AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣಿನಲ್ಲಿರುವ ರಕ್ತನಾಳಗಳ ಆರೋಗ್ಯ ಹೆಚ್ಚಿಸುತ್ತೆ ಈ ಆಹಾರಗಳು

ಮೊದಲು ಮನುಷ್ಯನಿಗೆ ವಯಸ್ಸಾದಂತೆ ಕಣ್ಣಿನ ದೃಷ್ಟಿ ಕ್ಷೀಣಿಸುವುದು ಸಹಜವಾಗಿತ್ತು. ಆದರೆ ಈಗ ಹಾಗಲ್ಲ. ಚಿಕ್ಕ ಮಕ್ಕಳಲ್ಲಿಯೂ ಕಣ್ಣಿಗೆ ಸಂಬಂಧಿಸಿದ ಸಮಸ್ಯೆ ಕಂಡು ಬರುತ್ತದೆ. ಆದರೆ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭವಲ್ಲ ಆಹಾರಕ್ರಮ ಅಷ್ಟು ಅಚ್ಚುಕಟ್ಟಾಗಿ ಇರಬೇಕಾಗುತ್ತದೆ ಆಗ ಮಾತ್ರ ನಿಮ್ಮ ಕಣ್ಣು ಆರೋಗ್ಯವಾಗಿರಲು ಸಾಧ್ಯ. ಅದಲ್ಲದೆ ನಿಯಮಿತ ವ್ಯಾಯಾಮ, ಯುವಿ ವಿಕಿರಣದಿಂದ ಕಣ್ಣುಗಳನ್ನು ರಕ್ಷಿಸಿಕೊಳ್ಳುವುದು ಕೂಡ ಬಹಳ ಮುಖ್ಯವಾಗುತ್ತದೆ ಹಾಗಾದರೆ ಕಣ್ಣಿನ ನರಗಳು ಆರೋಗ್ಯವಾಗಿರಲು ಏನು ಮಾಡಬೇಕು? ಆಹಾರಕ್ರಮ ಹೇಗಿರಬೇಕು ಎಂಬುದನ್ನು ತಿಳಿದುಕೊಳ್ಳಿ.

ಕಣ್ಣಿನಲ್ಲಿರುವ ರಕ್ತನಾಳಗಳ ಆರೋಗ್ಯ ಹೆಚ್ಚಿಸುತ್ತೆ ಈ ಆಹಾರಗಳು
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 16, 2025 | 4:08 PM

ದೇಹದ ಸೂಕ್ಷ್ಮವಾದ ಅಂಗ ನಮ್ಮ ಕಣ್ಣು (Eye). ಹಾಗಾಗಿ ಅದನ್ನು ಹೆಚ್ಚಾಗಿ ಕಾಳಜಿ ವಹಿಸಬೇಕಾಗುತ್ತದೆ. ಅದರಲ್ಲಿಯೂ ನಮ್ಮ ಕಣ್ಣಿನಲ್ಲಿರುವ ಸೂಕ್ಷ್ಮ ರಕ್ತನಾಳಗಳು ರೆಟಿನಾಗೆ ರಕ್ತವನ್ನು ಪೂರೈಸುತ್ತವೆ. ಅವು ನಮ್ಮ ಆರೋಗ್ಯದ ಬಗ್ಗೆ ಕೆಲವು ಸೂಚನೆಗಳನ್ನು ನೀಡುತ್ತದೆ. ಕೆಲವೊಮ್ಮೆ ಅವು ಹೃದ್ರೋಗದ ಎಚ್ಚರಿಕೆಯ ಸಂಕೇತವೂ ಆಗಿರಬಹುದು. ಹಾಗಾಗಿ ಕಣ್ಣು ಮತ್ತು ಹೃದಯ ಇವೆರಡರ ಆರೋಗ್ಯ (Health) ಕಾಪಾಡಿಕೊಳ್ಳಲು ನಮ್ಮ ಜೀವನಶೈಲಿಯಲ್ಲಿ ಕೆಲವು ಆರೋಗ್ಯಕರ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಟಿವಿ, ಮೊಬೈಲ್, ಕಂಪ್ಯೂಟರ್ ನೋಡುವವರ ಸಂಖ್ಯೆ ಹೆಚ್ಚಾಗಿರುವುದರಿದ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭವಾಗಿಲ್ಲ. ಏಕೆಂದರೆ ಕಣ್ಣುಗಳಲ್ಲಿನ ರಕ್ತನಾಳಗಳಿಗೆ ಹಾನಿಯಾದರೆ ದೃಷ್ಟಿ ನಷ್ಟವಾಗಬಹುದು, ರೆಟಿನಾಗೆ ಹಾನಿಯಾಗಬಹುದು. ಇವೆಲ್ಲವೂ ಒಂದಕ್ಕೊಂದು ಬೆಸೆದು ಕೊಂಡಿರುವುದರಿಂದ ಇವುಗಳ ಆರೋಗ್ಯ ಕಾಪಾಡಿಕೊಳ್ಳುವಾಗ ಬಹಳ ಜಾಗೃತೆ ವಹಿಸಬೇಕಾಗುತ್ತದೆ. ಹಾಗಾದರೆ ಕಣ್ಣಿನ ನರಗಳು ಆರೋಗ್ಯವಾಗಿರಲು ಏನು ಮಾಡಬೇಕು? ಆಹಾರಕ್ರಮ ಹೇಗಿರಬೇಕು ಎಂಬುದನ್ನು ತಿಳಿದುಕೊಳ್ಳಿ.

ಮೊದಲು ಮನುಷ್ಯನಿಗೆ ವಯಸ್ಸಾದಂತೆ ಕಣ್ಣಿನ ದೃಷ್ಟಿ ಕ್ಷೀಣಿಸುವುದು ಸಹಜವಾಗಿತ್ತು. ಆದರೆ ಈಗ ಹಾಗಲ್ಲ. ಚಿಕ್ಕ ಮಕ್ಕಳಲ್ಲಿಯೂ ಕಣ್ಣಿಗೆ ಸಂಬಂಧಿಸಿದ ಸಮಸ್ಯೆ ಕಂಡು ಬರುತ್ತದೆ. ಕೆಲವೊಮ್ಮೆ ಮಧುಮೇಹ, ಧೂಮಪಾನ, ಅಧಿಕ ರಕ್ತದೊತ್ತಡ ಮತ್ತು ಅಧಿಕ ಕೊಲೆಸ್ಟ್ರಾಲ್ ಇವೆಲ್ಲವೂ ಕಣ್ಣಿನ ಮೇಲೆ ಪ್ರಭಾವ ಬೀರುತ್ತದೆ. ಹಾಗಾಗಿ ಆದಷ್ಟು ಆರೋಗ್ಯಕರ ಅಭ್ಯಾಸ ರೂಢಿಸಿಕೊಳ್ಳುವುದು ಬಹಳ ಅವಶ್ಯವಾಗಿದೆ. ಅದರಲ್ಲಿಯೂ ಕಣ್ಣಿನಲ್ಲಿರುವ ರಕ್ತನಾಳಗಳು ಬಹಳ ಸೂಕ್ಷ್ಮವಾಗಿರುವುದರಿಂದ ಅವುಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಬೇಕು. ಇವು ನಮ್ಮ ಹೃದಯದ ಆರೋಗ್ಯಕ್ಕೆ ಹಿಡಿದಿರುವ ಕನ್ನಡಿಯಾಗಿರುವುದರಿಂದ ಹೃದ್ರೋಗ ಮತ್ತು ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಇತರ ವೈದ್ಯಕೀಯ ಪರಿಸ್ಥಿತಿಗಳು ಕಣ್ಣುಗಳಲ್ಲಿನ ರಕ್ತನಾಳಗಳನ್ನು ಹಾನಿಗೊಳಿಸುತ್ತದೆ. ಹಾಗಾಗಿ ಇವೆಲ್ಲವೂ ಬರದಂತೆ ತಡೆಯಬೇಕು. ಆಗ ಮಾತ್ರ ಕಣ್ಣಿನ ಆರೋಗ್ಯ ಚೆನ್ನಾಗಿರಲು ಸಾಧ್ಯ. ಹಾಗಾಗಿ ಧೂಮಪಾನ ಮಾಡುವುದನ್ನು ನಿಲ್ಲಿಸಿ, ಆರೋಗ್ಯಕರ, ಸಮತೋಲಿತ ಆಹಾರವನ್ನು ಸೇವನೆ ಮಾಡಿ, ದೇಹದ ತೂಕ ಆರೋಗ್ಯವಾಗಿರುವಂತೆ ನೋಡಿಕೊಳ್ಳಿ. ಇದೆಲ್ಲದರ ಜೊತೆಗೆ ಇಲ್ಲಿ ನೀಡಿರುವ ಕೆಲವು ಆಹಾರಗಳ ಸೇವನೆ ಮಾಡಿ.

ಇದನ್ನೂ ಓದಿ: ಬೇಸಿಗೆಯಲ್ಲೂ ಬೆಳ್ಳುಳ್ಳಿ ತಿಂತೀರಾ ಜೋಕೆ! ಕಾರಣ ತಿಳಿದರೆ ಬೆಚ್ಚಿ ಬೀಳ್ತಿರಾ

ಇದನ್ನೂ ಓದಿ
Image
ಬೇಸಿಗೆಯಲ್ಲೂ ಬೆಳ್ಳುಳ್ಳಿ ತಿಂತೀರಾ ಜೋಕೆ! ಕಾರಣ ತಿಳಿದರೆ ಬೆಚ್ಚಿ ಬೀಳ್ತಿರಾ
Image
ರೋಗ ನಿರೋಧಕ ಶಕ್ತಿ ಕಡಿಮೆ ಆಗಿರುವುದು ಹೇಗೆ ತಿಳಿಯುತ್ತದೆ?
Image
ಕೀಲು ನೋವಿದ್ದರೆ ಈ ರೀತಿಯ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡಿ
Image
ಮಗುವನ್ನು ಬಟ್ಟೆಯಲ್ಲಿ ಸುತ್ತಿ ಮಲಗಿಸಿದರೆ ಈ ಸಮಸ್ಯೆ ಬರುವುದಿಲ್ಲ

ವಿಟಮಿನ್ ಎ

ನಿಮ್ಮ ಆಹಾರದಲ್ಲಿ ವಿಟಮಿನ್ ಎ ಸಮೃದ್ದವಾಗಿರುವ ಆಹಾರಗಳನ್ನು ಸೇವನೆ ಮಾಡಬೇಕು. ಬೀಫ್, ಮೀನಿನೆಣ್ಣೆ, ಹಾಲು, ಬೆಣ್ಣೆ ಮತ್ತು ಮೊಟ್ಟೆಗಳಲ್ಲಿ ಇವು ಉತ್ತಮ ಪ್ರಮಾಣದಲ್ಲಿರುತ್ತದೆ. ಜೊತೆಗೆ ಗೆಣಸು, ದೊಣ್ಣೆ ಮೆಣಸು, ಕ್ಯಾರೆಟ್, ಬಸಲೆ ಸೊಪ್ಪು, ಪಾಲಕ್ ಸೊಪ್ಪುಗಳಲ್ಲಿಯೂ ಈ ಅಂಶ ನಿಮಗೆ ಹೇರಳವಾಗಿ ಸಿಗುತ್ತದೆ.

ವಿಟಮಿನ್ ಸಿ

ಈ ಅಂಶಗಳು ಹೆಚ್ಚಾಗಿರುವ ಆಹಾರಗಳನ್ನು ಸೇವನೆ ಮಾಡುವುದರಿಂದ ಕಣ್ಣುಗಳಲ್ಲಿನ ರಕ್ತನಾಳಗಳು ಆರೋಗ್ಯವಾಗಿರುತ್ತದೆ. ಪೇರಳೆ, ಕಿವಿ, ಕಿತ್ತಳೆ, ಟೊಮೆಟೊ, ಸ್ಟ್ರಾಬೆರಿ, ಹಸಿಮೆಣಸು ಮೊದಲಾದವು ವಿಟಮಿನ್ ಸಿ ಯಿಂದ ಸಮೃದ್ಧವಾಗಿದ್ದು ನಿಮ್ಮ ಆಹಾರದಲ್ಲಿ ಇವುಗಳ ಸೇರ್ಪಡೆ ಮಾಡಬಹುದು.

ವಿಟಮಿನ್ ಇ

ಕಣ್ಣುಗಳ ಆರೋಗ್ಯಕ್ಕೆ ಅತ್ಯುತ್ತಮವಾದ ಇನ್ನೊಂದು ಪೋಷಕಾಂಶವೆಂದರೆ ಅದು ವಿಟಮಿನ್ ಇ. ಇದು ದೇಹದಲ್ಲಿ ಕೆಂಪುರಕ್ತಕಣಗಳ ಉತ್ಪತ್ತಿಗೆ ಅಗತ್ಯವಾಗಿದೆ ಮತ್ತು ಉತ್ತಮ ಆಂಟಿ ಆಕ್ಸಿಡೆಂಟ್ ಆಗಿದೆ. ಬಾದಾಮಿ, ಶೇಂಗಾ, ಬೆಣ್ಣೆಹಣ್ಣು ಮತ್ತು ಆಲಿವ್ ಎಣ್ಣೆ, ಧಾನ್ಯಗಳು, ಬಸಲೆ ಸೊಪ್ಪು ಮತ್ತು ಪಾಲಕ್ ನಲ್ಲಿ ಈ ಅಂಶಗಳು ಹೇರಳವಾಗಿ ಸಿಗುತ್ತದೆ.

ತರಕಾರಿಗಳ ಸೇವನೆ ಮಾಡಿ

ಕಣ್ಣುಗಳ ದೃಷ್ಟಿ ಉತ್ತಮವಾಗಿರಲು ತರಕಾರಿಗಳ ಸೇವನೆ ಮಾಡಲೇ ಬೇಕು ಹಾಗಾಗಿ ಪಾಲಕ್, ಕ್ಯಾರೆಟ್, ದೊಣ್ಣೆಮೆಣಸು, ಟೊಮೆಟೊ, ಸಿಹಿಗೆಣಸು, ಬ್ರೋಕೋಲಿ, ಕಲ್ಲಂಗಡಿ ಈ ರೀತಿ ವಿಧವಿಧವಾದ ತರಕಾರಿಗಳ ಸೇವನೆ ಮಾಡಿ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಿ.

ಕಣ್ಣಿನ ನರಗಳು ಆರೋಗ್ಯವಾಗಿರಲು ಈ ರೀತಿ ಮಾಡಿ

ನಮ್ಮ ಕಣ್ಣಿನ ನರಗಳ ಆರೋಗ್ಯ ಕಾಪಾಡಿಕೊಳ್ಳಲು, ವಿಟಮಿನ್ ಎ, ಸಿ, ಇ, ಸತು ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿರುವ ಸಮತೋಲಿತ ಆಹಾರಗಳನ್ನು ಸೇವಿಸಿ. ಅದರ ಜೊತೆಗೆ ನಿಯಮಿತ ವ್ಯಾಯಾಮ, ಯುವಿ ವಿಕಿರಣದಿಂದ ಕಣ್ಣುಗಳನ್ನು ರಕ್ಷಿಸುವುದು ಕೂಡ ಮುಖ್ಯವಾಗುತ್ತದೆ. ಧೂಮಪಾನವನ್ನು ತ್ಯಜಿಸುವುದು ಸಹ ಕಣ್ಣಿನ ನರಗಳ ಆರೋಗ್ಯಕ್ಕೆ ಒಳ್ಳೆಯದು. ಸಂಭಾವ್ಯ ಸಮಸ್ಯೆಗಳನ್ನು ಮುಂಚಿತವಾಗಿ ಪತ್ತೆಹಚ್ಚಲು ನಿಯಮಿತ ಕಣ್ಣಿನ ಪರೀಕ್ಷೆಗಳನ್ನು ಮಾಡುವುದು ಕೂಡ ಒಳ್ಳೆಯದು.

ನಿಮ್ಮ ಕಣ್ಣುಗಳಿಗೆ ವಿಶ್ರಾಂತಿ ನೀಡಿ

ದೀರ್ಘಕಾಲ ಪರದೆಗಳನ್ನು ನೋಡಿದಾಗ ಕಣ್ಣುಗಳಿಗೆ ವಿಶ್ರಾಂತಿ ನೀಡಿ. ಪ್ರತಿ 20 ನಿಮಿಷಗಳಿಗೊಮ್ಮೆ 20 ಸೆಕೆಂಡುಗಳ ಕಾಲ 20 ಅಡಿ ದೂರದಲ್ಲಿರುವ ಏನನ್ನಾದರೂ ನೋಡಲು ವಿರಾಮ ತೆಗೆದುಕೊಳ್ಳಿ. ಇದರಿಂದ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬಹುದು.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ