Sign In

By signing in or creating an account, you agree with Associated Broadcasting Company's Terms & Conditions and Privacy Policy.

National Safe Motherhood Day 2025: ಹೆರಿಗೆ ಬಳಿಕ ಮಗುವಿನೊಂದಿಗೆ ತಾಯಿಯ ಆರೋಗ್ಯದ ಬಗ್ಗೆಯೂ ಇರಲಿ ಕಾಳಜಿ

ಗರ್ಭದೊಳಗಿರುವ ಮಗುವನ್ನು ನವಜಾತ ಶಿಶುವನ್ನು ಹೇಗೆ ಆರೈಕೆ ಮಾಡುತ್ತೇವೆಯೋ ಅದೇ ರೀತಿ ಗರ್ಭಿಣಿಗೆ ಹೆರಿಗೆಯ ಮೊದಲು, ಹೆರಿಗೆಯ ನಂತರ ಅಗತ್ಯ ಆರೈಕೆಗಳನ್ನು ಮಾಡಬೇಕು. ಹಾಗಾಗಿ ತಾಯಂದಿರ ಆರೋಗ್ಯವನ್ನು ಕಾಪಾಡುವ ಬಗ್ಗೆ ಜಾಗೃತಿ ಮೂಡಿಸಲು, ತಾಯಿ ಮತ್ತು ನವಜಾತ ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ಪ್ರತಿ ವರ್ಷ ಏಪ್ರಿಲ್‌ 11 ರಂದು ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ.

National Safe Motherhood Day 2025: ಹೆರಿಗೆ ಬಳಿಕ ಮಗುವಿನೊಂದಿಗೆ ತಾಯಿಯ ಆರೋಗ್ಯದ ಬಗ್ಗೆಯೂ ಇರಲಿ ಕಾಳಜಿ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 11, 2025 | 9:54 AM

ತಾಯ್ತನ (Motherhood) ಒಂದು ಸುಂದರ ಅನುಭೂತಿ ಎಂದರೆ ತಪ್ಪಾಗಲಾರದು. ಈ ಸುಂದರ ಅನುಭೂತಿಯೊಂದಿಗೆ ಗರ್ಭಿಣಿಯಾಗಿರುವಾಗ ಹಾಗೂ ಪ್ರಸವದ ಬಳಿಕ ಎಲ್ಲಾ ತಾಯಂದಿರು (mother’s) ಒಂದಷ್ಟು ಆರೋಗ್ಯ ಸಮಸ್ಯೆಗಳನ್ನು (health problem), ನೋವುಗಳನ್ನು ಎದುರಿಸುತ್ತಾರೆ. ಈ ಎಲ್ಲಾ ನೋವನ್ನು ಮಗುವಿನ ಸಂತೋಷ ಮುಚ್ಚಿಟ್ಟರೂ ನವಜಾತ ಶಿಶುವಿನ (newborn baby) ಜೊತೆಗೆ ಈ ತಾಯಂದಿರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದು ಅತ್ಯಗತ್ಯ ಜೊತೆಗೆ ಅವರಿಗೆ ಮಾನಸಿಕ ಬೆಂಬಲದ ಅವಶ್ಯಕತೆಯೂ ಇದೆ. ಅಂಕಿ ಅಂಶಗಳ ಪ್ರಕಾರ ಭಾರತವು ವಿಶ್ವದಲ್ಲೇ ಅತಿ ಹೆಚ್ಚು ತಾಯಂದಿರ ಮರಣ ಪ್ರಮಾಣವನ್ನು ಹೊಂದಿರುವ ದೇಶಗಳಲ್ಲಿ ಒಂದಾಗಿದೆ. ಹೌದು ಭಾರತದಲ್ಲಿ ಶೇಕಡಾ 12% ರಷ್ಟು ಮಹಿಳೆಯರು ಗರ್ಭಧಾರಣೆ, ಹೆರಿಗೆ ಮತ್ತು ಹೆರಿಗೆಯ ನಂತರದ ಆರೋಗ್ಯ ಸಮಸ್ಯೆಗಳಿಂದ ಮರಣ ಹೊಂದುತ್ತಿದ್ದಾರೆ. ಆದ್ದರಿಂದ ಗರ್ಭಾವಸ್ಥೆಯಲ್ಲಿ, ಹೆರಿಗೆಯ ಸಮಯದಲ್ಲಿ ಮತ್ತು ಪ್ರಸವದ ನಂತರದ ತಾಯಂದಿರಿಗೆ ನೀಡಬೇಕಾದ ಅಗತ್ಯ ಆರೈಕೆಯ ಬಗ್ಗೆ ಅರಿವು ಮೂಡಿಸಲು ಹಾಗೂ ತಾಯಿ ಮತ್ತು ನವಜಾತ ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ಪ್ರತಿವರ್ಷ ಏಪ್ರಿಲ್‌ 11 ರಂದು ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು (National Safe Motherhood Day 2025) ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನದ ಇತಿಹಾಸ:

ರಾಷ್ಟ್ರೀಯ ಮಾತೃತ್ವ ದಿನದ ಆಚರಣೆ ‘ವೈಟ್ ರಿಬ್ಬನ್ ಅಲೈಯನ್ಸ್ ಇಂಡಿಯಾದ’ ಪ್ರಯತ್ನದ ಫಲವಾಗಿದೆ. ಭಾರತ ಸರ್ಕಾರವು ವೈಟ್ ರಿಬ್ಬನ್ ಅಲೈಯನ್ಸ್ ಇಂಡಿಯಾದ ಪ್ರಸ್ತಾವನೆಯ ಮೇರೆಗೆ 2003 ರಲ್ಲಿ ಏಪ್ರಿಲ್‌ 11 ನೇ ತಾರೀಕನ್ನು ರಾಷ್ಟ್ರೀಯ ಸುರಕ್ಷಿತ ಮಾತೃತ್ವದ ದಿನವನ್ನಾಗಿ ಘೋಷಿಸಿತು. ಏಪ್ರಿಲ್‌ 13 ಮಹಾತ್ಮ ಗಾಂಧೀಜಿಯ ಪತ್ನಿ ಕಸ್ತೂರ್‌ಬಾ ಗಾಂಧಿಯವರ ಜನ್ಮ ದಿನವಾಗಿರುವುದರಿಂದ, ಅವರ ಜನ್ಮ ದಿನದ ಸ್ಮರಣಾರ್ಥವಾಗಿ ಇದೇ ದಿನವನ್ನು ಆಯ್ಕೆ ಮಾಡಲಾಯಿತು. ಅಂದಿನಿಂದ ಪ್ರತಿವರ್ಷ ಭಾರತದಲ್ಲಿ ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ. ಗರ್ಭಧಾರಣೆ, ಹೆರಿಗೆ ಮತ್ತು ಹೆರಿಗೆಯ ನಂತರದ ತಾಯಿ ಹಾಗೂ ಮಗುವಿನ ಆರೋಗ್ಯದ ಬಗ್ಗೆ ವಹಿಸಬೇಕಾದ ಕಾಳಜಿಯ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ.

ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನದ ಆಚರಣೆಯ ಉದ್ದೇಶ:

ಗರ್ಭಾವಸ್ಥೆಯು ಮಹಿಳೆಯ ಜೀವನದಲ್ಲಿ ಬಹಳ ಮುಖ್ಯವಾದ ಹಂತವಾಗಿದೆ. ಗರ್ಭಾವಸ್ಥೆಯಲ್ಲಿ, ಹೆರಿಗೆ ಹಾಗೂ ಹೆರಿಗೆಯ ಬಳಿಕ ತಾಯಂದಿರಿಗೆ ಹೆಚ್ಚುವರಿ ಆರೈಕೆಯಷ್ಟೇ ಅಲ್ಲ, ಹೆಚ್ಚುವರಿ ಬೆಂಬಲವೂ ಬೇಕಾಗುತ್ತದೆ. ನವಜಾತ ಶಿಶುವಿನೊಂದಿದೆ ತಾಯಂದಿರ ಆರೋಗ್ಯವನ್ನು ಉತ್ತೇಜಿಸುವ, ಗರ್ಭಿಣಿಯರಿಗೆ ಸಕಾಲಿಕ ಆರೋಗ್ಯ ಸೇವೆಗಳನ್ನು ಒದಗಿಸುವ,  ಅವರ ಕುಟುಂಬಗಳಿಗೆ ಸುರಕ್ಷಿತ ಗರ್ಭಧಾರಣೆಯ ಬಗ್ಗೆ ಶಿಕ್ಷಣ ನೀಡುವ ಹಾಗೂ  ಭಾರತದಲ್ಲಿ ತಾಯಂದಿರು ಮತ್ತು ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡುವ ಪ್ರಮುಖ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಪಿಂಕ್ ಐ: ಏನೇನು ಮುನ್ನೆಚ್ಚರಿಕೆ ವಹಿಸಬೇಕು?
Image
ಭಾರತದಲ್ಲಿ ಪ್ರತಿ 5 ಜನರಲ್ಲಿ ಒಬ್ಬರಿಗೆ ವಿಟಮಿನ್‌ ಡಿ ಕೊರತೆಯಿದೆ; ಅಧ್ಯಯನ
Image
ದಿನದಲ್ಲಿ ಹಲವು ಬಾರಿ ಮಲ ವಿಸರ್ಜನೆಯಾಗಲು ಕಾರಣವೇನು?
Image
ಗಬಗಬನೆ ಊಟ ಮಾಡುತ್ತೀರಾ? ಇದು ಅನ್ನಕ್ಕೆ ಮಾಡುವ ಅವಮಾನ

ಇದನ್ನೂ ಓದಿ: ಭಾರತದಲ್ಲಿ ಪ್ರತಿ 5 ಜನರಲ್ಲಿ ಒಬ್ಬರಿಗೆ ವಿಟಮಿನ್‌ ಡಿ ಕೊರತೆಯಿದೆ; ಅಧ್ಯಯನ

ರಾಷ್ಟ್ರೀಯ ಸುರಕ್ಷಿತ ತಾಯ್ತನ ದಿನದ ಮಹತ್ವ:

ರಾಷ್ಟ್ರೀಯ ಸುರಕ್ಷಿತ ತಾಯ್ತನ ದಿನವು ಭಾರತದಲ್ಲಿ ಗರ್ಭಿಣಿ ಮಹಿಳೆಯರು, ತಾಯಂದಿರು ಎದುರಿಸುವ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ. ಜೊತೆಗೆ ಮಹಿಳೆಯರಿಗೆ ತಮ್ಮ ಮಾತೃತ್ವ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು, ತಾಯಂದಿರಿಗಾಗಿ ಇರುವ  ಸರ್ಕಾರಿ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದು ಇದರ ಉದ್ದೇಶವಾಗಿದೆ. ಅಷ್ಟೇ ಅಲ್ಲದೆ ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವು ತಾಯಿಯ ಆರೋಗ್ಯವನ್ನು ಉತ್ತೇಜಿಸುವ, ತಾಯಿ ಹಾಗೂ ನವಜಾತ ಶಿಶುವಿನ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಮತ್ತು ಭಾರತದಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವ ಪ್ರಮುಖ ಆಚರಣೆಯಾಗಿದೆ.

ರಾಷ್ಟ್ರೀಯ ದಿನವನ್ನು ಹೇಗೆ ಆಚರಿಸಲಾಗುತ್ತದೆ:

ಈ ದಿನ ಸಂಬಂಧಪಟ್ಟವರು ಗರ್ಭಿಣಿಯರು ಮತ್ತು ಅವರ ಕುಟುಂಬಗಳಿಗೆ ಆರೋಗ್ಯ ಶಿಬಿರಗಳು ಮತ್ತು ತಪಾಸಣೆಗಳನ್ನು ಆಯೋಜಿಸುತ್ತಾರೆ. ಸುರಕ್ಷಿತ ಗರ್ಭಧಾರಣೆ ಮತ್ತು ಹೆರಿಗೆ ಪದ್ಧತಿಗಳನ್ನು ಮತ್ತು ತಾಯಿ ಮತ್ತು ಮಗುವಿನ ಸರಿಯಾದ ಆರೈಕೆಯ ಬಗ್ಗೆ ಮಾಹಿತಿ ಒದಗಿಸುವುದು ಇದರ ಉದ್ದೇಶವಾಗಿದೆ. ತಾಯಿಯ ಆರೋಗ್ಯದ ಬಗ್ಗೆ ಮಹಿಳೆಯರಿಗೆ ಶಿಕ್ಷಣ ನೀಡಲು ವಿವಿಧ  ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳು ಸಾರ್ವಜನಿಕ ಕಾರ್ಯಕ್ರಮಗಳ ಮೂಲಕ ಜಾಗೃತಿ ಅಭಿಯಾನಗಳನ್ನು ನಡೆಸುತ್ತವೆ. ಅಷ್ಟೇ ಅಲ್ಲದೆ ಭಾರತದಲ್ಲಿ ತಾಯಂದಿರು ಮತ್ತು ಮಕ್ಕಳ ಆರೋಗ್ಯ ಸೇವೆಗಳನ್ನು ಸುಧಾರಿಸಲು ಕೊಡುಗೆ ನೀಡಿದ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಈ ದಿನ ಗೌರವಿಸಲಾಗುತ್ತದೆ.  ಆರೋಗ್ಯ ರಕ್ಷಣೆಗೆ ಸಂಬಂಧಿಸಿದ ಚಟುವಟಿಕೆಗಳ ಹೊರತಾಗಿ, ತಾಯಂದಿರ ಆರೋಗ್ಯದ ಬಗ್ಗೆ ಸೃಜನಶೀಲ ಮತ್ತು ಆಕರ್ಷಕ ರೀತಿಯಲ್ಲಿ ಜಾಗೃತಿ ಮೂಡಿಸಲು  ರಾಷ್ಟ್ರೀಯ ಸುರಕ್ಷಿತ  ಮಾತೃತ್ವ ದಿನದಂದು ಸಂಗೀತ ಮತ್ತು ನೃತ್ಯ ಪ್ರದರ್ಶನಗಳು, ಪ್ರದರ್ಶನಗಳು ಮತ್ತು ಕಲಾ ಸ್ಪರ್ಧೆಗಳಂತಹ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ