Sign In

By signing in or creating an account, you agree with Associated Broadcasting Company's Terms & Conditions and Privacy Policy.

Ovarian Cancer: ಮಹಿಳೆಯರೇ ನಿಮ್ಮಲ್ಲಿ ಈ ರೋಗಲಕ್ಷಣ ಕಂಡುಬಂದರೆ ಅಂಡಾಶಯದ ಕ್ಯಾನ್ಸರ್ ಆಗಿರಬಹುದು

ಅಂಡಾಶಯದ ಕ್ಯಾನ್ಸರ್ ಮಹಿಳೆಯರ ಮೇಲೆ ಪರಿಣಾಮ ಬೀರುವ ಗಂಭೀರ ಕಾಯಿಲೆ. ಆದರೆ ತಜ್ಞರು ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎನ್ನುತ್ತಾರೆ. ಏಕೆಂದರೆ ಕೆಲವು ಆರಂಭಿಕ ಲಕ್ಷಣಗಳನ್ನು ಪತ್ತೆಹಚ್ಚಿ, ಚಿಕಿತ್ಸೆ ಪಡೆಯಬಹುದು. ಹಾಗಾದರೆ ಅಂಡಾಶಯದ ಕ್ಯಾನ್ಸರ್ ನ 5 ಆರಂಭಿಕ ಲಕ್ಷಣಗಳು ಯಾವುವು ಎಂದು ತಿಳಿದುಕೊಳ್ಳಿ. ನೀವು ಕೂಡ ಈ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ತಕ್ಶಣ ವೈದ್ಯರನ್ನು ಸಂಪರ್ಕಿಸಿ.

Ovarian Cancer: ಮಹಿಳೆಯರೇ ನಿಮ್ಮಲ್ಲಿ ಈ ರೋಗಲಕ್ಷಣ ಕಂಡುಬಂದರೆ ಅಂಡಾಶಯದ ಕ್ಯಾನ್ಸರ್ ಆಗಿರಬಹುದು
ಸಾಣದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 14, 2024 | 9:33 AM

ಮಹಿಳೆಯರಿಗೆ ಕೆಲವೊಂದು ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಅದರಲ್ಲಿ ಕೆಲವು ತಾತ್ಕಾಲಿಕವಾಗಿದ್ದರೆ ಇನ್ನೂ ಕೆಲವು ದೀರ್ಘ ಕಾಲದ ವರೆಗೆ ಕಾಡುತ್ತವೆ. ಇವುಗಳಲ್ಲಿ ಸ್ತನ ಕ್ಯಾನ್ಸರ್ ಮತ್ತು ಅಂಡಾಶಯದ ಕ್ಯಾನ್ಸರ್ ಕೂಡ ಒಂದು. ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಅಂಡಾಶಯದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಸಹಜವಾಗಿ ಪದೇ ಪದೇ ಕಿಬ್ಬೊಟ್ಟೆ ನೋವು ಕಾಣಿಸುತ್ತಿದ್ದರೆ, ಸುಸ್ತು, ಆಯಾಸ ಹೋಗದೆ ಇದ್ದರೆ, ರಕ್ತಸ್ರಾವ ಹೆಚ್ಚಾಗಿ ದೇಹದ ತೂಕ ಕಡಿಮೆ ಆಗುತ್ತಿದ್ದರೆ ಮಹಿಳೆಯರು ಸ್ವಲ್ಪ ಎಚ್ಚರಿಕೆಯಿಂದ ಇರಬೇಕು. ಏಕೆಂದರೆ ಅದು ಅಂಡಾಶಯದ ಕ್ಯಾನ್ಸರ್ ಲಕ್ಷಣವಾಗಿದ್ದು, ತುಂಬಾ ಅಪಾಯಕಾರಿ. ಆರಂಭಿಕ ಹಂತಗಳಲ್ಲಿ ಅದರ ರೋಗಲಕ್ಷಣಗಳನ್ನು ಗುರುತಿಸುವುದು ಸ್ವಲ್ಪ ಕಷ್ಟ ಎಂದು ಡಾಕ್ಟರ್ ಹೇಳುತ್ತಾರೆ.

ಅಂಡಾಶಯದ ಕ್ಯಾನ್ಸರ್ ಮಹಿಳೆಯರ ಮೇಲೆ ಪರಿಣಾಮ ಬೀರುವ ಗಂಭೀರ ಕಾಯಿಲೆ. ಆದರೆ ತಜ್ಞರು ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎನ್ನುತ್ತಾರೆ. ಏಕೆಂದರೆ ಕೆಲವು ಆರಂಭಿಕ ಲಕ್ಷಣಗಳನ್ನು ಪತ್ತೆಹಚ್ಚಿ, ಚಿಕಿತ್ಸೆ ಪಡೆಯಬಹುದು. ಹಾಗಾದರೆ ಅಂಡಾಶಯದ ಕ್ಯಾನ್ಸರ್ ನ 5 ಆರಂಭಿಕ ಲಕ್ಷಣಗಳು ಯಾವುವು ಎಂದು ತಿಳಿದುಕೊಳ್ಳಿ. ನೀವು ಕೂಡ ಈ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ತಕ್ಶಣ ವೈದ್ಯರನ್ನು ಸಂಪರ್ಕಿಸಿ.

ಅಂಡಾಶಯ ಕ್ಯಾನ್ಸರ್ ನ ಲಕ್ಷಣಗಳು;

ಕಿಬ್ಬೊಟ್ಟೆ ನೋವು – ಊತ: ಅಂಡಾಶಯದ ಕ್ಯಾನ್ಸರ್ ನ ಸಾಮಾನ್ಯ ಲಕ್ಷಣಗಳಲ್ಲಿ ಹೊಟ್ಟೆಯ ಕೆಳಭಾಗದಲ್ಲಿ ನಿರಂತರ ನೋವು ಅಥವಾ ಅಸ್ವಸ್ಥತೆ, ವಿಶೇಷವಾಗಿ ಊಟದ ನಂತರ ಅಥವಾ ಮುಟ್ಟಿನ ಸಮಯದಲ್ಲಿ ಇದರ ಅನುಭವ ಆಗುತ್ತದೆ. ಹಾಗಾಗಿ ಕಿಬ್ಬೊಟ್ಟೆ ನೋವು ನಿರಂತರವಾಗಿದ್ದರೆ ಅದನ್ನು ನಿರ್ಲಕ್ಷ್ಯ ಮಾಡಲೇಬೇಡಿ. ತಕ್ಷಣವೇ ಸ್ತ್ರೀರೋಗ ತಜ್ಞರನ್ನು ಕಂಡು ಸ್ಕ್ಯಾನಿಂಗ್ ಮಾಡಿಸಿ ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಿ.​

ಬೇಗ ಹೊಟ್ಟೆ ತುಂಬಿದ ಅನುಭವವಾಗುವುದು ಅಥವಾ ಹಸಿವಿನ ಕೊರತೆ: ಸ್ವಲ್ಪ ತಿಂದರೂ ನಿಮಗೆ ಹೊಟ್ಟೆ ತುಂಬಿದ ಅನುಭವವಾಗುತ್ತಿದ್ದರೆ ಅಥವಾ ಹಸಿವು ಇಲ್ಲದಿದ್ದರೆ, ಅದನ್ನು ನಿರ್ಲಕ್ಷಿಸಬೇಡಿ. ಇದು ಅಂಡಾಶಯದ ಕ್ಯಾನ್ಸರ್ ನ ಆರಂಭಿಕ ಲಕ್ಷಣವೂ ಆಗಿರಬಹುದು.

ಆಗಾಗ ಮೂತ್ರವಿಸರ್ಜನೆಗೆ ಹೋಗುವುದು: ನೀವು ಪದೇ ಪದೇ ಅದರಲ್ಲಿಯೂ ರಾತ್ರಿ ಸಮಯದಲ್ಲಿ ಆಗಾಗ ಮೂತ್ರ ವಿಸರ್ಜನೆ ಹೋಗುತ್ತೀರಾ? ಇದು ಅಂಡಾಶಯದ ಕ್ಯಾನ್ಸರ್ ನ ಲಕ್ಷಣವಾಗಿರಬಹುದು.

ಮಲಬದ್ಧತೆ ಅಥವಾ ಅತಿಸಾರ: ಇದು ಇದ್ದಕ್ಕಿದ್ದಂತೆ ಪ್ರಾರಂಭವಾದರೆ ಅಥವಾ ಪದೇ ಪದೇ ಈ ರೀತಿ ಸಮಸ್ಯೆ ಕಂಡು ಬರುತ್ತಿದ್ದರೆ ವೈದ್ಯರನ್ನು ಸಂಪರ್ಕಿಸಿ.

ಅಸಹಜ ರಕ್ತಸ್ರಾವ: ಋತುಬಂಧದ ನಂತರವೂ ಕೂಡ ಮಹಿಳೆಯರು ಪದೇ ಪದೇ ರಕ್ತಸ್ರಾವ ಸಮಸ್ಯೆಯನ್ನು ಕಾಣುತ್ತಿದ್ದರೆ, ಅದು ಕೂಡ ಅಂಡಾಶಯದ ಕ್ಯಾನ್ಸರ್ ಲಕ್ಷಣವಾಗಿರಬಹುದು.

ಈ ರೋಗಲಕ್ಷಣಗಳು ಅಂಡಾಶಯದ ಕ್ಯಾನ್ಸರ್ ಮಾತ್ರವಲ್ಲದೆ ಇತರ ಆರೋಗ್ಯ ಸಮಸ್ಯೆಗಳೂ ಆಗಿರಬಹುದು. ಆದರೆ ಈ ಯಾವುದೇ ರೋಗಲಕ್ಷಣಗಳು ಕಾಣಿಸಿಕೊಂಡರೆ, ವೈದ್ಯರನ್ನು ಸಂಪರ್ಕಿಸಿ. ಆರಂಭಿಕ ರೋಗನಿರ್ಣಯ ಮತ್ತು ಚಿಕಿತ್ಸೆಯೊಂದಿಗೆ, ಈ ಗಂಭೀರ ರೋಗಕ್ಕೆ ಪರಿಹಾರ ಕಂಡುಕೊಳ್ಳಬಹುದು.

ಇದನ್ನೂ ಓದಿ: ತೂಕ ಇಳಿಸಿಕೊಳ್ಳಲು ನಿಂಬೆ ನೀರು ಕುಡಿಯುತ್ತಿದ್ದರೆ ಈ ತಪ್ಪು ಮಾಡಬೇಡಿ

ಆರೋಗ್ಯವಾಗಿರುವುದು ಹೇಗೆ?

  • ನೀವು 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದರೆ ಸ್ತ್ರೀರೋಗ ತಜ್ಞರನ್ನು ಭೇಟಿಯಾಗಿ ತಪಾಸಣೆ ಮಾಡಿಸಿಕೊಳ್ಳಿ.
  • ನಿಮ್ಮ ಕುಟುಂಬದಲ್ಲಿ ಯಾರಿಗಾದರೂ ಅಂಡಾಶಯದ ಕ್ಯಾನ್ಸರ್ ಇದ್ದರೆ ನಿಮ್ಮ ವೈದ್ಯರೊಂದಿಗೆ ಮಾತನಾಡಿ ಸಲಹೆ ಪಡೆದುಕೊಳ್ಳಿ.
  • ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಿ.
  • ನಿಯಮಿತವಾಗಿ ವ್ಯಾಯಾಮ ಮಾಡಿ.
  • ಧೂಮಪಾನ ಮಾಡಬೇಡಿ.
  • ಪೌಷ್ಟಿಕ ಆಹಾರವನ್ನು ನಿಯಮಿತವಾಗಿ ಸೇವಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ