AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗುರಿನಲ್ಲಿ ಕಂಡುಬರುವ ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ! ಅವು ನಿಮ್ಮ ಜೀವ ಉಳಿಸಬಹುದು!

ಉಗುರು ಕೇವಲ ಸೌಂದರ್ಯ ಮತ್ತು ಅಲಂಕಾರಕ್ಕಾಗಿ ಮಾತ್ರ ಸೀಮಿತವಾಗಿಲ್ಲ. ಇದು ಆರೋಗ್ಯ ಸಮಸ್ಯೆಯ ಸೂಚಕವಾಗಿರಬಹುದು. ಹೃದಯ ಸಂಬಂಧಿ ಸಮಸ್ಯೆ, ಶ್ವಾಸಕೋಶದ ಸಮಸ್ಯೆ, ಯಕೃತ್ತಿನ ಅಸ್ವಸ್ಥತೆ ಮತ್ತು ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳ ಆರಂಭಿಕ ಚಿಹ್ನೆಗಳು ನಮ್ಮ ಉಗುರುಗಳಲ್ಲಿ ಕಾಣಿಸಿಕೊಳ್ಳುತ್ತವೆ, ಇನ್ನು ಕೆಲವು ಮುಖದಲ್ಲಿ ಕಂಡುಬರುತ್ತದೆ. ಹಾಗಾದರೆ ಇದನ್ನು ಗುರುತಿಸುವುದು ಹೇಗೆ, ಯಾವ ರೀತಿ ಅದನ್ನು ತಿಳಿದುಕೊಳ್ಳಬೇಕು, ಯಾವ ಲಕ್ಷಣಗಳು ಯಾವ ಕಾಯಿಲೆಯ ಮುನ್ಸೂಚನೆಯಾಗಿರುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಉಗುರಿನಲ್ಲಿ ಕಂಡುಬರುವ ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ! ಅವು ನಿಮ್ಮ ಜೀವ ಉಳಿಸಬಹುದು!
Nail Health
ಪ್ರೀತಿ ಭಟ್​, ಗುಣವಂತೆ
|

Updated on: Feb 06, 2026 | 4:06 PM

Share

ಅನೇಕರು ಉಗುರುಗಳನ್ನು (Nails) ಕೇವಲ ಸೌಂದರ್ಯ ಮತ್ತು ಅಲಂಕಾರಕ್ಕಾಗಿ ಮಾತ್ರ ಬಳಕೆ ಮಾಡುತ್ತಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ನಮ್ಮ ಉಗುರುಗಳು ನಮ್ಮ ದೇಹದ ಆರೋಗ್ಯಕ್ಕೆ ಹಿಡಿದ ಕನ್ನಡಿ ಎನ್ನುತ್ತಾರೆ. ಹೌದು, ಕೆಲವರಿಗೆ ಈ ವಿಷಯ ಬಹಳ ಆಶ್ಚರ್ಯ ಮೂಡಿಸಬಹುದು ಅಥವಾ ಇನ್ನು ಕೆಲವರು ಇಂತಹ ವಿಷಯಗಳ ಬಗ್ಗೆ ಹೆಚ್ಚಿನ ಗಮನ ನೀಡದಿರಬಹುದು. ಆದರೆ ನಿಮಗೆ ಗೊತ್ತಿರಲಿ, ಹೃದಯ ಸಂಬಂಧಿ ಸಮಸ್ಯೆ, ಶ್ವಾಸಕೋಶದ ಸಮಸ್ಯೆ, ಯಕೃತ್ತಿನ ಅಸ್ವಸ್ಥತೆ ಮತ್ತು ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳ ಆರಂಭಿಕ ಚಿಹ್ನೆಗಳು ಉಗುರುಗಳಲ್ಲಿ ಕಾಣಿಸಿಕೊಳ್ಳುತ್ತವೆ, ಇನ್ನು ಕೆಲವು ಮುಖದಲ್ಲಿ ಕಂಡುಬರುತ್ತದೆ. ಹಾಗಾದರೆ ಇದನ್ನು ಗುರುತಿಸುವುದು ಹೇಗೆ, ಯಾವ ರೀತಿ ಅದನ್ನು ತಿಳಿದುಕೊಳ್ಳಬೇಕು, ಯಾವ ಲಕ್ಷಣಗಳು ಯಾವ ಕಾಯಿಲೆಯ ಮುನ್ಸೂಚನೆಯಾಗಿರುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಬಿಳಿ ಚುಕ್ಕೆಗಳು:

ಉಗುರುಗಳ ಮೇಲೆ ಕಾಣಿಸಿಕೊಳ್ಳುವ ಬಿಳಿ ಚುಕ್ಕೆಗಳನ್ನು ಲ್ಯುಕೋನಿಚಿಯಾ ಎಂದು ಕರೆಯಲಾಗುತ್ತದೆ. ಅವು ಸಣ್ಣಪುಟ್ಟ ಗಾಯಗಳು ಅಥವಾ ಅಲರ್ಜಿಗಳಿಂದ ಉಂಟಾಗಬಹುದು. ಆದರೆ, ಇಡೀ ಉಗುರು ಬಿಳಿ ಬಣ್ಣಕ್ಕೆ ತಿರುಗಲು ಪ್ರಾರಂಭಿಸಿದರೆ, ಅದು ದೇಹದಲ್ಲಿ ಪೋಷಕಾಂಶಗಳ ಕೊರತೆ ಅಥವಾ ಇತರ ಸೋಂಕುಗಳನ್ನು ಸೂಚಿಸುತ್ತದೆ. ಹಾಗಾಗಿ ಈ ರೀತಿಯಾದಾಗ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ.

ಗಾಢ ಕೆಂಪು ಬಣ್ಣದ ಅರ್ಧಚಂದ್ರಾಕಾರಗಳು:

ಉಗುರುಗಳ ಬುಡದಲ್ಲಿರುವ ಅರ್ಧಚಂದ್ರಾಕಾರವು ಬಿಳಿ ಬಣ್ಣಕ್ಕೆ ಬದಲಾಗಿ ಗಾಢ ಕೆಂಪು ಬಣ್ಣದಲ್ಲಿದ್ದರೆ, ಬಹಳ ಎಚ್ಚರಿಕೆಯ ವಹಿಸುವ ಅಗತ್ಯವಿದೆ. ಅಮೇರಿಕನ್ ಅಕಾಡೆಮಿ ಆಫ್ ಡರ್ಮಟಾಲಜಿ ಪ್ರಕಾರ, ಇದು ಹೃದಯ ಸಂಬಂಧಿ ಸಮಸ್ಯೆ, ಸಂಧಿವಾತ ಅಥವಾ ಲೂಪಸ್‌ನಂತಹ ಕಾಯಿಲೆಗಳ ಸಂಕೇತವಾಗಿರಬಹುದು.

ಇದನ್ನೂ ಓದಿ: ನಿಮ್ಮ ದೇಹದಲ್ಲಿ ಪ್ರೋಟೀನ್ ಕಡಿಮೆ ಇದೆ ಎಂಬುದನ್ನು ದೇಹ ನೀಡುವ ಈ 6 ಲಕ್ಷಣಗಳ ಮೂಲಕ ತಿಳಿಯಬಹುದು!

ಉಗುರುಗಳ ಮೇಲೆ ಕಪ್ಪು ಗೆರೆಗಳು:

ಯಾವುದೇ ರೀತಿಯ ಗಾಯವಿಲ್ಲದೆ ಉಗುರುಗಳ ಕೆಳಗೆ ಕಪ್ಪು ಬಣ್ಣದ ಗೆರೆಗಳು ಕಾಣಿಸಿಕೊಂಡರೆ, ಅದು ಚರ್ಮದ ಕ್ಯಾನ್ಸರ್‌ನ ಸಂಕೇತವಾಗಿರಬಹುದು. ಇದನ್ನು ತಕ್ಷಣ ವೈದ್ಯರಿಗೆ ತೋರಿಸುವುದು ಬಹಳ ಮುಖ್ಯ. ಜೊತೆಗೆ ಉಗುರು ಅಗಲವಾಗಿ ಊದಿಕೊಂಡಂತೆ ಕಾಣುವುದು ಕೂಡ ಒಳ್ಳೆಯದಲ್ಲ. ಇದು ಶ್ವಾಸಕೋಶದ ಕ್ಯಾನ್ಸರ್ ಅಥವಾ ದೀರ್ಘಕಾಲದ ಹೃದಯ ಸಂಬಂಧಿ ಸಮಸ್ಯೆಗಳನ್ನು ಸೂಚಿಸುತ್ತದೆ.

ಹಳದಿ ಕಣ್ಣುಗಳು:

ಉಗುರುಗಳು ಮಾತ್ರವಲ್ಲ ಕೆಲವೊಮ್ಮೆ ಕಣ್ಣುಗಳು ಹಳದಿ ಬಣ್ಣಕ್ಕೆ ತಿರುಗಿದರೆ, ಅದು ಸಾಮಾನ್ಯವಾಗಿ ಶಿಲೀಂಧ್ರ ಸೋಂಕನ್ನು ಸೂಚಿಸುತ್ತದೆ. ಇದು ದೀರ್ಘಕಾಲದ ವರೆಗೆ ಮುಂದುವರಿದರೆ ಥೈರಾಯ್ಡ್ ಸಮಸ್ಯೆ, ಶ್ವಾಸಕೋಶದ ಸಮಸ್ಯೆ ಅಥವಾ ಮಧುಮೇಹದಂತಹ ಗಂಭೀರ ಆರೋಗ್ಯ ಸಮಸ್ಯೆಗಳ ಸಂಕೇತವಾಗಿರಬಹುದು.

ನೀಲಿ ತುಟಿಗಳು:

ತುಟಿಗಳು ನೀಲಿ ಅಥವಾ ನೇರಳೆ ಬಣ್ಣಕ್ಕೆ ತಿರುಗುತ್ತಿದ್ದರೆ, ದೇಹವು ಸಾಕಷ್ಟು ಆಮ್ಲಜನಕವನ್ನು ಪಡೆಯುತ್ತಿಲ್ಲ ಎಂದರ್ಥ. ಇದು ಹೃದಯ ಅಥವಾ ಶ್ವಾಸಕೋಶದ ಕಾಯಿಲೆಯ ಸಂಕೇತವಾಗಿದೆ. ಜೊತೆಗೆ ವಿಟಮಿನ್ ಬಿ 12 ಕೊರತೆ ಇದ್ದಾಗಲೂ ಕೂಡ ಈ ರೀತಿಯಾಗಬಹುದು. ಹಾಗಾಗಿ ಈ ರೀತಿಯ ಲಕ್ಷಣಗಳು ಬಹಳ ಅಪಾಯಕಾರಿಯಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ
ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ
1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ
1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD