AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಟ್ಟಿನ ಸಮಯದಲ್ಲಾಗುವ ನೋವನ್ನು ಕಡಿಮೆ ಮಾಡಲು ಈ ಗಿಡಮೂಲಿಕೆಗಳು ತುಂಬಾ ಸಹಕಾರಿ

ಮುಟ್ಟಿನ ಸಮಯದಲ್ಲಿ ಕಾಣಿಸಿಕೊಳ್ಳುವ ನೋವು ತುಂಬಾ ಸಾಮಾನ್ಯವಾಗಿದೆ. ಆದರೆ ಒಂದೊಂದು ತಿಂಗಳು ನೋವು ವಿಪರೀತ ಹೆಚ್ಚಾಗುತ್ತದೆ, ಎದ್ದೇಳಲು ಸಹ ಕಷ್ಟವಾಗುತ್ತದೆ.

ಮುಟ್ಟಿನ ಸಮಯದಲ್ಲಾಗುವ ನೋವನ್ನು ಕಡಿಮೆ ಮಾಡಲು ಈ ಗಿಡಮೂಲಿಕೆಗಳು ತುಂಬಾ ಸಹಕಾರಿ
Periods Pain
Follow us
TV9 Web
| Updated By: ನಯನಾ ರಾಜೀವ್

Updated on: Aug 16, 2022 | 7:30 AM

ಮುಟ್ಟಿನ ಸಮಯದಲ್ಲಿ ಕಾಣಿಸಿಕೊಳ್ಳುವ ನೋವು ತುಂಬಾ ಸಾಮಾನ್ಯವಾಗಿದೆ. ಆದರೆ ಒಂದೊಂದು ತಿಂಗಳು ನೋವು ವಿಪರೀತ ಹೆಚ್ಚಾಗುತ್ತದೆ, ಎದ್ದೇಳಲು ಸಹ ಕಷ್ಟವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಅನೇಕ ಮಹಿಳೆಯರು ನೋವಿನಿಂದ ಪರಿಹಾರವನ್ನು ಹುಡುಕುತ್ತಾರೆ. ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಇದರಿಂದಾಗಿ ನೋವು ನಿವಾರಣೆಯಾಗುತ್ತದೆ, ಆದರೆ ಅದು ದೇಹಕ್ಕೆ ಹಾನಿ ಮಾಡುತ್ತದೆ. ಪ್ರಕೃತಿಯು ಗಿಡಮೂಲಿಕೆಗಳನ್ನು ನೀಡಿದೆ.

ದಾಲ್ಚಿನ್ನಿ ಆಹಾರದ ರುಚಿಯನ್ನು ಹೆಚ್ಚಿಸಲು ದಾಲ್ಚಿನ್ನಿ ಪುಡಿಯನ್ನು ಬಳಸಲಾಗುತ್ತದಂತೆ. ಅದೇ ರೀತಿ ಪಿರಿಯಡ್ಸ್ ನೋವನ್ನು ಕಡಿಮೆ ಮಾಡಲು ಕೂಡ ಇದನ್ನು ಸೇವಿಸಬಹುದು. ಇದು ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ವಿಟಮಿನ್ಗಳನ್ನು ಹೊಂದಿರುತ್ತದೆ. ಈ ಎಲ್ಲಾ ಅಂಶಗಳು ದೇಹಕ್ಕೆ ಬಹಳ ಮುಖ್ಯ.

ಋತುಚಕ್ರದ ಸಮಯದಲ್ಲಿ ನಿಮಗೆ ಸಾಕಷ್ಟು ನೋವು ಇದ್ದರೆ, ನೀವು ಅದನ್ನು ಕಾಫಿಯಲ್ಲಿ ಬಳಸಬಹುದು. ನಂತರ ಅದನ್ನು ಕುಡಿಯಿರಿ. ಕಾಫಿಯಲ್ಲಿ ಒಂದು ಚಿಟಿಕೆ ದಾಲ್ಚಿನ್ನಿ ಬಳಸಿ. ಇದಲ್ಲದೇ ಗಂಜಿಗೆ ಸೇರಿಸಿ ತಿನ್ನಬಹುದು.

ಶುಂಠಿ ಶುಂಠಿಯ ಪ್ರಯೋಜನಗಳನ್ನು ನೀವು ಕೇಳಿರಬೇಕು.. ಮುಟ್ಟಿನ ಸಮಯದಲ್ಲಿ ನೋವನ್ನು ಕಡಿಮೆ ಮಾಡಲು, ಇದನ್ನು ಹಲವಾರು ರೂಪಗಳಲ್ಲಿ ಸೇವಿಸಬಹುದು. ನೀವು ಶುಂಠಿಯಿಂದ ಮಾಡಿದ ಚಹಾವನ್ನು ಕುಡಿಯಬಹುದು. ಆದರೆ ಹಾಲಿನೊಂದಿಗೆ ಅಲ್ಲ. ಒಂದು ಪಾತ್ರೆಯಲ್ಲಿ 1 ಕಪ್ ನೀರನ್ನು ಕುದಿಸಿ, ನಂತರ ಶುಂಠಿ ಬೇರು ಸೇರಿಸಿ ಮತ್ತು 10 ನಿಮಿಷ ಬೇಯಿಸಿ. ನಂತರ ಅದಕ್ಕೆ ಕತ್ತರಿಸಿದ ನಿಂಬೆ ಸೇರಿಸಿ ಮತ್ತು ಮತ್ತೆ 5 ನಿಮಿಷ ಬೇಯಿಸಿ. ರುಚಿ ಮತ್ತು ಅದರ ಪರಿಣಾಮವನ್ನು ದ್ವಿಗುಣಗೊಳಿಸಲು ಇದಕ್ಕೆ ಜೇನುತುಪ್ಪವನ್ನು ಸೇರಿಸಿ. ನೀವು ಪ್ರತಿದಿನ ಈ ಚಹಾವನ್ನು ಕುಡಿಯಬಹುದು. ನನ್ನನ್ನು ನಂಬಿ ಅದು ನೋವನ್ನು ಕಡಿಮೆ ಮಾಡುತ್ತದೆ.

ಮೆಂತ್ಯೆ ಕಾಳು ಮೆಂತ್ಯೆ ಕಾಳುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ಕೂದಲಿಗೆ ಸಹ ಬಳಸಲಾಗುತ್ತದೆ. ಇದರಲ್ಲಿ ಅನೇಕ ಪೋಷಕಾಂಶಗಳು ಕಂಡುಬರುತ್ತವೆ, ಇದು ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದಕ್ಕಾಗಿ, ಒಂದು ಚಮಚ ಮೆಂತ್ಯವನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಿ. ಮರುದಿನ ನಿಮಗೆ ಸಾಧ್ಯವಾದರೆ, ಅದರ ಬೀಜಗಳೊಂದಿಗೆ ನೀರನ್ನು ಕುಡಿಯಿರಿ. ಇದರ ರುಚಿ ವಿಚಿತ್ರ ಎನಿಸಿದರೆ ಅದಕ್ಕೆ ಚಿಟಿಕೆ ಉಪ್ಪು ಹಾಕಿ.

ಓಮ್​ಕಾಳು ಓಮ್​ಕಾಳು ನೀರನ್ನು ಕುಡಿಯುವುದು ಪಿರಿಯೆಡ್ಸ್ ನೋವಿಗೆ ಉತ್ತಮ ಪರಿಹಾರವನ್ನು ನೀಡುತ್ತದೆ. ಓಂ ಕಾಳು ಚಹಾವನ್ನು ಕುಡಿಯಬಹುದು. ಇದಕ್ಕಾಗಿ 2 ಕಪ್ ನೀರಿನಲ್ಲಿ 2 ಚಿಟಿಕೆ ಓಂಕಾಳು ಬೀಜಗಳನ್ನು ಹಾಕಿ ಅರ್ಧದಷ್ಟು ಕುದಿಸಿ. ಈಗ ಅದಕ್ಕೆ ಜೇನುತುಪ್ಪ ಸೇರಿಸಿ ಜರಡಿ ಹಿಡಿಯಿರಿ. ನಂತರ ದಿನಕ್ಕೆ ಕನಿಷ್ಠ ಮೂರು ಬಾರಿ ಕುಡಿಯಿರಿ. ಇದನ್ನು ಕುಡಿದ ತಕ್ಷಣ ನೋವು ಕಡಿಮೆಯಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ