ತಲೆನೋವಿಗೆ ಮಾತ್ರೆ ತೆಗೆದುಕೊಳ್ಳುತ್ತಿದ್ದೀರಾ? ಈ ಸಲಹೆಗಳನ್ನು ಅನುಸರಿಸಿ

ತಲೆನೋವು ಬಂದಾಗ ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜೊತೆಗೆ ಈ ನೋವು ನಿವಾರಕ ಮಾತ್ರೆಗಳು ನಾನಾ ರೀತಿಯ ಅಡ್ಡಪರಿಣಾಮಗಳನ್ನು ಉಂಟುಮಾಡಬಹುದು ಎಂದು ಹೇಳುತ್ತಾರೆ. ನಿಮಗೂ ಈ ರೀತಿಯ ಸಮಸ್ಯೆ ಕಂಡು ಬರುತ್ತಿದ್ದರೆ ತಲೆನೋವು ಕಡಿಮೆ ಮಾಡಲು ಮಾತ್ರೆ ತೆಗೆದುಕೊಳ್ಳುವ ಬದಲು, ಕೆಲವು ವಿಶೇಷ ಮನೆಮದ್ದುಗಳನ್ನು ಪ್ರಯತ್ನಿಸಿ. ನೋವಿನ ಸಮಸ್ಯೆಯನ್ನು ತಪ್ಪಿಸಬಹುದು ಎಂದು ತಜ್ಞರು ಹೇಳುತ್ತಾರೆ.

ತಲೆನೋವಿಗೆ ಮಾತ್ರೆ ತೆಗೆದುಕೊಳ್ಳುತ್ತಿದ್ದೀರಾ? ಈ ಸಲಹೆಗಳನ್ನು ಅನುಸರಿಸಿ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 08, 2024 | 2:53 PM

ಇತ್ತೀಚಿನ ವರ್ಷಗಳಲ್ಲಿ ಒತ್ತಡದ ಜೀವನಶೈಲಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಇದರಲ್ಲಿ ತಲೆನೋವು ಸಾಮಾನ್ಯ ಸಮಸ್ಯೆಯಾಗಿದೆ. ಯಾವುದೇ ವಯಸ್ಸಿನವರಲ್ಲಿಯೂ ಇದು ಕಂಡು ಬರಬಹುದು. ಕೆಲವರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ. ಇನ್ನು ಕೆಲವರಲ್ಲಿ ಪದೇ ಪದೇ ಸ್ವಲ್ಪ ಸ್ವಲ್ಪ ತಲೆನೋವು ಕಾಣಿಸಿಕೊಳ್ಳಬಹುದು. ಆದರೆ ಈ ನೋವು ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರಬಹುದು. ಇದಕ್ಕೆ ಒತ್ತಡ, ಹೆಚ್ಚಿದ ಆತಂಕ, ಆಯಾಸ, ಅತಿಯಾದ ಕೆಲಸ ಅಥವಾ ಕೆಟ್ಟ ಅಭ್ಯಾಸದಂತಹ ಅನೇಕ ಕಾರಣಗಳಿರಬಹುದು. ಕೆಲವೊಮ್ಮೆ ಇದು ಕಾರಣವಿಲ್ಲದೆಯೇ ಬರಬಹುದು.

ಆದರೆ ಅನೇಕರು ತಲೆನೋವು ಬಂದಾಗ ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜೊತೆಗೆ ಈ ನೋವು ನಿವಾರಕ ಮಾತ್ರೆಗಳು ನಾನಾ ರೀತಿಯ ಅಡ್ಡಪರಿಣಾಮಗಳನ್ನು ಉಂಟುಮಾಡಬಹುದು ಎಂದು ಹೇಳುತ್ತಾರೆ. ನಿಮಗೂ ಈ ರೀತಿಯ ಸಮಸ್ಯೆ ಕಂಡು ಬರುತ್ತಿದ್ದರೆ ತಲೆನೋವು ಕಡಿಮೆ ಮಾಡಲು ಮಾತ್ರೆ ತೆಗೆದುಕೊಳ್ಳುವ ಬದಲು, ಕೆಲವು ವಿಶೇಷ ಮನೆಮದ್ದುಗಳನ್ನು ಪ್ರಯತ್ನಿಸಿ. ನೋವಿನ ಸಮಸ್ಯೆಯನ್ನು ತಪ್ಪಿಸಬಹುದು ಎಂದು ತಜ್ಞರು ಹೇಳುತ್ತಾರೆ.

ತಲೆನೋವನ್ನು ನಿವಾರಿಸಲು ಮನೆಮದ್ದುಗಳು;

ಹೈಡ್ರೇಟ್ ಆಗಿರಿ: ತಲೆನೋವಿಗೆ ಸಾಮಾನ್ಯ ಕಾರಣವೆಂದರೆ ದೇಹದಲ್ಲಿ ನೀರಿನ ಕೊರತೆಯಾಗುವುದು. ಪ್ರತಿದಿನ ಕನಿಷ್ಠ 8- 10 ಲೋಟ ನೀರು ಕುಡಿಯುವುದರಿಂದ ನಿರ್ಜಲೀಕರಣದ ಅಪಾಯವನ್ನು ಕಡಿಮೆ ಮಾಡಬಹುದು. ಇದು ತಲೆನೋವನ್ನು ಸಹ ಕಡಿಮೆ ಮಾಡುತ್ತದೆ.

ಯೋಗ – ಧ್ಯಾನ: ಮಾನಸಿಕ ಆರೋಗ್ಯಕ್ಕೆ ಇದು ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಇದನ್ನು ಸಾಮಾನ್ಯ ದಿನಗಳಲ್ಲಿಯೂ ಮಾಡಬೇಕು. ಪ್ರತಿದಿನ ಇದನ್ನು ಅಭ್ಯಾಸ ಮಾಡುವುದರಿಂದ ಒತ್ತಡವನ್ನು ಕಡಿಮೆ ಮಾಡಬಹುದು ಮತ್ತು ತಲೆನೋವಿನಿಂದ ದೂರವಿಡಬಹುದು.

ಬೀಜಗಳನ್ನು ತಿನ್ನಿ: ಇದು ಕೂಡ ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ವಾಲ್ನಟ್, ಬಾದಾಮಿ, ಗೋಡಂಬಿಯನ್ನು ತಿನ್ನುವುದರಿಂದ ತಲೆನೋವು ಕಡಿಮೆಯಾಗುತ್ತದೆ. ಏಕೆಂದರೆ ಇವುಗಳಲ್ಲಿ ಉತ್ತಮ ಪ್ರಮಾಣದ ಮೆಗ್ನೀಸಿಯಮ್ ಅನ್ನು ಹೊಂದಿರುತ್ತವೆ. ಇದು ತಲೆನೋವನ್ನು ದೂರವಿಡುತ್ತದೆ.

ಇದನ್ನೂ ಓದಿ: ಎಕ್ಸ್-ರೇ ಹುಟ್ಟಲು ಈ ಅಂಶಗಳೇ ಕಾರಣ! ಇಲ್ಲಿದೆ ಈ ದಿನದ ಪ್ರಾಮುಖ್ಯತೆ

ಶುಂಠಿ ಚಹಾ: ಶುಂಠಿ ಚಹಾ ಕುಡಿಯುವುದರಿಂದ ತಲೆನೋವು ಕಡಿಮೆಯಾಗುತ್ತದೆ. ಶುಂಠಿಯಲ್ಲಿ ಉರಿಯೂತ ಶಮನಕಾರಿ ಗುಣಗಳಿವೆ. ಇದು ತಲೆನೋವನ್ನು ಕಡಿಮೆ ಮಾಡುತ್ತದೆ. ಹೆಚ್ಚಿನ ಜನರಿಗೆ, ಶುಂಠಿ ಚಹಾ ಮಾನಸಿಕ ನೋವು ನಿವಾರಕವಾಗಿ ಕಾರ್ಯನಿರ್ವಹಿಸುತ್ತದೆ.

ವಿಶ್ರಾಂತಿ: ಪದೇ ಪದೇ ತಲೆನೋವು ಬರುತ್ತಿದ್ದಾಗ ವಿಶ್ರಾಂತಿ ತೆಗೆದುಕೊಳ್ಳುವುದು ಬಹಳ ಮುಖ್ಯ. ಇದು ಮನಸ್ಸನ್ನು ಶಾಂತವಾಗಿಡಲು ಸಹಾಯ ಮಾಡುತ್ತದೆ. ಹಾಗಾಗಿ ಚೆನ್ನಾಗಿ ನಿದ್ರೆ ಮಾಡಲು ಪ್ರಯತ್ನಿಸಿ.

(ಸೂಚನೆ: ಇಲ್ಲಿರುವ ವಿಷಯಗಳು ಮಾಹಿತಿಗಾಗಿ ಮಾತ್ರ. ಯಾವುದೇ ರೀತಿಯ ಸಂದೇಹಗಳಿರಲಿ, ತಜ್ಞರನ್ನು ಸಂಪರ್ಕಿಸಿ.)

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು