AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Energy boosting foods: ದಿನವಿಡೀ ಉತ್ಸಾಹಭರಿತವಾಗಿ ಇರಬೇಕಾ? ಈ ಆಹಾರಗಳನ್ನು ನೀವು ಸೇವಿಸಲೇಬೇಕು

ನಾವು ದಿನವಿಡೀ ಕ್ರೀಯಾಶೀಲರಾಗಿ ಮತ್ತು ಚೈತನ್ಯಭರಿತವಾಗಿ ಇರಬೇಕಾದರೆ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸಬೇಕು. ಆ ಆಹಾರಗಳು ದೇಹಕ್ಕೆ ಅಗತ್ಯ ಪೋಷಕಾಂಶವನ್ನು ಒದಗಿಸುವುದರ ಜೊತೆಗೆ ಶಕ್ತಿಯ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ದೇಹಕ್ಕೆ ಶಕ್ತಿಯನ್ನು ಒದಗಿಸುವ ಆಹಾರ ಪದಾರ್ಥಗಳು ಯಾವುವು ಎಂಬ ಮಾಹಿತಿ ಇಲ್ಲಿದೆ.

Energy boosting foods: ದಿನವಿಡೀ ಉತ್ಸಾಹಭರಿತವಾಗಿ ಇರಬೇಕಾ? ಈ ಆಹಾರಗಳನ್ನು ನೀವು ಸೇವಿಸಲೇಬೇಕು
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Jul 01, 2023 | 3:31 PM

Share

ದಿನವಿಡೀ ಶಕ್ತಿಯುತವಾಗಿರಲು ಮತ್ತು ಸಕ್ರಿಯವಾಗಿರಲು ನಿಮ್ಮ ಆಹಾರದ ಬಗ್ಗೆ ನೀವು ವಿಶೇಷ ಗಮನವನ್ನು ಹರಿಸಬೇಕು. ಇಂದಿನ ಬಿಡುವಿಲ್ಲದ ಜೀವನಶೈಲಿಯ ಕಾರಣದಿಂದಾಗಿ ಅನೇಕ ಜನರು ಬೇಗನೆ ಸುಸ್ತಾಗುತ್ತಾರೆ ಮತ್ತು ಅವರಿಗೆ ಕೆಲಸದ ಮೇಲೆ ಗಮನವನ್ನು ಕೇಂದ್ರೀಕರಿಸಲು ಸಾಧ್ಯವಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನೀವು ದೇಹದ ಅಗತ್ಯತೆಯನ್ನು ಗುರುತಿಸಿ, ನಿಮ್ಮ ಆಹಾರದಲ್ಲಿ ಸರಿಯಾದ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಹಾಗೂ ದೇಹಕ್ಕೆ ಶಕ್ತಿಯನ್ನು ಒದಗಿಸುವ ಆಹಾರವನ್ನು ಸೇವಿಸುವ ಅಗತ್ಯವಿದೆ. ದೇಹದಲ್ಲಿ ಶಕ್ತಿಯ ನಷ್ಟವಾದರೆ ಆಲಸ್ಯ, ಸೋಮಾರಿತನ ಮೈಗೂಡಿಕೊಳ್ಳುತ್ತದೆ. ನಮ್ಮ ದೇಹದಲ್ಲಿ ಸ್ಥಿರವಾದ ಶಕ್ತಿಯ ಮಟ್ಟವನ್ನು ಮಟ್ಟವನ್ನು ಕಾಪಾಡಿಕೊಳ್ಳಲು ಸಾಕಷ್ಟು ಪ್ರಮಾಣದ ಕಾರ್ಬೋಹೈಡ್ರೇಟ್, ಪ್ರೋಟೀನ್, ವಿಟಮಿನ್, ಕೊಬ್ಬುಗಳು ಮತ್ತು ಖನಿಜಗಳು ಹೊಂದಿರುವ ಸಮತೋಲಿತ ಆಹಾರವನ್ನು ಸೇವಿಸುವುದು ಮುಖ್ಯವಾಗಿದೆ. ಹಾಗಾಗಿ ನಮ್ಮ ದೇಹದಲ್ಲಿ ಶಕ್ತಿಯ ಮಟ್ಟವನ್ನು ಕಾಪಾಡಿಕೊಳ್ಳಲು ಮತ್ತು ದಿನವಿಡೀ ಚುರುಕಾಗಿ ಕೆಲಸ ಮಾಡಲು ನಾವು ಪ್ರತಿದಿನ ಕೆಲವೊಂದು ಆರೋಗ್ಯಕರ ಆಹಾರಗಳನ್ನು ಸೇವಿಸಬೇಕಾಗುತ್ತದೆ.

ದಿನವಿಡೀ ಚುರುಕಾಗಿರಲು ಹಾಗೂ ದೇಹಶಕ್ತಿಯನ್ನು ಪಡೆಯಲು ಸೇವಿಸಬೇಕಾದ ಆಹಾರಗಳು:

ಬಾಳೆಹಣ್ಣು:

ಬಾಳೆಹಣ್ಣು ಸಾಮಾನ್ಯವಾಗಿ ಎಲ್ಲಾ ಋತುವಿನಲ್ಲೂ ಲಭ್ಯವಿರುವ ಹಣ್ಣಾಗಿದೆ. ಪೊಟ್ಯಾಸಿಯಮ್, ಫೈಬರ್, ವಿಟಮಿನ್ ಮತ್ತು ಕಾರ್ಬೋಹೈಟ್ರೇಟ್ ಅಂಶಗಳಿಂದ ಸಮೃದ್ಧವಾಗಿರುವ ಬಾಳೆಹಣ್ಣು ನೈಸರ್ಗಿಕ ಎನರ್ಜಿ ಬೂಸ್ಟರ್ ಆಗಿ ಕಾರ್ಯನಿರ್ವಹಿಸುತ್ತದೆ. ಮೆಗ್ನೇಸಿಯಂ ಬಾಳೆಹಣ್ಣಿನಲ್ಲಿ ಕಂಡುಬರುವ ಮತ್ತೊಂದು ಖನಿಜವಾಗಿದ್ದು, ಅದು ದೇಹದಲ್ಲಿ ಶಕ್ತಿ ಉತ್ಪಾದನೆಗೆ ಸಹಾಯ ಮಾಡುತ್ತದೆ. ದಿನವಿಡೀ ಶಕ್ತಿಯುತವಾಗಿರಲು, ನೀವು ಬಾಳೆಹಣ್ಣು ತಿನ್ನುವ ಮೂಲಕ ಅಥವಾ ಬಾಳೆಹಣ್ಣಿನಿಂದ ತಯಾರಿಸಿದ ಯಾವದೇ ಪಾನೀಯವನ್ನು ಕುಡಿಯುವ ಮೂಲಕ ದಿನವನ್ನು ಪ್ರಾರಂಭಿಸಬಹುದು.

ನವಣೆ:

ನವಣೆ ಅಥವಾ ಕ್ವಿನೋವಾ ಒಂದು ಸಂಕೀರ್ಣ ಕಾರ್ಬೋಹೈಡ್ರೇಟ್ ಆಹಾರವಾಗಿದೆ. ಇದು ಉತ್ತಮ ಪ್ರಮಾಣದ ಫೈಬರ್ ನ್ನು ಹೊಂದಿದೆ. ಸಂಕೀರ್ಣ ಕಾರ್ಬೋಹೈಡ್ರೇಟ್ ಗಳು ದೇಹದಿಂದ ನಿಧಾನವಾಗಿ ವಿಭಜನೆಯಾಗುತ್ತವೆ ಹಾಗೂ ಇದು ದೇಹಕ್ಕೆ ಶಕ್ತಿಯ ಸ್ಥಿರ ಮತ್ತು ನಿರಂತರ ಬಿಡುಗಡೆಯನ್ನು ಒದಗಿಸುತ್ತದೆ.

ಇದನ್ನೂ ಓದಿ:Brahmins Foods Founder Dies: ಸಾಂಬಾರ್ ಕಿಂಗ್ ವಿಷ್ಣು ನಂಬೂದಿರಿ ನಿಧನ; ಸೈಕಲ್​ನಲ್ಲಿ ಸಾಂಬಾರ್ ಪುಡಿ ಮಾರುತ್ತಿದ್ದ ಬ್ರಾಹ್ಮಿಣ್ಸ್ ಫೂಡ್ಸ್ ಸ್ಥಾಪಕ ದೊಡ್ಡ ಬ್ಯುಸಿನೆಸ್ ಕಟ್ಟಿದ ಕಥೆ

ಮೊಸರು:

ಮೊಸರು ಪ್ರೋಬಯಾಟಿಕ್ ಅಂಶದಿಂದ ಸಮೃದ್ಧವಾಗಿದೆ. ಇದು ಜೀರ್ಣಕ್ರಿಯೆಗೆ ಉತ್ತಮವಾದ ಬ್ಯಾಕ್ಟೀರಿಯಾಗಳಾಗಿದೆ. ಪ್ರೋಬಯಾಟಿಕ್ ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಸಮರ್ಥ ಜೀರ್ಣಕ್ರಿಯೆ ಹಾಗೂ ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು ಉತ್ತೇಜಿಸು ಮೂಲಕ, ಪ್ರೋಬಯಾಟಿಕ್ ಗಳು ಸ್ಥಿರ ಶಕ್ತಿಯ ಮಟ್ಟವನ್ನು ಕಾಪಾಡಿಕೊಳ್ಳಲು ಪರೋಕ್ಷಾಗಿ ಕೊಡುಗೆ ನೀಡುತ್ತದೆ.

ಚಿಯಾ ಬೀಜಗಳು:

ಚಿಯಾ ಬೀಜಗಳು ಕಾರ್ಬೋಹೈಡ್ರೇಟ್, ಆರೋಗ್ಯಕರ ಕೊಬ್ಬು ಮತ್ತು ಫೈಬರ್ ನಿಂದ ಸಮೃದ್ಧವಾಗಿರುವ ಕಾರಣದಿಂದ ಇದನ್ನು ಸೇವಿಸುವುದರಿಂದ ದೇಹಕ್ಕೆ ಅಗತ್ಯವಾಗಿ ಬೇಕಾದ ಶಕ್ತಿಯನ್ನು ಪಡೆಯಬಹುದು.

ಓಟ್ಸ್:

ದಿನವಿಡೀ ಶಕ್ತಿಯುತವಾಗಿರಲು ಮತ್ತು ಸಕ್ರಿಯವಾಗಿರಲು ಓಟ್ಸ್ ಅತ್ಯುತ್ತಮ ಉಪಹಾರದ ಆಯ್ಕೆಯಾಗಿದೆ. ಬಹಳಷ್ಟು ಪ್ರೋಟೀನ್ ಮತ್ತು ಫೈಬರ್ ನಿಂದ ಕೂಡಿದ ಓಟ್ಸ್ ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ. ಅಲ್ಲದೆ ಈ ಆಹಾರ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ, ತೂಕ ನಷ್ಟಕ್ಕೂ ಸಹಕಾರಿಯಾಗಿದೆ.

ಒಣ ಬೀಜಗಳು:

ಒಣಬೀಜಗಳು ದಿನವಿಡೀ ಶಕ್ತಿಯುತವಾಗಿರಲು ಅತ್ಯುತ್ತಮ ಮತ್ತು ಆರೋಗ್ಯಕರ ಆಹಾರದ ಆಯ್ಕೆಯಾಗಿದೆ. ಇವುಗಳು ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶ ಮತ್ತು ಶಕ್ತಿಯನ್ನು ಒದಗಿಸುತ್ತದೆ. ಬಾದಮಿ, ಗೋಡಂಬಿ ವಾಲ್ನಟ್, ಕುಂಬಳಕಾಯಿ ಬೀಜ, ಸೂರ್ಯಕಾಂತಿ ಬೀಜ ಇತ್ಯಾದಿ ನಟ್ಸ್ ಗಳನ್ನು ತಿನ್ನುವ ಮೂಲಕ ಆರೋಗ್ಯಕರ ರೀತಿಯಲ್ಲಿದೇಹಶಕ್ತಿಯನ್ನು ಹೆಚ್ಚಿಸಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!