AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಡುಗರ ಈ ಅಭ್ಯಾಸಗಳು ಮಕ್ಕಳಾಗದಿರಲು ಕಾರಣವಾಗಬಹುದು

‘ಆರೋಗ್ಯ ತಜ್ಞರು ಹೇಳುವ ಪ್ರಕಾರ, ನಿರ್ದಿಷ್ಟವಾಗಿ ಕೆಲವು ರೀತಿಯ ಅಭ್ಯಾಸಗಳು ವೀರ್ಯಾಣುಗಳ ಸಂಖ್ಯೆಯನ್ನು ಕಡಿಮೆ ಮಾಡಲು ಕಾರಣವಾಗಬಹುದು. ಇದಲ್ಲದೆ, ಬಂಜೆತನದ ಸಮಸ್ಯೆಗೂ ಕಾರಣವಾಗಬಹುದು. ಅದರಲ್ಲಿಯೂ ಕಡಿಮೆ ವೀರ್ಯಾಣುಗಳ ಸಂಖ್ಯೆಯು ಹೆಣ್ಣಿಗೆ ಗರ್ಭಿಣಿಯಾಗಲು ತುಂಬಾ ಕಷ್ಟಕರವಾಗಿಸುತ್ತದೆ. ಹಾಗಾಗಿ ತಂದೆಯಾಗಲು ಬಯಸುವ ಮೊದಲು ಈ 5 ಅಭ್ಯಾಸಗಳಿಂದ ದೂರವಿರಬೇಕಾಗುತ್ತದೆ. ಹಾಗಾದರೆ ಅವು ಯಾವುವು? ಯಾಕಾಗಿ ಅವುಗಳಿಂದ ದೂರವಿರಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.

ಹುಡುಗರ ಈ ಅಭ್ಯಾಸಗಳು ಮಕ್ಕಳಾಗದಿರಲು ಕಾರಣವಾಗಬಹುದು
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 23, 2024 | 2:55 PM

Share

ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಬಂಜೆತನದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ವೀರ್ಯಾಣುಗಳ ಸಂಖ್ಯೆಯಲ್ಲಿನ ಇಳಿಕೆ. ಜೊತೆಗೆ ಇತರ ಆರೋಗ್ಯ ಸಮಸ್ಯೆಗಳು. ಸಾಮಾನ್ಯವಾಗಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗಲು ಹಲವು ಕಾರಣಗಳಿವೆ. ತಡವಾಗಿ ಮದುವೆಯಾಗುವುದು, ಒತ್ತಡ, ಅನಾರೋಗ್ಯಕರ ಜೀವನಶೈಲಿಯು ವೀರ್ಯಾಣುಗಳ ಸಂಖ್ಯೆಯ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಪುರುಷರ ಫಲವತ್ತತೆಯು ಪ್ರಸ್ತುತ ದಿನಗಳಲ್ಲಿ ಗಂಭೀರ ವಿಷಯವಾಗಿದ್ದು ನಿರ್ಲಕ್ಷ ಮಾಡದೆಯೇ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿದೆ. ಹೆಣ್ಣಿಗೆ ಗರ್ಭ ಧರಿಸುವುದಕ್ಕೆ ವೀರ್ಯದ ಸಂಖ್ಯೆ ಪ್ರತಿ ಮಿಲಿಲೀಟರ್ ನಲ್ಲಿ 15 ಮಿಲಿಯನ್ ಗಿಂತ ಹೆಚ್ಚಿರಬೇಕು. ಇದು ಇದಕ್ಕಿಂತ ಕಡಿಮೆಯಿದ್ದರೆ, ಅದನ್ನು ಕಡಿಮೆ ವೀರ್ಯಾಣುಗಳ ಸಂಖ್ಯೆ ಎಂದು ಪರಿಗಣಿಸಲಾಗುತ್ತದೆ. ಇಂತಹ ಸಮಯದಲ್ಲಿ ನೀವು ಲೈಂಗಿಕ ಸಮಸ್ಯೆಗಳು, ಕಡಿಮೆ ಶಕ್ತಿ, ವೃಷಣ ಸಮಸ್ಯೆಗಳು, ದೇಹ – ಮುಖ – ಕೂದಲಿನ ಬೆಳವಣಿಗೆಯಲ್ಲಿ ಬದಲಾವಣೆಗಳನ್ನು ಅನುಭವಿಸುತ್ತಿದ್ದರೆ, ಅದು ಕಡಿಮೆ ವೀರ್ಯಾಣುಗಳ ಸಂಖ್ಯೆಯ ಸಂಕೇತವಾಗಿರಬಹುದು. ಈ ಕಾರಣಗಳಿಂದ ಬಂಜೆತನದ ಸಮಸ್ಯೆಯ ಜೊತೆಗೆ ಇತರ ಸಮಸ್ಯೆಗಳು ಕೂಡ ಸಾಮಾನ್ಯವಾಗಿ ಸಂಭವಿಸುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ಪುರುಷರು ಪ್ರತಿದಿನ ಒಂದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಬಹಳ ಜಾಗರೂಕರಾಗಿರುವುದು ಒಳ್ಳೆಯದು.

ಆರೋಗ್ಯ ತಜ್ಞರು ಹೇಳುವ ಪ್ರಕಾರ, ನಿರ್ದಿಷ್ಟವಾಗಿ ಕೆಲವು ರೀತಿಯ ಅಭ್ಯಾಸಗಳು ವೀರ್ಯಾಣುಗಳ ಸಂಖ್ಯೆಯನ್ನು ಕಡಿಮೆ ಮಾಡಲು ಕಾರಣವಾಗಬಹುದು. ಇದಲ್ಲದೆ, ಬಂಜೆತನದ ಸಮಸ್ಯೆಗೂ ಕಾರಣವಾಗಬಹುದು. ಅದರಲ್ಲಿಯೂ ಕಡಿಮೆ ವೀರ್ಯಾಣುಗಳ ಸಂಖ್ಯೆಯು ಹೆಣ್ಣಿಗೆ ಗರ್ಭಿಣಿಯಾಗಲು ತುಂಬಾ ಕಷ್ಟಕರವಾಗಿಸುತ್ತದೆ. ಹಾಗಾಗಿ ತಂದೆಯಾಗಲು ಬಯಸುವ ಮೊದಲು ಈ 5 ಅಭ್ಯಾಸಗಳಿಂದ ದೂರವಿರಬೇಕಾಗುತ್ತದೆ. ಹಾಗಾದರೆ ಅವು ಯಾವುವು? ಯಾಕಾಗಿ ಅವುಗಳಿಂದ ದೂರವಿರಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.

ಈ ಅಭ್ಯಾಸಗಳಿಂದ ದೂರವಿರಿ:

ಧೂಮಪಾನ: ಇತ್ತೀಚಿನ ದಿನಗಳಲ್ಲಿ ಸಿಗರೇಟು ಸೇದುವುದು ಕೆಲವು ಪುರುಷರಲ್ಲಿ ಸಾಮಾನ್ಯವಾಗಿದೆ. ನಮ್ಮ ಯುವಕರು ಧೂಮಪಾನದ ವ್ಯಸನಿಗಳಾಗುತ್ತಿದ್ದಾರೆ. ಆದರೆ ನಿಮಗೆ ತಿಳಿದಿದೆಯೇ? ಧೂಮಪಾನವು ಕೇವಲ ಶ್ವಾಸಕೋಶಕ್ಕೆ ಸಂಬಂಧಿಸಿದ್ದಲ್ಲ. ಇದು ಲೈಂಗಿಕ ಆರೋಗ್ಯಕ್ಕೂ ಹಾನಿಕಾರಕ. ಧೂಮಪಾನ ಮಾಡುವ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುತ್ತದೆ ಎಂದು ಅಧ್ಯಯನಗಳಿಂದ ತಿಳಿದು ಬಂದಿದೆ.

ಮದ್ಯಪಾನ: ಕೆಲವು ಹುಡುಗರು ಚಿಕ್ಕ ವಯಸ್ಸಿನಿಂದಲೇ ಮದ್ಯಪಾನ ಮಾಡಲು ಪ್ರಾರಂಭಿಸುತ್ತಾರೆ. ಇದು ಒಳ್ಳೆಯದಲ್ಲ ಎಂದು ವೈದ್ಯಕೀಯ ತಜ್ಞರು ಎಚ್ಚರಿಸುತ್ತಾರೆ. ಅಲ್ಲದೆ ಅತಿಯಾಗಿ ಆಲ್ಕೋಹಾಲ್ ಸೇವನೆಯು ಪುರುಷರ ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ, ಸಾಕಷ್ಟು ವೀರ್ಯಾಣು ಉತ್ಪತ್ತಿಯಾಗುವುದಿಲ್ಲ ಎಂದು ಹೇಳಲಾಗುತ್ತದೆ.

ಉದ್ವೇಗ (ಒತ್ತಡ): ಅಧಿಕ ಒತ್ತಡವು ದೇಹದಲ್ಲಿ ಕಾರ್ಟಿಸೋಲ್ ನಂತಹ ಒತ್ತಡದ ಹಾರ್ಮೋನುಗಳ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಟೆಸ್ಟೋಸ್ಟೆರಾನ್ ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತದೆ. ಇದು ವೀರ್ಯಾಣುಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ. ಆದ್ದರಿಂದ, ಯೋಗ, ಧ್ಯಾನ, ದೈಹಿಕ ವ್ಯಾಯಾಮ ಮುಂತಾದ ಒತ್ತಡ ನಿರ್ವಹಣಾ ವಿಧಾನಗಳನ್ನು ಅನುಸರಿಸುವುದು ಬಹಳ ಮುಖ್ಯ.

ಅನಾರೋಗ್ಯಕರ ಆಹಾರಗಳು: ಆಹಾರ ಫಲವತ್ತತೆಯ ಮೇಲೂ ಪರಿಣಾಮ ಬೀರುತ್ತದೆ. ಫಾಸ್ಟ್ ಫುಡ್, ಸಕ್ಕರೆ ಮತ್ತು ಕೊಬ್ಬಿನ ಪದಾರ್ಥಗಳನ್ನು ಸೇವಿಸುವುದರಿಂದ ದೇಹದಲ್ಲಿ ಊತ ಮತ್ತು ತೂಕ ಹೆಚ್ಚಾಗಬಹುದು, ಇದು ವೀರ್ಯಾಣು ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತದೆ. ಜೀವಸತ್ವಗಳು ಮತ್ತು ಖನಿಜಗಳ ಕೊರತೆಗಳು, ವಿಶೇಷವಾಗಿ ಸತು, ಸೆಲೆನಿಯಂ, ಫೋಲಿಕ್ ಆಮ್ಲ, ವೀರ್ಯಾಣುಗಳ ಗುಣಮಟ್ಟದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ನೀವು ಸೇವನೆ ಮಾಡುವ ಆಹಾರದ ಬಗ್ಗೆ ಗಮನವಿರಲಿ.

ವಿಪರೀತ ಶಾಖ: ಪುರುಷರಿಗೆ, ದೇಹದ ಕೆಳಭಾಗದಲ್ಲಿ ಅತಿಯಾದ ಶಾಖ ಅಥವಾ ಬಿಸಿಯ ಅನುಭವ ಆಗುವುದು ವೀರ್ಯಾಣುಗಳ ಸಂಖ್ಯೆಯ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ಇಂತಹ ಪರಿಸ್ಥಿತಿಯಲ್ಲಿ, ನೀವು ಬಿಸಿ ನೀರಿನ ಸ್ನಾನ, ಬಿಗಿಯಾದ ಒಳ ಉಡುಪುಗಳು, ಲ್ಯಾಪ್ಟಾಪ್ ಅನ್ನು ನಿಮ್ಮ ತೊಡೆಯ ಮೇಲೆ ದೀರ್ಘಕಾಲ ಇರಿಸಿಕೊಂಡು ಕೆಲಸ ಮಾಡುವುದನ್ನು ತಪ್ಪಿಸಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇಲ್ಲದಿದ್ದರೆ, ವೃಷಣಗಳ ತಾಪಮಾನದ ಹೆಚ್ಚಳದಿಂದಾಗಿ ವೀರ್ಯಾಣು ಹಾನಿಯಾಗುವ ಅಪಾಯವೂ ಇರುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!