Health Tips: ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ವಿಧಾನಗಳನ್ನು ಅನುಸರಿಸಿ

ನಿಯಮಿತ ಪ್ರಮಾಣದಲ್ಲಿ ಚಾಕೊಲೇಟ್ ಸೇವಿಸುವುದರಿಂದ ಹೃದಯದ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಸಂಶೋಧಕರು ಹೇಳುತ್ತಾರೆ. ನೀವು 20 ರಿಂದ 45 ಗ್ರಾಂ ಚಾಕೊಲೇಟ್ ತಿಂದರೆ ಅದು ಪ್ರಯೋಜನಕಾರಿ.

Health Tips: ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ವಿಧಾನಗಳನ್ನು ಅನುಸರಿಸಿ
ಸಾಂಕೇತಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Aug 22, 2021 | 7:45 AM

ಹೃದಯವನ್ನು ಆರೋಗ್ಯವಾಗಿಡಲು ವ್ಯಾಯಾಮದ ಜೊತೆಗೆ ಆರೋಗ್ಯಕರ ಆಹಾರ ಸೇವಿಸಲು ತಜ್ಞರು ಶಿಫಾರಸು ಮಾಡುತ್ತಾರೆ. ಇತ್ತೀಚಿನ ಸಂಶೋಧನೆಯಲ್ಲಿ, ವಿಜ್ಞಾನಿಗಳು ಹೃದಯವನ್ನು ಆರೋಗ್ಯವಾಗಿಡಲು ಸೀಮಿತ ಪ್ರಮಾಣದಲ್ಲಿ ಚಾಕೊಲೇಟ್, ಚೀಸ್ ಮತ್ತು ಮೊಸರು ತಿನ್ನಲು ಸೂಚಿಸಿದ್ದಾರೆ. ಇಟಲಿಯ ನೇಪಲ್ಸ್ ವಿಶ್ವವಿದ್ಯಾಲಯದ ಸಂಶೋಧಕರು ಇದನ್ನು ತಮ್ಮ ಸಂಶೋಧನೆಯಲ್ಲಿ ಕಂಡುಕೊಂಡಿದ್ದಾರೆ. ದಿನಕ್ಕೆ 200 ಗ್ರಾಂ ಹಾಲಿನಿಂದ ತಯಾರಿಸಿದ ಉತ್ಪನ್ನಗಳನ್ನು ಸೇವಿಸುವುದರಿಂದ ಹೃದಯಕ್ಕೆ ಹಾನಿಯಾಗುವುದಿಲ್ಲ ಅದಕ್ಕಿಂತ ಹೆಚ್ಚು ಸೇವಿಸಿದರೆ ಹೃದಯಕ್ಕೆ ತೊಂದರೆ ಎಂದು ಸಂಶೋಧಕರು ಹೇಳುತ್ತಾರೆ. ಇನ್ನು 50 ಗ್ರಾಂ ಚೀಸ್ ಸೇವಿಸಿದರೆ ಹೃದಯ ಆರೊಗ್ಯಯುತವಾಗಿರುತ್ತದೆ ಎಂದು ತಿಳಿಸಿದ್ದಾರೆ.

ನಿಯಮಿತ ಪ್ರಮಾಣದಲ್ಲಿ ಚಾಕೊಲೇಟ್ ಸೇವಿಸುವುದರಿಂದ ಹೃದಯದ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಸಂಶೋಧಕರು ಹೇಳುತ್ತಾರೆ. ನೀವು 20 ರಿಂದ 45 ಗ್ರಾಂ ಚಾಕೊಲೇಟ್ ತಿಂದರೆ ಅದು ಪ್ರಯೋಜನಕಾರಿ. ಡಾರ್ಕ್ ಚಾಕೊಲೇಟ್‌ನಲ್ಲಿರುವ ಫ್ಲೇವನಾಲ್‌ಗಳು ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ಹೃದಯವನ್ನು ಆರೋಗ್ಯವಾಗಿರಿಸುತ್ತವೆ.

ಹೃದಯವನ್ನು ಹೇಗೆ ಆರೋಗ್ಯವಾಗಿರಿಸಿಕೊಳ್ಳುವುದು?

ಹೃದ್ರೋಗವನ್ನು ತಡೆಗಟ್ಟಲು ಎರಡು ಮಾರ್ಗಗಳಿವೆ: 1. ಉತ್ತಮ ಆಹಾರ ಸೊಪ್ಪು, ತರಕಾರಿಗಳು ಹೃದಯಕ್ಕೆ ಸಂಬಂಧಿಸಿದ ಅಪಾಯವನ್ನು ಶೇ.16 ರಷ್ಟು ಮತ್ತು ಫೈಬರ್ ಧಾನ್ಯಗಳನ್ನು ಪ್ರತಿದಿನ 150 ಗ್ರಾಂ ಸೇವಿಸುವುದರಿಂದ ಶೇ. 22ರಷ್ಟು ಅಪಾಯವನ್ನು ಕಡಿಮೆ ಮಾಡಬಹುದು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಸಿನ್ ಪ್ರಕಾರ, ಸೊಪ್ಪು ತರಕಾರಿಗಳಲ್ಲಿ ಸಾಕಷ್ಟು ಪ್ರಮಾಣದ ವಿಟಮಿನ್ ಕೆ ಮತ್ತು ನೈಟ್ರೇಟ್ ಇರುತ್ತದೆ. ಇವು ರಕ್ತನಾಳಗಳನ್ನು ರಕ್ಷಿಸುತ್ತವೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕೂಡ ದೇಹದಿಂದ ಕಡಿಮೆ ಮಾಡುತ್ತದೆ.

2. ವ್ಯಾಯಾಮ: ರಕ್ತ ಪರಿಚಲನೆ ಹೆಚ್ಚಿಸುತ್ತದೆ, ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ

ಪ್ರತಿರೋಧ ತರಬೇತಿ ಅಮೇರಿಕನ್ ಕಾಲೇಜ್ ಆಫ್ ಸ್ಪೋರ್ಟ್ಸ್ ಮೆಡಿಸಿನ್ ಪ್ರಕಾರ, ನೀವು ವಾರದಲ್ಲಿ ಎರಡು ದಿನವಾದರೂ ಪ್ರತಿರೋಧ ಬ್ಯಾಂಡ್ ಅಥವಾ ದೇಹದ ತೂಕದ ವ್ಯಾಯಾಮಗಳಾದ ಪುಷಪ್ ಮತ್ತು ಚಿನಪ್ ಮಾಡುವ ಮೂಲಕ ಬೊಜ್ಜು ಮತ್ತು ದೇಹದ ಕೊಬ್ಬನ್ನು ಕಡಿಮೆ ಮಾಡಬಹುದು. ಕೊಬ್ಬು ಹೃದಯ ಕಾಯಿಲೆಯ ಪ್ರಮುಖ ಕಾರಣವಾಗಿದೆ.

ಏರೋಬಿಕ್ ವ್ಯಾಯಾಮ ವೇಗದ ನಡಿಗೆ, ಓಟ, ಈಜು, ಸೈಕ್ಲಿಂಗ್ ಮತ್ತು ಸ್ಕಿಪಿಂಗ್ ನಂತಹ ಏರೋಬಿಕ್ ವ್ಯಾಯಾಮವು ವಾರಕ್ಕೆ ಐದು ದಿನ ಮಾಡಬೇಕು. ಅದರಂತೆ ವಾರದಲ್ಲಿ ಐದು ದಿನ 30 ನಿಮಿಷಗಳ ಕಾಲ ಮಾಡುವ ಈ ವ್ಯಾಯಾಮ ಹೃದಯ ಪಂಪ್ ಸಾಮರ್ಥ್ಯವನ್ನು ಸುಧಾರಿಸುತ್ತದೆ. ಇದು ರಕ್ತ ಪರಿಚಲನೆ ಸುಧಾರಿಸುತ್ತದೆ. ಅಲ್ಲದೇ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯವು ಬಲಗೊಳ್ಳುತ್ತದೆ.

ಇದನ್ನೂ ಓದಿ: Jackfruit Seeds: ಹಲಸಿನ ಬೀಜವನ್ನು ಬಿಸಾಡುವವರೇ ಹೆಚ್ಚು; ಆರೋಗ್ಯ ಪ್ರಯೋಜನ ಎಷ್ಟಿದೆ ತಿಳಿದು ಸೇವಿಸುವ ಅಭ್ಯಾಸ ಒಳ್ಳೆಯದು

Health Tips: ಹಸಿ ಬೆಳ್ಳುಳ್ಳಿ ತಿನ್ನುವ ಅಭ್ಯಾಸದಿಂದ ಈ ನಾಲ್ಕು ಕಾಯಿಲೆಗಳನ್ನು ದೂರ ಇಡಬಹುದು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ