Nipah Virus: ಮತ್ತೆ ಹೆಚ್ಚಿದ ನಿಫಾ ವೈರಸ್​ ಭೀತಿ; ಈ ರೋಗದ ಲಕ್ಷಣಗಳೇನು?

ನಿಫಾ ವೈರಸ್ ಮನುಷ್ಯರಿಂದ ಮನುಷ್ಯರಿಗೆ ಹರಡದಂತೆ ತಡೆಯಲು, ನಿಫಾ ವೈರಸ್ ತಗುಲಿದವರಿಂದ ಭೌತಿಕ ಅಂತರ ಕಾಪಾಡಿಕೊಳ್ಳಬೇಕು. ನಿಫಾ ವೈರಸ್ ಮನುಷ್ಯರಲ್ಲಿ ಬಹಳ ವೇಗವಾಗಿ ಹರಡುತ್ತದೆ. ನಿಫಾ ವೈರಸ್ ಪ್ರಾಣಿಗಳಿಂದ ಪ್ರಾಣಿಗಳಿಗೆ ಹರಡುತ್ತದೆ. ಈ ಮಾರಣಾಂತಿಕ ವೈರಸ್​ನ ಲಕ್ಷಣಗಳು ಹೀಗಿವೆ.

Nipah Virus: ಮತ್ತೆ ಹೆಚ್ಚಿದ ನಿಫಾ ವೈರಸ್​ ಭೀತಿ; ಈ ರೋಗದ ಲಕ್ಷಣಗಳೇನು?
ನಿಫಾ ವೈರಸ್
Follow us
ಸುಷ್ಮಾ ಚಕ್ರೆ
|

Updated on: Sep 12, 2023 | 7:10 PM

ಕೇರಳದಲ್ಲಿ ಮತ್ತೆ 2 ಶಂಕಿತ ನಿಫಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ತೀವ್ರವಾದ ಜ್ವರದಿಂದ ಬಳಲುತ್ತಿದ್ದ ಇಬ್ಬರು ಸಾವನ್ನಪ್ಪಿದ್ದು, ಅವರಿಗೆ ನಿಫಾ ವೈರಸ್ (Nipah Virus) ತಗುಲಿರುವ ಅನುಮಾನ ವ್ಯಕ್ತವಾಗಿದೆ. ಈ ನಿಫಾ ವೈರಸ್ ಒಂದು ಝೂನೋಟಿಕ್ ವೈರಸ್ ಆಗಿದ್ದು, ಇದರಿಂದ ತೀವ್ರವಾದ ಉಸಿರಾಟ ಮತ್ತು ನರವೈಜ್ಞಾನಿಕ ಕಾಯಿಲೆ ಬರುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ನಿಫಾ ಸೋಂಕು ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಸೋಂಕಾಗಿದೆ. ಇದು ಕಲುಷಿತ ಆಹಾರದ ಮೂಲಕ ಅಥವಾ ನೇರವಾಗಿ ಮನುಷ್ಯರಿಗೆ ಹರಡುತ್ತದೆ.

ನಿಫಾ ವೈರಸ್ ತಗುಲಿದವರ ಪೈಕಿ ಶೇ.40 ರಿಂದ ಶೇ.75 ರಷ್ಟು ಜನರು ಸಾವನ್ನಪ್ಪುತ್ತಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ನಿಫಾ ವೈರಸ್​ಗೆ ಯಾವುದೇ ನಿರ್ದಿಷ್ಟ, ನಿಖರವಾದ ಔಷಧಿಯೂ ಇಲ್ಲ. ಹೀಗಾಗಿ ನಿಫಾ ವೈರಸ್ ಡೆಡ್ಲಿ ವೈರಸ್. ಕೊರೊನಾ ವೈರಸ್​ಗಿಂತ ನಿಫಾ ವೈರಸ್ ಅತಿ ಅಪಾಯಕಾರಿ. ಕೋವಿಡ್​ನಂತೆ ಸಾಂಕ್ರಾಮಿಕವಾಗಿರುವ ನಿಫಾ ವೈರಸ್ ಬಾವಲಿಗಳಿಂದ ಹುಟ್ಟಿಕೊಂಡು ಮನುಷ್ಯರಿಗೆ ಹರಡುತ್ತದೆ. ಇದು ಸಾಮಾನ್ಯವಾಗಿ ಹಂದಿ, ನಾಯಿ, ಕುದುರೆಗಳಿಗೂ ಹರಡುತ್ತದೆ. ಆದರೆ, ಮನುಷ್ಯರಿಗೆ ಹರಡಿದರೆ ಅದು ತೀರಾ ಅಪಾಯಕಾರಿಯಾಗಿರುತ್ತದೆ.

ಇದನ್ನೂ ಓದಿ: ನಿಮ್ಮ ಮೆದುಳಿನ ಆರೋಗ್ಯಕ್ಕೆ ಈ 10 ಅಭ್ಯಾಸಗಳಿಂದ ದೂರವಿರಿ

ನಿಫಾ ವೈರಸ್​ ಲಕ್ಷಣಗಳು:

ನಿಫಾ ವೈರಸ್ ತಗುಲಿರುವುದರ ಸಾಮಾನ್ಯ ಲಕ್ಷಣಗಳೆಂದರೆ, ಅನಾರೋಗ್ಯ, ಜ್ವರ, ಮೈ ಕೈ ನೋವು, ಸ್ನಾಯುಗಳ ನೋವು, ತಲೆನೋವು, ಸುಸ್ತು, ವಾಂತಿ. ನಿಫಾ ವೈರಸ್ ಮನುಷ್ಯರಲ್ಲಿ ಬಹಳ ವೇಗವಾಗಿ ಹರಡುತ್ತದೆ. ನಿಫಾ ವೈರಸ್ ಪ್ರಾಣಿಗಳಿಂದ ಪ್ರಾಣಿಗಳಿಗೆ ಹರಡುತ್ತದೆ. ಅದೇ ರೀತಿ ಪ್ರಾಣಿಗಳಿಂದ ಮನುಷ್ಯರಿಗೂ ಹರಡುತ್ತದೆ. ಬಾವಲಿ, ಹಂದಿ, ಕುರಿ ಸೇರಿದಂತೆ ಸಾಕು ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ. ಬಾವಲಿ ಅಥವಾ ಹಕ್ಕಿಗಳು ಅರ್ಧಂಬರ್ಧ ತಿಂದು ಬಿಟ್ಟ ಹಣ್ಣುಗಳನ್ನು ಸೇವನೆ ಮಾಡುವುದರಿಂದ ನಿಫಾ ವೈರಸ್ ತಗುಲುತ್ತದೆ. ಬಾವಲಿಗಳು ತಿಂದ ಹಣ್ಣುಗಳನ್ನು ಸೇವನೆ ಮಾಡುವುದರಿಂದ ನಿಫಾ ವೈರಸ್ ತಗುಲುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಇದನ್ನೂ ಓದಿ: Nipah Virus: ಕೇರಳದ ಖಾಸಗಿ ಆಸ್ಪತ್ರೆಯಲ್ಲಿ ನಿಫಾ ವೈರಸ್‌ನಿಂದ ಇಬ್ಬರು ಸಾವು, ಸಹಾಯಕ್ಕೆ ಧಾವಿಸಿದ ಕೇಂದ್ರ ಆರೋಗ್ಯ ತಂಡ

ನಿಫಾ ವೈರಸ್ ಮನುಷ್ಯರಿಂದ ಮನುಷ್ಯರಿಗೆ ಹರಡದಂತೆ ತಡೆಯಲು, ನಿಫಾ ವೈರಸ್ ತಗುಲಿದವರಿಂದ ಭೌತಿಕ ಅಂತರ ಕಾಪಾಡಿಕೊಳ್ಳಬೇಕು. ನಿಫಾ ವೈರಸ್ ತಗುಲಿದವರನ್ನು ಭೇಟಿಯಾದ ಬಳಿಕ ಕೈಗಳನ್ನು ತಪ್ಪದೇ ತೊಳೆಯಬೇಕು. ನಿಫಾ ವೈರಸ್ ಹರಡದಂತೆ ತಡೆಯಲು, ನಿಫಾ ವೈರಸ್ ತಗುಲಿರುವ ಪ್ರಾಣಿ, ಪಕ್ಷಿಗಳನ್ನು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಹತ್ಯೆ ಮಾಡಿ ಮಣ್ಣಿನಲ್ಲಿ ಹೂತುಹಾಕಬೇಕು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ