National Vaccination Day 2025: ಪ್ರತಿವರ್ಷ ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲು ಕಾರಣವೇನು?

ಕೆಲವು ಆರೋಗ್ಯ ಸಮಸ್ಯೆಗಳನ್ನು ಬಾರದಂತೆ ಲಸಿಕೆಗಳನ್ನು ಹಾಕಿಸಿಕೊಳ್ಳಬೇಕಾಗುತ್ತದೆ. ಹಾಗಾಗಿ ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಾರತದಲ್ಲಿ ಪ್ರತಿವರ್ಷ ಮಾರ್ಚ್ 16 ಅನ್ನು ರಾಷ್ಟ್ರೀಯ ಲಸಿಕೆ ದಿನ ಎಂದು ಆಚರಿಸಲಾಗುತ್ತದೆ. ಈ ದಿನವನ್ನು ರಾಷ್ಟ್ರೀಯ ರೋಗನಿರೋಧಕ ದಿನ ಎಂದೂ ಕರೆಯಲಾಗುತ್ತದೆ. ಲಸಿಕೆಯ ಮಹತ್ವದ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ. ಆದರೆ ಲಸಿಕೆ ಹಾಕಿಕೊಳ್ಳುವುದರಿಂದ ಯಾವ ರೀತಿಯ ಪ್ರಯೋಜನಗಳಿವೆ? ಅದರ ಮಹತ್ವವೇನು ತಿಳಿದುಕೊಳ್ಳಿ.

National Vaccination Day 2025: ಪ್ರತಿವರ್ಷ ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲು ಕಾರಣವೇನು?
National Vaccination Day
Updated By: ಅಕ್ಷತಾ ವರ್ಕಾಡಿ

Updated on: Mar 16, 2025 | 8:29 AM

ಆರೋಗ್ಯ (Health) ಕಾಪಾಡಿಕೊಳ್ಳುವುದು ಇಂದಿನ ದಿನಗಳಲ್ಲಿ ಸವಾಲಾಗಿ ಪರಿಣಮಿಸಿರುವುದು ಸುಳ್ಳಲ್ಲ. ಎಷ್ಟೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೂ ಕೆಲ ಕಾಯಿಲೆಗಳು ಬಂದೇ ಬಿಡುತ್ತದೆ. ಇನ್ನು ಕೆಲವು ಆರೋಗ್ಯ ಸಮಸ್ಯೆಗಳನ್ನು ಬಾರದಂತೆ ಲಸಿಕೆಗಳನ್ನು ಹಾಕಿಸಿಕೊಳ್ಳಬೇಕಾಗುತ್ತದೆ. ಹಾಗಾಗಿ ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಾರತದಲ್ಲಿ ಪ್ರತಿವರ್ಷ ಮಾರ್ಚ್ 16 ಅನ್ನು ರಾಷ್ಟ್ರೀಯ ಲಸಿಕೆ ದಿನ (National Vaccination Day) ಎಂದು ಆಚರಿಸಲಾಗುತ್ತದೆ. ಈ ದಿನವನ್ನು ರಾಷ್ಟ್ರೀಯ ರೋಗನಿರೋಧಕ ದಿನ ಎಂದೂ ಕರೆಯಲಾಗುತ್ತದೆ. ಲಸಿಕೆಯ ಮಹತ್ವದ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ. ಆದರೆ ಲಸಿಕೆ (Vaccination) ಹಾಕಿಕೊಳ್ಳುವುದರಿಂದ ಯಾವ ರೀತಿಯ ಪ್ರಯೋಜನಗಳಿವೆ? ಅದರ ಮಹತ್ವವೇನು ತಿಳಿದುಕೊಳ್ಳಿ.

ರಾಷ್ಟ್ರೀಯ ಲಸಿಕೆ ದಿನದ ಇತಿಹಾಸ:

ದೇಶದಲ್ಲಿ ಮೊದಲ ಲಸಿಕೆ ದಿನಾಚರಣೆಯನ್ನು 1995ರ ಮಾರ್ಚ್ 16ರಂದು ಆಚರಣೆ ಮಾಡಲಾಯಿತು. ಅಂದು ದೇಶದಲ್ಲಿ ಪೋಲಿಯೊ ಹನಿ ಹಾಕುವ ‘ಪಲ್ಸ್‌ ಪೋಲಿಯೊ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಎರಡು ದಶಕಗಳ ಬಳಿಕ ದೇಶದಲ್ಲಿ ಕ್ರಮೇಣ ಪೋಲಿಯೊ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ, 2014ರಲ್ಲಿ ಭಾರತವನ್ನು ಪೋಲಿಯೊ ಮುಕ್ತ ಎಂದು ಘೋಷಿಸಲಾಯಿತು. ಮಕ್ಕಳಿಗೆ ಪೋಲಿಯೊ ಹನಿ ಜತೆಗೆ ಮಕ್ಕಳಿಗೆ ದಡಾರ, ಸಿಡುಬು, ಕ್ಷಯಗಳ ಲಸಿಕೆ ಹಾಕಿಸುವುದೂ ಮುಖ್ಯ. ಲಸಿಕೆ ದಿನದಂದು ಈ ಅಂಶಗಳ ಬಗ್ಗೆಯೂ ಅರಿವು ಮೂಡಿಸಲಾಗುತ್ತದೆ. ಸಕಾಲದಲ್ಲಿ ಲಸಿಕೆ ಹಾಕಿಸುವುದರಿಂದ ಪ್ರತಿ ವರ್ಷ ಲಕ್ಷಾಂತರ ಮಕ್ಕಳು ಸಾವಿನಿಂದ ಪಾರಾಗುತ್ತಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಅಂಕಿ- ಅಂಶಗಳು ಮಾಹಿತಿ ನೀಡುತ್ತವೆ.

ಇದನ್ನೂ ಓದಿ: ಮದ್ಯಪಾನ ತ್ಯಜಿಸುವುದರಿಂದ ಒಳ್ಳೆಯ ಕೊಲೆಸ್ಟ್ರಾಲ್‌ಗೆ ಹಾನಿ! 10 ವರ್ಷದ ಅಧ್ಯಯನದಲ್ಲಿ ಬಹಿರಂಗ

ರಾಷ್ಟ್ರೀಯ ಲಸಿಕೆ ದಿನದ ಮಹತ್ವವೇನು?

  • ಸಾಂಕ್ರಾಮಿಕ ರೋಗಗಳು ಬರದಂತೆ ರಕ್ಷಣೆ ನೀಡುತ್ತದೆ.
  • ಲಸಿಕೆಗಳು ಜೀವ ಉಳಿಸುವುದು ಮಾತ್ರವಲ್ಲ, ಆರೋಗ್ಯ ಹಾಗೂ ಜೀವನ ಮಟ್ಟವನ್ನು ಸುಧಾರಿಸುತ್ತವೆ ಎಂಬುದನ್ನು ಸಾಬೀತು ಪಡಿಸುತ್ತದೆ.
  • ಲಸಿಕೆಗಳು ಆರೋಗ್ಯ ಹದಗೆಡದಂತೆ, ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳನ್ನು ದೇಹದಿಂದ ಸಂಪೂರ್ಣವಾಗಿ ತೆಗೆದು ಹಾಕಲು ಸಹಾಯ ಮಾಡುತ್ತದೆ.
  • ಮಕ್ಕಳ ಆರೋಗ್ಯವನ್ನು ಕಾಪಾಡುವಲ್ಲಿ ಲಸಿಕೆ ಎಷ್ಟು ಮುಖ್ಯ ಎನ್ನುವ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲು ನೆರವಾಗುತ್ತದೆ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:28 am, Sun, 16 March 25