AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Dengue Day 2022: ಡೆಂಗ್ಯೂ ರೋಗದ ಲಕ್ಷಣ, ಚಿಕಿತ್ಸೆ, ಮುನ್ನೆಚ್ಚರಿಕಾ ಕ್ರಮಗಳೇನು?

National Dengue Day 2022: ಡೆಂಗ್ಯೂ(Dengue) ರೋಗದಿಂದ ಆಗುವ ಅಪಾಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಡೆಂಗ್ಯೂ ದಿನವನ್ನು ಜಾರಿಗೆ ತರಲಾಗಿದ್ದು, ಪ್ರತಿ ವರ್ಷವೂ ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ದಿನ(National Dengue Day)ವನ್ನಾಗಿ ಆಚರಣೆ ಮಾಡಲಾಗುತ್ತಿದೆ.

National Dengue Day 2022: ಡೆಂಗ್ಯೂ ರೋಗದ ಲಕ್ಷಣ, ಚಿಕಿತ್ಸೆ, ಮುನ್ನೆಚ್ಚರಿಕಾ ಕ್ರಮಗಳೇನು?
Dengue
Follow us
TV9 Web
| Updated By: ನಯನಾ ರಾಜೀವ್

Updated on: May 16, 2022 | 3:08 PM

ಡೆಂಗ್ಯೂ(Dengue) ರೋಗದಿಂದ ಆಗುವ ಅಪಾಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಡೆಂಗ್ಯೂ ದಿನವನ್ನು ಜಾರಿಗೆ ತರಲಾಗಿದ್ದು, ಪ್ರತಿ ವರ್ಷವೂ ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ದಿನ(National Dengue Day)ವನ್ನಾಗಿ ಆಚರಣೆ ಮಾಡಲಾಗುತ್ತಿದೆ. ರಾಷ್ಟ್ರೀಯ ಡೆಂಗ್ಯೂ  ದಿನವು ಭಾರತದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಯೋಜನೆಯಾಗಿದ್ದು, ರೋಗ, ಅದರ ಕಾರಣಗಳು ಮತ್ತು ತಡೆಗಟ್ಟುವ ಕ್ರಮಗಳ ಬಗ್ಗೆ ತಿಳಿಸಿಕೊಡಲಾಗುತ್ತದೆ.

ಡೆಂಗ್ಯೂ ರೋಗಕ್ಕೆ ಕಾರಣವೇನು? ಹೇಗೆ ಬರುತ್ತದೆ? ಡೆಂಗ್ಯೂ ಈಡೀಸ್‌ ಈಜಿಪ್ಟಿ ಎಂಬ ಸೊಳ್ಳೆಯ ಮೂಲಕ ಹರಡುತ್ತದೆ. ಡೆಂಗ್ಯೂ ಸೋಂಕಿತ ನಾಲ್ಕು ಜನರಲ್ಲಿ ಒಬ್ಬರು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಯಿದೆ. ಅಂತವರಿಗೆ ಲಕ್ಷಣಗಳು ತೀವ್ರ ಅಥವಾ ಸೌಮ್ಯವಾಗಿ ಕಾಡಬಹುದು.

ಸೊಳ್ಳೆ ಕಚ್ಚಿದ 3-14 ದಿನಗಳ ಒಳಗೆ ಡೆಂಗ್ಯೂ ಲಕ್ಷಣಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ಮೊದಲಿಗೆ ತೀವ್ರ ಜ್ಞರದೊಂದಿಗೆ ಆರಂಭಗೊಳ್ಳುವ ಸಮಸ್ಯೆ ನಂತರ ಬೇರೆ ಬೇರೆ ಲಕ್ಷಣಗಳಿಂದ ರೋಗ ಉಲ್ಬಣಗೊಳ್ಳುತ್ತದೆ. ಮಳೆಗಾಲದಲ್ಲಿ ಡೆಂಗ್ಯೂ ಹೆಚ್ಚು.

ಡೆಂಗ್ಯೂ ರೋಗದ ಲಕ್ಷಣಗಳೇನು? -ದೇಹದ ದದ್ದುಗಳು

-ಹೆಚ್ಚಿನ ಜ್ವರ

-ತೀವ್ರ ತಲೆನೋವು

-ಕಣ್ಣುಗಳ ಹಿಂದೆ ನೋವು

-ವಾಂತಿ ಮತ್ತು ವಾಕರಿಕೆಯ ಭಾವನೆ

-ಸ್ನಾಯುಗಳು ಮತ್ತು ಕೀಲುಗಳಲ್ಲಿ ನೋವು

ಮುನ್ನೆಚ್ಚರಿಕೆಗಳು -ಕೂಲರ್​ಗಳು ಮತ್ತು ಇತರ ಸಣ್ಣ ಕಂಟೇನರ್ ಗಳಿಂದ (ಪ್ಲಾಸ್ಟಿಕ್ ಕಂಟೇನರ್ ಗಳು, ಬಕೆಟ್ ಗಳು, ಬಳಸಿದ ಆಟೋಮೊಬೈಲ್ ಟೈರ್​ಗಳು, ವಾಟರ್ ಕೂಲರ್ ಗಳು, ಪೆಟ್ ವಾಟರ್ ಕಂಟೇನರ್ ಗಳು ಮತ್ತು ಹೂವಿನ ಹೂದಾನಿಗಳು) ನೀರನ್ನು ವಾರಕ್ಕೊಮ್ಮೆಯಾದರೂ ಖಾಲಿ ಮಾಡಬೇಕು.

-ನೀರು ಶೇಖರಣಾ ಪಾತ್ರೆಗಳನ್ನು ಮುಚ್ಚಳದಿಂದ ಮುಚ್ಚಿಡಬೇಕು.

-ಸೊಳ್ಳೆಗಳ ಕಡಿತವನ್ನು ತಡೆಯಲು ಹಗಲಿನಲ್ಲಿ ಏರೋಸಾಲ್ ಅನ್ನು ಬಳಸಬಹುದು.

-ಪ್ರಸರಣ ಕಾಲದಲ್ಲಿ (ಮಳೆಗಾಲದಲ್ಲಿ) ಜನರು ತಮ್ಮ ಕೈಕಾಲುಗಳನ್ನು ಮುಚ್ಚುವ ಬಟ್ಟೆಗಳನ್ನು ಧರಿಸಬೇಕು. -ಹಗಲಿನಲ್ಲಿ ಮಲಗುವಾಗ ಸೊಳ್ಳೆ ಪರದೆಗಳು ಅಥವಾ ಸೊಳ್ಳೆ ನಿವಾರಕಗಳನ್ನು ಬಳಸಬಹುದು.

ಡೆಂಗ್ಯೂ ರೋಗಕ್ಕೆ ಚಿಕಿತ್ಸೆಗಳು ಡೆಂಗ್ಯೂ ಕಾಯಿಲೆಯಿಂದ ಬಳಲುತ್ತಿರುವ ಜನರು ವಿಶ್ರಾಂತಿ ಪಡೆಯುವುದು ಮೊದಲ ಆದ್ಯತೆ ಆಗಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹಾಗೂ ಜ್ಯೂಸ್ ಕುಡಿಯಬೇಕು. ಅವರು ಜ್ವರ ಮತ್ತು ದೇಹದ ನೋವಿಗೆ ಮಾತ್ರೆ ತೆಗೆದುಕೊಳ್ಳಬಹುದು. ಆದಾಗ್ಯೂ, ರೋಗಲಕ್ಷಣಗಳು ತೀವ್ರವಾಗಿದ್ದರೆ ವೈದ್ಯರನ್ನು ಸಂಪರ್ಕಿಸಬೇಕು.

ರಾಷ್ಟ್ರೀಯ ಡೆಂಗ್ಯೂ ದಿನ ಆಚರಣೆ ಏಕೆ? ದೇಶದಲ್ಲಿ ರೋಗ ಹರಡುವುದನ್ನು ತಡೆಯಲು ಸರ್ಕಾರ ಮಾಡಿದ ಯೋಜನೆ ಇದಾಗಿದೆ. . ರಾಷ್ಟ್ರೀಯ ಡೆಂಗ್ಯೂ ದಿನವು ಜನರಿಗೆ ಸಹಾಯ ಮಾಡುವ ಡೆಂಗ್ಯೂ ಮತ್ತು ಅದರ ತಡೆಗಟ್ಟುವ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಸಹಾಯ ಮಾಡುತ್ತದೆ. ಜನರಿಗೆ ಜಾಗೃತಿ ಮೂಡಿಸಲು ನೆರವಾಗುತ್ತದೆ.

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ