AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lungs: ಶ್ವಾಸಕೋಶ ಕಾಯಿಲೆಗಳ ಲಕ್ಷಣಗಳೇನು? ಇಲ್ಲಿವೆ ನೋಡಿ

ಶ್ವಾಸಕೋಶ ಕಾಯಿಲೆಗಳಿಗೆ ಸಂಬಂಧಿಸಿದ ಕೆಲ ಲಕ್ಷಣಗಳನ್ನು ಪೌಷ್ಟಿಕ ತಜ್ಞರಾದ ಲವ್​ನೀತ್ ಬಾತ್ರಾರವರು ಇನ್ಟ್ಸಾಗ್ರಾಮ್​ನಲ್ಲಿ ತಿಳಿಸಿದ್ದಾರೆ.

Lungs: ಶ್ವಾಸಕೋಶ ಕಾಯಿಲೆಗಳ ಲಕ್ಷಣಗಳೇನು? ಇಲ್ಲಿವೆ ನೋಡಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 25, 2021 | 1:18 PM

Share

ಯಾವುದೇ ಆರೋಗ್ಯ ಸಮಸ್ಯೆಗಳು ಗಂಭೀರವಾಗುವ ತನಕ ನಿರ್ಲಕ್ಷಿಸುವುದು ಒಳ್ಳೆಯದಲ್ಲ. ಆರಂಭದ ಹಂತದಲ್ಲಿ ರೋಗ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರ ಸಲಹೆ ತೆಗೆದುಕೊಳ್ಳಬೇಕು. ಸೂಕ್ತ ಪರಿಹಾರ ಪಡೆಯಬೇಕು. ಅದರಂತೆ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳ ಲಕ್ಷಣ ಕಂಡುಬಂದರೆ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಇದರ ಬಗ್ಗೆ ನಿರ್ಲಕ್ಷ್ಯ ತೋರಿದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಹದಗೆಡುತ್ತದೆ. ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗ ಲಕ್ಷಣಗಳು ತಕ್ಷಣ ಗಮನಕ್ಕೆ ಬರುವುದಿಲ್ಲ. ಇದರಿಂದ ರೋಗ ಗಂಭೀರವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಶ್ವಾಸಕೋಶ ಕಾಯಿಲೆಗಳಿಗೆ ಸಂಬಂಧಿಸಿದ ಕೆಲ ಲಕ್ಷಣಗಳನ್ನು ಪೌಷ್ಟಿಕ ತಜ್ಞರಾದ ಲವ್​ನೀತ್ ಬಾತ್ರಾರವರು ಇನ್ಟ್ಸಾಗ್ರಾಮ್​ನಲ್ಲಿ ತಿಳಿಸಿದ್ದಾರೆ.

* ಎದೆ ನೋವು ಬಹಳಷ್ಟು ಜನರು ಎದೆ ನೋವಿನೊಂದಿಗೆ ಬಳಲುತ್ತಿರುತ್ತಾರೆ. ಇದು ಮಾಮುಲಿ ಇದ್ದಿದ್ದೆ ಅಂತ ಹಲವರು ನಿರ್ಲಕ್ಷಿಸುತ್ತಾರೆ. ಆದರೆ ಎದೆ ನೋವು ಒಂದು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಸಮಯ ಇರುತ್ತದೆ. ಉಸಿರಾಡುವಾಗ ಅಥವಾ ಕೆಮ್ಮುವಾಗ ಎದೆ ನೋವು ಹೆಚ್ಚಾದರೆ ಇದು ಶ್ವಾಸಕೋಶ ಕಾಯಿಲೆಗಳ ಲಕ್ಷಣವಾಗಿದೆ ಎಂದು ತಿಳಿದುಕೊಳ್ಳಬೇಕು.

* ಹೆಚ್ಚು ಕಫ ಕಫ ಇದ್ದರೆ ಉಸಿರಾಡುವುದು ಕಷ್ಟ. ಅತಿಯಾದ ಕಫ ಇದ್ದರೆ ಉಸಿರಾಡುವಾಗ ಒಂದು ರೀತಿಯ ಗೊರ ಗೊರ ಶಬ್ದ ಕೇಳಿ ಬರುತ್ತದೆ. ಶೀತವಾದಾಗ ಕಫ ಕಾಣಿಸಿಕೊಳ್ಳುತ್ತದೆ. ಸಾಮಾನ್ಯವಾಗಿ ಶೀತ ಒಂದು ವಾರ ಇರುತ್ತದೆ. ಆದರೆ ಕಫ ಒಂದು ತಿಂಗಳು ಅಥವಾ ಅದಕ್ಕಿಂತ ಹೆಚ್ಚಿದ್ದರೆ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳ ಲಕ್ಷಣವನ್ನು ಸೂಚಿಸುತ್ತದೆ.

* ತೂಕ ನಷ್ಟ ಡಯಟ್ ಅಥವಾ ವರ್ಕೌಟ್ ಮಾಡದೇ ಇದ್ದಕ್ಕಿದ್ದಂತೆ ದೇಹದ ತೂಕ ಕಡಿಮೆಯಾದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಇದು ಅನಾರೋಗ್ಯದ ಲಕ್ಷಣವನ್ನು ಸೂಚಿಸುತ್ತದೆ.

* ಉಸಿರಾಟದಲ್ಲಿ ಬದಲಾವಣೆ ಸರಿಯಾಗಿ ಉಸಿರಾಡಲು ಸಾಧ್ಯವಾಗುತ್ತಿಲ್ಲವೆಂದರೆ ಅದು ಶ್ವಾಸಕೋಶ ಕಾಯಿಲೆಗಳ ಲಕ್ಷಣ ಆಗಿದೆ ಎಂದರ್ಥ.

* ಕೆಮ್ಮಿನ ಜೊತೆಗೆ ರಕ್ತ ಎರಡು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಅವಧಿಯವರೆಗೆ ಕೆಮ್ಮಿದ್ದರೆ ಅದು ದೀರ್ಘಕಾಲದ ಕೆಮ್ಮು ಅಂತ ಪರಿಗಣಿಸಲಾಗುತ್ತದೆ. ಕೆಮ್ಮಿನ ಜೊತೆಗೆ ರಕ್ತವೂ ಬಂದರೆ ಶ್ವಾಸಕೋಶ ಕಾಯಿಲೆಗಳ ಲಕ್ಷಣವಾಗಿರುತ್ತದೆ. ಹೀಗಾಗಿ ತಡ ಮಾಡದೆ ವೈದ್ಯರ ಸಲಹೆ ಪಡೆಯಬೇಕು.

ಈ ಮೇಲಿನ ಲಕ್ಷಣಗಳು ಕಂಡುಬಂದರೆ ಲಘುವಾಗಿ ಪರಿಗಣಿಸದೆ ತಕ್ಷಣ ವೈದ್ಯರ ಮೊರೆ ಹೋಗಿ, ಅಗತ್ಯವಿರುವ ಚಿಕಿತ್ಸೆ ಪಡೆದುಕೊಳ್ಳಿ. ಆಗ ಮಾತ್ರ ಶ್ವಾಸಕೋಶ ಕಾಯಿಲೆಗಳು ಗಂಭೀರ ಮಟ್ಟಕ್ಕೆ ಹೋಗುವುದನ್ನು ತಡೆಗಟ್ಟಬಹುದು.

ಇದನ್ನೂ ಓದಿ

Health Tips: ಮೂಳೆ ಮತ್ತು ಕೀಲು ನೋವಿನ ಸಮಸ್ಯೆ ಇದೆಯೇ? ಈ ಆಹಾರ ಪದ್ಧತಿಯನ್ನು ಅನುಸರಿಸಿ

Vastu Tips: ಅಡುಗೆ ಮನೆಯಲ್ಲಿ ಈ ನಾಲ್ಕು ವಸ್ತುಗಳು ಖಾಲಿಯಾದರೆ ಹಣಕ್ಕೆ ಕೊರತೆ ಎದುರಾಗುತ್ತದೆ, ಎಚ್ಚರವಿರಲಿ!

(Lung health Tips here are some warning signs you should not ignore Symptoms of Lungs Diseases details in Kannada)

Published On - 1:18 pm, Sat, 25 September 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ