National Dengue Day 2024 :ಡೆಂಗ್ಯೂವಿನ ರೋಗ ಲಕ್ಷಣ, ಚಿಕಿತ್ಸೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳು

ಡೆಂಗ್ಯೂ ರೋಗದಿಂದ ಆಗುವ ಅಪಾಯಗಳು ಹಾಗೂ ರೋಗ ಬಾರದಂತೆ ವಹಿಸಬೇಕಾದ ಎಚ್ಚರಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಡೆಂಗ್ಯೂ ದಿನವನ್ನು ಜಾರಿಗೆ ತರಲಾಗಿದೆ. ಹೀಗಾಗಿ ಪ್ರತಿ ವರ್ಷವೂ ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ದಿನವನ್ನು ಆಚರಿಸಲಾಗುತ್ತಿದೆ.

National Dengue Day 2024 :ಡೆಂಗ್ಯೂವಿನ ರೋಗ ಲಕ್ಷಣ, ಚಿಕಿತ್ಸೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳು
National Dengue Day 2024
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: May 15, 2024 | 6:03 PM

ರಾಜ್ಯದಲ್ಲಿ ಡೆಂಗ್ಯೂವಿನ ಆರ್ಭಟ ಜೋರಾಗಿದೆ. ಡೆಂಗ್ಯೂ ಹೆಸರೇ ಹೇಳುವಂತೆ ಭಯಾನಕ ಕಾಯಿಲೆಯಾಗಿದ್ದು, ಒಮ್ಮೆ ದೇಹದೊಳಗೆ ಒಕ್ಕರಿಸಿಕೊಂಡು ಬಿಟ್ಟರೆ ದೇಹದ ಶಕ್ತಿಯನ್ನು ಕುಗ್ಗಿಸಿ ಬಿಡುತ್ತವೆ. ಈ ಡೆಂಗ್ಯೂ ಜ್ವರವೂ ಈಡಿಸ್‌ ಎಂಬ ಹೆಣ್ಣು ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುತ್ತದೆ. ಸೋಂಕಿತ ವ್ಯಕ್ತಿಯನ್ನು ಕಚ್ಚಿ ನಂತರ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆಯು ಬರುತ್ತದೆ. ಪ್ರಾರಂಭದಲ್ಲಿಯೇ ಸರಿಯಾದ ಚಿಕಿತ್ಸೆ ಪಡೆದುಕೊಳ್ಳದೇ ಹೋದರೆ ಜೀವಕ್ಕೆ ಅಪಾಯವಾಗುವ ಸಾಧ್ಯತೆಯೇ ಹೆಚ್ಚು.

ರಾಷ್ಟ್ರೀಯ ಡೆಂಗ್ಯೂ ದಿನದ ಇತಿಹಾಸ ಹಾಗೂ ಮಹತ್ವ:

ರಾಷ್ಟ್ರೀಯ ಡೆಂಗ್ಯೂ ದಿನವು ಭಾರತದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಯೋಜನೆಯಾಗಿದ್ದು, ಡೆಂಗ್ಯೂ ವಿರೋಧಿ ದಿನ ಅಥವಾ ರಾಷ್ಟ್ರೀಯ ಡೆಂಗ್ಯೂ ದಿನವನ್ನು ಪ್ರತಿ ವರ್ಷ ಮೇ 16 ರಂದು ಆಚರಿಸಲಾಗುತ್ತದೆ. ಈ ದಿನದ ಮುಖ್ಯ ಉದ್ದೇಶವೇ ರೋಗ, ಅದರ ಕಾರಣಗಳು ಮತ್ತು ತಡೆಗಟ್ಟುವ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಾಗಿದೆ. ಈ ದಿನದಂದು ಡೆಂಗ್ಯೂ ತಡೆಗಟ್ಟುವ ಬಗೆಗಿನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಡೆಂಗ್ಯೂ ರೋಗ ಹೇಗೆ ಬರುತ್ತದೆ?

ಭಾರತದಲ್ಲಿ ಪ್ರತಿ ವರ್ಷ ಡೆಂಗ್ಯೂ ರೋಗಕ್ಕೆ ತುತ್ತಾಗುತ್ತಿರುವವರ ಸಂಖ್ಯೆಯು ಹೆಚ್ಚಳವಾಗುತ್ತಿದೆ. ಡೆಂಗ್ಯೂ ವೈರಸ್‌ನಿಂದ ಉಂಟಾಗುವ ವೈರಲ್ ಕಾಯಿಲೆಯಾಗಿದೆ. ಸಾಂಕ್ರಾಮಿಕ ರೋಗವಾಗಿರುವ ಡೆಂಗ್ಯೂ ಈಡೀಸ್‌ ಈಜಿಪ್ಟಿ ಎಂಬ ಸೊಳ್ಳೆಯ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆ ಕಚ್ಚಿದ 3-14 ದಿನಗಳ ನಂತರ ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ರೋಗ ಕಕಾಣಿಸಿಕೊಂಡ ತಕ್ಷಣವೇ ಸರಿಯಾದ ಚಿಕಿತ್ಸೆ ಪಡೆದುಕೊಂಡರೆ ರೋಗದಿಂದ ಗುಣಮುಖರಾಗಬಹುದು.

ಡೆಂಗ್ಯೂವಿನ ರೋಗಲಕ್ಷಣಗಳೇನು?

  • ಜ್ವರ
  • ವಾಂತಿ
  • ವಾಕರಿಕೆ
  • ದದ್ದುಗಳು
  • ವಿಪರೀತವಾದ ಮೈ ಕೈ ನೋವು, ಕೀಲು ನೋವು
  • ತಲೆನೋವು ಈ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಡೆಂಗ್ಯೂ ಚಿಕಿತ್ಸೆ ಹೇಗೆ?

ಸೋಂಕಿತ ವ್ಯಕ್ತಿಯಲ್ಲಿ ವಿಪರೀತ ಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಬೇಕು. ಅದಲ್ಲದೇ ಈ ಡೆಂಗ್ಯೂ ಕಾಯಿಲೆ ಬಂದ ವ್ಯಕ್ತಿಯು ವಿಶ್ರಾಂತಿ ತೆಗೆದುಕೊಳ್ಳುವುದು ಅವಶ್ಯಕ. ಸಾಕಷ್ಟು ಪ್ರಮಾಣದಲ್ಲಿ ನೀರು ಮತ್ತು ಹಣ್ಣಿನ ಜ್ಯೂಸ್​ ಕುಡಿಯುತ್ತಿರಬೇಕು. ಜ್ವರ ಕಡಿಮೆಯಾಗಲು ಪ್ಯಾರಸಿಟಮಾಲ್ ಮಾತ್ರೆಯೇ ಮುಖ್ಯವಾದ ಔಷಧ. ಅದರೊಂದಿಗೆ ಪಪ್ಪಾಯಿ ಹಾಗೂ ಕೀವಿ ಹಣ್ಣುಗಳ ಸೇವನೆಯಿಂದ ರೋಗವನ್ನು ಗುಣಪಡಿಸಿಕೊಳ್ಳಬಹುದು.

ಮುನ್ನೆಚ್ಚರಿಕೆ ಕ್ರಮಗಳು:

  • ಏಡಿಸ್ ಈಜಿಪ್ಟಿ ಸೊಳ್ಳೆಗಳು ಹೂಕುಂಡಗಳು, ನೀರಿನ ತೊಟ್ಟಿಗಳು, ಟೈರ್ ಗಳಲ್ಲಿ ಸಂತಾನೋತ್ಪತ್ತಿಯನ್ನು ಮಾಡುತ್ತವೆ. ಹೀಗಾಗಿ ಕುಂಡಗಳು, ಟೈರ್‌ಗಳು ಮತ್ತಿತರ ವಸ್ತುಗಳನ್ನು ಸ್ವಚ್ಛಗೊಳಿಸಬೇಕು.
  • ಮನೆಯ ಸುತ್ತ ಮುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ಮಾಡುವ ಮೂಲಕ ಸೊಳ್ಳೆಗಳನ್ನು ನಿಯಂತ್ರಿಸಬಹುದಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ