ICMR Dietary Guidelines Part 15: ದಿನನಿತ್ಯದ ಆಹಾರದಲ್ಲಿ ಉಪ್ಪು, ಸಕ್ಕರೆ ಪ್ರಮಾಣ ಎಷ್ಟಿರಬೇಕು? ಸರ್ಕಾರದ ಮಾರ್ಗಸೂಚಿಯಲ್ಲಿ ಏನಿದೆ?

ಇತ್ತೀಚೆಗಷ್ಟೇ ವೈದ್ಯಕೀಯ ಸಂಸ್ಥೆಯು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನ್ಯೂಟ್ರಿಷನ್ ಸಹಭಾಗಿತ್ವದಲ್ಲಿ 17 ಹೊಸ ಆಹಾರ ಮಾರ್ಗಸೂಚಿಗಳನ್ನು ಪರಿಚಯಿಸಿದೆ. ಈ ಮಾರ್ಗ ಸೂಚಿಯಲ್ಲಿ ಭಾರತೀಯರು ಆರೋಗ್ಯಯುತ ಜೀವನ ನಡೆಸಲು ಉತ್ತಮ ಗುಣಮಟ್ಟದ ಆಹಾರ ಪದ್ಧತಿಯನ್ನು ತಿಳಿಸಿದೆ. ಅದಲ್ಲದೇ ಅಡುಗೆ ಎಣ್ಣೆ , ಸಕ್ಕರೆ ಮತ್ತು ಉಪ್ಪಿನ ಸೇವನೆಯನ್ನು ಕೂಡ ಮಿತಿಗೊಳಿಸುವಂತೆ ಐಸಿಎಂಆರ್ ಸೂಚಿಸಿದೆ.

ICMR Dietary Guidelines Part 15: ದಿನನಿತ್ಯದ ಆಹಾರದಲ್ಲಿ ಉಪ್ಪು, ಸಕ್ಕರೆ ಪ್ರಮಾಣ ಎಷ್ಟಿರಬೇಕು? ಸರ್ಕಾರದ ಮಾರ್ಗಸೂಚಿಯಲ್ಲಿ ಏನಿದೆ?
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: May 27, 2024 | 5:56 PM

ಇತ್ತೀಚೆಗಿನ ದಿನಗಳಲ್ಲಿ ಗುಣಮಟ್ಟದ ಆಹಾರ ಸೇವನೆ ಮಾಡುವವರಿಗಿಂತ ಬಾಯಿ ರುಚಿಯ ಕಡೆಗೆ ಗಮನ ಕೊಡುವವರೇ ಹೆಚ್ಚು. ಫಾಸ್ಟ್‌ ಫುಡ್ ಹಾಗೂ ವಿದೇಶಿಗರ ಆಹಾರ ಪದ್ಧತಿಗಳ ಅಳವಡಿಕೆಯು ನಮ್ಮ ಆರೋಗ್ಯವನ್ನು ಹಾಳು ಮಾಡುತ್ತಿವೆ. ಹೀಗಾಗಿ ಆಹಾರದ ಸೇವನೆಯ ಜೊತೆಗೆ ಆರೋಗ್ಯ ರಕ್ಷಣೆಯ ಕಡೆಗೂ ಹೆಚ್ಚು ಗಮನ ನೀಡಬೇಕು. ಹೆಚ್ಚಿನ ಕೊಬ್ಬು, ಸಕ್ಕರೆ ಅಥವಾ ಉಪ್ಪಿನ ಅಂಶದೊಂದಿಗೆ ತಯಾರಿಸಿದರೆ ಮನೆಯಲ್ಲಿ ಬೇಯಿಸಿದ ಊಟವೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಬಿಡುಗಡೆ ಮಾಡಿದ ಹೊಸ ಆಹಾರ ಮಾರ್ಗಸೂಚಿಗಳಲ್ಲಿ ತಿಳಿಸಿದೆ.

ಚಿಪ್ಸ್, ಸಾಸ್, ಬಿಸ್ಕತ್ತುಗಳು, ಬೇಕರಿ ಉತ್ಪನ್ನಗಳು, ಮನೆಯಲ್ಲಿ ತಯಾರಿಸಿದ ಆಹಾರಗಳಾದ ಖಾರದ ತಿಂಡಿಗಳು, ಪಾಪಡ್ಸ್ ಮತ್ತು ಉಪ್ಪಿನಕಾಯಿಗಳಂತಹ ಪ್ಯಾಕ್ ಮಾಡಿ ಮಾರಾಟ ಮಾಡುವ ಆಹಾರಗಳು ಹೆಚ್ಚಿನ ಪ್ರಮಾಣದ ಉಪ್ಪನ್ನು ಹೊಂದಿರುತ್ತವೆ. ಈ ಆಹಾರವನ್ನು ನಿಯಮಿತವಾಗಿ ಸೇವಿಸುವುದರಿಂದಲೂ ಮಧುಮೇಹ, ಅಧಿಕ ರಕ್ತದೊತ್ತಡ, ಬೊಜ್ಜು, ಹೃದಯರಕ್ತನಾಳದ ಕಾಯಿಲೆಗಳು ಬರುವ ಸಾಧ್ಯತೆಯೇ ಅಧಿಕವಾಗಿದೆ ಎಂದು ಎಚ್ಚರಿಸಿದೆ.

ಈ ಆಹಾರಗಳನ್ನು ಅಪ್ಪಿ ತಪ್ಪಿಯೂ ಸೇವಿಸಲೇ ಬೇಡಿ

ಆರೋಗ್ಯಕರವಲ್ಲದ ಸಾಸ್‌ಗಳು, ಚೀಸ್, ಮೇಯನೇಸ್, ಜಾಮ್‌ಗಳು, ಜ್ಯೂಸ್‌ಗಳು, ಕಾರ್ಬೊನೇಟೆಡ್ ಪಾನೀಯಗಳು, ಬಿಸ್ಕತ್ತುಗಳು, ಕುಕೀಸ್, ಕೇಕ್‌ಗಳು, ಪೇಸ್ಟ್ರಿಗಳು, ತಂಪು ಪಾನೀಯಗಳು, , ಪ್ಯಾಕ್ ಮಾಡಿದ ಹಣ್ಣಿನ ರಸಗಳನ್ನು ಸೇವನೆಯಿಂದ ದೂರವಿರಿ. ಮನೆಯ ಹೊರಗೆ ತಯಾರಿಸಿದ ಆಹಾರವನ್ನು ಸೇವಿಸುವಾಗ ಎಚ್ಚರವಿರಲಿ.

ಇದನ್ನೂ ಓದಿ: ಬುದ್ಧಿವಂತಿಕೆ, ಮೆದುಳಿನ ಶಕ್ತಿಯನ್ನು ಹೆಚ್ಚಿಸುವ 5 ಆರೋಗ್ಯಕರ ಅಭ್ಯಾಸಗಳನ್ನು ಪಾಲನೆ ಮಾಡಿ

ದಿನಕ್ಕೆ 2000-ಕೆ.ಕೆ.ಎಲ್ ಆಹಾರದಲ್ಲಿ ದಿನಕ್ಕೆ 10 ಗ್ರಾಂ ಗಿಂತ ಹೆಚ್ಚಿನ ಪ್ರಮಾಣದ ಸ್ಯಾಚುರೇಟೆಡ್ ಕೊಬ್ಬುಗಳು ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡಬಲ್ಲದು. ಉಪ್ಪಿನ ಸೇವನೆಯು ದಿನಕ್ಕೆ 5 ಗ್ರಾಂಗಿಂತ ಹೆಚ್ಚು ಮೀರಬಾರದು ಹಾಗೂ ಈ ಸಕ್ಕರೆಯು ಸೇವನೆಯು 25 ಗ್ರಾಂಕ್ಕಿಂತ ಕಡಿಮೆಯಿರಲಿ ಎಂದು ಐಸಿಎಂಆರ್ ತಿಳಿಸಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ