AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಕಿಪಾಕ್ಸ್: ಯುರೋಪ್​​​ನಲ್ಲಿ ತುರ್ತು ಕ್ರಮ ಕೈಗೊಳ್ಳಲು ವಿಶ್ವ ಆರೋಗ್ಯ ಸಂಸ್ಥೆ ಕರೆ

ಇಲ್ಲಿಯವರೆಗೆ ವಿಶ್ವದಾದ್ಯಂತ 51 ದೇಶಗಳಿಂದ 5,000 ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ ಎಂದು ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ತಿಳಿಸಿದೆ.

ಮಂಕಿಪಾಕ್ಸ್: ಯುರೋಪ್​​​ನಲ್ಲಿ ತುರ್ತು ಕ್ರಮ ಕೈಗೊಳ್ಳಲು ವಿಶ್ವ ಆರೋಗ್ಯ ಸಂಸ್ಥೆ ಕರೆ
ಮಂಕಿಪಾಕ್ಸ್Image Credit source: google
TV9 Web
| Edited By: |

Updated on:Jul 01, 2022 | 8:02 PM

Share

ಲಂಡನ್: ಮಂಕಿಪಾಕ್ಸ್ (monkeypox) ಪ್ರಕರಣ ಹೆಚ್ಚಾಗುತ್ತಿದ್ದಂತೆ ಯುರೋಪ್​​ನಲ್ಲಿ(Europe) ತುರ್ತು ಕ್ರಮ ಕೈಗೊಳ್ಳಲು ವಿಶ್ವ ಆರೋಗ್ಯ ಸಂಸ್ಥೆ(WHO) ಕರೆ ನೀಡಿದೆ. ಕಳೆದ ಎರಡು ವಾರಗಳಲ್ಲಿ ಈ ಪ್ರದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಮೂರು ಪಟ್ಟು ಹೆಚ್ಚಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಯುರೋಪ್ ಮುಖ್ಯಸ್ಥರು ಶುಕ್ರವಾರ ಎಚ್ಚರಿಸಿದ್ದಾರೆ. ಈ ಅಪರೂಪದ ಕಾಯಿಲೆ ಖಂಡದಲ್ಲಿ ಬೇರೂರದಂತೆ ಖಚಿತಪಡಿಸಿಕೊಳ್ಳಲು ಹೆಚ್ಚಿನ ಕ್ರಮ ಕೈಗೊಳ್ಳುವಂತೆ ಅವರು ಇತರ ದೇಶಗಳನ್ನು ಒತ್ತಾಯಿಸಿದರು. ಏಕಾಏಕಿ ಪ್ರಕರಣಗಳು ಹೆಚ್ಚುತ್ತಿದ್ದು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಲು ಆಗಿಲ್ಲ ಎಂದು ಕಳೆದ ವಾರ ಯುಎನ್ ಆರೋಗ್ಯ ಏಜೆನ್ಸಿಯ ನಿರ್ಧಾರದ ಹೊರತಾಗಿಯೂ ಹೆಚ್ಚಿನ ಪ್ರಯತ್ನಗಳ ಅಗತ್ಯವಿದೆ ಎಂದು ಡಾ. ಹ್ಯಾನ್ಸ್ ಕ್ಲೂಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಈ ರೋಗದ ಹರಡುವಿಕೆಯನ್ನು  ತಡೆಯುವುದಕ್ಕಾಗಿ  ತುರ್ತು ಮತ್ತು ಸಂಘಟಿತ ಕ್ರಮವು ಕಡ್ಡಾಯವಾಗಿದೆ” ಎಂದು ಕ್ಲೂಗೆ ಹೇಳಿದರು.

ಇಲ್ಲಿಯವರೆಗೆ ವಿಶ್ವದಾದ್ಯಂತ 51 ದೇಶಗಳಿಂದ 5,000 ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ ಎಂದು ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ತಿಳಿಸಿದೆ. ಯುರೋಪ್‌ನಲ್ಲಿನ ಸೋಂಕುಗಳ ಸಂಖ್ಯೆಯು ಜಾಗತಿಕ ಒಟ್ಟು ಮೊತ್ತದ ಶೇ 90 ಅನ್ನು ಪ್ರತಿನಿಧಿಸುತ್ತದೆ ಎಂದು ಕ್ಲೂಗೆ ಹೇಳಿದ್ದಾರೆ. ಯುರೋಪಿಯನ್ ಪ್ರದೇಶದ 31 ದೇಶಗಳಲ್ಲಿ  ಈ ಪ್ರಕರಣ ಕಂಡು ಬಂದಿದೆ.

ವಿಶ್ವ ಆರೋಗ್ಯ  ಸಂಸ್ಥೆಗೆ ವರದಿಯಾದ ಡೇಟಾ ಪ್ರಕಾರ ಶೇ 99 ಪ್ರಕರಣಗಳು ಪುರುಷರಲ್ಲಿ ಕಂಡು ಬಂದಿದೆ ಎಂದು ತೋರಿಸುತ್ತದೆ.  ಅವುಗಳಲ್ಲಿ ಹೆಚ್ಚಿನವು ಪುರುಷರೊಂದಿಗೆ ಲೈಂಗಿಕ ಸಂಪರ್ಕ ಹೊಂದಿರುವ ಪುರುಷರಲ್ಲಿವೆ ಎಂದು ಕ್ಲೂಗೆ ಹೇಳಿದರು. ಆದರೆ ಮಕ್ಕಳು ಸೇರಿದಂತೆ ಮನೆಯ ಸಂಪರ್ಕಗಳಲ್ಲಿ ಈಗ “ಸಣ್ಣ ಸಂಖ್ಯೆಯ” ಪ್ರಕರಣಗಳಿವೆ ಎಂದು ಅವರು ಹೇಳಿದರು. ಹೆಚ್ಚಿನ ಜನರು ದದ್ದು, ಜ್ವರ, ಆಯಾಸ, ಸ್ನಾಯು ನೋವು, ವಾಂತಿ ಮತ್ತು ಶೀತ ಸೇರಿದಂತೆ ರೋಗಲಕ್ಷಣಗಳನ್ನು ವರದಿ ಮಾಡಿದ್ದಾರೆ.

ಮಂಕಿಪಾಕ್ಸ್ ಹೊಂದಿರುವ ಯಾರೊಂದಿಗಾದರೂ ನಿಕಟ ದೈಹಿಕ ಸಂಪರ್ಕದಲ್ಲಿರುವವರು ಅಥವಾ ಅವರ ಬಟ್ಟೆ ಅಥವಾ ಬೆಡ್‌ಶೀಟ್‌ಗಳು ಬಳಸುತ್ತಿದ್ದರೆ ಸೋಂಕಿನ ಅಪಾಯ ಹೆಚ್ಚು ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಮಕ್ಕಳು ಮತ್ತು ಗರ್ಭಿಣಿಯರು ಬೇಗನೆ ರೋಗಕ್ಕೆ ತುತ್ತಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಶೇ10 ರಷ್ಟು ರೋಗಿಗಳು ಚಿಕಿತ್ಸೆಗಾಗಿ ಅಥವಾ ಪ್ರತ್ಯೇಕವಾಗಿರಲು ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಬ್ಬ ವ್ಯಕ್ತಿಯನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಯಾವುದೇ ಸಾವುಗಳು ವರದಿಯಾಗಿಲ್ಲ.

Published On - 7:17 pm, Fri, 1 July 22

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ