Monkeypox: ಮಲೆನಾಡಿನಲ್ಲಿ ಹೆಚ್ಚುತ್ತಲೇ ಇದೆ ಮಂಗನ ಕಾಯಿಲೆ; ಮಂಕಿಪಾಕ್ಸ್ ಲಕ್ಷಣಗಳಿವು

ಕರ್ನಾಟಕದಲ್ಲಿ ಮಂಗನ ಕಾಯಿಲೆ ಮತ್ತೆ ಹೆಚ್ಚಾಗಿದ್ದು, ಶಿವಮೊಗ್ಗದಲ್ಲಿ ಇಬ್ಬರು ಈ ರೋಗಕ್ಕೆ ಬಲಿಯಾಗಿದ್ದಾರೆ. ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲೂ ಮಂಗನ ಕಾಯಿಲೆಯ ಪ್ರಕರಣಗಳು ಹೆಚ್ಚುತ್ತಿವೆ. ಮಂಗನ ಕಾಯಿಲೆ ಹೇಗೆ ಹರಡುತ್ತದೆ? ಮಂಗನ ಕಾಯಿಲೆಯ ಲಕ್ಷಣಗಳ ಬಗ್ಗೆ ನಿಮಗೆಷ್ಟು ಗೊತ್ತು?

Monkeypox: ಮಲೆನಾಡಿನಲ್ಲಿ ಹೆಚ್ಚುತ್ತಲೇ ಇದೆ ಮಂಗನ ಕಾಯಿಲೆ; ಮಂಕಿಪಾಕ್ಸ್ ಲಕ್ಷಣಗಳಿವು
ಮಂಗನ ಕಾಯಿಲೆImage Credit source: iStock
Follow us
ಸುಷ್ಮಾ ಚಕ್ರೆ
|

Updated on: Feb 05, 2024 | 7:14 PM

ಮಂಗನ ಕಾಯಿಲೆ ಅಥವಾ ಕ್ಯಾಸನೂರು ಅರಣ್ಯ ರೋಗ (KFD) ಕರ್ನಾಟಕದಲ್ಲಿ 2 ಜೀವಗಳನ್ನು ಬಲಿ ತೆಗೆದುಕೊಂಡಿದ್ದು, ಈ ರೋಗ ಹರಡುವುದನ್ನು ತಡೆಯಲು ತುರ್ತು ಕ್ರಮ ಮತ್ತು ತಡೆಗಟ್ಟುವ ಕ್ರಮಗಳನ್ನು ಜಾರಿಗೊಳಿಸುವ ಅಗತ್ಯವಿದೆ. ಕರ್ನಾಟಕ ಸರ್ಕಾರ ಕೂಡ ಮಂಗನ ಕಾಯಿಲೆಯನ್ನು (Monkey Fever) ಗಂಭೀರವಾಗಿದ್ದು, ಪರಿಗಣಿಸಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಮಲೆನಾಡಿನ ಜನರಿಗೆ ಸೂಚನೆ ನೀಡಲಾಗಿದೆ. ಪಶ್ಚಿಮಘಟ್ಟ ಭಾಗದಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಮಂಗನ ಕಾಯಿಲೆ (Monkey Pox) ಕಾಡಿನ ಆಸುಪಾಸಿನಲ್ಲಿ ವಾಸಿಸುವರಿಗೆ ಪ್ರಾಣಾಪಾಯ ತಂದೊಡ್ಡಿದೆ.

ಮಂಗನ ಕಾಯಿಲೆ ಮಂಗಗಳಿಂದ ಹರಡುವ ಸೋಂಕಾಗಿದೆ. ಇದು KFD ವೈರಸ್‌ನಿಂದ ಉಂಟಾಗುತ್ತದೆ. ಕರ್ನಾಟಕದಲ್ಲಿ ಇದುವರೆಗೆ 49 ಮಂಗನ ಕಾಯಿಲೆಯ ಪ್ರಕರಣಗಳು ಪತ್ತೆಯಾಗಿವೆ. ಈಗಾಗಲೇ ಶಿವಮೊಗ್ಗ ಜಿಲ್ಲೆಯ ಹೊಸನಗರದ 18 ವರ್ಷದ ಬಾಲಕಿ ಮತ್ತು 79 ವರ್ಷದ ವ್ಯಕ್ತಿಯೊಬ್ಬರು ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ.

ಇದನ್ನೂ ಓದಿ: ಮಲೆನಾಡಿನಲ್ಲಿ ಹೆಚ್ಚಾದ ಮಂಗನ ಕಾಯಿಲೆ; ಆರೋಗ್ಯ ಇಲಾಖೆ ಬಳಿ ಇಲ್ಲ ಲಸಿಕೆ

ಮಂಗನ ಕಾಯಿಲೆ ಎಂದರೇನು?:

ಮಂಗನ ಕಾಯಿಲೆ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಕ್ಯಾಸನೂರ್ ಫಾರೆಸ್ಟ್ ಡಿಸೀಸ್ (ಕೆಎಫ್‌ಡಿ) ವೈರಲ್ ಹೆಮರಾಜಿಕ್ ಕಾಯಿಲೆಯಾಗಿದ್ದು, ಇದನ್ನು ಮೊದಲು 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು ಅರಣ್ಯದಲ್ಲಿ ಗುರುತಿಸಲಾಯಿತು. ಅಂದಿನಿಂದ ಇದನ್ನು ಕ್ಯಾಸನೂರ್ ಫಾರೆಸ್ಟ್ ಡಿಸೀಸ್ ಎಂದೇ ಕರೆಯಲಾಗುತ್ತಿದೆ. ಇದು KFD ವೈರಸ್​ನಿಂದ ಉಂಟಾಗುತ್ತದೆ.

ಮಂಗನ ಕಾಯಿಲೆಯ ಲಕ್ಷಣಗಳು:

ಹಠಾತ್ ಜ್ವರ, ತಲೆನೋವು, ವಾಂತಿ, ಹೊಟ್ಟೆ ನೋವು, ಸ್ನಾಯು ನೋವು ಮತ್ತು ಬೆನ್ನುನೋವು, ಚಳಿ, ಸುಸ್ತು ಮತ್ತು ಅತಿಸಾರ ಇವು ಮಂಗನ ಕಾಯಿಲೆಯ ಆರಂಭಿಕ ಲಕ್ಷಣಗಳಾಗಿವೆ. ರಕ್ತಸ್ರಾವದ ರೋಗಲಕ್ಷಣಗಳೊಂದಿಗೆ ತೀವ್ರವಾಗುವ ಈ ರೋಗವು ಪ್ರಾಣಕ್ಕೇ ಆಪತ್ತು ಉಂಟುಮಾಡಬಹುದು. ಈ ರೋಗದ ಹರಡುವಿಕೆಯನ್ನು ತಡೆಗಟ್ಟಲು ವನ್ಯಜೀವಿಗಳಲ್ಲಿ ಅದರಲ್ಲೂ ವಿಶೇಷವಾಗಿ ಮಂಗಗಳಲ್ಲಿ ಹುಳಗಳು ಉಂಟಾಗದಂತೆ ನಿಯಂತ್ರಿಸುವುದು ಮುಖ್ಯವಾಗಿದೆ.

ಆರಂಭದಲ್ಲಿ ಕರ್ನಾಟಕದ ಪಶ್ಚಿಮ ಘಟ್ಟಗಳಿಗೆ ಸೀಮಿತವಾಗಿದ್ದ ಈ ರೋಗವು ಕಳೆದ 10 ವರ್ಷಗಳಿಂದೀಚೆಗೆ ಕೇರಳ, ಮಹಾರಾಷ್ಟ್ರ ಮತ್ತು ತಮಿಳುನಾಡಿನಂತಹ ಪಶ್ಚಿಮ ಘಟ್ಟಗಳಲ್ಲೂ ಕಾಣಿಸಿಕೊಳ್ಳುತ್ತಿದೆ. ಸದ್ಯಕ್ಕೆ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ 31 ಪ್ರಕರಣಗಳು ಪತ್ತೆಯಾಗಿದ್ದು, ರೋಗಿಗಳು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವು ಜನ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ಜಿಲ್ಲೆಯಲ್ಲಿ 11 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್

ಮಂಗನ ಕಾಯಿಲೆ ಹೇಗೆ ಹರಡುತ್ತದೆ?:

ಮಂಗನ ಕಾಯಿಲೆ ಮನುಷ್ಯರಿಂದ ಮನುಷ್ಯರಿಗೆ ಹರಡುವ ಸಾಂಕ್ರಾಮಿಕ ರೋಗವಲ್ಲ. ಇದು ಸೋಂಕಿತ ಮಂಗನ ದೇಹದಲ್ಲಿರುವ ಸಣ್ಣ ಹುಳಗಳು ಮನುಷ್ಯರಿಗೆ ಕಚ್ಚಿದಾಗ ಮಾತ್ರ ಹರಡುವ ರೋಗವಾಗಿದೆ. ಸೋಂಕಿತ ಮಂಗಗಳೊಂದಿಗೆ ಸಂಪರ್ಕ ಹೊಂದುವುದರಿಂದ ಈ ರೋಗ ಹರಡುತ್ತದೆ. ಸುಮಾರು ಶೇ. 80ರಷ್ಟು ರೋಗಿಗಳು ಚೇತರಿಸಿಕೊಳ್ಳುತ್ತಾರೆ. ಆದರೆ, ಸುಮಾರು ಶೇ. 20ರಷ್ಟು ರೋಗಿಗಳು ತೀವ್ರ ರಕ್ತಸ್ರಾವ ಅಥವಾ ನರವೈಜ್ಞಾನಿಕ ಸಮಸ್ಯೆಗಳನ್ನು ಅನುಭವಿಸುತ್ತಾರೆ.

ಸೋಂಕಿತ ಹುಳಗಳ ಕಚ್ಚುವಿಕೆಯ ನಂತರ 3ರಿಂದ ಒಂದು ವಾರದ ಅವಧಿಯ ನಂತರ, ಮಂಗನ ಕಾಯಿಲೆ ಜ್ವರ, ಶೀತ, ತಲೆನೋವು ಮತ್ತು ತೀವ್ರ ಬಳಲಿಕೆಯೊಂದಿಗೆ ಥಟ್ಟನೆ ಪ್ರಾರಂಭವಾಗುತ್ತದೆ. ಈ ರೋಗವು ಮುಂದುವರೆದಂತೆ ವಾಕರಿಕೆ, ವಾಂತಿ, ಹೊಟ್ಟೆ ನೋವು, ಅತಿಸಾರ, ಮೆನಿಂಜೈಟಿಸ್, ಮೂಗಿನಲ್ಲಿ ರಕ್ತಸ್ರಾವ ಮತ್ತು ಒಸಡುಗಳಲ್ಲಿ ರಕ್ತಸ್ರಾವದಂತಹ ಲಕ್ಷಣಗಳು ಉಲ್ಬಣಗೊಳ್ಳುತ್ತದೆ. ನಿಮಗೆ ಜ್ವರ ಬಂದ ಸುಮಾರು 1ರಿಂದ 4 ದಿನಗಳ ನಂತರ ಚರ್ಮದಲ್ಲಿ ದದ್ದು ಪ್ರಾರಂಭವಾಗುತ್ತದೆ. ಈ ದದ್ದುಗಳು ಸಾಮಾನ್ಯವಾಗಿ ಮುಖ, ಕೈಗಳು ಅಥವಾ ಪಾದಗಳ ಮೇಲೆ ಕಾಣಿಸಿಕೊಳ್ಳುತ್ತದೆ. ನಂತರ ದೇಹದ ಇತರ ಭಾಗಗಳಿಗೆ ಹರಡುತ್ತದೆ.

ಮಂಗನ ಕಾಯಿಲೆ ಪ್ರಾಣಿಯಿಂದ ವ್ಯಕ್ತಿಗೆ ಹೇಗೆ ಹರಡುತ್ತದೆ?:

– ಪ್ರಾಣಿಗಳ ಕಡಿತದಿಂದ.

– ಸೋಂಕಿತ ಪ್ರಾಣಿಗಳಿಂದ ಮಾಡಿದ ಚರ್ಮ ಅಥವಾ ತುಪ್ಪಳದಂತಹ ಉತ್ಪನ್ನಗಳಿಂದ.

– ದೇಹದ ದ್ರವಗಳೊಂದಿಗೆ ನೇರ ಸಂಪರ್ಕ ಉಂಟಾಗುವುದರಿಂದ.

ಮಂಗನ ಕಾಯಿಲೆ ಹರಡುವುದನ್ನು ತಡೆಯಲು ಏನು ಮಾಡಬೇಕು?:

– ಮಂಗನ ಕಾಯಿಲೆಯಂತೆ ಕಾಣುವ ದದ್ದು ಹೊಂದಿರುವ ಜನರೊಂದಿಗೆ ನಿಕಟ ಸಂಪರ್ಕವನ್ನು ತಪ್ಪಿಸಿ.

– ಸೋಂಕಿತ ಪ್ರಾಣಿ ಅಥವಾ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿರುವ ಬಟ್ಟೆ, ಪೇಪರ್, ಹೊದಿಕೆಗಳು ಅಥವಾ ಇತರ ವಸ್ತುಗಳನ್ನು ಬಳಸಬೇಡಿ.

– ಆರೋಗ್ಯವಂತ ಜನರಿಂದ ಮಂಕಿಪಾಕ್ಸ್ ಹೊಂದಿರುವ ಜನರನ್ನು ದೂರ ಇರಿಸಿ.

– ಸೋಂಕಿತ ವ್ಯಕ್ತಿ ಅಥವಾ ಪ್ರಾಣಿಯೊಂದಿಗೆ ಯಾವುದೇ ಸಂಪರ್ಕದ ನಂತರ ನಿಮ್ಮ ಕೈಗಳನ್ನು ಸಾಬೂನು ಮತ್ತು ನೀರಿನಿಂದ ಚೆನ್ನಾಗಿ ತೊಳೆಯಿರಿ. ಸೋಪ್ ಮತ್ತು ನೀರು ಲಭ್ಯವಿಲ್ಲದಿದ್ದರೆ, ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್ ಅನ್ನು ಬಳಸಿ.

– ವೈರಸ್ ಅನ್ನು ಹರಡುವ ಪ್ರಾಣಿಗಳಿಂದ ದೂರವಿರಿ.

– ಕೆಲವು ಸಿಡುಬು ಲಸಿಕೆಗಳು ACAM2000 ಮತ್ತು Jynneos ಲಸಿಕೆಗಳನ್ನು ಹಾಕಿಸುವುದರಿಂದ ಮಂಗನ ಕಾಯಿಲೆಯನ್ನು ತಡೆಯಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್