AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಖಾನಾ Vs ಕಡಲೆ… ಇವೆರಡರಲ್ಲಿ ಯಾವುದು ಒಳ್ಳೆಯದು? ಈ ಸ್ಟೋರಿಯಲ್ಲಿದೆ ಮಾಹಿತಿ

ಮಖಾನ ಮತ್ತು ಬೇಯಿಸಿದ ಕಡಲೆ ಎರಡೂ ಕೂಡ ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಬೆಳಗ್ಗಿನ ತಿಂಡಿಗಳಿಗೆ ಉತ್ತಮ ಆಯ್ಕೆ. ಮಖಾನ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ರಂಜಕದ ಉತ್ತಮ ಮೂಲವಾಗಿದೆ. ಕಡಲೆ ಪ್ರೋಟೀನ್, ಫೈಬರ್, ಕಬ್ಬಿಣ ಮತ್ತು ಕೆಲವು ಜೀವಸತ್ವಗಳಿಂದ ಸಮೃದ್ಧವಾಗಿದೆ. ಆದರೆ ಈ ಎರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು ಎಂಬುದು ನಿಮಗೆ ತಿಳಿದಿದೆಯೇ? ಹಾಗಾದರೆ ಈ ಎರಡರಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಖಾನಾ Vs ಕಡಲೆ... ಇವೆರಡರಲ್ಲಿ ಯಾವುದು ಒಳ್ಳೆಯದು? ಈ ಸ್ಟೋರಿಯಲ್ಲಿದೆ ಮಾಹಿತಿ
Makhana Vs Kala Chana
ಪ್ರೀತಿ ಭಟ್​, ಗುಣವಂತೆ
|

Updated on: Aug 07, 2025 | 4:40 PM

Share

ಮಖಾನ ಅಥವಾ ಕಮಲದ ಬೀಜಗಳ (Makhana) ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ. ಇದು ನಮ್ಮ ಆರೋಗ್ಯಕ್ಕೆ ಒಂದು ರೀತಿಯ ವರದಾನವಿದ್ದಂತೆ. ಏಕೆಂದರೆ ಇದು ಪೋಷಕಾಂಶಗಳ ನಿಧಿಯಾಗಿದ್ದು ಇದನ್ನು ಆಹಾರದಲ್ಲಿ ನಾನಾ ರೀತಿಯಲ್ಲಿ ಬಳಕೆ ಮಾಡುತ್ತಾರೆ. ಆದರೆ ನಿಮಗೆ ತಿಳಿದಿರುವಂತೆ ಮಾರುಕಟ್ಟೆಯಲ್ಲಿ ಇದು ಸ್ವಲ್ಪ ದುಬಾರಿ. ಹಾಗಾಗಿ ಜನ ಇದನ್ನು ಕೊಂಡುಕೊಳ್ಳಲು ಸ್ವಲ್ಪ ಹಿಂಜರಿಯುತ್ತಾರೆ. ಇದಕ್ಕೆ ವ್ಯತಿರಿಕ್ತವಾಗಿ, ಕಡಲೆ (Kala Chana) ಕಡಿಮೆ ಬೆಲೆಗೆ ಲಭ್ಯವಿದೆ. ವಾಸ್ತವದಲ್ಲಿ ಮಖಾನ ಮತ್ತು ಕಡಲೆ ಎರಡೂ ಕೂಡ ನಮ್ಮ ದೇಹವನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮಖಾನದಲ್ಲಿ ಫೈಬರ್ ಅಧಿಕವಾಗಿದ್ದರೆ, ಕಡಲೆ ಕಬ್ಬಿಣ ಅಂಶದ ಉತ್ತಮ ಮೂಲವಾಗಿದೆ. ಎರಡೂ ಕೂಡ ಆರೋಗ್ಯಕ್ಕೆ ಒಳ್ಳೆಯದು. ಆದರೆ ಈ ಎರಡರಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಖಾನದಲ್ಲಿರುವ ಆರೋಗ್ಯಕರ ಗುಣಗಳೇನು?

ಇತ್ತೀಚಿನ ದಿನಗಳಲ್ಲಿ, ಹುರಿದ ಮಖಾನವನ್ನು ಬೆಳಿಗ್ಗಿನ ತಿಂಡಿಯಲ್ಲಿ ಬಳಕೆ ಮಾಡುವುದು ಸಾಮಾನ್ಯವಾಗಿದೆ. ಅದರ ಜೊತೆಗೆ ರಾತ್ರಿ ನೆನೆಸಿಟ್ಟ ಕಡಲೆಯನ್ನು ಕೂಡ ಬೆಳಗ್ಗಿನ ತಿಂಡಿಗೆ ಸೇವನೆ ಮಾಡುತ್ತಾರೆ. ಹುರಿದ ಮಖಾನ ಮತ್ತು ನೆನೆಸಿದ ಕಡಲೆ ಎರಡೂ ಆರೋಗ್ಯಕ್ಕೆ ಪ್ರಯೋಜನಕಾರಿ. ಆದರೆ ಎರಡರಲ್ಲಿ ಯಾವುದು ಉತ್ತಮ ಎಂಬ ಪ್ರಶ್ನೆ ಬಂದರೆ ಅದನ್ನು ಅಳೆದು ತೂಗಿ ಹೇಳಬೇಕಾಗುತ್ತದೆ. ಎರಡು ಕೂಡ ನಮ್ಮ ದೇಹಕ್ಕೆ ಒಳ್ಳೆಯದು ಆದರೆ ಪೋಷಕಾಂಶಗಳು ಮತ್ತು ಬಳಸುವ ವಿಧಾನಗಳಲ್ಲಿ ಸ್ವಲ್ಪ ವ್ಯತ್ಯಾಸಗಳಿವೆ. ಹುರಿದ ಮಖಾನದಲ್ಲಿ ಫೈಬರ್, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಮೆಗ್ನೀಸಿಯಮ್ ಹೇರಳವಾಗಿದೆ. ಅವುಗಳನ್ನು ಕಡಿಮೆ ಎಣ್ಣೆಯಿಂದ ಅಥವಾ ಎಣ್ಣೆ ಇಲ್ಲದೆಯೇ ಹುರಿಯಬಹುದು. ಮಾತ್ರವಲ್ಲ ಇದು ಸುಲಭವಾಗಿ ಜೀರ್ಣವಾಗುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಅಥವಾ ಮಧುಮೇಹ ಇರುವವರಿಗೆ ಇದು ಉತ್ತಮ ಆಯ್ಕೆಯಾಗಿದೆ ಏಕೆಂದರೆ ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತದೆ ಮತ್ತು ದೀರ್ಘಕಾಲದ ವರೆಗೆ ಹೊಟ್ಟೆ ತುಂಬಿರುವ ಭಾವನೆಯನ್ನು ನೀಡುತ್ತದೆ.

ಇದನ್ನೂ ಓದಿ: Health Care: ಮಖಾನಾವನ್ನು ಹಾಲಿನೊಂದಿಗೆ ಸೇವನೆ ಮಾಡಿ ತೂಕ ಕಡಿಮೆ ಮಾಡಿಕೊಳ್ಳಿ

ಇದನ್ನೂ ಓದಿ
Image
ಪ್ರತಿದಿನ ಕಾಫಿ ಕುಡಿಯುವುದರಿಂದ ಏನೆಲ್ಲಾ ಆಗುತ್ತೆ ಗೊತ್ತಾ?
Image
ಹೃದಯಾಘಾತಕ್ಕೂ ಮುನ್ನ ಚರ್ಮದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತಂತೆ
Image
ಈ ಆಯುರ್ವೇದ ಅಭ್ಯಾಸಗಳನ್ನು ಅನುಸರಿಸಿದರೆ ಲಿವರ್ ಆರೋಗ್ಯವಾಗಿರುತ್ತೆ!
Image
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿ ಅಂಜೂರ ಸೇವನೆ ಮಾಡಿ

ಕಡಲೆ ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನ?

ಇನ್ನು ನೆನೆಸಿದ ಕಡಲೆ ಪ್ರೋಟೀನ್, ಕಬ್ಬಿಣ, ರಂಜಕ, ನಾರು ಮತ್ತು ವಿಟಮಿನ್ ಬಿ 6 ನ ಅತ್ಯುತ್ತಮ ಮೂಲವಾಗಿದೆ. ಮಾತ್ರವಲ್ಲ ಕಡಲೆ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ ಮತ್ತು ಸ್ನಾಯುಗಳ ಬೆಂಬಲಕ್ಕೆ ಸಹಾಯ ಮಾಡುತ್ತದೆ. ಅವು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ. ಕಡಲೆಯನ್ನು ನೆನೆಸಿಡುವುದರಿಂದ ದೇಹದಲ್ಲಿ ಪೋಷಕಾಂಶಗಳ ಹೀರಿಕೊಳ್ಳುವಿಕೆ ಜಾಸ್ತಿಯಾಗುತ್ತದೆ. ಮಾತ್ರವಲ್ಲ ಅವು ಜೀರ್ಣಿಸಿಕೊಳ್ಳುವುದಕ್ಕೂ ಸುಲಭ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಇಲ್ಲದವರು, ಬೆಳಿಗ್ಗೆ ನೆನೆಸಿಟ್ಟ ಕಡಲೆಯನ್ನು ತಿನ್ನಬಹುದು ಇದು ಬಹಳ ಪ್ರಯೋಜನಕಾರಿಯಾಗಿದೆ. ಅದರಲ್ಲಿಯೂ ವಿಶೇಷವಾಗಿ ಮಕ್ಕಳು, ವೃದ್ಧರಿಗೆ ಒಳ್ಳೆಯದು.

ಯಾವುದು ಒಳ್ಳೆಯದು?

ತೂಕ ಇಳಿಸಿಕೊಳ್ಳಬೇಕಾದರೆ ಸುಲಭವಾಗಿ ಜೀರ್ಣವಾಗುವ ಹುರಿದ ಮಖಾನ ಉತ್ತಮ ಆಯ್ಕೆಯಾಗಿದೆ. ಹೆಚ್ಚಿನ ಪ್ರೋಟೀನ್ ಅವಶ್ಯಕತೆ ಇದ್ದಲ್ಲಿ ಕಡ್ಲೆಯನ್ನು ಸೇವನೆ ಮಾಡಬಹುದು. ನಿಮ್ಮ ದೇಹಕ್ಕೆ ಯಾವುದರ ಅಗತ್ಯ ಹೆಚ್ಚಾಗಿದೆ ಎಂಬುದನ್ನು ತಿಳಿದು ಅದನ್ನು ಸೇವನೆ ಮಾಡಬಹುದು ಅಥವಾ ನಿಮ್ಮ ಆಹಾರದಲ್ಲಿ ಎರಡನ್ನೂ ಸಮತೋಲಿತ ರೀತಿಯಲ್ಲಿ ಸೇರಿಸಿಕೊಳ್ಳಬಹುದು. ಮಖಾನ ದುಬಾರಿ ಎನಿಸಿದರೆ ಕಡಲೆಯನ್ನು ಸೇವನೆ ಮಾಡಬಹದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್