AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇಪದೇ ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಹೃದಯದ ಆರೋಗ್ಯ ಸರಿಯಾಗಿದ್ಯಾ ಪರೀಕ್ಷೆ ಮಾಡಿಸಿಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಅನೇಕರಲ್ಲಿ ಕಾಡುತ್ತಿರುವ ಸಮಸ್ಯೆಗಳಲ್ಲಿ ಮೈಗ್ರೇನ್ ಕೂಡ ಒಂದು. ಇದು ಪದೇ ಪದೇ ಕಾಣಿಸಿಕೊಳ್ಳುವುದರಿಂದ ಹೆಚ್ಚು ಕಿರಿಕಿರಿ ಉಂಟುಮಾಡುತ್ತದೆ. ಹಾಗಾಗಿ ಇದನ್ನು ಸಾಮಾನ್ಯ ತಲೆನೋವು ಎಂದು ಪರಿಗಣಿಸಿ ನಿರ್ಲಕ್ಷಿಸುವುದನ್ನು ನಿಲ್ಲಿಸಬೇಕು. ಅದರಲ್ಲಿಯೂ ಇತ್ತೀಚಿನ ಅಧ್ಯಯನವು ಮೈಗ್ರೇನ್ ಮತ್ತು ಹೃದಯದ ಆರೋಗ್ಯದ ನಡುವಿನ ಸಂಭಾವ್ಯ ಸಂಬಂಧವನ್ನು ಸೂಚಿಸಿದೆ. ಈ ಅಧ್ಯಯನದ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಪದೇಪದೇ ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಹೃದಯದ ಆರೋಗ್ಯ ಸರಿಯಾಗಿದ್ಯಾ ಪರೀಕ್ಷೆ ಮಾಡಿಸಿಕೊಳ್ಳಿ
Repeated MigraineImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 09, 2026 | 8:46 PM

Share

ಇತ್ತೀಚಿನ ದಿನಗಳಲ್ಲಿ ಹಲವರಿಗೆ ಪದೇಪದೇ ಮೈಗ್ರೇನ್ (Migraine) ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯ ತಲೆನೋವು ಎಂದು ಇದನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಇದೀಗ ಹೊಸ ಅಧ್ಯಯನವೊಂದು ಮೈಗ್ರೇನ್ ಮತ್ತು ಹೃದಯದ ಆರೋಗ್ಯದ ನಡುವೆ ಸಂಬಂಧ ಇರಬಹುದೆಂಬ ಸೂಚನೆ ನೀಡಿದೆ. ಹೌದು, ಸಾಮಾನ್ಯವಾಗಿ ಮೈಗ್ರೇನ್ ಅನ್ನು ತಲೆನೋವಿನ ಸಮಸ್ಯೆಯಾಗಿ ಪರಿಗಣಿಸಲಾಗುತ್ತದೆ. ಆದರೆ ಇದರ ಪರಿಣಾಮ ಕೇವಲ ತಲೆನೋವಿನಲ್ಲೇ ಸೀಮಿತವಾಗಿರುವುದಿಲ್ಲ. ಮೈಗ್ರೇನ್ ಮತ್ತು ದೇಹದ ಇತರ ಆರೋಗ್ಯ ಸಮಸ್ಯೆಗಳ ನಡುವಿನ ಸಂಬಂಧವನ್ನು ತಿಳಿಯಲು ಹಲವು ಅಧ್ಯಯನಗಳು ನಡೆದಿವೆ. ಸ್ಪ್ರಿಂಗರ್ ನೇಚರ್ ಪ್ರಕಟಿಸಿರುವ ಅಧ್ಯಯನದ ಪ್ರಕಾರ, ಪದೇಪದೇ ಮೈಗ್ರೇನ್ ಸಮಸ್ಯೆ ಇರುವವರಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿರಬಹುದು ಎಂದು ಹೇಳಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಮಾಹಿತಿ ಸ್ಟೋರಿಯಲ್ಲಿದೆ.

ಮೈಗ್ರೇನ್ ವೇಳೆ ತೀವ್ರ ತಲೆನೋವು, ವಾಂತಿ ಬರುವ ಭಾವನೆ, ಬೆಳಕು ಅಥವಾ ಶಬ್ದಕ್ಕೆ ಹೆಚ್ಚು ಕಿರಿಕಿರಿಯಾಗುವುದು. ಮತ್ತೆ ಕೆಲವರಲ್ಲಿ ಇದು ದಿನನಿತ್ಯದ ಜೀವನ ಮತ್ತು ಕೆಲಸದ ಮೇಲೂ ಪರಿಣಾಮ ಬೀರುತ್ತದೆ. ಹಾಗಾಜಿ ಈ ರೀತಿಯ ಲಕ್ಷಣ ಕಂಡುಬಂದಾಗ ಅದನ್ನು ನಿರ್ಲಕ್ಷ್ಯ ಮಾಡದೆ ಸರಿಯಾಗಿ ಆರೈಕೆ ಮಾಡಿಕೊಳ್ಳುವುದು ಒಳ್ಳೆಯದು.

ಅಧ್ಯಯನ ಹೇಳುವುದೇನು?

ಅಧ್ಯಯನದಲ್ಲಿ ಸಂಶೋಧಕರು ಮೈಗ್ರೇನ್ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ನಡುವಿನ ಸಂಬಂಧವನ್ನು ವಿಶ್ಲೇಷಿಸಿದ್ದಾರೆ. ಮೈಗ್ರೇನ್ ಇರುವವರಲ್ಲಿ ಕಾರ್ಡಿಯೋವಾಸ್ಕುಲರ್ ಡಿಸೀಸ್ (CVD), ಕೊರೊನರಿ ಹೃದಯರೋಗ ಮತ್ತು ಇಸ್ಕೆಮಿಕ್ ಸ್ಟ್ರೋಕ್ ಅಪಾಯ ಹೆಚ್ಚಿರುವುದು ಕಂಡುಬಂದಿದೆ. ವಿಶೇಷವಾಗಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರಲ್ಲಿ ಇದು ಹೆಚ್ಚು ಸ್ಪಷ್ಟವಾಗಿ ಕಂಡುಬಂದಿದೆ. ಜೊತೆಗೆ ಧೂಮಪಾನ, ಒಬೆಸಿಟಿ, ಹೈ ಬ್ಲಡ್ ಪ್ರೆಶರ್ ಅಥವಾ ಇತರ ಹೃದಯ ಸಂಬಂಧಿ ಅಪಾಯಕಾರಕ ಅಂಶಗಳಿದ್ದರೆ ಅಪಾಯ ಇನ್ನಷ್ಟು ಹೆಚ್ಚಾಗಬಹುದು ಎಂದು ಅಧ್ಯಯನ ತಿಳಿಸಿದೆ.

ಇದನ್ನೂ ಓದಿ: ಹಸಿವಾದಾಗ ಸಿಕ್ಕಾಪಟ್ಟೆ ಕೋಪ ಬರೋದೇಕೆ? ಇದರ ಹಿಂದಿನ ಕಾರಣವೇನು ಗೊತ್ತಾ?

ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು?

ತಲೆನೋವು ಸಡನ್ ಆಗಿ ತುಂಬಾ ತೀವ್ರವಾಗುವುದು, ಮಾತಾಡಲು ತೊಂದರೆ, ದೇಹದ ಒಂದು ಭಾಗದಲ್ಲಿ ದುರ್ಬಲತೆ, ತಲೆ ಸುತ್ತುವುದು, ಕಣ್ಣು ಮಸುಕಾಗುವುದು ಅಥವಾ ಪ್ರಜ್ಞೆ ತಪ್ಪುವಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಮೈಗ್ರೇನ್ ದೈನಂದಿನ ಚಟುವಟಿಕೆಗೆ ಅಡ್ಡಿಯಾಗುತ್ತಿದ್ದರೆ ಅಥವಾ ಔಷಧಿಗಳ ನಂತರವೂ ಸಮಸ್ಯೆ ಮುಂದುವರಿದರೆ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.

ಮೈಗ್ರೇನ್ ನಿಯಂತ್ರಣಕ್ಕೆ ಏನು ಮಾಡಬೇಕು?

ಸಾಕಷ್ಟು ನಿದ್ರೆ, ನಿಯಮಿತ ಜೀವನಶೈಲಿ ಮತ್ತು ಒತ್ತಡ ನಿಯಂತ್ರಣ ಮೈಗ್ರೇನ್ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡಬಹುದು. ಮೈಗ್ರೇನ್ ಹೆಚ್ಚಿಸುವ ಕಾರಣಗಳನ್ನು ಗುರುತಿಸುವುದು ಕೂಡ ಮುಖ್ಯ. ಉದಾಹರಣೆಗೆ ತೀವ್ರ ಬೆಳಕು, ನಿದ್ರಾಹೀನತೆ ಅಥವಾ ಕೆಲವು ಆಹಾರ ಪದಾರ್ಥಗಳು ಸಮಸ್ಯೆಯನ್ನು ಹೆಚ್ಚಿಸಬಹುದು. ಪರ್ಯಾಯವಾಗಿ ಸಾಕಷ್ಟು ನೀರು ಕುಡಿಯುವುದು, ಸಮತೋಲನಯುತ ಆಹಾರ ಸೇವಿಸುವುದು ಮತ್ತು ವೈದ್ಯರ ಸಲಹೆಯಂತೆ ಔಷಧಿಗಳನ್ನು ತೆಗೆದುಕೊಳ್ಳುವುದು ಉತ್ತಮ. ಸಮಸ್ಯೆ ಮುಂದುವರಿದರೆ ತಜ್ಞರ ಸಲಹೆ ಪಡೆಯುವುದು ಅಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More