AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿವರ್ ಡಿಟಾಕ್ಸ್ ಡ್ರಿಂಕ್ಸ್: ನಿಜವಾಗಿಯೂ ಪ್ರಯೋಜನಕಾರಿಯೇ ಅಥವಾ ಕೇವಲ ಟ್ರೆಂಡಿ ಪಾನೀಯವೇ?

ಡಿಟಾಕ್ಸ್ ಪಾನೀಯಗಳ ಟ್ರೆಂಡ್ ಸಾಮಾಜಿಕ ಮಾಧ್ಯಮದಲ್ಲಿ, ಅದರಲ್ಲಿಯೂ ಇನ್‌ಸ್ಟಾಗ್ರಾಮ್‌ನಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಅನೇಕರು ಈ ರೀತಿಯ ಡಿಟಾಕ್ಸ್ ಪಾನೀಯಗಳ ಬಗ್ಗೆ ಮಾತನಾಡುತ್ತಲೇ ಇರುತ್ತಾರೆ. ಈ ಪಾನೀಯಗಳು ಯಕೃತ್ತನ್ನು ಫಿಟ್ ಆಗಿ ಇಡುತ್ತವೆ ಎಂದು ಹೇಳಿಕೊಳ್ಳುತ್ತಿದ್ದಾರೆ, ಆದರೆ ಅದು ನಿಜವಾಗಿಯೂ ಆ ಕೆಲಸವನ್ನು ಸರಿಯಾಗಿ ಮಾಡುತ್ತದೆಯೇ? ಈ ಬಗ್ಗೆ ವೈದ್ಯರು ಏನು ಹೇಳುತ್ತಾರೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಲಿವರ್ ಡಿಟಾಕ್ಸ್ ಡ್ರಿಂಕ್ಸ್: ನಿಜವಾಗಿಯೂ ಪ್ರಯೋಜನಕಾರಿಯೇ ಅಥವಾ ಕೇವಲ ಟ್ರೆಂಡಿ ಪಾನೀಯವೇ?
Liver Detox DrinksImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Apr 18, 2026 | 4:24 PM

Share

ಇತ್ತೀಚಿನ ವರ್ಷಗಳಲ್ಲಿ ಲಿವರ್ ಡಿಟಾಕ್ಸ್ ಡ್ರಿಂಕ್ಸ್‌ಗಳು (Liver Detox Drinks) ಆರೋಗ್ಯಕಾಡುವ ನಿಟ್ಟಿನಲ್ಲಿ ಹೊಸ ಟ್ರೆಂಡ್ ಸೃಷ್ಠಿ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಈ ಪಾನೀಯಗಳು ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕಿ ಲಿವರ್‌ನ್ನು ಶುದ್ಧಗೊಳಿಸುತ್ತವೆ ಎಂದು ಹೇಳುತ್ತಿದ್ದಾರೆ. ಈ ಡ್ರಿಂಕ್ಸ್‌ನಲ್ಲಿರುವ ನಿಂಬೆ, ಶುಂಠಿ, ಅರಿಶಿನ ಮತ್ತು ಜೇನು ಮುಂತಾದ ನೈಸರ್ಗಿಕ ಪದಾರ್ಥಗಳು ಆರೋಗ್ಯಕ್ಕೆ ಬಹಳ ಒಳ್ಳೆಯದು. ಆದರೂ ಕೂಡ ಇದರಿಂದ ಲಿವರ್‌ (Liver) ಸಂಪೂರ್ಣವಾಗಿ ಶುದ್ಧಗೊಳ್ಳುತ್ತದೆಯೇ, ಇಲ್ಲವೇ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿಲ್ಲ. ಹಾಗಾಗಿ ಈ ಬಗ್ಗೆ ತಜ್ಞರ ಅಭಿಪ್ರಾಯ ಪಡೆದುಕೊಳ್ಳುವುದು ಬಹಳ ಒಳ್ಳೆಯದು. ಏಕೆಂದರೆ ಟ್ರೆಂಡ್ ಹಿಂದೆ ಹೋಗುವ ಮೊದಲು ಸತ್ಯ ಏನು ಎಂಬುದನ್ನು ತಿಳಿದುಕೊಳ್ಳಬೇಕಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.

ಲಿವರ್ ಸ್ವತಃ ಡಿಟಾಕ್ಸ್ ಮಾಡುವ ಶಕ್ತಿ ಹೊಂದಿದೆ!

ಲಿವರ್ ದೇಹದ ಪ್ರಮುಖ ಅಂಗವಾಗಿದ್ದು, ಇದು ಸ್ವಾಭಾವಿಕವಾಗಿ ಡಿಟಾಕ್ಸ್ ಪ್ರಕ್ರಿಯೆಯನ್ನು ನಡೆಸುತ್ತದೆ. ದೇಹಕ್ಕೆ ಹಾನಿಕಾರಕ ಪದಾರ್ಥಗಳನ್ನು ಫಿಲ್ಟರ್ ಮಾಡಿ ಹೊರಹಾಕುವ ಕಾರ್ಯವನ್ನು ಲಿವರ್ ಸ್ವತಃ ಮಾಡುತ್ತದೆ. ಹೀಗಾಗಿ, ಲಿವರ್‌ನ್ನು ಶುದ್ಧಗೊಳಿಸಲು ಪ್ರತ್ಯೇಕ ಡಿಟಾಕ್ಸ್ ಡ್ರಿಂಕ್ಸ್ ಅಗತ್ಯವಿಲ್ಲ. ಈ ಡಿಟಾಕ್ಸ್ ಡ್ರಿಂಕ್ಸ್‌ಗಳ ಜನಪ್ರಿಯತೆಗೆ ಪ್ರಮುಖ ಕಾರಣ ಮಾರ್ಕೆಟಿಂಗ್ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವವಾಗಿದೆ. ಅನೇಕ ಕಂಪನಿಗಳು ಈ ಉತ್ಪನ್ನಗಳನ್ನು ಆರೋಗ್ಯಕರವೆಂದು ಪ್ರಚಾರ ಮಾಡುತ್ತಿವೆ, ಆದರೆ ವೈದ್ಯಕೀಯ ದೃಷ್ಟಿಯಿಂದ ಇದು ಸಂಪೂರ್ಣವಾಗಿ ದೃಢಪಟ್ಟಿಲ್ಲ.

ಇದನ್ನೂ ಓದಿ: ಲಿವರ್ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ನೀವು ಈ ಮೂರು ಆಹಾರಗಳಿಂದ ದೂರವಿರಲೇಬೇಕು!

ಲಿವರ್ ಆರೋಗ್ಯಕ್ಕೆ ಸರಿಯಾದ ಮಾರ್ಗ ಯಾವುದು?

ಸಾಮಾನ್ಯವಾಗಿ ಲಿವರ್ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಮತೋಲನಯುತ ಆಹಾರ, ನಿಯಮಿತ ವ್ಯಾಯಾಮ, ಸಾಕಷ್ಟು ನೀರು ಕುಡಿಯುವುದು ಮತ್ತು ಮದ್ಯಪಾನವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಜೊತೆಗೆ, ಪ್ರಾಸೆಸ್ಡ್ ಮತ್ತು ಕೊಬ್ಬುಯುಕ್ತ ಆಹಾರವನ್ನು ತಪ್ಪಿಸುವುದು ಅಗತ್ಯ. ಒಟ್ಟಿನಲ್ಲಿ, ಲಿವರ್ ಡಿಟಾಕ್ಸ್ ಡ್ರಿಂಕ್ಸ್‌ಗಳು ಹೆಚ್ಚು ಜನಪ್ರಿಯವಾಗಿದ್ದರೂ, ಆರೋಗ್ಯ ಕಾಪಾಡಿಕೊಳ್ಳಲು ನೈಸರ್ಗಿಕ ಮತ್ತು ಸಮತೋಲನಯುತ ಜೀವನಶೈಲಿಯೇ ಅತ್ಯುತ್ತಮ ಮಾರ್ಗ ಎಂದು ತಜ್ಞರು ಸಲಹೆ ನೀಡುತ್ತಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!