AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vitamin deficiency : ಹಲ್ಲು ಚೂರು ಚೂರಾಗಿ ಬೀಳುತ್ತಾ! ಯಾವ ವಿಟಮಿನ್ ಕೊರತೆಯಾಗಿದೆ ತಿಳಿದುಕೊಳ್ಳಿ

ಮುತ್ತುಗಳಂತೆ ಹೊಳೆಯುವ ಹಲ್ಲುಗಳು ನಿಮ್ಮ ನಗುವನ್ನು ಮತ್ತಷ್ಟು ಸುಂದರವಾಗಿಸುತ್ತದೆ. ಜೊತೆಗೆ ಅವು ನಿಮ್ಮ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸುತ್ತವೆ. ಆದರೆ ಅದೇ ಹಲ್ಲು ಹಳದಿ ಬಣ್ಣಕ್ಕೆ ತಿರುಗಲು ಪ್ರಾರಂಭಿಸಿದಾಗ, ದುರ್ಬಲಗೊಳ್ಳಲು ಅಥವಾ ಚೂರು ಚೂರಾಗಲು ಆರಂಭವಾದಾಗ ಅವುಗಳ ಅಂದ ಹದಗೆಡಲು ಪ್ರಾರಂಭಿಸಿದಾಗ ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಜೀವಸತ್ವಗಳ ಕೊರತೆಯಾದಾಗ ಮಾತ್ರ ಈ ರೀತಿಯ ಲಕ್ಷಣಗಳು ಕಂಡುಬರುತ್ತದೆ. ಹಾಗಾದರೆ ಯಾವ ವಿಟಮಿನ್ ಕೊರತೆಯು ನಿಮ್ಮ ಬಾಯಿಯ ಆರೋಗ್ಯಕ್ಕೆ ಹಾನಿ ಮಾಡುತ್ತದೆ? ಇದನ್ನು ತಡೆಯುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಿ.

Vitamin deficiency : ಹಲ್ಲು ಚೂರು ಚೂರಾಗಿ ಬೀಳುತ್ತಾ! ಯಾವ ವಿಟಮಿನ್ ಕೊರತೆಯಾಗಿದೆ ತಿಳಿದುಕೊಳ್ಳಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Feb 28, 2025 | 10:23 AM

Share

ಮುಖದ ಸೌಂದರ್ಯ ಹೆಚ್ಚಿಸುವಲ್ಲಿ ಹಲ್ಲುಗಳ ಪಾತ್ರ ಬಹಳ ಮುಖ್ಯವಾದದ್ದು. ಮುತ್ತುಗಳಂತೆ ಹೊಳೆಯುವ ಹಲ್ಲುಗಳು ನಿಮ್ಮ ನಗುವನ್ನು ಮತ್ತಷ್ಟು ಸುಂದರವಾಗಿಸುತ್ತದೆ. ಜೊತೆಗೆ ಅವು ನಿಮ್ಮ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸುತ್ತವೆ. ಆದರೆ ಅದೇ ಹಲ್ಲು ಹಳದಿ ಬಣ್ಣಕ್ಕೆ ತಿರುಗಲು ಪ್ರಾರಂಭಿಸಿದಾಗ, ದುರ್ಬಲಗೊಳ್ಳಲು ಅಥವಾ ಚೂರು ಚೂರಾಗಲು ಆರಂಭವಾದಾಗ ಅವುಗಳ ಅಂದ ಹದಗೆಡಲು ಪ್ರಾರಂಭಿಸಿದಾಗ ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಜೀವಸತ್ವಗಳ ಕೊರತೆಯಾದಾಗ ಮಾತ್ರ ಈ ರೀತಿಯ ಲಕ್ಷಣಗಳು ಕಂಡುಬರುತ್ತದೆ. ಹಾಗಾದರೆ ಯಾವ ವಿಟಮಿನ್ ಕೊರತೆಯು ನಿಮ್ಮ ಬಾಯಿಯ ಆರೋಗ್ಯಕ್ಕೆ ಹಾನಿ ಮಾಡುತ್ತದೆ? ಇದನ್ನು ತಡೆಯುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಿ.

ಯಾವ ವಿಟಮಿನ್ ಕೊರತೆಯು ಹಲ್ಲುಗಳನ್ನು ದುರ್ಬಲಗೊಳಿಸುತ್ತದೆ?

ನಿಮ್ಮ ಹಲ್ಲುಗಳನ್ನು ಬಲಪಡಿಸುವಲ್ಲಿ ವಿಟಮಿನ್ ಡಿ ಪ್ರಮುಖ ಪಾತ್ರ ವಹಿಸುತ್ತದೆ. ಇದು ನಿಮ್ಮ ದೇಹದಲ್ಲಿ ಕ್ಯಾಲ್ಸಿಯಂ ಹೀರಿಕೊಳ್ಳುವಿಕೆಯನ್ನು ಸುಧಾರಿಸುತ್ತದೆ, ಇದು ಬಾಯಿಯ ಆರೋಗ್ಯಕ್ಕೆ ಮಾತ್ರವಲ್ಲದೆ ಮೂಳೆಗಳನ್ನು ಬಲಪಡಿಸಲು ಸಹ ಅಗತ್ಯವಾಗಿದೆ. ವಿಟಮಿನ್ ಡಿ ಕೊರತೆಯು ಹಲ್ಲುಗಳು ತುಂಡು ತುಂಡಾಗಲು ಕಾರಣವಾಗಬಹುದು. ಹೆಚ್ಚುವರಿಯಾಗಿ, ಮೂಳೆ ಮುರಿತದ ಸಾಧ್ಯತೆಗಳು ಸಹ ಹೆಚ್ಚಾಬಹುದು.

ವಿಟಮಿನ್ ಡಿ ಕೊರತೆಯನ್ನು ನಿವಾರಿಸುವುದು ಹೇಗೆ?

ಇದರ ಕೊರತೆಯನ್ನು ನಿವಾರಿಸಲು ನೈಸರ್ಗಿಕ ಮೂಲವೆಂದರೆ ಸೂರ್ಯನ ಬೆಳಕು. ನೀವು ಬೆಳಿಗ್ಗೆ ಸ್ವಲ್ಪ ಸಮಯದ ವರೆಗೆ ಸೂರ್ಯನ ಕಿರಣಗಳು ಬೀಳುವಲ್ಲಿ ನಿಂತುಕೊಳ್ಳಬೇಕು. ಈ ರೀತಿ ಮಾಡಿದರೆ ಸಾಕಷ್ಟು ಪ್ರಮಾಣದಲ್ಲಿ ವಿಟಮಿನ್ ಡಿ ಪಡೆಯಬಹುದು. ಚ್ಚುವರಿಯಾಗಿ, ವಿಟಮಿನ್ ಡಿ ಕೊರತೆಯನ್ನು ಸರಿದೂಗಿಸಲು ನೀವು ಅಗತ್ಯ ಆಹಾರ ಬದಲಾವಣೆಗಳನ್ನು ಮಾಡಬಹುದು. ಕೊಬ್ಬಿನ ಮೀನು, ಮೊಟ್ಟೆಯ ಹಳದಿ ಲೋಳೆ, ಬಲವರ್ಧಿತ ಹಾಲು ಮತ್ತು ಮೊಸರಿನಂತಹ ಆಹಾರಗಳು ವಿಟಮಿನ್ ಡಿ ಅನ್ನು ಮರುಪೂರಣ ಮಾಡಲು ಸಹಾಯ ಮಾಡುತ್ತದೆ. ವಿಟಮಿನ್ ಡಿ ಕೊರತೆಯನ್ನು ನಿವಾರಿಸಲು ನೀವು ವೈದ್ಯರ ಸಲಹೆಯ ಮೇರೆಗೆ ಪೂರಕಗಳನ್ನು ಸಹ ತೆಗೆದುಕೊಳ್ಳಬಹುದು.

ಇದನ್ನೂ ಓದಿ
Image
ಇಡ್ಲಿ ಬಳಿಕ ಬಟಾಣಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಆರೋಗ್ಯ ಇಲಾಖೆ
Image
ಫ್ಲೂ ಲಸಿಕೆ ಪಡೆದು ಫ್ಲೂನಿಂದ ದೂರವಿರಿ ಮತ್ತು ಆರೋಗ್ಯವಾಗಿರಿ
Image
ಕಿವಿಯಲ್ಲಿ ಗಿಜಿಗುಡುವ ಶಬ್ದ ಯಾವಾಗಲೂ ಕೇಳುತ್ತಾ?
Image
ಪ್ರಧಾನಿ ಮೋದಿಗೆ ಇಷ್ಟ ಮಖಾನಾ, ಇದರಿಂದ ಬೊಜ್ಜಿನ ನಿಯಂತ್ರಣ ಖಂಡಿತ

ಇದನ್ನೂ ಓದಿ: ಇಡ್ಲಿ ಬಳಿಕ ಬಟಾಣಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಆರೋಗ್ಯ ಇಲಾಖೆ

ನಿಮ್ಮ ಹಲ್ಲುಗಳ ಆರೈಕೆಗೆ ಮಾಡಲು ಇಲ್ಲಿದೆ ಸಲಹೆಗಳು;

*ಉತ್ತಮ ಹಲ್ಲಿನ ಆರೋಗ್ಯ ಕಾಪಾಡಿಕೊಳ್ಳಲು ಹಲ್ಲನ್ನು ಉಜ್ಜಲು ಮೃದುವಾದ ಟೂತ್ ಬ್ರಷ್ ಬಳಸಿ.

*ಬೆಳಿಗ್ಗೆ ಮತ್ತು ರಾತ್ರಿ ಮಲಗುವ ಮೊದಲು ಬ್ರಷ್ ಮಾಡುವುದನ್ನು ಮರೆಯಬೇಡಿ.

*ಫ್ಲೋರೈಡ್ ಟೂತ್ ಪೇಸ್ಟ್ ಬಳಸಿ.

*ಪ್ರತಿ 3- 4 ತಿಂಗಳಿಗೊಮ್ಮೆ ನಿಮ್ಮ ಟೂತ್ ಬ್ರಷ್ ಅನ್ನು ಬದಲಾಯಿಸಲು ಮರೆಯದಿರಿ.

ವಿಶೇಷವಾಗಿ ಚಳಿಗಾಲದ ಸಮಯದಲ್ಲಿ ಅಥವಾ ವಾತಾವರಣದಲ್ಲಿ ಪದೇ ಪದೇ ಬದಲಾವಣೆಗಳು ಆಗುತ್ತಿದ್ದಾಗ, ವಿಟಮಿನ್ ಡಿ ಕೊರತೆಯ ಅಪಾಯವು ಹೆಚ್ಚಾಗುತ್ತದೆ. ಏಕೆಂದರೆ ಆ ಸಮಯದಲ್ಲಿ ಸೂರ್ಯನ ಬೆಳಕು ಸರಿಯಾಗಿ ಸಿಗುವುದಿಲ್ಲ ಅದರಲ್ಲಿಯೂ ಬೆಂಗಳೂರಿನಲ್ಲಿ ಹೆಚ್ಚಾಗಿ ತಂಪಿನ ವಾತಾವರಣ ಇರುವುದರಿಂದ ಸೂರ್ಯನ ಬೆಳಕು ಅಷ್ಟಾಗಿ ಸಿಗುವುದಿಲ್ಲ. ಇಂತಹ ಸಂದರ್ಭಗಳಲ್ಲಿ, ನಿಯಮಿತ ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳುವ ಮೂಲಕ ನಿಮ್ಮ ದೇಹದಲ್ಲಿನ ವಿಟಮಿನ್ ಮಟ್ಟವನ್ನು ಟ್ರ್ಯಾಕ್ ಮಾಡಬಹುದು ಜೊತೆಗೆ ಆರೋಗ್ಯವಾಗಿರಲು ಅದಕ್ಕೆ ಅನುಗುಣವಾಗಿ ಆಹಾರ ಬದಲಾವಣೆಗಳನ್ನು ಮಾಡಿಕೊಳ್ಳಬಹುದು.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ