National Epilepsy Day 2024: ಇಂದು ರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ; ಏನಿದು ಅಪಸ್ಮಾರ? ರೋಗಕ್ಕೆ ಕಾರಣಗಳೇನು?

ಅಪಸ್ಮಾರ ಅಥವಾ ಮೂರ್ಛೆ ರೋಗ ಎಂಬುದು ಒಂದು ನರವೈಜ್ಞಾನಿಕ ಕಾಯಿಲೆಯಾಗಿದೆ. ಇದು ದೀರ್ಘ ಕಾಲದ ಮೆದುಳಿನ ಅಸ್ವಸ್ಥತೆಯಾಗಿದೆ. ವಿಶ್ವಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುವ ಸಾಂಕ್ರಾಮಿಕವಲ್ಲದ ಈ ಕಾಯಿಲೆ ಬಗ್ಗೆ ತಿಳುವಳಿಕೆ ಮತ್ತು ಜಾಗೃತಿ ಮೂಡಿಸಲು ಹಾಗೂ ಅಪಸ್ಮಾರ ರೋಗಿಗಳಲ್ಲಿನ ಕೀಳರಿಮೆಯನ್ನು ಹೋಗಲಾಡಿಸಿ ಅವರಿಗೆ ಧೈರ್ಯವನ್ನು ತುಂಬಬೇಕು ಎನ್ನುವ ಉದ್ದೇಶದಿಂದ ಭಾರತದಲ್ಲಿ ಪ್ರತಿವರ್ಷ ನವೆಂಬರ್‌ 17 ರಂದು ರಾಷ್ಟ್ರೀಯ ಅಪಸ್ಮಾರ ದಿನವನ್ನು ಆಚರಿಸಲಾಗುತ್ತದೆ.

National Epilepsy Day 2024: ಇಂದು ರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ; ಏನಿದು ಅಪಸ್ಮಾರ? ರೋಗಕ್ಕೆ ಕಾರಣಗಳೇನು?
National Epilepsy Day
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on:Nov 17, 2024 | 12:38 PM

ಅಪಸ್ಮಾರವು ಕೇಂದ್ರ ನರಮಂಡಲದ ಮೇಲೆ ಪರಿಣಾಮ ಬೀರುವ ಒಂದು ರೀತಿಯ ನರ ವೈಜ್ಞಾನಿಕ ಅಸ್ವಸ್ಥತೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಹೇಳುವ ಪ್ರಕಾರ, ಜಗತ್ತಿನಲ್ಲಿ ಬರೋಬ್ಬರಿ 50 ಮಿಲಿಯನ್ ಜನರು ಈ ಮೂರ್ಛೆ ರೋಗವನ್ನು ಹೊಂದಿದ್ದಾರೆ. ಇದರಲ್ಲಿ ಹಲವರು ಈ ರೋಗವನ್ನು ಒಂದು ಶಾಪ ಎನ್ನುವಂತೆ ಭಾವಿಸುತ್ತಾರೆ. ಈ ನಿಟ್ಟಿನಲ್ಲಿ ಮೂರ್ಛೆ ರೋಗ ಕಾಯಿಲೆಯ ಬಗ್ಗೆ ಹಾಗೂ ಅದರ ಚಿಕಿತ್ಸಾ ವಿಧಾನಗಳ ಬಗ್ಗೆ ಜನರಿಗೆ ತಿಳಿಸಲು, ಅಪಸ್ಮಾರ ರೋಗಿಗಳಲ್ಲಿನ ಕೀಳರಿಮೆಯನ್ನು ಹೋಗಲಾಡಿಸಿ ಅವರಿಗೆ ಧೈರ್ಯವನ್ನು ತುಂಬಬೇಕು ಎನ್ನುವ ಉದ್ದೇಶದಿಂದ ಭಾರತದಲ್ಲಿ ಪ್ರತಿವರ್ಷ ನವೆಂಬರ್‌ 17 ರಂದು ರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ. ಏನೀ ಅಪಸ್ಮಾರ ಕಾಯಿಲೆ? ಈ ರೋಗಕ್ಕೆ ಕಾರಣಗಳೇನು ಈ ಎಲ್ಲದರ ಬಗ್ಗೆ ತಿಳಿದುಕೊಳ್ಳೋಣ.

ರಾಷ್ಟ್ರೀಯ ಅಪಸ್ಮಾರ ದಿನದ ಇತಿಹಾಸ:

2009 ರಲ್ಲಿ ಮುಂಬೈನಲ್ಲಿ ಡಾ. ನಿರ್ಮಲ್‌ ಸೂರಿಯವರು ಸ್ಥಾಪಿಸಿದ ಲಾಭರಹಿತ ದತ್ತಿ ಸಂಸ್ಥೆಯಾದ “ಎಪಿಲೆಪ್ಸಿ ಫೌಂಡೇಶನ್‌ ಆಫ್‌ ಇಂಡಿಯಾ” ಭಾರತದಲ್ಲಿ ಎಪಿಲೆಪ್ಸಿ ಕಾಯಿಲೆಯನ್ನು ಕಡಿಮೆ ಮಾಡಲು ಮತ್ತು ಈ ಕಾಯಿಲೆ ಮತ್ತು ಅದರ ಚಿಕಿತ್ಸಾ ವಿಧಾನದ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ರಾಷ್ಟ್ರೀಯ ಅಪಸ್ಮಾರ ದಿನವನ್ನು ಪ್ರಾರಂಭಿಸಿತು. ಅಂದಿನಿಂದ ಪ್ರತಿವರ್ಷ ನವೆಂಬರ್‌ 17 ರಂದು ರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಏನಿದು ಅಪಸ್ಮಾರ?

ಅಪಸ್ಮಾರ ಅಥವಾ ಎಪಿಲೆಪ್ಸಿ ದೀರ್ಘಕಾಲದ ಮೆದುಳಿನ ಅಸ್ವಸ್ಥತೆಯಾಗಿದೆ. ನರಕೋಶಗಳು ಅಥವಾ ಮೆದುಳಿನ ಕೋಶಗಳಲ್ಲಿ ಉಂಟಾಗುವ ಹಠಾತ್‌ ಬದಲಾವಣೆಯಿಂದ ಅಪಸ್ಮಾರ ಸಂಭವಿಸುತ್ತದೆ. ಇದೊಂದು ನರವೈಜ್ಞಾನಿಕ ಕಾಯಿಲೆಯಾಗಿದ್ದು, ಇದು ಪದೇ ಪದೇ ಮೆದುಳಿನ ನರಕೋಶಗಳು ಅತ್ಯಧಿಕ ಪ್ರಮಾಣದಲ್ಲಿ ಹೊರಹಾಕುವ ವಿದ್ಯತ್‌ ಪ್ರಚೋದನೆಯ ಫಲವಾಗಿ ಮೆದುಳಿನ ಕಾರ್ಯದಲ್ಲಿ ಉಂಟಾಗುವ ವ್ಯತ್ಯಯದ ಪರಿಣಾಮವಾಗಿ ಒಬ್ಬ ವ್ಯಕ್ತಿ ಅನುಭವಿಸುವ ಸೆಳೆವು ಆಗಿದೆ. ಇದನ್ನೇ ಅಪಸ್ಮಾರ, ಮೂರ್ಛೆ ರೋಗ ಮುಂತಾದ ಹೆಸರುಗಳಿಂದ ಕರೆಯುತ್ತಾರೆ. ಈ ಮೂರ್ಛೆ ರೋಗ ಮತ್ತೆ ಮತ್ತೆ ಮರುಕಳಿಸುವುದರಿಂದ ಇದು ಫೀಟ್ಸ್‌ಗೂ ಕಾರಣವಾಗುತ್ತದೆ.

ಎಪಿಲೆಪ್ಸಿ ಅಥವಾ ಮೂರ್ಛೆ ರೋಗಕ್ಕೆ ಕಾರಣಗಳು:

ಮೆದುಳಿಗೆ ಹಾನಿ ಉಂಟುಮಾಡುವಂತಹ ಹಲವಾರು ಕಾರಣಗಳಿಂದಾಗಿ ಮೂರ್ಛೆ ರೋಗ ಉಂಟಾಗಬಹುದು. ಮೂರ್ಛೆ ರೋಗಕ್ಕೆ ನಿರ್ದಿಷ್ಟ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅನುವಂಶೀಯ ತೊಂದರೆ ಮತ್ತು ಮೆದುಳಿಗೆ ಉಂಟಾಗುವಂತಹ ಹಾನಿಯೂ ಇದಕ್ಕೆ ಕಾರಣವಾಗಬಹುದು. ತಲೆಗೆ ಬಿದ್ದ ಪೆಟ್ಟು, ಪಾರ್ಶ್ವವಾಯು, ಮೆದುಳುಗಡ್ಡೆ, ಮೆದುಳಿನಲ್ಲಿ ರಕ್ತಸ್ರಾವ, ಮೆದುಳಿನ ರಕ್ತನಾಳಗಳ ದೋಷಪೂರ್ಣ ರಚನೆ, ಜನನದ ವೇಳೆ ಆಗುವ ಗಾಯ ಮತ್ತು ಸೋಂಕುಗಳಿಂದ ಮೂರ್ಛೆ ರೋಗ ಉಂಟಾಗಬಹುದು.

ಮೂರ್ಛೆರೋಗ ಮೆದುಳಿಗೆ ಸಂಬಂಧಿಸಿದ ಸಮಸ್ಯೆಯೇ ಹೊರತು ಮಾನಸಿಕ ಅಸ್ವಸ್ಥತೆಯಲ್ಲ ಹಾಗೂ ಸಾಂಕ್ರಾಮಿಕ ರೋಗವಲ್ಲ. ಸಾಮಾನ್ಯವಾಗಿ ಈ ಕಾಯಿಲೆ ಎಲ್ಲಾ ವಯೋಮಾನದವರಲ್ಲಿ ಕಂಡುಬರುತ್ತದೆ. ಮೆದುಳಿನ ಚಟುವಟಿಕೆಯಲ್ಲಾಗುವ ಏರುಪೇರು ಮೂರ್ಛೆರೋಗಕ್ಕೆ ಪ್ರಾಥಮಿಕ ಕಾರಣ ಅಂತಾನೇ ಹೇಳಬಹುದು. ಕೆಲವೊಮ್ಮೆ ದೇಹದಲ್ಲಿ ನೀರಿನಂಶ ಕಡಿಮೆಯಾದಾಗ ಮೂರ್ಛೆರೋಗ ಕಾಣಿಸಿಕೊಳ್ಳಬಹುದು.

ಇದನ್ನೂ ಓದಿ: ಫ್ಯಾಟಿ ಲಿವರ್ ಸಮಸ್ಯೆ ಹೆಚ್ಚಳ; ಆರೋಗ್ಯ ಕಾಪಾಡಿಕೊಳ್ಳುವಂತೆ ತಜ್ಞರಿಂದ ಎಚ್ಚರಿಕೆ

ಮೂರ್ಛೆ ರೋಗವನ್ನು ತಡೆಗಟ್ಟಲು ಸಲಹೆಗಳು:

ಸೂಕ್ತ ವೈದ್ಯಕೀಯ ಚಿಕಿತ್ಸೆ ಮತ್ತು ಪರಿಣಾಮಕಾರಿ ಔಷಧಿಗಳನ್ನು ನೀಡುವುದರಿಂದ ಮೂರ್ಛೆ ರೋಗವನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು. ಈ ಸಮಸ್ಯೆಗೆ ತುತ್ತಾದವರು ನಿಗದಿತ ಅವಧಿಯವರೆಗೆ ಕ್ರಮಬದ್ಧವಾ ಔಷಧಿ ತೆಗೆದುಕೊಳ್ಳಬೇಕಾಗುತ್ತದೆ. ಮೂರ್ಛೆರೋಗವನ್ನು ಆದಷ್ಟು ಬೇಗ ಪತ್ತೆ ಹಚ್ಚಿ ಚಿಕಿತ್ಸೆ ಆರಂಭಿಸುವುದರಿಂದ ಮೆದುಳಿಗೆ ಹೆಚ್ಚಿನ ಹಾನಿಯಾಗದಂತೆ ತಡೆಯಬಹುದು. ಇದಲ್ಲದೆ ಸಾಕಷ್ಟು ನಿದ್ದೆ ಮಾಡುವ ಮೂಲಕ, ಕೆಫೀನ್‌, ಎನರ್ಜಿ ಡ್ರಿಂಕ್‌ ಇತ್ಯಾದಿ ಆಹಾರಗಳನ್ನು ತಪ್ಪಿಸುವ ಮೂಲಕ, ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯುವ ಮೂಲಕ ಮೂರ್ಛೆ ರೋಗವನ್ನು ತಡೆಗಟ್ಟಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:38 pm, Sun, 17 November 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ