ಋತುಬಂಧವು ಮಹಿಳೆಯರಲ್ಲಿ ಹೃದಯಾಘಾತದ ಅಪಾಯ ಹೆಚ್ಚಿಸಬಹುದು: ಇದರ ಬಗ್ಗೆ ನಮಗೆ ಏಕೆ ತಿಳಿದಿಲ್ಲ?

ಕೋವಿಡ್-19 ಲಸಿಕೆಯನ್ನು ಸ್ವೀಕರಿಸಿದ ನಂತರ, ಅನೇಕರ ಋತುಚಕ್ರದಲ್ಲಿ ಸಾಕಷ್ಟು ಬದಲಾಣೆ ಆಗಿವೆ. ತೀವ್ರವಾದ ಸೆಳೆತ, ಕಡಿಮೆ ಚಕ್ರ ಮತ್ತು ಭಾರೀ ರಕ್ತಸ್ರಾವ ಸಂಭವಿಸಿವೆ. ಸಿಂಗಾಪುರ್ ಹಾರ್ಟ್ ಫೌಂಡೇಶನ್, ಈ ವರ್ಷ ತನ್ನ ಮಹಿಳಾ ಹೃದಯ ಆರೋಗ್ಯ ಸಮೀಕ್ಷೆಯಲ್ಲಿ, ಹೃದ್ರೋಗವು ವಾರ್ಷಿಕವಾಗಿ ಮೂವರಲ್ಲಿ ಒಬ್ಬ ಮಹಿಳೆಯನ್ನು ಬಲಿ ತೆಗೆದುಕೊಳ್ಳುತ್ತದೆ ಎಂದು ಹೇಳಿದೆ.

ಋತುಬಂಧವು ಮಹಿಳೆಯರಲ್ಲಿ ಹೃದಯಾಘಾತದ ಅಪಾಯ ಹೆಚ್ಚಿಸಬಹುದು: ಇದರ ಬಗ್ಗೆ ನಮಗೆ ಏಕೆ ತಿಳಿದಿಲ್ಲ?
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 21, 2024 | 3:33 PM

ಋತುಬಂಧವು ನೈಸರ್ಗಿಕ ಪ್ರಕ್ರಿಯೆಯಾಗಿದ್ದು, ಸುಮಾರು 51 ವರ್ಷ ವಯಸ್ಸಿನ ಮಹಿಳೆಯರಲ್ಲಿ ಸಂಭವಿಸುತ್ತದೆ. ಮೆನೋಪಾಸ್ ಎಂದರೆ ಒಂದು ವರ್ಷದವರೆಗೆ ಪಿರಿಯಡ್ಸ್ ಇಲ್ಲದಿರುವುದು. ಮಹಿಳೆಗೆ ಒಂದು ವರ್ಷದವರೆಗೆ ಮುಟ್ಟು ಬರದಿದ್ದರೆ, ಆ ಹಂತವನ್ನು ಮೆನೋಪಾಸ್ ಎಂದು ಕರೆಯಲಾಗುತ್ತದೆ. ಋತುಬಂಧವು ಸಾಮಾನ್ಯ ಪ್ರಕ್ರಿಯೆಯಾಗಿದ್ದು, ಇದರಿಂದಾಗಿ ದೇಹದಲ್ಲಿ ಅನೇಕ ಬದಲಾವಣೆಗಳಾಗುತ್ತವೆ.

ಕೋವಿಡ್-19 ಲಸಿಕೆಯನ್ನು ಸ್ವೀಕರಿಸಿದ ನಂತರ, ಅನೇಕರ ಋತುಚಕ್ರದಲ್ಲಿ ಸಾಕಷ್ಟು ಬದಲಾಣೆ ಆಗಿವೆ. ತೀವ್ರವಾದ ಸೆಳೆತ, ಕಡಿಮೆ ಚಕ್ರ ಮತ್ತು ಭಾರೀ ರಕ್ತಸ್ರಾವ ಸಂಭವಿಸಿವೆ. ಸಿಂಗಾಪುರ್ ಹಾರ್ಟ್ ಫೌಂಡೇಶನ್, ಈ ವರ್ಷ ತನ್ನ ಮಹಿಳಾ ಹೃದಯ ಆರೋಗ್ಯ ಸಮೀಕ್ಷೆಯಲ್ಲಿ, ಹೃದ್ರೋಗವು ವಾರ್ಷಿಕವಾಗಿ ಮೂವರಲ್ಲಿ ಒಬ್ಬ ಮಹಿಳೆಯನ್ನು ಬಲಿ ತೆಗೆದುಕೊಳ್ಳುತ್ತದೆ ಎಂದು ಹೇಳಿದೆ. ಆದರೂ, 80 ಪ್ರತಿಶತಕ್ಕೂ ಹೆಚ್ಚು ಮಹಿಳೆಯರಿಗೆ ಇದರ ತೀವ್ರತೆ ಅಥವಾ ರೋಗಲಕ್ಷಣಗಳ ಬಗ್ಗೆ ತಿಳಿದಿಲ್ಲ – ಇದು ಪುರುಷರಿಗೆ ಹೋಲಿಸಿದರೆ ಮಹಿಳೆಯರಲ್ಲಿ ವಿಭಿನ್ನವಾಗಿ ಕಂಡುಬರುತ್ತದಂತೆ.

ಋತುಬಂಧದ ನಂತರ, ಮಹಿಳೆಯರಲ್ಲಿ ಈಸ್ಟ್ರೊಜೆನ್ ಮಟ್ಟವು ಕಡಿಮೆಯಾಗಲು ಪ್ರಾರಂಭಿಸುತ್ತದೆ ಮತ್ತು ಮಹಿಳೆಯರ ದೇಹದಲ್ಲಿ ಬದಲಾವಣೆಗಳು ಪ್ರಾರಂಭವಾಗಲು ಇದು ಕಾರಣವಾಗಿದೆ. ಋತುಬಂಧದ ನಂತರ, ಮಹಿಳೆಯರಲ್ಲಿ ಹೃದ್ರೋಗದ ಅಪಾಯವೂ ಹೆಚ್ಚಾಗುತ್ತದೆ.

ಹೃದ್ರೋಗದ ಅಪಾಯ ಏಕೆ ಹೆಚ್ಚಾಗುತ್ತದೆ?:

ಋತುಬಂಧದ ನಂತರ, ಮಹಿಳೆಯರಲ್ಲಿ ಈಸ್ಟ್ರೊಜೆನ್ ಹಾರ್ಮೋನ್ ಮಟ್ಟವು ಕಡಿಮೆಯಾಗುತ್ತದೆ. ಈ ಹಾರ್ಮೋನ್ ಸಂತಾನೋತ್ಪತ್ತಿಗೆ ಮಾತ್ರವಲ್ಲದೆ ಇತರ ಅನೇಕ ಆರೋಗ್ಯ ಸಂಬಂಧಿತ ಕಾರ್ಯಗಳಿಗೂ ಅವಶ್ಯಕವಾಗಿದೆ. ಮೂಳೆಯ ಬಲ, ಚರ್ಮದ ತೇವಾಂಶ ಮತ್ತು ಹೃದಯದ ಆರೋಗ್ಯಕ್ಕೆ ಈಸ್ಟ್ರೊಜೆನ್ ಹಾರ್ಮೋನ್ ಅತ್ಯಗತ್ಯ. ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವಲ್ಲಿ ಈಸ್ಟ್ರೊಜೆನ್ ಪ್ರಮುಖ ಪಾತ್ರ ವಹಿಸುತ್ತದೆ.

ಈ ಕಾರಣದಿಂದಾಗಿ, ಮಹಿಳೆಯರ ಅಪಧಮನಿಗಳಲ್ಲಿ ಕೊಬ್ಬು ಸಂಗ್ರಹವಾಗಲು ಪ್ರಾರಂಭಿಸುತ್ತದೆ. ಇದು ಕಡಿಮೆ ಮಟ್ಟದ ಈಸ್ಟ್ರೊಜೆನ್‌ನಿಂದ ಸಂಭವಿಸುತ್ತದೆ. ಅಪಧಮನಿಗಳಲ್ಲಿ ಕೊಬ್ಬಿನ ಹೆಚ್ಚಳದಿಂದಾಗಿ, ಅನೇಕ ಹೃದಯರಕ್ತನಾಳದ ಕಾಯಿಲೆಗಳ ಅಪಾಯವು ಹೆಚ್ಚಾಗುತ್ತದೆ. ಆದ್ದರಿಂದ, ಋತುಬಂಧದ ನಂತರ, ಮಹಿಳೆಯರಲ್ಲಿ ಹೃದ್ರೋಗದ ಅಪಾಯವು ಹೆಚ್ಚಾಗುತ್ತದೆ.

ಋತುಬಂಧದ ನಂತರ ಹೃದಯವನ್ನು ಹೇಗೆ ಕಾಳಜಿ ವಹಿಸುವುದು?:

ಆರೋಗ್ಯಕರ ಆಹಾರವನ್ನು ಸೇವಿಸಿ- ಹೃದಯದ ಆರೋಗ್ಯಕ್ಕಾಗಿ ಆರೋಗ್ಯಕರ ಆಹಾರವನ್ನು ಸೇವಿಸುವುದು ಬಹಳ ಮುಖ್ಯ. ಆದ್ದರಿಂದ, ನಿಮ್ಮ ಆಹಾರದಲ್ಲಿ ಫೈಬರ್ ಭರಿತ ಆಹಾರಗಳನ್ನು ಸೇರಿಸಿ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ, ಉತ್ಕರ್ಷಣ ನಿರೋಧಕಗಳು, ವಿಟಮಿನ್​ಗಳು, ಖನಿಜಗಳು ಮತ್ತು ಪ್ರೋಟೀನ್​ಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇರಿಸಿ.

ವ್ಯಾಯಾಮ ಮಾಡಿ – ವ್ಯಾಯಾಮವು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದ್ದರಿಂದ, ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ವ್ಯಾಯಾಮ ಮಾಡಿ. ಏರೋಬಿಕ್ ವ್ಯಾಯಾಮ ಹೃದಯದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದ್ದರಿಂದ, ವಾಕಿಂಗ್, ಜಾಗಿಂಗ್, ಓಟ, ಈಜು ಮುಂತಾದ ಚಟುವಟಿಕೆಗಳನ್ನು ಮಾಡಿ.

ಇದನ್ನೂ ಓದಿ: ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದ ತಪ್ಪು ಕಲ್ಪನೆಯನ್ನು ಇಂದೇ ಹೋಗಲಾಡಿಸಿ: ಈ ಸುಳ್ಳನ್ನು ನಂಬಬೇಡಿ

ಒಮೆಗಾ 3- ಕೊಬ್ಬಿನಾಮ್ಲಗಳನ್ನು ಹೊಂದಿರುವ ಆಹಾರವನ್ನು ಸೇವಿಸಿ – ನಿಮ್ಮ ಆಹಾರದಲ್ಲಿ ಒಮೆಗಾ -3 ಕೊಬ್ಬಿನಾಮ್ಲಗಳನ್ನು ಸೇರಿಸಲು ಮರೆಯದಿರಿ. ಸಾಲ್ಮನ್, ಟ್ಯೂನ, ಮ್ಯಾಕೆರೆಲ್‌ನಂತಹ ಕೊಬ್ಬಿನ ಮೀನುಗಳು ಮತ್ತು ಬಾದಾಮಿ ಮತ್ತು ವಾಲ್‌ನಟ್‌ಗಳಂತಹ ಬೀಜಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿ. ಒಮೆಗಾ -3 ಕೊಬ್ಬಿನಾಮ್ಲಗಳು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಹೆಚ್ಚುವರಿ ಸಕ್ಕರೆ ಮತ್ತು ಉಪ್ಪನ್ನು ತಪ್ಪಿಸಿ – ಹೆಚ್ಚುವರಿ ಉಪ್ಪು ಮತ್ತು ಸಕ್ಕರೆ ಸಹ ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಹೆಚ್ಚು ಉಪ್ಪು ಸೇವನೆಯು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ, ಇದು ಹೃದಯಕ್ಕೆ ಹಾನಿಕಾರಕವಾಗಿದೆ.

ಧೂಮಪಾನ- ಮದ್ಯಪಾನ ಮಾಡಬೇಡಿ – ಮದ್ಯಪಾನ ಮತ್ತು ಧೂಮಪಾನದ ಕಾರಣದಿಂದಾಗಿ, ಹೃದಯ ಕಾಯಿಲೆಗಳ ಅಪಾಯವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಮದ್ಯಪಾನವು ಹೃದ್ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ ಮತ್ತು ಧೂಮಪಾನವು ರಕ್ತನಾಳಗಳನ್ನು ಹಾನಿಗೊಳಿಸುತ್ತದೆ ಎಂದು ಅನೇಕ ಅಧ್ಯಯನಗಳು ಬಹಿರಂಗಪಡಿಸಿವೆ. ಆದ್ದರಿಂದ ಅವುಗಳಿಂದ ಅಂತರ ಕಾಯ್ದುಕೊಳ್ಳಿ.

ವೈದ್ಯರನ್ನು ಸಂಪರ್ಕಿಸಿ- ನಿಮ್ಮ ವೈದ್ಯರನ್ನು ಸಂಪರ್ಕಿಸುವ ಮೂಲಕ ನೀವು ಹಾರ್ಮೋನ್ ಥೆರಪಿ ಅಥವಾ ಔಷಧಿಗಳ ಸಹಾಯವನ್ನು ಸಹ ತೆಗೆದುಕೊಳ್ಳಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್