ನೀವು ತೆಳ್ಳಗಾಗೋಕೆ ಸಪೂರದ ಅಲಸಂದೆಯೂ ಸಹಾಯ ಮಾಡಬಹುದು!

Long yard Beans Health Benefits: ಚೈನೀಸ್ ಸ್ನೇಕ್ ಬೀನ್ಸ್ ಎಂದೂ ಕರೆಯಲ್ಪಡುವ ಅಲಸಂದೆ ಹಾಗೂ ಅಲಸಂದೆಯ ಬೀಜಗಳು ಆರೋಗ್ಯಕ್ಕೆ ಬಹಳ ಸಹಕಾರಿಯಾಗಿವೆ. ಅಲಸಂದೆಯನ್ನು ಸುಲಭವಾಗಿ ಬೆಳೆಯಬಹುದು. ಎಲ್ಲ ರೀತಿಯ ವಾತಾವರಣ, ಮಣ್ಣಿಗೂ ಈ ತರಕಾರಿ ಒಗ್ಗಿಕೊಳ್ಳುತ್ತದೆ. ಅಲಸಂದೆಯಿಂದ ಆರೋಗ್ಯಕ್ಕೆ ಏನೆಲ್ಲ ಪ್ರಯೋಜನವಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ನೀವು ತೆಳ್ಳಗಾಗೋಕೆ ಸಪೂರದ ಅಲಸಂದೆಯೂ ಸಹಾಯ ಮಾಡಬಹುದು!
ಅಲಸಂದೆImage Credit source: iStock
Follow us
ಸುಷ್ಮಾ ಚಕ್ರೆ
|

Updated on: Oct 07, 2023 | 4:58 PM

ನಿಮ್ಮ ಮನೆಯಲ್ಲಿ ಅಲಸಂದೆ ಕಾಯಿಯ ಸಾಂಬಾರ್, ಪಲ್ಯ ಆಗಾಗ ಮಾಡುತ್ತಿರಬಹುದು. ಕೆಲವರಿಗೆ ಈ ತರಕಾರಿ ಇಷ್ಟವಾಗಬಹುದು, ಇನ್ನು ಕೆಲವರಿಗೆ ಇಷ್ಟವಾಗದೇ ಇರಬಹುದು. ನೋಡಲು ಬೀನ್ಸ್​ನಂತೆಯೇ ಆದರೆ ಸ್ವಲ್ಪ ಉದ್ದವಾಗಿರುವ ಈ ಅಲಸಂದೆಯಿಂದ ಅಡುಗೆಗೆ ರುಚಿ ಮಾತ್ರವಲ್ಲದೆ ನಿಮ್ಮ ಆರೋಗ್ಯಕ್ಕೂ ಸಾಕಷ್ಟು ಉಪಯೋಗಗಳಿವೆ.

ಚೈನೀಸ್ ಸ್ನೇಕ್ ಬೀನ್ಸ್ ಎಂದೂ ಕರೆಯಲ್ಪಡುವ ಅಲಸಂದೆ ಹಾಗೂ ಅಲಸಂದೆಯ ಬೀಜಗಳು ಆರೋಗ್ಯಕ್ಕೆ ಬಹಳ ಸಹಕಾರಿಯಾಗಿವೆ. ಫಿಲಿಪೈನ್ಸ್ ಮತ್ತು ಇತರ ಪೂರ್ವ ಏಷ್ಯಾದ ಅಡುಗೆಯಲ್ಲಿ ಈ ತರಕಾರಿಯನ್ನು ಹೆಚ್ಚು ಬಳಸಲಾಗುತ್ತದೆ. ಅಲಸಂದೆಯನ್ನು ಸುಲಭವಾಗಿ ಬೆಳೆಯಬಹುದು. ಎಲ್ಲ ರೀತಿಯ ವಾತಾವರಣ, ಮಣ್ಣಿಗೂ ಈ ತರಕಾರಿ ಒಗ್ಗಿಕೊಳ್ಳುತ್ತದೆ.

ಇದನ್ನೂ ಓದಿ: ತೂಕ ಇಳಿಸಿಕೊಳ್ಳಲು ನಿಂಬೆ ಜ್ಯೂಸ್ ಕುಡಿಯುತ್ತೀರಾ? ಈ ಅಭ್ಯಾಸ ಬಿಟ್ಟುಬಿಡಿ

ಅಲಸಂದೆಯಲ್ಲಿ ವಿಟಮಿನ್ ಎ, ವಿಟಮಿನ್ ಸಿ ಮತ್ತು ಫೋಲೇಟ್‌ ಹೆಚ್ಚಾಗಿದೆ. ಹೀಗಾಗಿ, ಇದು ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಈ ಅಲಸಂದೆ ಹೆಚ್ಚಿನ ಫೈಬರ್ ಅಂಶವನ್ನು ಹೊಂದಿರುವುದರಿಂದ ಮಲಬದ್ಧತೆಯನ್ನು ನಿವಾರಿಸುತ್ತದೆ. ಫೈಬರ್ ಅಂಶ ಸಮೃದ್ಧವಾಗಿರುವ ಈ ತರಕಾರಿ ಹೃದಯರಕ್ತನಾಳದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಈ ಬೀನ್ಸ್ ದೇಹದಲ್ಲಿನ ಆಕ್ಸಿಡೇಟಿವ್ ಒತ್ತಡವನ್ನು ಎದುರಿಸುವ ಫ್ಲೇವನಾಯ್ಡ್​ ಮತ್ತು ಕ್ಯಾರೊಟಿನಾಯ್ಡ್​ಗಳಂತಹ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಆಂಟಿಆಕ್ಸಿಡೆಂಟ್‌ಗಳು ಸ್ವತಂತ್ರ ರಾಡಿಕಲ್‌ಗಳನ್ನು ತಟಸ್ಥಗೊಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಇದರಿಂದಾಗಿ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಅಲಸಂದೆಯಿಂದ ಆರೋಗ್ಯಕ್ಕೆ ಏನೆಲ್ಲ ಪ್ರಯೋಜನವಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ…

1. ಕಣ್ಣಿನ ಆರೋಗ್ಯವನ್ನು ಕಾಪಾಡುತ್ತದೆ:

ಅಲಸಂದೆ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ ಮತ್ತು ವಿಟಮಿನ್ ಬಿ ಒಳಗೊಂಡಂತೆ ಹಲವಾರು ಜೀವಸತ್ವಗಳ ಸಮೃದ್ಧ ಮೂಲವಾಗಿದೆ. ಇವು ಕಣ್ಣಿನ ಆರೋಗ್ಯಕ್ಕೆ ಉತ್ತಮವಾಗಿದೆ. ವಯಸ್ಸಿಗೆ ಸಂಬಂಧಿಸಿದ ದೃಷ್ಟಿ ಸಮಸ್ಯೆಗಳ ವಿರುದ್ಧ ಇವು ಹೋರಾಡುತ್ತವೆ.

ಇದನ್ನೂ ಓದಿ: ಕೊಬ್ಬು ಕರಗಿಸುವುದರಿಂದ ಜೀರ್ಣಕ್ರಿಯೆವರೆಗೆ; ಅಡುಗೆಮನೆಯಲ್ಲಿರುವ ಹುಣಸೆಹಣ್ಣಿನ ಚಮತ್ಕಾರಗಳಿವು

2. ಸ್ನಾಯುವಿನ ಆರೋಗ್ಯವನ್ನು ಹೆಚ್ಚಿಸುತ್ತದೆ:

ಕೆಲವು ದ್ವಿದಳ ಧಾನ್ಯಗಳಂತೆ ಅಲಸಂದೆಯಲ್ಲಿ ಪ್ರೋಟೀನ್ ದಟ್ಟವಾಗಿರದಿದ್ದರೂ ಉದ್ದನೆಯ ಈ ಬೀನ್ಸ್ ಮಧ್ಯಮ ಪ್ರಮಾಣದ ಪ್ರೋಟೀನ್ ಅನ್ನು ಒದಗಿಸುತ್ತದೆ. ಅಲಸಂದೆಯನ್ನು ಆಹಾರದಲ್ಲಿ ಸೇರಿಸುವುದರಿಂದ ಸಸ್ಯಾಹಾರಿಗಳಿಗೆ ಸ್ನಾಯುವಿನ ಆರೋಗ್ಯ ಹೆಚ್ಚುತ್ತದೆ.

3. ಹೃದಯರಕ್ತನಾಳದ ಆರೋಗ್ಯ ಸುಧಾರಿಸುತ್ತದೆ:

ಅಲಸಂದೆ ನೈಸರ್ಗಿಕವಾಗಿ ಕೊಬ್ಬನ್ನು ಕಡಿಮೆ ಮಾಡುತ್ತದೆ. ಇದು ಹೃದಯಕ್ಕೆ ಆರೋಗ್ಯಕರವಾದ ಆಯ್ಕೆಯಾಗಿದೆ.

4. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ:

ಅಲಸಂದೆಯಲ್ಲಿ ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಅಗತ್ಯ ಖನಿಜಗಳು ಹೆಚ್ಚಾಗಿವೆ. ನಮ್ಮ ದೇಹದ ಆರೋಗ್ಯಕರ ರಕ್ತದೊತ್ತಡವನ್ನು ಕಾಪಾಡಿಕೊಳ್ಳಲು ಪೊಟ್ಯಾಸಿಯಮ್ ಅತ್ಯಗತ್ಯ. ಆದರೆ ಮೆಗ್ನೀಸಿಯಮ್ ಮತ್ತು ಕಬ್ಬಿಣವು ವಿವಿಧ ದೈಹಿಕ ಕಾರ್ಯಗಳಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.

5. ತೂಕ ಇಳಿಸಲು ಸಹಕಾರಿ:

ತೂಕ ಇಳಿಸಲು ಪ್ರಯತ್ನಿಸುವವರಿಗೆ ಅಲಸಂದೆ ಹೇಳಿಮಾಡಿಸಿದ ತರಕಾರಿ. ಇದರಲ್ಲಿ ಫೈಬರ್ ಅಂಶ ಮತ್ತಿತರ ಅಂಶಗಳಿರುವುದರಿಂದ ಬಹುಬೇಗ ನಿಮ್ಮ ಹೊಟ್ಟೆ ತುಂಬಿದಂತೆ ಭಾಸವಾಗುತ್ತದೆ. ಹೀಗಾಗಿ, ನಿಮ್ಮ ತಿನ್ನುವ ಬಯಕೆಯನ್ನು ಇದು ನಿಯಂತ್ರಿಸುತ್ತದೆ. iದು ತೂಕ ಇಳಿಕೆಗೆ ಕಾರಣವಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ