ಕೆ ಸುಮಾರು ಒಂದು ಮಧ್ಯಮ ಗಾತ್ರದ ಮಾವು ಸಾಕಷ್ಟು ಎಂದು ಪರಿಗಣಿಸಲಾಗುತ್ತದೆ. ಯಾವುದೇ ಆಹಾರವನ್ನು ಅತಿಯಾಗಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಸಮತೋಲಿತ ಆಹಾರ ಮತ್ತು ನಿಯಮಿತ ವ್ಯಾಯಾಮದ ಜೊತೆಗೆ ಮಾವನ್ನು ಸೇವಿಸಿದರೆ ಅದರ ಪೌಷ್ಟಿಕ ಲಾಭಗಳನ್ನು ಸುರಕ್ಷಿತವಾಗಿ ಪಡೆಯಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ