Monkeypox: ಒಂದೊಂದೇ ದೇಶಕ್ಕೆ ಲಗ್ಗೆ ಇಡುತ್ತಿದೆ ಮಂಕಿಪಾಕ್ಸ್: ವಿಶ್ವಸಂಸ್ಥೆ ಎಚ್ಚರಿಕೆ

Monkeypox: ಬರೋಬ್ಬರಿ ಎರಡು ವರ್ಷಗಳ ಕಾಲ ಕೊರೊನಾವು ವಿಶ್ವದ ಜನರನ್ನು ಅಕ್ಷರಶಃ ನರಕಕ್ಕೆ ದೂಡಿತ್ತು. ಇದೀಗ ಕೊರೊನಾ ಆರ್ಭಟ ಕೊಂಚ ಕಡಿಮೆಯಾಗುತ್ತಿದ್ದಂತೆ ಹೊಸದೊಂದು ಸೋಂಕು  ಮಂಕಿಪಾಕ್ಸ್​(Monkeypox) ಶುರುವಾಗಿದ್ದು, ಜನರ ನಿದ್ದೆಗೆಡಿಸಿದೆ.

Monkeypox: ಒಂದೊಂದೇ ದೇಶಕ್ಕೆ ಲಗ್ಗೆ ಇಡುತ್ತಿದೆ ಮಂಕಿಪಾಕ್ಸ್: ವಿಶ್ವಸಂಸ್ಥೆ ಎಚ್ಚರಿಕೆ
Monkeypox
Follow us
TV9 Web
| Updated By: ನಯನಾ ರಾಜೀವ್

Updated on:May 21, 2022 | 11:04 AM

ಬರೋಬ್ಬರಿ ಎರಡು ವರ್ಷಗಳ ಕಾಲ ಕೊರೊನಾವು ವಿಶ್ವದ ಜನರನ್ನು ಅಕ್ಷರಶಃ ನರಕಕ್ಕೆ ದೂಡಿತ್ತು. ಇದೀಗ ಕೊರೊನಾ ಆರ್ಭಟ ಕೊಂಚ ಕಡಿಮೆಯಾಗುತ್ತಿದ್ದಂತೆ ಹೊಸದೊಂದು ಸೋಂಕು  ಮಂಕಿಪಾಕ್ಸ್​(Monkeypox) ಶುರುವಾಗಿದ್ದು, ಜನರ ನಿದ್ದೆಗೆಡಿಸಿದೆ. ಮೊದಲೆಲ್ಲಾ ಯಾವುದಾದರೊಂದು ರೋಗ ಬಂದರೆ ನಮ್ಮ ದೇಶದಲ್ಲಲ್ಲ ಎಲ್ಲೋ ಇದೆ ಎಂದು ಜನರು ಅಷ್ಟು ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ಆದರೆ ಇದೀಗ ಪರಿಸ್ಥಿತಿ ಬದಲಾಗಿದೆ. ಕೊರೊನಾ ಬಂದ ಬಳಿಕ ಯಾವುದೇ ದೇಶದಲ್ಲಿ ಯಾವುದೇ ಕಾಯಿಲೆ ಶುರುವಾದರೂ ಎಲ್ಲಾ ದೇಶಗಳ ಜನರೂ ಆತಂಕಕ್ಕೊಳಗಾಗುತ್ತಿದ್ದಾರೆ. ಭಾರತದಲ್ಲೂ ಕೂಡ ಆತಂಕ ಶುರುವಾಗಿದೆ.

ಯುರೋಪ್‌ನ ಸ್ಲೇನ್‌ ಮತ್ತು ಪೋರ್ಚುಗಲ್‌ನಲ್ಲಿ 40ಕ್ಕೂ ಹೆಚ್ಚು ಮಂಕಿಪಾಕ್ಸ್‌ ಪ್ರಕರಣ ಕಾಣಿಸಿಕೊಂಡಿದೆ. ಜೊತೆಗೆ ಬ್ರಿಟನ್‌, ಅಮೆರಿಕ, ಕೆನಡಾದಲ್ಲೂ ಪ್ರಕರಣಗಳು ದಾಖಲಾಗಿದೆ. ವೈರಸ್‌ನಿಂದ ಕಾಣಿಸಿಕೊಳ್ಳವು ಈ ಸೋಂಕು ಸಾಮಾನ್ಯವಾಗಿ ಹೆಚ್ಚಿನ ಅಪಾಯ ಮಾಡುವುದಿಲ್ಲ. ಸೋಂಕಿತರ ಸಾವಿನ ಪ್ರಮಾಣ ಶೇ.1ರಷ್ಟುಮಾತ್ರ ಇರುತ್ತದೆ. ಆದರೆ ಇದರಲ್ಲೇ ಕೆಲವು ಮಾರಣಾಂತಿಕ ಮಾದರಿಯು ಶೇ.10ರಷ್ಟುಸೋಂಕಿತರ ಸಾವಿಗೆ ಕಾರಣವಾಗಬಲ್ಲಷ್ಟು ಅಪಾಯಕಾರಿಯಾಗಿದೆ.

ಕೋವಿಡ್‌ ಸಾಂಕ್ರಾಮಿಕ ಬೆನ್ನಲ್ಲೇ, ಯುರೋಪ್‌, ಉತ್ತರ ಅಮೆರಿಕದ ಹಲವು ದೇಶಗಳಲ್ಲಿ ಮಂಕಿಪಾಕ್ಸ್‌ ಸೋಂಕು ನಿಧಾನವಾಗಿ ವ್ಯಾಪಿಸುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.

ಮಂಕಿಪಾಕ್ಸ್​ ಎಂದರೇನು? ಮಂಕಿಪಾಕ್ಸ್ ಎಂಬುದು ಬಹುಪಾಲು ಸಿಡುಬನ್ನು ಹೋಲುತ್ತದೆ. ಮೊದಲ ಬಾರಿಗೆ 1958ರಲ್ಲಿ ಪತ್ತೆಯಾದ ಈ ಸೋಂಕು, 1970ರಲ್ಲಿ ಮೊದಲ ಬಾರಿ ಮಾನವರಲ್ಲಿ ಕಾಣಿಸಿಕೊಂಡಿತ್ತು. ಇದು ಪ್ರಾಣಿಗಳಿಂದ ಮನುಷ್ಯರಿಗೆ ಹಬ್ಬುತ್ತದೆ. ಸೋಂಕಿತ ಪ್ರಾಣಿಗಳು ಕಚ್ಚುವುದರಿಂದ ಅಥವಾ ಅವುಗಳ ರಕ್ತ, ವಿಸರ್ಜಿತ ವಸ್ತುಗಳ ಸಂಪರ್ಕದಿಂದ, ಸೋಂಕಿತ ಪ್ರಾಣಿಗಳ ಮಾಂಸ ತಿನ್ನುವುದರಿಂದ ಈ ವೈರಸ್‌ ಹಬ್ಬಬಹುದು. ಜ್ವರ, ಸ್ನಾಯುಸೆಳೆತ ಮತ್ತು ಚಳಿ ಈ ರೋಗದ ಲಕ್ಷಣಗಳಾಗಿವೆ.

ಡಬ್ಲ್ಯೂಎಚ್‌ಒ ಎಚ್ಚರಿಕೆ: ಮಂಕಿಪಾಕ್ಸ್‌ ಮೇಲೆ ಗಮನ ಇರಿಸಲಾಗಿದೆ. ಕೋವಿಡ್‌ ನಂತರ ಈ ವೈರಸ್‌ ಜಗತ್ತನ್ನು ಕಾಡಬಹುದು. ಪ್ರಸ್ತುತ ಈ ಸೋಂಕು ಯಾವ ಪ್ರಮಾಣದಲ್ಲಿ ಹಬ್ಬುತ್ತಿದೆ ಮತ್ತು ಇದರಿಂದ ಉಂಟಾಗುವ ಪರಿಣಾಮಗಳನ್ನು ಪತ್ತೆ ಹಚ್ಚಲು ಅಧ್ಯಯನ ಆರಂಭಿಸಲಾಗಿದೆ. ಮೇ ಆರಂಭದಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು, ಯಾವ ಮೂಲದಿಂದ ಮನುಷ್ಯರಲ್ಲಿ ಕಾಣಿಸಿಕೊಂಡಿದೆ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ. ಈ ಸೋಂಕು ಲೈಂಗಿಕ ಜಾಲದಿಂದ ಹಬ್ಬುತ್ತಿದೆ ಎಂದು ಎಚ್ಚರಿಕೆ ನೀಡಿದೆ.

ಅಮೆರಿಕದಲ್ಲೂ ಮಂಕಿಪಾಕ್ಸ್ ಪ್ರಕರಣ ಅಮೆರಿಕದ ಮ್ಯಸಚೂಸೆಟ್ಸ್‌ನಲ್ಲಿ ಬುಧವಾರ ಮಂಕಿಪಾಕ್ಸ್ ನ ಒಂದು ಪ್ರಕರಣ ಪತ್ತೆಯಾಗಿದ್ದು ಇತ್ತೀಚೆಗೆ ಕೆನಡಾಕ್ಕೆ ಪ್ರಯಾಣಿಸಿದ್ದ ವ್ಯಕ್ತಿಯಲ್ಲಿ ಈ ಸೋಂಕಿನ ಲಕ್ಷಣಗಳಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಮಾಹಿತಿ ಹೊರಬೀಳುತ್ತಿದ್ದಂತೆಯೇ ಯುರೋಪ್ ನಲ್ಲಿ ಸೋಂಕು ಉಲ್ಬಣಿಸುವ ಆತಂಕ ಹೆಚ್ಚಿದ್ದು ಕೆನಡಾದ ಕ್ವಿಬೆಕ್ ಪ್ರಾಂತದಲ್ಲಿ 12ಕ್ಕೂ ಅಧಿಕ ಶಂಕಿತ ಪ್ರಕರಣ ಬೆಳಕಿಗೆ ಬಂದಿದೆ.

ಕೋವಿಡ್ ಸೋಂಕು ಸತತ ಮೂರನೇ ವರ್ಷವೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿರುವ ಮಧ್ಯೆಯೇ, ಸಾಮಾನ್ಯವಾಗಿ ಆಫ್ರಿಕಾ ಖಂಡಕ್ಕೆ ಸೀಮಿತವಾಗಿದ್ದ ಮಂಕಿಪಾಕ್ಸ್ ಯುರೋಪ್‌ಗೆ ವ್ಯಾಪಿಸಿರುವುದರಿಂದ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆಫ್ರಿಕಾ ಖಂಡಕ್ಕೆ ಪ್ರಯಾಣಿಸದವರಲ್ಲೂ ಸೋಂಕು ಕಾಣಿಸಿಕೊಂಡಿರುವುದರಿಂದ ಮಂಕಿಪಾಕ್ಸ್ ಸೋಂಕುಪೀಡಿತರ ಪ್ರಯಾಣ ದಾಖಲೆ ಮತ್ತು ಸಂಪರ್ಕ ಜಾಡನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಲಕ್ಷಣಗಳೇನು? ಮಂಕಿಪಾಕ್ಸ್ ಒಂದು ವೈರಸ್ ಆಗಿದ್ದು ಅದು ಜ್ವರ, ಶೀತ, ತಲೆನೋವು, ಸ್ನಾಯು ನೋವು, ಆಯಾಸ, ಊದಿಕೊಂಡ ದುಗ್ಧರಸ ಗ್ರಂಥಿಗಳಂತಹ ಫ್ಲೂ ತರಹದ ಲಕ್ಷಣಗಳನ್ನು ಒಳಗೊಂಡಿರುತ್ತದೆ.

ಎಲ್ಲೆಲ್ಲಿ ಎಷ್ಟು ಪ್ರಕರಣ ದಾಖಲು ಸ್ಪೇನ್ ನಲ್ಲಿ ಗುರುವಾರದ ವರೆಗೆ 14 ಸೋಂಕು ಪ್ರಕರಣ ಪತ್ತೆ. ಎಲ್ಲಾ ಪ್ರಕರಣಗಳೂ ಮ್ಯಾಡ್ರಿಡ್ ನಗರದಲ್ಲಿ ಪತ್ತೆಯಾಗಿದ್ದು ಇತರ 22 ಶಂಕಿತ ಪ್ರಕರಣ ದಾಖಲಾಗಿದೆ. ಇದುವರೆಗೆ ಪತ್ತೆಯಾದ ಎಲ್ಲಾ ಪ್ರಕರಣಗಳೂ ಸೌಮ್ಯ ಲಕ್ಷಣದ ಪ್ರಕರಣಗಳು ಎಂದು ಅಧಿಕಾರಿಗಳು ಹೇಳಿದ್ದಾರೆ. ಪೋರ್ಚುಗಲ್ ನಲ್ಲಿ 14 ಪ್ರಕರಣ ಪತ್ತೆಯಾಗಿದ್ದು ಎಲ್ಲಾ ಪ್ರಕರಣಗಳೂ ರಾಜಧಾನಿ ಲಿಸ್ಬನ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವರದಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ

ಬ್ರಿಟನ್‌ನಲ್ಲಿ ಗುರುವಾರದ ವರೆಗೆ 9 ಸೋಂಕು ಪ್ರಕರಣ ಪತ್ತೆಯಾಗಿದೆ. ರೋಮ್‌ನಲ್ಲಿ ಒಂದು ಪ್ರಕರಣ ಪತ್ತೆಯಾಗಿದ್ದು ಸೋಂಕಿತ ವ್ಯಕ್ತಿ ಇತ್ತೀಚೆಗೆ ಸ್ಪೇನ್‌ನ ಕ್ಯಾನರಿ ದ್ವೀಪಕ್ಕೆ ಭೇಟಿ ನೀಡಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ. ಸ್ವೀಡನ್‌ನಲ್ಲೂ ಒಂದು ಪ್ರಕರಣ ಪತ್ತೆಯಾಗಿದೆ.

ಫ್ರಾನ್ಸ್ ಮತ್ತು ಜರ್ಮನಿಯಲ್ಲಿ ತಲಾ ಒಂದು, ಬೆಲ್ಜಿಯಂನಲ್ಲಿ 2 ಪ್ರಕರಣ ಪತ್ತೆಯಾಗಿದೆ. ಆಸ್ಟ್ರೇಲಿಯಾದಲ್ಲೂ ಒಂದು ಶಂಕಿತ ಪ್ರಕರಣ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹಾಗೆಯೇ ವಿವಿಧ ದೇಶಗಳಲ್ಲಿ ಮಂಕಿ ಪಾಕ್ಸ್ ಬಗ್ಗೆ ಅಧ್ಯಯನ ನಡೆಯುತ್ತಿದ್ದು, ಯಾವ್ಯಾವ ದೇಶಗಳಿಗೆ ಹೆಚ್ಚಿನ ಅಪಾಯವಿದೆ ಎಂಬುದರ ಕುರಿತು ಶೀಘ್ರದಲ್ಲೇ ವರದಿ ಹೊರಬೀಳಲಿದೆ.

ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:00 am, Sat, 21 May 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್