ಆರೋಗ್ಯವಾಗಿರಲು ಬಾಯಿಯನ್ನು ಸ್ವಚ್ಛವಾಗಿರಿಸಿಕೊಳ್ಳುವುದು ಬಹಳ ಮುಖ್ಯ. ದಿನಕ್ಕೆ ಎರಡು ಬಾರಿ ಹಲ್ಲುಜ್ಜುವುದು, ಆಹಾರ ಸೇವಿಸಿದ ಬಳಿಕ ಬಾಯಿ ಮುಕ್ಕಳಿಸುವ ಅಭ್ಯಾಸಗಳು ನಿಮ್ಮ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹಲ್ಲುಗಳು, ನಾಲಿಗೆಯನ್ನು ಪ್ರತಿನಿತ್ಯ ಸ್ವಚ್ಛವಾಗಿಡುವ ಮೂಲಕ ನಿಮ್ಮ ಆರೋಗ್ಯದ ಅಪಾಯ ಕಡಿಮೆ.
ಬಾಯಿಯ ಸ್ವಚ್ಛತೆಯ ಬಗ್ಗೆ ಹೆಚ್ಚು ಗಮನ ನೀಡದಿದ್ದರೆ ಒಸಡು ಸವೆಯುವುದು ಜತೆಗೆ ಸೋಂಕಿನ ಅಪಾಯ ಹೆಚ್ಚುತ್ತದೆ. ಹಲ್ಲುಗಳಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲಾರಂಭಿಸುತ್ತದೆ. ಇದಕ್ಕೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡದಿದ್ದಲ್ಲಿ ಊತ ಮತ್ತು ನೋವಿನ ಸಮಸ್ಯೆಗಳನ್ನು ಎದುರಿಸಬೇಕಾದೀತು.
ನಿಯಮಿತವಾಗಿ ದಂತ ತಪಾಸಣೆ ಮಾಡಿಸಿಕೊಳ್ಳುವುದರಿಂದ ಹಲ್ಲು ಹಾಳಾಗುವುದಿಲ್ಲ. ಹಲ್ಲಿನಲ್ಲಿ ಒಟ್ಟೆ ಬೀಳುವುದು ಕಡಿಮೆಯಾಗುತ್ತದೆ. ಬ್ಯಾಕ್ಟೀರಿಯಾಗಳಿಂದ ಆರೋಗ್ಯ ಕೆಡುವ ಸಮಸ್ಯೆಯಿಂದ ಪರಿಹಾರ ಪಡೆಯಬಹುದಾಗಿದೆ. ಹಲ್ಲು ಪ್ರತಿನಿತ್ಯ ಹೊಳೆಯುತ್ತಿರುವುದರಿಂದ ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬಹುದು.
ಬಾಯಿಯನ್ನು ಸ್ವಚ್ಛವಾಗಿರಿಸಿಕೊಳ್ಳುವುದರಿಂದ ಒಸಡು ಸೋಂಕಿನ ಅಪಾಯವನ್ನು ಕಡಿಮೆ ಮಾಡಿಕೊಳ್ಳಬಹುದು. ಬಾಯಿಯಲ್ಲಿರುವ ಬ್ಯಾಕ್ಟೀರಿಯಾಗಳನ್ನು ಸಮಯಕ್ಕೆ ಸರಿಯಾಗಿ ತೆಗೆಯದಿದ್ದರೆ ಸಮಸ್ಯೆ ಗಂಭೀರ ಸ್ಥಿತಿಗೆ ಕಾರಣವಾಗಬಹುದು. ಹಾಗಾಗಿ ಆರೋಗ್ಯದ ಬಗ್ಗೆ ಕಾಳಜಿವಹಿಸುತ್ತಿರುವಾಗ ನಿಮ್ಮ ಬಾಯಿಯ ಸ್ವಚ್ಛತೆ ಕಾಪಾಡಿಕೊಳ್ಳುವಲ್ಲಿ ಹೆಚ್ಚು ಗಮನವಹಿಸಿ.
ಇದನ್ನೂ ಓದಿ:
Health Tips: ಶೀತ, ಕೆಮ್ಮಿನ ಸಮಸ್ಯೆಗಳ ಪರಿಹಾರಕ್ಕಾಗಿ ಸಲಹೆಗಳು ಇಲ್ಲಿವೆ
Health Tips: ಆಫೀಸು, ಮನೆ ಈ ಎಲ್ಲವುಗಳ ಒತ್ತಡದಿಂದ ಬಳಲುತ್ತಿದ್ದೀರಾ?; ಹೊರಬರಲು ಇಲ್ಲಿವೆ ಸುಲಭ ವಿಧಾನಗಳು
Published On - 1:50 pm, Sun, 3 October 21