AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Oil ನಲ್ಲಿ ಇದನ್ನು ಮಿಕ್ಸ್ ಮಾಡಿ ನೈಸರ್ಗಿಕ ಕಪ್ಪು ಕೂದಲನ್ನು ನಿಮ್ಮದಾಗಿಸಿಕೊಳ್ಳಿ! ಬಿಳಿ ಕೂದಲು ಸಮಸ್ಯೆಗೆ ಇದು ದಿವ್ಯ ಔಷಧಿ

ಎಳ್ಳಿನ ಎಣ್ಣೆಯು ವಿಟಮಿನ್ ಇ, ಬಿ ಕಾಂಪ್ಲೆಕ್ಸ್‌ನಂತಹ ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿದೆ. ಇವು ನಿಮ್ಮ ಕೂದಲಿನ ಆರೋಗ್ಯ ಮತ್ತು ನೀಳ ಆಕಾರಕ್ಕೆ ಕೊಡುಗೆ ನೀಡುತ್ತವೆ. ಈ ಪೋಷಕಾಂಶಗಳು ಕೂದಲನ್ನು ಬೇರುಮಟ್ಟದಿಂದ ಬಲಪಡಿಸಲು ಸಹಾಯ ಮಾಡುತ್ತದೆ, ಕೂದಲು ಹಾನಿಯಾಗುವ ಮತ್ತು ಒಡೆಯುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

Hair Oil ನಲ್ಲಿ ಇದನ್ನು ಮಿಕ್ಸ್ ಮಾಡಿ ನೈಸರ್ಗಿಕ ಕಪ್ಪು ಕೂದಲನ್ನು ನಿಮ್ಮದಾಗಿಸಿಕೊಳ್ಳಿ! ಬಿಳಿ ಕೂದಲು ಸಮಸ್ಯೆಗೆ ಇದು ದಿವ್ಯ ಔಷಧಿ
ಹೇರ್ ಆಯಿಲ್ ನಲ್ಲಿ ಇದನ್ನು ಮಿಕ್ಸ್ ಮಾಡಿ ನೈಸರ್ಗಿಕ ಕಪ್ಪು ಕೂದಲನ್ನು ನಿಮ್ಮದಾಗಿಸಿಕೊಳ್ಳಿ!
ಸಾಧು ಶ್ರೀನಾಥ್​
|

Updated on: Oct 19, 2023 | 11:26 AM

Share

ಆಧುನಿಕ ಕಾಲದಲ್ಲಿ ಚಿಕ್ಕ ವಯಸ್ಸಿನಲ್ಲೇ ತಲೆಗೂದಲು ಬಿಳಿ/ ಬೂದು ಬಣ್ಣಕ್ಕೆ ತಿರುಗುತ್ತಿದೆ. ಬಿಳಿ ಕೂದಲನ್ನು ಕಪ್ಪು ಬಣ್ಣಕ್ಕೆ ಬದಲಾಯಿಸಲು ನಾವು ಹಲವಾರು ರೀತಿಯ ಪರಿಹಾರಗಳನ್ನು ಪ್ರಯತ್ನಿಸುತ್ತೇವೆ. ಇಲ್ಲೊಂದು ಅತ್ಯುತ್ತಮ ಮನೆಮದ್ದು ಬಗ್ಗೆ ಹೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ. ನಮ್ಮಲ್ಲಿ ಹಲವರು ನಮ್ಮ ಕೂದಲಿಗೆ ಇಷ್ಟಪಟ್ಟು ತೆಂಗಿನ ಎಣ್ಣೆಯನ್ನು (Hair Oil) ಹಚ್ಚುತ್ತಾರೆ. ಆದರೆ ಎಳ್ಳಿನ ಎಣ್ಣೆಯಿಂದ ಕೂದಲು ಕಪ್ಪಾಗುವುದು ಗೊತ್ತಾ? ಹೌದು, ಎಳ್ಳಿನ ಎಣ್ಣೆಯು ಬಹಳ ಮುಖ್ಯವಾದ ಪೋಷಕಾಂಶಗಳನ್ನು ಒಳಗೊಂಡಿದೆ. ಎಳ್ಳೆಣ್ಣೆಯೊಂದಿಗೆ ಗೋರಂಟಿ ಹಚ್ಚುವುದರಿಂದ ಕೂದಲು ಕಪ್ಪಾಗುತ್ತದೆ. ಇದು ನಿಮ್ಮ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಕೂದಲಿನ ಸೌಂದರ್ಯವನ್ನು ಸುಧಾರಿಸುತ್ತದೆ. ಅಲ್ಲದೆ ನೆತ್ತಿಯ ಸೋಂಕನ್ನು ತಡೆಯುತ್ತದೆ. ಇದಕ್ಕಾಗಿ ಏನು ಮಾಡಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ.

1 ಕಪ್ ತೆಂಗಿನ ಎಣ್ಣೆಯನ್ನು ತೆಗೆದುಕೊಂಡು, ಅದಕ್ಕೆ 1 ಚಮಚ ಗೋರಂಟಿ ಪುಡಿ ಅಥವಾ ಗೋರಂಟಿ ಎಲೆಗಳನ್ನು ಸೇರಿಸಿ ಚೆನ್ನಾಗಿ ಬಿಸಿ ಮಾಡಿ. ಇದರ ನಂತರ, ಈ ಎಣ್ಣೆಯನ್ನು ನಿಮ್ಮ ಕೂದಲಿಗೆ ವಾರಕ್ಕೆ ಎರಡು ಬಾರಿ ಹಚ್ಚುತ್ತಾ ಬನ್ನಿ. ಅಥವಾ ನಿತ್ಯವೂ ಈ ಎಣ್ಣೆಯನ್ನು ಕೂದಲಿಗೆ ಹಚ್ಚಿದರೆ ಕೂದಲು ಕ್ರಮೇಣ ಕಪ್ಪಾಗುತ್ತದೆ.

ಕರಿಬೇವಿನ ಎಲೆಗಳನ್ನು ಎಳ್ಳೆಣ್ಣೆಯೊಂದಿಗೆ ಬೆರೆಸಿ ಹಚ್ಚುವುದರಿಂದ ಕೂದಲು ಕಪ್ಪಾಗುತ್ತದೆ. ಕರಿಬೇವಿನ ಎಲೆಗಳಿಂದಲೂ ಕೂದಲು ಉದುರುವಿಕೆಯನ್ನು ನಿಯಂತ್ರಿಸಬಹುದು. ಇದು ಕೂದಲನ್ನು ಬಲಪಡಿಸುತ್ತದೆ.

ಇದನ್ನೂ ಓದಿ: ಗುಲಾಬಿ ಸೇಬು – ಈ ಸಮಸ್ಯೆಗಳಿಂದ ಮುಕ್ತಿ ಪಡೆಯಲು ವಾರಕ್ಕೊಮ್ಮೆಯಾದರೂ ನೀರು ಸೇಬು ತಿನ್ನಲೇಬೇಕು

ಮೊದಲು 1 ಕಪ್ ಎಳ್ಳಿನ ಎಣ್ಣೆಯನ್ನು ತೆಗೆದುಕೊಳ್ಳಿ. ಅದರಲ್ಲಿ ಸುಮಾರು ಅರ್ಧ ಕಪ್ ಕರಿಬೇವನ್ನು ಸೇರಿಸಿ ಚೆನ್ನಾಗಿ ಬಿಸಿ ಮಾಡಿ. ವಾರಕ್ಕೆ ಎರಡು ಬಾರಿ ನಿಯಮಿತವಾಗಿ ಈ ಎಣ್ಣೆಯನ್ನು ಹಚ್ಚಿದರೆ ಕೂದಲಿನ ಬಣ್ಣ ಬೇಗನೆ ಕಪ್ಪಾಗುತ್ತದೆ. ಕೂದಲ ರಕ್ಷಣೆಗೆ ಎಳ್ಳೆಣ್ಣೆ ಬಳಸುವುದರಿಂದ ಅದ್ಭುತ ಪ್ರಯೋಜನಗಳಿವೆ. ಎಳ್ಳಿನ ಎಣ್ಣೆ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಕೂದಲು ಶುಷ್ಕತೆ ಮತ್ತು ತಲೆಹೊಟ್ಟು ಕಡಿಮೆ ಮಾಡುತ್ತದೆ. ಕೂದಲಿನ ಆರೋಗ್ಯಕ್ಕೆ ಸಂಪೂರ್ಣ ಕಾಳಜಿಯನ್ನು ನೀಡುತ್ತದೆ.

ಎಳ್ಳಿನ ಎಣ್ಣೆಯು ವಿಟಮಿನ್ ಇ, ಬಿ ಕಾಂಪ್ಲೆಕ್ಸ್‌ನಂತಹ ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿದೆ. ಇವು ನಿಮ್ಮ ಕೂದಲಿನ ಆರೋಗ್ಯ ಮತ್ತು ನೀಳ ಆಕಾರಕ್ಕೆ ಕೊಡುಗೆ ನೀಡುತ್ತವೆ. ಈ ಪೋಷಕಾಂಶಗಳು ಕೂದಲನ್ನು ಬೇರುಮಟ್ಟದಿಂದ ಬಲಪಡಿಸಲು ಸಹಾಯ ಮಾಡುತ್ತದೆ, ಕೂದಲು ಹಾನಿಯಾಗುವ ಮತ್ತು ಒಡೆಯುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಕಾಲಾನಂತರದಲ್ಲಿ, ನಿಮ್ಮ ಕೂದಲು ಮೃದು ಮತ್ತು ಬಲಶಾಲಿಯಾಗುವುದನ್ನು ನೀವು ಗಮನಿಸಬಹುದು.

ನಮ್ಮ ಕೂದಲು ಮಾಲಿನ್ಯ, ಯುವಿ ಕಿರಣಗಳು, ಕಠಿಣ ಹವಾಮಾನ ಪರಿಸ್ಥಿತಿಗಳಂತಹ ವಿವಿಧ ಪರಿಸರ ಅಂಶಗಳಿಗೆ ಗುರಿಯಾಗುತ್ತದೆ. ಎಳ್ಳಿನ ಎಣ್ಣೆ ಕೂದಲಿನ ಮೇಲೆ ರಕ್ಷಣಾತ್ಮಕ ತಡೆಗೋಡೆಯನ್ನು ರೂಪಿಸುತ್ತದೆ. ಇದು UV ವಿಕಿರಣದ ಹಾನಿಕಾರಕ ಪರಿಣಾಮಗಳ ವಿರುದ್ಧ ರಕ್ಷಣಾತ್ಮಕ ಪದರವನ್ನು ಒದಗಿಸುತ್ತದೆ. ನಿಮ್ಮ ಕೂದಲು ಬಣ್ಣ ಮಾಸದೆ ಆರೋಗ್ಯಕರವಾಗಿರುತ್ತದೆ.

ಹೆಚ್ಚಿನ ಜೀವನಶೈಲಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

(ಗಮನಿಸಿ: ಇದು ತಜ್ಞರಿಂದ ಸಂಗ್ರಹಿಸಿದ ಮಾಹಿತಿಯಾಗಿದೆ. ಆದಾಗ್ಯೂ ಈ ಸಲಹೆಗಳನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಉತ್ತಮ)

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು