ಇತ್ತೀಚಿನ ವರ್ಷಗಳಲ್ಲಿ ಅನೇಕ ಜನರು ಮೂತ್ರಪಿಂಡದ ಕಲ್ಲುಗಳಿಂದ ಬಳಲುತ್ತಿದ್ದಾರೆ. ಇದಕ್ಕೆ ಹಲವಾರು ಕಾರಣಗಳು ಇರಬಹುದು. ಆದರೆ ಇದು ಪದೇ ಪದೇ ಕಾಣಿಸಿಕೊಳ್ಳುತ್ತಿದ್ದರೆ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಬಹಳ ಮುಖ್ಯವಾಗುತ್ತದೆ. ಇದಕ್ಕೆ ನಾನಾ ರೀತಿಯ ಔಷಧಿಗಳನ್ನು ಸೇವನೆ ಮಾಡುವ ಬದಲು ಮನೆಯಲ್ಲಿಯೇ ಸರಳ ಆಹಾರಗಳನ್ನು ಸೇವನೆ ಮಾಡುವ ಮೂಲಕ ಸಮಸ್ಯೆಯಿಂದ ಪರಿಹಾರ ಪಡೆದುಕೊಳ್ಳಬಹುದು. ನೀವು ಕಿತ್ತಳೆ ಹಣ್ಣಿನ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಂಡಿರಬಹುದು. ಇದರ ರಸವೂ ಕೂಡ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಇದರಲ್ಲಿ ವಿಟಮಿನ್ ಸಿ, ಪೊಟ್ಯಾಸಿಯಮ್ ಮತ್ತು ಫೈಬರ್ ನಂತಹ ಪೋಷಕಾಂಶಗಳಿವೆ, ಅದರ ಜೊತೆಗೆ ಇದರಲ್ಲಿ ವಿಟಮಿನ್ ಬಿ -9 ಮತ್ತು ಫೋಲೇಟ್ ಕೂಡ ಸಮೃದ್ಧವಾಗಿದೆ. ಹಾಗಾಗಿ ಇದು ಸರಿಯಾದ ರಕ್ತ ಪರಿಚಲನೆಗೆ ಸಹಾಯ ಮಾಡುತ್ತದೆ. ಮೂತ್ರಪಿಂಡದ ಕಲ್ಲುಗಳಿಗೂ ಇದಕ್ಕೂ ಯಾವ ರೀತಿಯ ಸಂಬಂಧವಿದೆ ಎಂದು ಯೋಚಿಸುತ್ತಿದ್ದೀರಾ? ಇಲ್ಲಿದೆ ಸಂಪೂರ್ಣ ಮಾಹಿತಿ.
ತಜ್ಞರ ಪ್ರಕಾರ ಪ್ರತಿದಿನ ಎರಡು ಲೋಟ ಕಿತ್ತಳೆ ರಸವನ್ನು ಕುಡಿಯುವುದರಿಂದ ರಕ್ತದೊತ್ತಡದ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಅಲ್ಲದೆ ಈ ಹಣ್ಣಿನ ರಸ ಹೃದಯದ ಸಮಸ್ಯೆಗಳನ್ನು ತಡೆಯುತ್ತದೆ. ಕಿತ್ತಳೆ ರಸವು ಮೂತ್ರಪಿಂಡಗಳಲ್ಲಿನ ಕಲ್ಲುಗಳನ್ನು ಸಹ ನಿವಾರಣೆ ಮಾಡಲು ಸಹಾಯ ಮಾಡುತ್ತದೆ. ಅದಲ್ಲದೆ ಕಿತ್ತಳೆ ರಸದಲ್ಲಿ ವಿಟಮಿನ್ ಸಿ, ಪೊಟ್ಯಾಸಿಯಮ್, ಸಿಟ್ರಿಕ್ ಆಮ್ಲ ಮತ್ತು ಫೋಲೇಟ್ ನಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಇದು ಸಿಟ್ರಿಕ್ ಆಮ್ಲವನ್ನು ಹೊಂದಿರುತ್ತದೆ. ಜೊತೆಗೆ ಇದು ಮೂತ್ರಪಿಂಡದ ಕಲ್ಲುಗಳ ರಚನೆಯನ್ನು ತಡೆಯುತ್ತದೆ ಎಂದಿದ್ದಾರೆ.
ಮೂತ್ರಪಿಂಡದ ಕಲ್ಲುಗಳಲ್ಲಿ ಮುಖ್ಯವಾಗಿ ಎರಡು ವಿಧಗಳಿವೆ. ಮೊದಲನೆಯದು, ಕ್ಯಾಲ್ಸಿಯಂ ಆಕ್ಸಲೇಟ್ ಕಲ್ಲುಗಳು. ಇದು ತುಂಬಾ ಸಾಮಾನ್ಯ. ಎರಡನೆಯದು, ಯೂರಿಕ್ ಆಮ್ಲದ ಕಲ್ಲುಗಳು. ಇದು ದೇಹದಲ್ಲಿ ಯೂರಿಕ್ ಆಮ್ಲದ ಹೆಚ್ಚಳಕ್ಕೆ ಕಾರಣವಾಗುತ್ತದೆ. ಕಿತ್ತಳೆ ರಸವು ಮೂತ್ರದಲ್ಲಿ ಸಿಟ್ರೇಟ್ ಮಟ್ಟವನ್ನು ಹೆಚ್ಚಿಸುತ್ತದೆ. ಹಾಗಾಗಿ ಇದು ಕ್ಯಾಲ್ಸಿಯಂ ಆಕ್ಸಲೇಟ್ ಜೊತೆಗೆ ಮೂತ್ರಪಿಂಡದ ಕಲ್ಲುಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರ ಕೆಲವು ಗುಣಲಕ್ಷಣಗಳು ಯೂರಿಕ್ ಆಮ್ಲವನ್ನು ಕಡಿಮೆ ಮಾಡಲು ಕೂಡ ಸಹಾಯ ಮಾಡುತ್ತದೆ.
ಇದನ್ನೂ ಓದಿ: ಹೆಚ್ಚುತ್ತಿರುವ ಮಾಲಿನ್ಯ, ಚರ್ಮದ ಕ್ಯಾನ್ಸರ್ಗೆ ಕಾರಣವಾಗಬಹುದು? ಹೇಗೆ ತಡೆಗಟ್ಟುವುದು ತಿಳಿದುಕೊಳ್ಳಿ
ಮನೆಯಲ್ಲಿ ಯಾರಿಗಾದರೂ ಮೂತ್ರಪಿಂಡದಲ್ಲಿ ಕಲ್ಲಿನ ಸಮಸ್ಯೆ ಇದ್ದರೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ತಾಜಾ ಕಿತ್ತಳೆ ರಸವನ್ನು ಕುಡಿಯಿರಿ. ಇದನ್ನು ನಿಯಮಿತವಾಗಿ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲುಗಳ ಅಪಾಯವನ್ನು ತಡೆಯಬಹುದಾಗಿದೆ.
ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ