AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Orange Benefits: ಚಳಿಗಾಲದಲ್ಲಿ ಕಿತ್ತಳೆ ಹಣ್ಣು ಸೇವಿಸುವ ಮುನ್ನ, ಆರೋಗ್ಯ ಪ್ರಯೋಜನ ತಿಳಿಯಿರಿ

ಚಳಿಗಾಲ ಆರಂಭವಾಗುತ್ತಿದ್ದಂತೆ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕಾಗುತ್ತದೆ. ಪೌಷ್ಟಿಕಾಂಶಯುಕ್ತ ಆಹಾರ ಹಾಗೂ ಈ ಋತುವಿನಲ್ಲಿ ಸಿಗುವ ಹಣ್ಣು ಹಾಗೂ ತರಕಾರಿಯನ್ನು ಹೆಚ್ಚು ಸೇವಿಸಬೇಕು. ಈ ಚಳಿಗಾಲದಲ್ಲಿ ಹೇರಳವಾಗಿ ಸಿಗುವ ಈ ಕಿತ್ತಳೆ ಹಣ್ಣನ್ನು ಸೇವಿಸುವುದು ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಕಾರಿಯಾಗಿದೆ. ಈ ಹಣ್ಣು ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡಿ ದೇಹವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾದ್ರೆ ಚಳಿಗಾಲದಲ್ಲಿ ಕಿತ್ತಳೆ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭಗಳಿವೆ? ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Orange Benefits: ಚಳಿಗಾಲದಲ್ಲಿ ಕಿತ್ತಳೆ ಹಣ್ಣು ಸೇವಿಸುವ ಮುನ್ನ, ಆರೋಗ್ಯ ಪ್ರಯೋಜನ ತಿಳಿಯಿರಿ
ಕಿತ್ತಳೆ ಹಣ್ಣು
ಸಾಯಿನಂದಾ
| Edited By: |

Updated on:Dec 10, 2024 | 2:21 PM

Share

ಚಳಿಗಾಲದಲ್ಲಿ ತಂಪಾದ ವಾತಾವರಣವಿರುವ ಕಾರಣ, ಈ ಋತುವಿನ ಸೀಸನಲ್ ಫ್ರೂಟ್ಸ್ ಆಗಿರುವ ಕಿತ್ತಳೆ ಹಣ್ಣನ್ನು ಸೇವಿಸಲು ಹಿಂದೇಟು ಹಾಕುವವರೇ ಹೆಚ್ಚು. ಕಿತ್ತಳೆ ಹಣ್ಣು ತಿನ್ನುವುದರಿಂದ ಶೀತ, ನೆಗಡಿಯಾಗುತ್ತದೆ ಎನ್ನುವ ಭಯವು ಅನೇಕರಲ್ಲಿದೆ. ಈ ಹಣ್ಣಿನಲ್ಲಿ ಪೌಷ್ಟಿಕಾಂಶಗಳು ಹೇರಳವಾಗಿದ್ದು, ಇದನ್ನು ಚಳಿಗಾಲದಲ್ಲಿ ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಹೀಗಾಗಿ ಆರೋಗ್ಯ ತಜ್ಞರು ಈ ಕಿತ್ತಳೆ ಹಣ್ಣು ಸೇವಿಸಿ ಎನ್ನುವ ಸಲಹೆ ನೀಡುತ್ತಾರೆ.

  • ತೂಕ ಇಳಿಕೆಗೆ ಸಹಕಾರಿಯಾಗಿದೆ : ಎಲ್ಲರೂ ಇಷ್ಟ ಪಡುವ ಈ ಕಿತ್ತಳೆ ಹಣ್ಣಿನಲ್ಲಿ ಫೈಬರ್ ಅಂಶವು ಹೇರಳವಾಗಿದೆ. ಈ ಹಣ್ಣಿನಲ್ಲಿರುವ ಫೈಬರ್ ಗಳು ಬೇಗನೆ ಹಸಿವಾಗುವುದನ್ನು ತಡೆಯುತ್ತದೆ. ಜೀರ್ಣಾಂಗ ವ್ಯವಸ್ಥೆ ಸುಧಾರಿಸಿ, ತೂಕ ಇಳಿಸಲು ಸಹಕಾರಿಯಾಗಿದೆ.
  • ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ : ಚಳಿಗಾಲದಲ್ಲಿ ವಾತಾವರಣವು ಶೀತವಾಗಿರುವುದರಿಂದ ಆರೋಗ್ಯ ಸಮಸ್ಯೆಗಳು ಕಾಡುವುದೇ ಹೆಚ್ಚು. ಈ ಕಾಯಿಲೆಯ ವಿರುದ್ಧ ಹೋರಾಡಲು ಬಲವಾದ ರೋಗನಿರೋಧಕ ಶಕ್ತಿಯನ್ನು ಹೊಂದಿರುವುದು ಅಗತ್ಯ. ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಅಂಶವು ಸಮೃದ್ಧವಾಗಿದ್ದು, ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಆರೋಗ್ಯವನ್ನು ಕಾಪಾಡುತ್ತದೆ.
  • ಹೊಟ್ಟೆಯ ಆರೋಗ್ಯ ಕಾಪಾಡುತ್ತದೆ : ಕಿತ್ತಳೆ ಫೈಬರ್ ನಿಂದ ಸಮೃದ್ಧವಾಗಿದ್ದು, ಇದು ಕರುಳನ್ನು ಚೆನ್ನಾಗಿ ಸ್ವಚ್ಛಗೊಳಿಸುತ್ತದೆ. ಜೀರ್ಣ ಕ್ರಿಯೆಯನ್ನು ಸುಧಾರಿಸಿ, ಮಲಬದ್ಧತೆ ಸಮಸ್ಯೆಯು ಬರದಂತೆ ನೋಡಿಕೊಳ್ಳುತ್ತದೆ.
  • ಚರ್ಮ ಹಾಗೂ ತ್ವಚೆಯ ಆರೋಗ್ಯಕ್ಕೂ ಸಹಕಾರಿ : ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಇ ಅಂಶಗಳು ಸಮೃದ್ಧವಾಗಿದೆ. ಇದರ ನಿಯಮಿತ ಸೇವನೆಯು ಚರ್ಮವನ್ನು ಸ್ವಚ್ಛಗೊಳಿಸಿ, ಮುಖದ ಮೇಲಿನ ಸುಕ್ಕುಗಳನ್ನು ಕಡಿಮೆ ಮಾಡುತ್ತದೆ. ಅದಲ್ಲದೇ, ಚರ್ಮದ ಕೋಶಗಳ ಪುನರುತ್ಪಾದಿಸಿ, ಕಪ್ಪು ಚುಕ್ಕೆಗಳು ಮತ್ತು ಕಲೆಗಳಿಂದ ಉಂಟಾಗುವ ಗುರುತುಗಳನ್ನು ನಿವಾರಿಸುತ್ತದೆ.
  • ಹೃದಯದ ಆರೋಗ್ಯ ಕಾಪಾಡುತ್ತದೆ : ಪೊಟ್ಯಾಶಿಯಮ್ ಮಟ್ಟ ಕಡಿಮೆಯಿದ್ದಾಗ ಹೃದಯ ಸಮಸ್ಯೆಗಳು ಬರುವ ಸಾಧ್ಯತೆಯೇ ಹೆಚ್ಚು. ಆದರೆ ಈ ಕಿತ್ತಳೆಯಲ್ಲಿ ಪೊಟ್ಯಾಶಿಯಮ್ ಅಂಶವು ಹೇರಳವಾಗಿದ್ದು, ಹೀಗಾಗಿ ಇದರ ನಿಯಮಿತ ಸೇವನೆಯು ಹೃದಯರಕ್ತನಾಳದ ವ್ಯವಸ್ಥೆಯನ್ನು ಬಲ ಪಡಿಸಲು ಹಾಗೂ ಸರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುತ್ತದೆ.
  • ಕಿಡ್ನಿ ಕಲ್ಲುಗಳ ಅಪಾಯವನ್ನು ಕಡಿಮೆ ಮಾಡುತ್ತದೆ : ಕಿತ್ತಳೆ ಹಣ್ಣಿನಲ್ಲಿರುವ ಸಿಟ್ರಿಕ್ ಆಮ್ಲವು ಮೂತ್ರಪಿಂಡದ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ. ಇದು ಮೂತ್ರದಲ್ಲಿ ಸಿಟ್ರೆಟ್ ಮಟ್ಟವನ್ನು ಹೆಚ್ಚಿಸಿ, ಕಿಡ್ನಿಯಲ್ಲಿ ಕಲ್ಲು ಉಂಟಾಗುವುದನ್ನು ತಡೆಯುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:19 pm, Tue, 10 December 24

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು