AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liver Health: ರಾತ್ರಿಯಲ್ಲಿ ಈ ಲಕ್ಷಣಗಳು ಕಾಣಿಸಿಕೊಂಡರೆ ನಿಮ್ಮ ಲಿವರ್ ಅಪಾಯದಲ್ಲಿದೆ ಎಂದರ್ಥ

ಇತ್ತೀಚಿನ ದಿನಗಳಲ್ಲಿ ನಮ್ಮ ಒತ್ತಡ ಜೀವನಶೈಲಿ ಮತ್ತು ಕಳಪೆ ಆಹಾರ ಪದ್ಧತಿಯಿಂದಾಗಿ ಅನೇಕ ರೀತಿಯ ಯಕೃತ್ತಿನ ಕಾಯಿಲೆಗಳು ಉಂಟಾಗಬಹುದು. ಹಾಗಾಗಿ ಇದಕ್ಕೆ ಸಂಬಂಧಿಸಿದ ರೋಗ ಲಕ್ಷಣಗಳನ್ನು ಕಂಡು ಬಂದರೆ ನಿರ್ಲಕ್ಷಿಸಬೇಡಿ. ಅದರಲ್ಲಿಯೂ ಕೆಲವು ರೋಗಲಕ್ಷಣಗಳು ರಾತ್ರಿಯಲ್ಲಿಯೂ ಕಾಣಿಸಿಕೊಳ್ಳುತ್ತವೆ. ನೀವು ಈ ರೋಗಲಕ್ಷಣಗಳನ್ನು ಕಡೆಗಣಿಸಿದರೆ ಅದು ಯಕೃತ್ತು ಮತ್ತು ಆರೋಗ್ಯಕ್ಕೆ ಅಪಾಯಕಾರಿ. ಹಾಗಾದರೆ ಯಕೃತ್ತಿಗೆ ಹಾನಿ ಮಾಡುವ ರೋಗಲಕ್ಷಣಗಳು ಯಾವುದು ಎಂದು ತಿಳಿದುಕೊಳ್ಳಿ. ನಿಮಗೂ ಈ ರೋಗ ಲಕ್ಷಣಗಳು ಕಂಡು ಬಂದರೆ ಅದನ್ನು ನಿರ್ಲಕ್ಷಿಸಬೇಡಿ.

Liver Health: ರಾತ್ರಿಯಲ್ಲಿ ಈ ಲಕ್ಷಣಗಳು ಕಾಣಿಸಿಕೊಂಡರೆ ನಿಮ್ಮ ಲಿವರ್ ಅಪಾಯದಲ್ಲಿದೆ ಎಂದರ್ಥ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 14, 2024 | 3:25 PM

Share

ಯಕೃತ್ತು (Liver) ನಮ್ಮ ದೇಹದ ಮುಖ್ಯ ಅಂಗವಾಗಿದ್ದು, ಪ್ರಮುಖವಾಗಿರುವಂತಹ ಅನೇಕ ಕಾರ್ಯಗಳನ್ನು ನಿರ್ವಹಿಸಲು ಸಹಕಾರಿಯಾಗಿದೆ. ಇದು ದೇಹದಿಂದ ಕಲ್ಮಶವನ್ನು ತೆಗೆದುಹಾಕುವುದಲ್ಲದೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ನಾವು ತಿಂದ ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ. ಅಲ್ಲದೆ ರಕ್ತ ಕಣಗಳ ರಚನೆಯಲ್ಲಿ ಸಹ ಪಾತ್ರ ವಹಿಸುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ನಮ್ಮ ಒತ್ತಡ ಜೀವನಶೈಲಿ ಮತ್ತು ಕಳಪೆ ಆಹಾರ ಪದ್ಧತಿಯಿಂದಾಗಿ ಅನೇಕ ರೀತಿಯ ಯಕೃತ್ತಿನ ಕಾಯಿಲೆಗಳು ಉಂಟಾಗಬಹುದು. ಹಾಗಾಗಿ ಇದಕ್ಕೆ ಸಂಬಂಧಿಸಿದ ರೋಗ ಲಕ್ಷಣಗಳನ್ನು ಕಂಡು ಬಂದರೆ ನಿರ್ಲಕ್ಷಿಸಬೇಡಿ. ಅದರಲ್ಲಿಯೂ ಕೆಲವು ರೋಗಲಕ್ಷಣಗಳು ರಾತ್ರಿಯಲ್ಲಿಯೂ ಕಾಣಿಸಿಕೊಳ್ಳುತ್ತವೆ. ನೀವು ಈ ರೋಗಲಕ್ಷಣಗಳನ್ನು ಕಡೆಗಣಿಸಿದರೆ ಅದು ಯಕೃತ್ತು ಮತ್ತು ಆರೋಗ್ಯಕ್ಕೆ ಅಪಾಯಕಾರಿ. ಹಾಗಾದರೆ ಯಕೃತ್ತಿಗೆ ಹಾನಿ ಮಾಡುವ ರೋಗಲಕ್ಷಣಗಳು ಯಾವುದು ಎಂದು ತಿಳಿದುಕೊಳ್ಳಿ. ನಿಮಗೂ ಈ ರೋಗ ಲಕ್ಷಣಗಳು ಕಂಡು ಬಂದರೆ ಅದನ್ನು ನಿರ್ಲಕ್ಷಿಸಬೇಡಿ.

ಆಗಾಗ ಎಚ್ಚರಗೊಳ್ಳುವುದು: ರಾತ್ರಿ ಸಮಯದಲ್ಲಿ ಪದೇ ಪದೇ ಎಚ್ಚರಗೊಳ್ಳುತ್ತಿದ್ದರೆ ಅದು ಯಕೃತ್ತಿನ ಹಾನಿಯ ಸಂಕೇತವಾಗಿರಬಹುದು. ಏಕೆಂದರೆ ಪಿತ್ತಜನಕಾಂಗದ ಹಾನಿಯು ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಕಾರಣವಾಗಬಹುದು.

ದೇಹದ ಕೆಲವು ಭಾಗಗಳಲ್ಲಿ ಊತ: ಪಿತ್ತಜನಕಾಂಗ ಅಥವಾ ಯಕೃತ್ತು ಹಾನಿಯಿಂದಾಗಿ ಪಾದಗಳಲ್ಲಿ ಊತ ಕಂಡು ಬರಬಹುದು. ಅದರಲ್ಲಿಯೂ ಇದು ವಿಶೇಷವಾಗಿ ರಾತ್ರಿಯಲ್ಲಿ ಕಂಡು ಬರುತ್ತದೆ.

ವಾಕರಿಕೆ -ವಾಂತಿ: ನಿಮಗೆ ರಾತ್ರಿಯಲ್ಲಿ ವಾಕರಿಕೆ ಮತ್ತು ವಾಂತಿಯಂತಹ ಸಮಸ್ಯೆಗಳು ಕಂಡು ಬರುತ್ತಿದ್ದರೆ ಅದು ಯಕೃತ್ತಿನ ಹಾನಿಯ ಸಂಕೇತವಾಗಿರಬಹುದು.

ಹಳದಿ ಮೂತ್ರ: ಪಿತ್ತಜನಕಾಂಗದ ಹಾನಿಯು ಮೂತ್ರವು ಹಳದಿ ಬಣ್ಣಕ್ಕೆ ತಿರುಗಲು ಕಾರಣವಾಗಬಹುದು. ಇದು ಪಿತ್ತಜನಕಾಂಗದಿಂದ ಉತ್ಪತ್ತಿಯಾಗುವ ಬಿಲಿರುಬಿನ್ ಎಂಬ ವಸ್ತುವಿನ ಹೆಚ್ಚಳದಿಂದ ಉಂಟಾಗುತ್ತದೆ.

ಇದನ್ನೂ ಓದಿ: ನೇರ ಉರಿಯಲ್ಲಿ ಆಹಾರ ಬೇಯಿಸಿದರೆ ಕ್ಯಾನ್ಸರ್ ಬರುವುದು ಖಚಿತ! ಹೇಗೆ ತಡೆಯುವುದು ತಿಳಿಯಿರಿ

ಈ ರೋಗಲಕ್ಷಣಗಳನ್ನು ಏಕೆ ನಿರ್ಲಕ್ಷಿಸಬಾರದು?

ಈ ಲಕ್ಷಣಗಳು ಹೆಚ್ಚಾಗಿ ಇತರ ಕಾಯಿಲೆಗಳಂತೆಯೇ ಇರುತ್ತವೆ. ಆದ್ದರಿಂದ ಅವುಗಳನ್ನು ನಿರ್ಲಕ್ಷಿಸಬೇಡಿ. ಈ ರೋಗಲಕ್ಷಣಗಳು ಹೆಚ್ಚಾದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಪಿತ್ತಜನಕಾಂಗದ ಕಾಯಿಲೆಗಳನ್ನು ಮೊದಲೇ ಪತ್ತೆಹಚ್ಚಿದರೆ, ಅವುಗಳಿಗೆ ಚಿಕಿತ್ಸೆ ನೀಡುವುದು ಸುಲಭವಾಗುತ್ತದೆ.

ಯಕೃತ್ತಿನ ಕಾಯಿಲೆಗಳಿಗೆ ಕಾರಣಗಳು ಯಾವುವು?

1. ಅತಿಯಾದ ಆಲ್ಕೋಹಾಲ್ ಸೇವನೆ

2. ವೈರಲ್ ಹೆಪಟೈಟಿಸ್

3. ಬೊಜ್ಜು

4. ಮಧುಮೇಹ

5. ಅಧಿಕ ರಕ್ತದೊತ್ತಡ

6. ಕೆಲವು ಔಷಧಿಗಳ ವ್ಯತಿರಿಕ್ತ ಪರಿಣಾಮ

ಪಿತ್ತಜನಕಾಂಗ ಆರೋಗ್ಯವಾಗಿರಲು ಏನು ಮಾಡಬೇಕು?

1. ಸಮತೋಲಿತ ಆಹಾರವನ್ನು ಸೇವಿಸಿ

2. ಆಲ್ಕೋಹಾಲ್ ಸೇವನೆಯನ್ನು ಕಡಿಮೆ ಮಾಡಿ

3. ನಿಯಮಿತವಾಗಿ ವ್ಯಾಯಾಮ ಮಾಡಿ

4. ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಿ

5. ಒತ್ತಡವನ್ನು ತಡೆಯಿರಿ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್