ರಾತ್ರಿ ಕೂದಲಿಗೆ ಎಣ್ಣೆ ಹಚ್ಚುತ್ತಿದ್ದೀರಾ? ಗೊತ್ತಿಲ್ಲದೆ ಎಷ್ಟು ದೊಡ್ಡ ತಪ್ಪು ಮಾಡುತ್ತಿದ್ದೀರಿ ನೋಡಿ

Hair Oiling Overnight: ರಾತ್ರಿ ಕೂದಲಿಗೆ ಎಣ್ಣೆ ಹಚ್ಚುವುದರಿಂದ ಬೆಡ್ ಶೀಟ್ ಗಳಿಗೆ ಧೂಳು ಮತ್ತು ಕೊಳೆ ಅಂಟಿಕೊಳ್ಳುತ್ತದೆ. ಪರಿಣಾಮವಾಗಿ ಇದು ತಲೆಹೊಟ್ಟು ಸಮಸ್ಯೆಗಳಿಗೆ ಕಾರಣವಾಗುತ್ತದೆ. ತಜ್ಞರ ಪ್ರಕಾರ.. ರಾತ್ರಿ ಕೂದಲಿಗೆ ಎಣ್ಣೆ ಹಚ್ಚುವಂತಹ ಅಭ್ಯಾಸಗಳು ಕೂದಲಿನ ಸಮಸ್ಯೆಗೆ ಕಾರಣವಾಗಬಹುದು

ರಾತ್ರಿ ಕೂದಲಿಗೆ ಎಣ್ಣೆ ಹಚ್ಚುತ್ತಿದ್ದೀರಾ? ಗೊತ್ತಿಲ್ಲದೆ ಎಷ್ಟು ದೊಡ್ಡ ತಪ್ಪು ಮಾಡುತ್ತಿದ್ದೀರಿ ನೋಡಿ
ರಾತ್ರಿ ಕೂದಲಿಗೆ ಎಣ್ಣೆ ಹಚ್ಚುತ್ತಿದ್ದೀರಾ?
Follow us
ಸಾಧು ಶ್ರೀನಾಥ್​
|

Updated on:Mar 02, 2024 | 12:47 PM

ಅನೇಕ ಜನರು ರಾತ್ರಿ ಮಲಗುವ ಮುನ್ನ ಕೂದಲಿಗೆ ಎಣ್ಣೆ ಹಚ್ಚಿ ಕೂದಲು ಆರೋಗ್ಯವಾಗಿರಿಸಿಕೊಳ್ಳುತ್ತಾರೆ (Health). ಆದರೆ ಈ ಅಭ್ಯಾಸ ಕೂದಲಿಗೆ ಒಳ್ಳೆಯದೇ? ಅಥವಾ ನೀವು ತಿಳಿಯದೆ ನಿಮ್ಮ ಕೂದಲಿಗೆ ಹಾನಿ ಮಾಡುತ್ತಿದ್ದೀರಾ? ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ.. ತಜ್ಞರ ಪ್ರಕಾರ.. ಕೂದಲಿಗೆ ಎಣ್ಣೆ ಹಚ್ಚುವುದು ತುಂಬಾ ಒಳ್ಳೆಯ ಅಭ್ಯಾಸ. ಇದು ನೆತ್ತಿಯನ್ನು ಆರೋಗ್ಯವಾಗಿರಿಸುತ್ತದೆ. ಆದರೆ ಕೆಲವು ನಿಯಮಗಳನ್ನು ಅನುಸರಿಸಿಯೇ ಕೂದಲಿಗೆ ಎಣ್ಣೆಯನ್ನು ಹಚ್ಚಬೇಕು (Hair Oiling Overnight). ಆಗ ಮಾತ್ರ ನೀವು ಹೆಚ್ಚಿನ ಪ್ರಯೋಜನಗಳನ್ನು ಪಡೆಯುತ್ತೀರಿ. ಅದು ಹೀಗಿದೆ..

ಕೆಲವರು ಕೂದಲಿಗೆ ಎಣ್ಣೆ ಹಚ್ಚಿ ರಾತ್ರಿಯಿಡೀ ಹಾಗೆಯೇ ಬಿಡುತ್ತಾರೆ. ಆದಾಗ್ಯೂ, ಹಾಗೆ ಮಾಡುವುದರಿಂದ ಕೆಲವು ಅನಾನುಕೂಲತೆಗಳಿರಬಹುದು. ತಜ್ಞರ ಪ್ರಕಾರ.. ಗಮನಿಸಿ ನೆತ್ತಿಯು ಸಹ ನೈಸರ್ಗಿಕ ತೈಲಗಳನ್ನು ಉತ್ಪಾದಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ ರಾತ್ರಿಯಲ್ಲಿ ತಲೆಗೆ ಎಣ್ಣೆ ಹಚ್ಚುವುದರಿಂದ ರಾಶಸ್​ ಸಮಸ್ಯೆ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ.

Also Read: ಆಲೂಗಡ್ಡೆ ಜ್ಯೂಸ್​​ನ ಅದ್ಭುತ ಪ್ರಯೋಜನಗಳೇನು ಗೊತ್ತಾ?

ರಾತ್ರಿ ಕೂದಲಿಗೆ ಎಣ್ಣೆ ಹಚ್ಚುವುದರಿಂದ ಬೆಡ್ ಶೀಟ್ ಗಳಿಗೆ ಧೂಳು ಮತ್ತು ಕೊಳೆ ಅಂಟಿಕೊಳ್ಳುತ್ತದೆ. ಪರಿಣಾಮವಾಗಿ ಇದು ತಲೆಹೊಟ್ಟು ಸಮಸ್ಯೆಗಳಿಗೆ ಕಾರಣವಾಗುತ್ತದೆ. ತಜ್ಞರ ಪ್ರಕಾರ.. ರಾತ್ರಿ ಕೂದಲಿಗೆ ಎಣ್ಣೆ ಹಚ್ಚುವಂತಹ ಅಭ್ಯಾಸಗಳು ಕೂದಲಿನ ಸಮಸ್ಯೆಗೆ ಕಾರಣವಾಗಬಹುದು.

ಅನೇಕ ಜನರು ಬೆಚ್ಚಗಿನ ತೆಂಗಿನ ಎಣ್ಣೆಯಿಂದ ನೆತ್ತಿಯನ್ನು ಮಸಾಜ್ ಮಾಡುತ್ತಾರೆ. ಹೀಗೆ ಮಾಡುವುದರಿಂದ ಕೂದಲಿನ ಆರೋಗ್ಯ ಹಾಳಾಗುತ್ತದೆ. ತುಂಬಾ ಬಿಸಿಯಾದ ಎಣ್ಣೆಯನ್ನು ತಲೆಗೆ ಹಚ್ಚುವುದರಿಂದ ತುರಿಕೆ ಸಮಸ್ಯೆ ಉಲ್ಬಣಿಸಬಹುದು. ಹಾಗಾಗಿ ಬೆಚ್ಚಗಿನ ಎಣ್ಣೆಯಿಂದ ಕೂದಲಿಗೆ ಮಸಾಜ್ ಮಾಡುವುದು ಒಳ್ಳೆಯದು. ಹೀಗೆ ಮಾಡುವುದರಿಂದ ಹೆಚ್ಚಿನ ಲಾಭವನ್ನು ಪಡೆಯುತ್ತೀರಿ. ತಲೆಯಲ್ಲಿ ರಕ್ತ ಸಂಚಾರ ಚೆನ್ನಾಗಿ ಆಗುತ್ತದೆ. ಇದು ನಿಮ್ಮ ಕೂದಲನ್ನು ವೇಗವಾಗಿ ಬೆಳೆಯುವಂತೆ ಮಾಡುತ್ತದೆ. ಇದರಿಂದ ಸಮಸ್ಯೆಗಳು ಅಂತೇನೂ ಇರುವುದಿಲ್ಲ.

ಕೊಬ್ಬರಿ ಎಣ್ಣೆಯ ಬದಲು ಆಲಿವ್ ಎಣ್ಣೆ, ಬಾದಾಮಿ ಎಣ್ಣೆಯನ್ನು ಕೂದಲಿಗೆ ಬಳಸಬಹುದು. ಇದು ಅಕಾಲಿಕ ಕೂದಲು ಉದುರುವಿಕೆಯನ್ನು ತಡೆಯುತ್ತದೆ. ಇದಲ್ಲದೆ, ಈ ತೈಲಗಳನ್ನು ಹಚ್ಚುವುದರಿಂದ ತಲೆಗೆ ರಕ್ತ ಪರಿಚಲನೆ ಹೆಚ್ಚಾಗುತ್ತದೆ. ಕೂದಲಿನ ಬೇರುಗಳನ್ನು ಬಲಪಡಿಸುತ್ತದೆ. ಒಣ, ಒರಟಾದ ಕೂದಲಿಗೆ ನಿಯಮಿತವಾಗಿ ಎಣ್ಣೆ ಹಚ್ಚಬೇಕು. ಹೀಗೆ ಮಾಡುವುದರಿಂದ ಕೂದಲು ಸಾಕಷ್ಟು ತೇವಾಂಶವನ್ನು ಪಡೆದು ಆರೋಗ್ಯಕರವಾಗಿ ಬೆಳೆಯುತ್ತದೆ. ಆದರೆ ರಾತ್ರಿ ಎಣ್ಣೆ ಹಚ್ಚುವುದನ್ನು ನಿಲ್ಲಿಸಬೇಕು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Sat, 2 March 24

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ