
ಸಣ್ಣ ಆರೋಗ್ಯ ಸಮಸ್ಯೆಗಳಿದ್ದರೂ ಆಸ್ಪತ್ರೆಗೆ ಹೋಗುವ ಬದಲು, ಮನೆಯಲ್ಲಿ ಮದ್ದು ಮಾಡುವುದು ಒಳ್ಳೆಯದು. ಅದಕ್ಕೂ ಮೊದಲು ಅನಾರೋಗ್ಯ ಬರದಂತೆ ತಡೆಯಲು ಅಥವಾ ದೇಹವನ್ನು ಆರೋಗ್ಯವಾಗಿ ಇಟ್ಟುಕೊಳ್ಳಲು ಕೆಲವು ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು ಒಳ್ಳೆಯದು ಎಂದು ವೈದ್ಯರು ಹೇಳುತ್ತಾರೆ. ಅದಲ್ಲದೆ ಪ್ರತಿನಿತ್ಯ ಸ್ವಲ್ಪ ಹೊತ್ತಾದರೂ ವಾಕಿಂಗ್ ಮಾಡುವ ಅಭ್ಯಾಸವಿದ್ದರೆ ನೀವು ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು. ಹಾಗಾಗಿ ವೈದ್ಯರು ನಡಿಗೆ ಮಾಡುವ ಅಭ್ಯಾಸ ಬೆಳೆಸಿಕೊಳ್ಳಿ. ಇದು ಆರೋಗ್ಯಕ್ಕೆ ಅತ್ಯಗತ್ಯ ಎಂದು ಹೇಳುತ್ತಾರೆ. ವಾಕಿಂಗ್ ನಿಂದ ಅನೇಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು ಕನಿಷ್ಠ 30 ನಿಮಿಷಗಳ ಕಾಲ ನಡೆಯಲು ವೈದ್ಯರು ಶಿಫಾರಸು ಮಾಡುತ್ತಾರೆ. ನೀವು ಎಷ್ಟು ಹೊತ್ತು ನಡೆಯುತ್ತೀರೋ ಅಷ್ಟು ಒಳ್ಳೆಯದು. ಆದರೆ ಯಾವ ಸಮಯದಲ್ಲಿ ನಡೆಯಬೇಕು ಎಂಬುದನ್ನು ತಿಳಿದುಕೊಂಡಿರಬೇಕಾಗುತ್ತದೆ. ಆಗ ಮಾತ್ರ ವಾಕಿಂಗ್ ಮಾಡುವುದರಿಂದ ಹಲವಾರು ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
ಸಾಮಾನ್ಯವಾಗಿ ಜನರು ತೂಕ ಕಡಿಮೆ ಮಾಡಿಕೊಳ್ಳಲು ನಡೆಯುತ್ತಾರೆ. ಇದು ಕೂಡ ಒಳ್ಳೆಯದು. ಆದರೆ ವಾಕಿಂಗ್ ನಿಂದ ಇನ್ನೂ ಅನೇಕ ಪ್ರಯೋಜನಗಳಿವೆ ಎಂದು ವೈದ್ಯರು ಹೇಳುತ್ತಾರೆ. ವಾಕಿಂಗ್ ದೇಹದಲ್ಲಿನ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡುತ್ತದೆ. ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಮನಸ್ಸು ಶಾಂತಿಯಿಂದ ಇರಲು ಸಹಾಯ ಮಾಡುತ್ತದೆ.
ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನಡೆಯುವುದರಿಂದ ಅನೇಕ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದು ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ. ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ. ತೂಕವನ್ನು ಕಡಿಮೆ ಮಾಡುತ್ತದೆ. ಕೊಬ್ಬನ್ನು ಕರಗಿಸುತ್ತದೆ. ಅದೂ ಅಲ್ಲದೆ ಮುಂಜಾನೆ ಸೂರ್ಯನ ಬೆಳಕಿನಲ್ಲಿ ನಡೆಯುವುದು ದೇಹಕ್ಕೆ ಅಗತ್ಯವಾದ ವಿಟಮಿನ್ ಡಿ ಅನ್ನು ಕೂಡ ಒದಗಿಸುತ್ತದೆ.
ಇದನ್ನೂ ಓದಿ: ಸೂರ್ಯಕಾಂತಿ ಬೀಜಗಳ ಸೇವನೆ ಎಷ್ಟೆಲ್ಲಾ ಆರೋಗ್ಯ ಸಮಸ್ಯೆ ನಿವಾರಣೆ ಮಾಡುತ್ತೆ ನೋಡಿ
ಮಧ್ಯಾಹ್ನ ಅಥವಾ ರಾತ್ರಿ ಊಟದ ನಂತರ 100 ಹೆಜ್ಜೆ ನಡೆಯಬೇಕು ಎಂದು ಹೇಳುತ್ತಾರೆ. ಇದರರ್ಥ ನೀವು ತಕ್ಷಣ ನಡೆಯಲು ಪ್ರಾರಂಭಿಸಬೇಕು ಎಂದಲ್ಲ. ಆಹಾರವನ್ನು ಸೇವಿಸಿದ ನಂತರ 5- 10 ನಿಮಿಷಗಳ ಕಾಲ ನಡೆಯಿರಿ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಜೊತೆಗೆ ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ. ಇದಲ್ಲದೆ, ಆಮ್ಲೀಯತೆಯೂ ಕಡಿಮೆಯಾಗುತ್ತದೆ.
ಇವೆರಡೂ ಆರೋಗ್ಯಕ್ಕೆ ಒಳ್ಳೆಯದು ಎಂದು ವೈದ್ಯರು ಹೇಳುತ್ತಾರೆ. ಬೆಳಗಿನ ವಾಕಿಂಗ್ ದೇಹಕ್ಕೆ ಅಗತ್ಯವಾದ ಜೀವಸತ್ವಗಳು ಮತ್ತು ಶಕ್ತಿಯನ್ನು ಒದಗಿಸುತ್ತದೆ, ಆದರೆ ಆಹಾರವನ್ನು ಸೇವಿಸಿದ ನಂತರ ನಡೆಯುವುದು ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ. ಹೀಗಾಗಿ ಎರಡು ಅಭ್ಯಾಸಗಳು ಕೂಡ ಉತ್ತಮವಾಗಿದೆ.
(ಸೂಚನೆ: ಇಲ್ಲಿರುವ ವಿಷಯಗಳು ಮಾಹಿತಿಗಾಗಿ ಮಾತ್ರ. ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿದ್ದ ಸಂದರ್ಭದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ)
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ