ಕಡಿಮೆ ನೀರು ಕುಡಿಯುತ್ತಿದ್ದೀರಾ? ಆರೋಗ್ಯದಲ್ಲಿನ ಈ ಬದಲಾವಣೆ ಬಗ್ಗೆ ಇರಲಿ ಎಚ್ಚರ

ದೇಹಕ್ಕೆ ಬೇಕಾಗುವಷ್ಟು ನೀರು ಕುಡಿಯದಿರುವುದರಿಂದ ಮಾನವನಿಗೆ ಹೆಚ್ಚಿನ ಕಾಯಿಲೆಗಳು ಬರುತ್ತವೆ ಎಂದು ವೈದ್ಯರು ಹೇಳುತ್ತಾರೆ. ದೇಹವು ಕೇವಲ ಎರಡು ದಿನಗಳವರೆಗೆ ಸಾಕಷ್ಟು ನೀರನ್ನು ತೆಗೆದುಕೊಳ್ಳದಿದ್ದರೆ, ಅದರ ಪ್ರತಿಕ್ರಿಯೆಗಳು ದೇಹದಲ್ಲಿ ಕಾಣಿಸಿಕೊಳ್ಳಲು ಶುರುವಾಗುತ್ತದೆ.

ಕಡಿಮೆ ನೀರು ಕುಡಿಯುತ್ತಿದ್ದೀರಾ? ಆರೋಗ್ಯದಲ್ಲಿನ ಈ ಬದಲಾವಣೆ ಬಗ್ಗೆ ಇರಲಿ ಎಚ್ಚರ
ಸಾಂಕೇತಿಕ ಚಿತ್ರ
Follow us
TV9 Web
| Updated By: preethi shettigar

Updated on: Oct 29, 2021 | 8:46 AM

ಮಾನವನ ಬದುಕಿಗೆ ಗಾಳಿಯಷ್ಟೇ ನೀರು ಕೂಡ ಮುಖ್ಯ. ಆರೋಗ್ಯಕರ ಜೀವನ ನಡೆಸಲು ಸಾಕಷ್ಟು ನೀರು ಕುಡಿಯುವುದು ಅತ್ಯಗತ್ಯ. ದೇಹಕ್ಕೆ ಬೇಕಾಗುವಷ್ಟು ನೀರು ಕುಡಿಯದಿರುವುದರಿಂದ ಮಾನವನಿಗೆ ಹೆಚ್ಚಿನ ಕಾಯಿಲೆಗಳು ಬರುತ್ತವೆ ಎಂದು ವೈದ್ಯರು ಹೇಳುತ್ತಾರೆ. ದೇಹವು ಕೇವಲ ಎರಡು ದಿನಗಳವರೆಗೆ ಸಾಕಷ್ಟು ನೀರನ್ನು ತೆಗೆದುಕೊಳ್ಳದಿದ್ದರೆ, ಅದರ ಪ್ರತಿಕ್ರಿಯೆಗಳು ದೇಹದಲ್ಲಿ ಕಾಣಿಸಿಕೊಳ್ಳಲು ಶುರುವಾಗುತ್ತದೆ. ದಿನನಿತ್ಯ ಸಾಕಷ್ಟು ನೀರು ಕುಡಿಯದಿದ್ದರೆ ದೇಹದಲ್ಲಿ ಏನೆಲ್ಲಾ ಬದಲಾವಣೆಗಳು ಆಗುತ್ತವೆ ಎಂದು ನಿಮಗೆ ತಿಳಿದಿದೆಯೇ? ಅದಕ್ಕೆ ಉತ್ತರ ಇಲ್ಲಿದೆ.

ತಲೆತಿರುಗುವಿಕೆ ದೇಹದಲ್ಲಿ ರಕ್ತ ಪೂರೈಕೆಯನ್ನು ಸರಿಯಾಗಿ ನಿರ್ವಹಿಸುವಲ್ಲಿ ನೀರು ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಅಗತ್ಯವಿರುವಷ್ಟು ನೀರು ಕುಡಿಯದಿದ್ದರೆ ರಕ್ತ ಪೂರೈಕೆಯು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಜತೆಗೆ ರಕ್ತವು ದೇಹದ ಭಾಗಗಳು ಮತ್ತು ಜೀವಕೋಶಗಳಿಗೆ ಸರಿಯಾಗಿ ತಲುಪುವುದಿಲ್ಲ. ಇದರಿಂದ ಆಮ್ಲಜನಕದ ಪೂರೈಕೆಯೂ ಕಡಿಮೆಯಾಗುತ್ತದೆ. ಇದು ತಲೆತಿರುಗುವಿಕೆ ಮತ್ತು ತೀವ್ರ ತಲೆನೋವಿಗೆ ಕಾರಣವಾಗಬಹುದು. ಈ ರೀತಿಯ ಲಕ್ಷಣಗಳು ಕಾಣಿಸಿಕೊಂಡರೆ ನೀವು ಸಾಕಷ್ಟು ನೀರು ಕುಡಿಯುತ್ತಿಲ್ಲ ಎಂದು ಅರ್ಥಮಾಡಿಕೊಳ್ಳಬೇಕು.

ನಿರ್ಜಲೀಕರಣ ದೇಹಕ್ಕೆ ಸಾಕಷ್ಟು ನೀರು ಸಿಗದಿದ್ದರೆ ನಿರ್ಜಲೀಕರಣಕ್ಕೆ ಒಳಗಾಗುತ್ತೇವೆ. ದೇಹವು ಈ ಸ್ಥಿತಿಗೆ ಹೋದರೆ, ತೀವ್ರವಾದ ಹಸಿವು, ತೀವ್ರ ತಲೆನೋವು, ಕಾಲು ಮತ್ತು ತೋಳುಗಳಲ್ಲಿ ನೋವು ಹೀಗೆ ಅನೇಕ ಸಮಸ್ಯೆಗಳು ಎದುರಾಗುತ್ತದೆ.

ಮೂತ್ರದ ಬಣ್ಣದಲ್ಲಿ ಬದಲಾವಣೆ ದಿನನಿತ್ಯ ಕುಡಿಯುವ ನೀರು ಕಡಿಮೆಯಾದರೆ ಮೂತ್ರ ಕಡು ಹಳದಿ ಅಥವಾ ಕಂದು ಬಣ್ಣಕ್ಕೆ ತಿರುಗುತ್ತದೆ. ಅಂತಹ ರೋಗಲಕ್ಷಣವು ಕಾಣಿಸಿಕೊಂಡರೆ, ದೇಹವು ಅಗತ್ಯಕ್ಕಿಂತ ಕಡಿಮೆ ನೀರನ್ನು ತೆಗೆದುಕೊಳ್ಳುತ್ತಿದೆ ಎಂದು ಅರ್ಥ. ಹೀಗಾಗಿ ಇಂತಹ ಸಮಯದಲ್ಲಿ ಎಚ್ಚರಿಕೆಯಿಂದ ಅತಿ ಹೆಚ್ಚು ನೀರು ಕುಡಿಯಿರಿ.

ಮೂಗಿನಲ್ಲಿ ಬ್ಯಾಕ್ಟೀರಿಯಾ ಬೆಳೆಯುತ್ತದೆ ದೇಹವು ಸಾಕಷ್ಟು ದ್ರವವನ್ನು ಪಡೆಯದಿದ್ದರೆ, ಬಾಯಿ ಹೆಚ್ಚಾಗಿ ತೆರೆದಿರುತ್ತದೆ. ಇದರಿಂದ ಮೂಗಿನಲ್ಲಿ ಬ್ಯಾಕ್ಟೀರಿಯಾ ಬೆಳೆಯುತ್ತದೆ. ಪರಿಣಾಮ ಕೆಟ್ಟ ಉಸಿರು ಉಂಟಾಗುತ್ತದೆ ಈ ರೀತಿ ಸಮಸ್ಯೆ ಎದುರಾದರೆ ನೀರು ಹೆಚ್ಚು ಕುಡಿಯಬೇಕು ಎಂದು ಅರ್ಥ.

ದಣಿವು ನೀವು ಬೇಗನೆ ಸುಸ್ತಾಗಿದ್ದರೆ ಮತ್ತು ಬೇಸರಗೊಂಡಿದ್ದರೆ ಅಥವಾ ಒಂದು ಸಣ್ಣ ಕೆಲಸದಿಂದ ನೀವು ತುಂಬಾ ದಣಿದಿದ್ದರೂ ನೀವು ಸಾಕಷ್ಟು ನೀರು ಕುಡಿಯುತ್ತಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು.

ಇದನ್ನೂ ಓದಿ: Drinking Water: ನಿಂತು ನೀರು ಕುಡಿಯುವ ಅಭ್ಯಾಸ ಇದೆಯೇ? ಅಪಾಯದ ಬಗ್ಗೆ ಇರಲಿ ಎಚ್ಚರ

Curry Leaves Tea: ಕರಿಬೇವಿನ ಚಹಾದ ಆಶ್ಚರ್ಯಕರ ಆರೋಗ್ಯ ಪ್ರಯೋಜನಗಳು

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್