ಪಾಲಕ್ ಸೊಪ್ಪನ್ನು ಸೂಪರ್ ಫುಡ್ ಎಂದು ಕರೆಯೋದೇಕೆ?

Spinach Health Benefits: ಪಾಲಕ್ ಸೊಪ್ಪಿನಲ್ಲಿ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ 1, ಫೋಲಿಕ್ ಆ್ಯಸಿಡ್, ಕಬ್ಬಿಣಾಂಶ, ಕ್ಯಾಲ್ಸಿಯಂ, ಮೆಗ್ನೇಸಿಯಂ ಅಂಶಗಳು ಅಧಿಕವಾಗಿದೆ. ಪಾಲಕ್‌ ಸೊಪ್ಪಿನ ಸೇವನೆಯಿಂದ ನಮ್ಮ ಆರೋಗ್ಯಕ್ಕೆ ಆಗುವ 11 ಪ್ರಯೋಜನಗಳ ಬಗ್ಗೆ ಇಲ್ಲಿದೆ ಮಾಹಿತಿ.

ಪಾಲಕ್ ಸೊಪ್ಪನ್ನು ಸೂಪರ್ ಫುಡ್ ಎಂದು ಕರೆಯೋದೇಕೆ?
ಪಾಲಕ್ ಸೊಪ್ಪುImage Credit source: iStock
Follow us
ಸುಷ್ಮಾ ಚಕ್ರೆ
|

Updated on:Oct 10, 2023 | 5:04 PM

ಪಾಲಕ್ ಪರ್ಷಿಯಾದಲ್ಲಿ ಹುಟ್ಟಿದ ಹಸಿರು ಸೊಪ್ಪು. ಪಾಲಕ್ ಸೊಪ್ಪಿನಲ್ಲಿ ಹೆಚ್ಚಾಗಿರುವ ಕಾರ್ಬೋಹೈಡ್ರೇಟ್‌ಗಳು ಮತ್ತು ಫೈಬರ್ ನಮ್ಮ ದೇಹದ ಆರೋಗ್ಯಕ್ಕೆ ಅತ್ಯಗತ್ಯವಾಗಿದೆ. ಪಾಲಕ್‌ನಲ್ಲಿ ಕರಗದ ನಾರಿನಂಶ ಅಧಿಕವಾಗಿದೆ. ಇದು ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಪಾಲಕ್ ಅನೇಕ ಜೀವಸತ್ವಗಳು ಮತ್ತು ಖನಿಜಗಳ ಅತ್ಯುತ್ತಮ ಮೂಲವಾಗಿದೆ. ಪಾಲಕ್ ಸೊಪ್ಪಿನಲ್ಲಿ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ 1, ಫೋಲಿಕ್ ಆ್ಯಸಿಡ್, ಕಬ್ಬಿಣಾಂಶ, ಕ್ಯಾಲ್ಸಿಯಂ, ಮೆಗ್ನೇಸಿಯಂ ಅಂಶಗಳು ಅಧಿಕವಾಗಿದೆ.

ಪಾಲಕ್‌ ಸೊಪ್ಪಿನಿಂದ ನಮ್ಮ ಆರೋಗ್ಯಕ್ಕೆ ಆಗುವ 11 ಪ್ರಯೋಜನಗಳ ಬಗ್ಗೆ ಇಲ್ಲಿದೆ ಮಾಹಿತಿ.

1. ಪಾಲಕ್ ಸೊಪ್ಪು ಕಣ್ಣಿನ ಆರೋಗ್ಯವನ್ನು ಕಾಪಾಡುತ್ತದೆ. ಪಾಲಕ್ ಸೊಪ್ಪಲ್ಲಿ ಕೆಲವು ತರಕಾರಿಗಳಲ್ಲಿ ಬಣ್ಣಕ್ಕೆ ಕಾರಣವಾಗಿರುವ ಕ್ಯಾರೊಟಿನಾಯ್ಡ್‌ಗಳಾದ ಝೀಕ್ಸಾಂಥಿನ್ ಮತ್ತು ಲುಟೀನ್‌ಗಳು ಹೆಚ್ಚಾಗಿವೆ. ಮನುಷ್ಯನ ಕಣ್ಣುಗಳು ಹೆಚ್ಚಿನ ಪ್ರಮಾಣದಲ್ಲಿ ಈ ವರ್ಣದ್ರವ್ಯಗಳನ್ನು ಹೊಂದಿರುತ್ತವೆ. ಇದು ಸೂರ್ಯನ ಬೆಳಕಿನಿಂದ ಉಂಟಾಗುವ ಹಾನಿಯಿಂದ ನಿಮ್ಮ ಕಣ್ಣುಗಳನ್ನು ರಕ್ಷಿಸುತ್ತದೆ.

2. ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುತ್ತದೆ. ಪಾಲಕ್‌ನಲ್ಲಿ MGDG ಮತ್ತು SQDG ಎಂಬ ಎರಡು ಘಟಕಗಳಿವೆ. ಇದು ಕ್ಯಾನ್ಸರ್ ಬೆಳವಣಿಗೆಯನ್ನು ನಿಧಾನಗೊಳಿಸುತ್ತದೆ.

ಇದನ್ನೂ ಓದಿ: ಈ ಬ್ಲಡ್ ಗ್ರೂಪ್ ಹೊಂದಿರುವ ಜನರಲ್ಲಿ ಹೃದಯಾಘಾತದ ಅಪಾಯ ಹೆಚ್ಚು!

3. ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಪಾಲಕವು ಹೆಚ್ಚಿನ ಪ್ರಮಾಣದ ನೈಟ್ರೇಟ್‌ಗಳನ್ನು ಹೊಂದಿರುತ್ತದೆ. ಇದು ರಕ್ತದೊತ್ತಡದ ಮಟ್ಟವನ್ನು ಮಧ್ಯಮಗೊಳಿಸಲು ಸಹಾಯ ಮಾಡುತ್ತದೆ ಮತ್ತು ನಿಮ್ಮ ಹೃದಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ.

4. ಕಿಡ್ನಿ ಸ್ಟೋನ್​ನಿಂದ ಬಳಲುತ್ತಿರುವವರಿಗೆ ಪಾಲಕ್ ಸೊಪ್ಪು ಅತ್ಯುತ್ತಮ ತರಕಾರಿ. ಕಿಡ್ನಿಯಲ್ಲಿ ಆಮ್ಲ ಮತ್ತು ಖನಿಜ ಲವಣಗಳ ಸಂಗ್ರಹದಿಂದ ಕಲ್ಲುಗಳು ಉಂಟಾಗುತ್ತವೆ. ಪಾಲಕ್ ಸೊಪ್ಪುಗಳಲ್ಲಿ ಕ್ಯಾಲ್ಸಿಯಂ ಮತ್ತು ಆಕ್ಸಲೇಟ್ ಅಧಿಕವಾಗಿದೆ.

5. ರಕ್ತ ಹೆಪ್ಪುಗಟ್ಟುವಿಕೆಗೆ ಸಹಕಾರಿಯಾಗಿದೆ. ಪಾಲಕ್ ವಿಟಮಿನ್ K1 ಅಂಶವನ್ನು ಹೊಂದಿದೆ. ಇದು ನಮ್ಮ ದೇಹದಲ್ಲಿ ಹಲವಾರು ಕಾರ್ಯಗಳನ್ನು ನಿರ್ವಹಿಸುತ್ತದೆ. ಮುಖ್ಯವಾಗಿ ರಕ್ತ ಹೆಪ್ಪುಗಟ್ಟುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

6. ಉತ್ತಮ ಮೂಳೆಗಳ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ಪಾಲಕ್ ಸೊಪ್ಪಿನಲ್ಲಿ ವಿಟಮಿನ್ ಕೆ ಇದೆ. ಅದು ಉತ್ತಮ ಮೂಳೆಯ ಆರೋಗ್ಯಕ್ಕೆ ಸಹಾಯ ಮಾಡುತ್ತದೆ, ನಿಮ್ಮ ದೇಹದಿಂದ ಕ್ಯಾಲ್ಸಿಯಂ ಹೀರಿಕೊಳ್ಳುವಿಕೆಯನ್ನು ಸುಧಾರಿಸುತ್ತದೆ.

7. ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಪಾಲಕ್ ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದರ ಹೆಚ್ಚಿನ ಪ್ರಮಾಣದ ಫೈಬರ್ ಅಂಶವು ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ಇದನ್ನೂ ಓದಿ: ಫೈಬರ್ ಅಂಶ ಅಧಿಕವಾಗಿರುವ ಈ 6 ತರಕಾರಿಗಳನ್ನು ನಿರ್ಲಕ್ಷ್ಯಿಸಬೇಡಿ

8. ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ. ಈ ಸೂಪರ್‌ಫುಡ್‌ನಲ್ಲಿ ನಿಯೋಕ್ಸಾಂಥಿನ್ ಮತ್ತು ವಯೋಲಾಕ್ಸಾಂಥಿನ್ ಎರಡು ಉರಿಯೂತ ನಿವಾರಕ ಗುಣಲಕ್ಷಣಗಳು ಇವೆ. ಇದು ಆಸ್ಟಿಯೊಪೊರೋಸಿಸ್, ಮೈಗ್ರೇನ್, ಆಸ್ತಮಾ, ಸಂಧಿವಾತ ಮತ್ತು ತಲೆನೋವುಗಳನ್ನು ತಡೆಯಲು ನಿಮಗೆ ಸಹಾಯ ಮಾಡುತ್ತದೆ.

9. ನಿಮ್ಮ ದೇಹವನ್ನು ಆರಾಮವಾಗಿರಿಸುತ್ತದೆ. ಪಾಲಕ್ ನಿಮ್ಮ ಮನಸ್ಸನ್ನು ಶಾಂತವಾಗಿರಿಸುತ್ತದೆ. ಇದರಿಂದ ನೀವು ಉದ್ವೇಗಕ್ಕೆ ಒಳಗಾಗುವುದಿಲ್ಲ ಮತ್ತು ಒತ್ತಡ ಮುಕ್ತ ಜೀವನವನ್ನು ಕಾಪಾಡಿಕೊಳ್ಳಬಹುದು. ಇದರ ಹೆಚ್ಚಿನ ಸತು ಮತ್ತು ಮೆಗ್ನೀಸಿಯಮ್ ಅಂಶವು ರಾತ್ರಿಯ ವೇಳೆ ಉತ್ತಮ ನಿದ್ರೆ ಪಡೆಯಲು ನಿಮಗೆ ಅನುವು ಮಾಡಿಕೊಡುತ್ತದೆ.

10. ಪಾಲಕ್ ಎಲೆಗಳು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಪಾಲಕದಲ್ಲಿ ಕಂಡುಬರುವ ವಿಟಮಿನ್ ಎ ಅಂಶವು ಉಸಿರಾಟ, ಕರುಳುಗಳು ಮತ್ತು ಲೋಳೆಯ ಪೊರೆಗಳನ್ನು ಬಲಪಡಿಸುತ್ತದೆ ಎಂದು ಹೇಳಲಾಗುತ್ತದೆ.

11. ರಕ್ತಹೀನತೆಯನ್ನು ತಡೆಯುತ್ತದೆ. ಪಾಲಕ್ ಸೊಪ್ಪುಗಳಲ್ಲಿ ಕಬ್ಬಿಣದ ಅಂಶ ಹೆಚ್ಚಾಗಿದ್ದು, ಅದು ರಕ್ತಹೀನತೆಯ ಅಪಾಯದಿಂದ ನಿಮ್ಮನ್ನು ಕಾಪಾಡುತ್ತದೆ. ಕಬ್ಬಿಣಾಂಶವು ಋತುಚಕ್ರದ ಮಹಿಳೆಯರು, ಮಕ್ಕಳು ಮತ್ತು ವಯಸ್ಕರಿಗೆ ಸಹ ಒಳ್ಳೆಯದು. ಕಬ್ಬಿಣವು ಮಾನವನ ದೇಹದಲ್ಲಿ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ದೇಹದ ಎಲ್ಲಾ ಜೀವಕೋಶಗಳಿಗೆ ಆಮ್ಲಜನಕವನ್ನು ಸಾಗಿಸಲು ಸಹಾಯ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Tue, 10 October 23

ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ