Madras eye in Kalaburagi: ಕಲಬುರಗಿ ಜನರಿಗೆ ಮದ್ರಾಸ್ ಐ ಕಾಟ; ಸೋಂಕು ತಡೆಗೆ ವೈದ್ಯರ ಸಲಹೆಯೇನು?

How To Prevent Conjunctivitis; ಕಂಜಕ್ಟವೈಟೀಸ್ ಇದು ಒಂದು ವೈರಸ್ ನಿಂದ ಹರಡುವ ಕಾಯಿಲೆಯಾಗಿದೆ. ಸಾಮಾನ್ಯವಾಗಿ ಮಳೆಗಾಲ ಆರಂಭದಲ್ಲಿ‌ ಕಂಡುಬರುತ್ತದೆ. ಈ ಕಾಯಿಲೆ ಕುರಿತು ಸಾರ್ವಜನಿಕರು ಅನಗತ್ಯ ಭಯ ಪಡುವ ಅವಶ್ಯಕತೆಯಿಲ್ಲ, ಮುನ್ನೆಚ್ಚರಿಕೆ ಕ್ರಮ ವಹಿಸಿದರೆ ಸಾಕು ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

Madras eye in Kalaburagi: ಕಲಬುರಗಿ ಜನರಿಗೆ ಮದ್ರಾಸ್ ಐ ಕಾಟ; ಸೋಂಕು ತಡೆಗೆ ವೈದ್ಯರ ಸಲಹೆಯೇನು?
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Aug 12, 2023 | 5:39 PM

ಕಲಬುರಗಿ, ಆಗಸ್ಟ್ 12; ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಬಾಗದ ಜನರಿಗೆ ಇದೀಗ ಮದ್ರಾಸ್ ಕಾಟ ಆರಂಭವಾಗಿದೆ. ಹಾಗಂತ ಮದ್ರಾಸ್ ಜನರಿಂದ, ಮದ್ರಾಸ್ ನಿಂದ ತೊಂದರೆಯಾಗಿಲ್ಲಾ. ಬದಲಾಗಿ ಮದ್ರಾಸ್ ಐ (Madras Eye) ಕಾಟ ಜನರನ್ನು ಹೈರಾಣುಗೊಳಿಸಿದೆ. ಹೌದು ಕಂಜಕ್ಟವೈಟೀಸ್ (Conjunctivitis) ಕಾಟ ಹೆಚ್ಚಾಗಿದೆ. ಮಕ್ಕಳಿಂದ ಹಿಡಿದು ಹರಿಹದೆಯದವರು ಕೂಡಾ ಈ ಸೋಂಕಿಗೆ ತುತ್ತಾಗುತ್ತಿದ್ದು, ಜನರು ಇದೀಗ ಸಾರ್ವಜನಿಕ ಸ್ಥಳದಲ್ಲಿ ಅಡ್ಡಾಡಲು ಕೂಡಾ ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಕಂಜಕ್ಟವೈಟೀಸ್ ಇದು ಒಂದು ವೈರಸ್ ನಿಂದ ಹರಡುವ ಕಾಯಿಲೆಯಾಗಿದೆ. ಸಾಮಾನ್ಯವಾಗಿ ಮಳೆಗಾಲ ಆರಂಭದಲ್ಲಿ‌ ಕಂಡುಬರುತ್ತದೆ. ಈ ಕಾಯಿಲೆ ಕುರಿತು ಸಾರ್ವಜನಿಕರು ಅನಗತ್ಯ ಭಯ ಪಡುವ ಅವಶ್ಯಕತೆಯಿಲ್ಲ, ಮುನ್ನೆಚ್ಚರಿಕೆ ಕ್ರಮ ವಹಿಸಿದರೆ ಸಾಕು ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

ಕಂಜಕ್ಟವೈಟೀಸ್ ಅಥವಾ ಮದ್ರಾಸ್ ಐ ಎಂದರೇನು?

ಕಂಜಕ್ಟವೈಟೀಸ್ (Madras Eye) ಕಾಯಿಲೆ ಕಣ್ಣಿನ ಬಿಳಿಭಾಗವನ್ನು ಆವರಿಸುವ ಕಣ್ಣಿನ ಮುಂಭಾಗದಲ್ಲಿ ಇರುವ ಪದರದ ಸೋಂಕಿಗೆ (ಉರಿಊತ) ಕಂಜಕ್ಟವೈಟೀಸ್ ಎಂದು ಕರೆಯುತ್ತಾರೆ. ಸೋಂಕಿತ ವ್ಯಕ್ತಿಯ ಕಣ್ಣಿನಿಂದ ಬರುವ ದ್ರವದ (Discharge) ಸಂಪರ್ಕದಿಂದ ಆರೋಗ್ಯವಂತ ವ್ಯಕ್ತಿಗೂ ಸಹ ಈ ಕಾಯಿಲೆ ಹರಡಲಿದೆ.

ಮದ್ರಾಸ್ ಐ ಹೇಗೆ ಹರಡುತ್ತದೆ?

ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದರಿಂದ ಬೇರೆಯವರಿಗೆ ಸೋಂಕು ಹರಡುವುದನ್ನು ತಡೆಗಟ್ಟಬಹುದು. ಈ ಕಾಯಿಲೆ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಹಾಗೂ ಎಲ್ಲಾ ವಯಸ್ಸಿನವರಲ್ಲಿ ಕಂಡು ಬರುತ್ತದೆ. ವಿಶೇಷವಾಗಿ ಶಾಲಾ ಕಾಲೇಜು, ವಸತಿ ನಿಲಯಗಳಲ್ಲಿ ಮತ್ತು ಅತಿಥಿ ಗೃಹಗಳಲ್ಲಿ (ಪಿ.ಜಿ) ಈ ಸೋಂಕು ಬೇಗ ಹರಡುವ ಸಾಧ್ಯತೆ ಹೆಚ್ಚಿದ್ದು, 3 ರಿಂದ 5 ದಿನಗಳಲ್ಲಿ ಗುಣ ಮುಖವಾಗುತ್ತದೆ.

ಕಂಜಕ್ಟವೈಟೀಸ್ ಲಕ್ಷಣಗಳೇನು?

ಕಣ್ಣು ಕೆಂಪಾಗುವಿಕೆ, ನೀರು ಸೋರುವಿಕೆ, ಅತಿಯಾದ ಕಣ್ಣೀರು, ಕಣ್ಣಿನಲ್ಲಿ ತುರಿಕೆ, ಸತತ ಕಣ್ಣು ನೋವು ಹಾಗೂ ಚುಚ್ಚುವಿಕೆ, ಬೆಳಕನ್ನು ನೋಡಲು ಸಾಧ್ಯವಾಗದಿರುವುದು, ದೃಷ್ಠಿ ಮುಸಕಾಗುವುದು/ ಮಂಜಾಗುವುದು, ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತ ದ್ರವದಿಂದ ಅಂಟಿರುವುದು, ರೆಪ್ಪೆ ಊದಿಕೊಳ್ಳುವುದು, ಈ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ತಮ್ಮ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಚಿಕಿತ್ಸೆ/ ಸಲಹೆ ಪಡೆಯಬೇಕು.

ಮದ್ರಾಸ್ ಐಗೆ ಚಿಕಿತ್ಸೆ ಏನು?

ಶುಚಿಯಾದ ಒದ್ದೆ ಮಾಡಿದ ಬಟ್ಟೆ ಅಥವಾ ಹತ್ತಿಯ ಉಂಡೆಗಳಿಂದ ಉಗುರು ಬೆಚ್ಚಗಿನ ನೀರಿನಿಂದ ಕಣ್ಣುಗಳನ್ನು ಸ್ವಚ್ಚಗೊಳಿಸಬೇಕು. ವೈದ್ಯರ ಸಲಹೆ ಮೇರೆಗೆ ಔಷಧಿಗಳನ್ನು ಬಳಸಬೇಕು. ಶಾಲಾ ವಿದ್ಯಾರ್ಥಿ/ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಸೋಂಕು ಕಂಡು ಬಂದಲ್ಲಿ ಅವರನ್ನು ಶಾಲೆಯಿಂದ ಪ್ರತ್ಯೇಕಿಸಿ ಚಿಕಿತ್ಸೆ ನೀಡಬೇಕು. ಸೋಂಕಿತ ವ್ಯಕ್ತಿಯು ಬಳಸಿದ ಕರವಸ್ತ್ರ ಹಾಗೂ ಇತರೆ ವಸ್ತುಗಳನ್ನು ಬೇರೆಯವರು ಬಳಸಬಾರದು. ಪದೇ ಪದೇ ಕಣ್ಣುಗಳನ್ನು ಮುಟ್ಟಬಾರದು. ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದು ಉತ್ತಮ.

ಇದನ್ನೂ ಓದಿ: Lyme disease: ಲೈಮ್ ಡಿಸೀಸ್ ಎಂದರೇನು? ಈ ರೋಗದ ಬಗ್ಗೆ ಸೂಪರ್ ಮಾಡೆಲ್ ಬೆಲ್ಲಾ ಹ್ಯಾಡಿಡ್ ಅನುಭವ ಹೇಗಿತ್ತು? ಇಲ್ಲಿದೆ ತಜ್ಞರ ಸಲಹೆ

ಮುಂಜಾಗ್ರತಾ ಕ್ರಮಗಳ ಮಾಹಿತಿ ಇಲ್ಲಿದೆ

ವೈಯಕ್ತಿಕ ಸ್ವಚ್ಚತೆಗೆ ಆದ್ಯತೆ ಕೊಡಿ, ಆರೋಗ್ಯವಂತ ವ್ಯಕ್ತಿಯು ಸೋಂಕುವುಳ್ಳ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರವಿರಬೇಕು. ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನು ತೊಳೆಯಬೇಕು. ಸೋಂಕಿತ ವ್ಯಕ್ತಿಗಳಿಗೆ ಶೀತ, ಕೆಮ್ಮು, ಜ್ವರ ಇದ್ದಲ್ಲಿ ತಕ್ಷಣವೇ ಚಿಕಿತ್ಸೆ ಪಡೆಯಬೇಕು. ತೀವ್ರತರದ ಸೋಂಕು ಉಂಟಾದಲ್ಲಿ ತಕ್ಷಣವೇ ನೇತ್ರ ತಜ್ಞರಿಂದ ಚಿಕಿತ್ಸೆ ಪಡೆಯಬೇಕು.

ಮದ್ರಾಸ್ ಐ ತಗುಲಿದರೆ ಏನು ಮಾಡಬೇಕು?

ಸ್ವಚ್ಚವಾದ ನೀರಿನಿಂದ ಕಣ್ಣುಗಳನ್ನು ಶುಚಿಗೊಳಿಸಬೇಕು. ಸೋಂಕು ಕಂಡುಬಂದ ತಕ್ಷಣ ವೈದ್ಯರಿಂದ ಚಿಕಿತ್ಸೆ/ ಸಲಹೆ ಪಡೆಯಬೇಕು. ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಅಹಾರ ನೀಡಬೇಕು. ಸೋಂಕಿತ ವ್ಯಕ್ತಿಗಳು ಬಳಸಿದ ಕೈವಸ್ತ್ರ/ಟವಲ್ ಇನ್ನಿತರ ವಸ್ತುಗಳನ್ನು ಸಂಸ್ಕರಿಸಿ ಬಳಸಬೇಕು.

ಏನು ಮಾಡಬಾರದು?

ಕೈಗಳಿಂದ ಪದೇ ಪದೇ ಕಣ್ಣುಗಳಿಗೆ ಮುಟ್ಟಬಾರದು. ಸ್ವಯಂ ಚಿಕಿತ್ಸೆ ವಿಧಾನಗಳನ್ನು ಮಾಡಬಾರದು, ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಬೇಕು. ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನು ಮುಟ್ಟಬಾರದು ಎಂದು ಡಿ.ಹೆಚ್.ಓ. ಡಾ. ರಾಜಶೇಖರ್ ಮಾಲಿ, ಸಲಹೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ