
ಅಂಗೈ ಉಜ್ಜುವ ಅಭ್ಯಾಸ ನಿಮಗಿದೆಯೇ? ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ? ಹಿರಿಯರು ಹೇಳಿದಂತೆ ಬೆಳಿಗ್ಗೆ ಎದ್ದ ಕೂಡಲೇ ನೀವು ಮಾಡಬೇಕಾದ ಮೊದಲ ಕೆಲಸವೆಂದರೆ ನಿಮ್ಮ ಎರಡೂ ಅಂಗೈಗಳನ್ನು ಉಜ್ಜುವುದು. ಆಗ ಉತ್ಪತ್ತಿಯಾಗುವ ಶಾಖವನ್ನು ನಿಮ್ಮ ಕಣ್ಣುಗಳ ಮೇಲಿಟ್ಟು ಬಿಸಿ ಮಾಡಿ. ಇದನ್ನು ಮಾಡುವುದರಿಂದ ನೀವು ನಿದ್ದೆಯಿಂದ ಸರಿಯಾಗಿ ಎಚ್ಚರಗೊಳ್ಳಲು ಸಹಾಯ ಮಾಡುತ್ತದೆ. ಜೊತೆಗೆ ಈ ಅಭ್ಯಾಸವು ನಿಮಗೆ ದೇಹವು ತಕ್ಷಣದ ಶಕ್ತಿಯನ್ನು ಪಡೆಯಲು ಸಹಾಯ ಮಾಡುತ್ತದೆ. ಅಲ್ಲದೆ ಆರೋಗ್ಯಕ್ಕೆ ಅನೇಕ ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಮುಖ್ಯವಾಗಿ ಇದು ಕಣ್ಣುಗಳಿಗೆ ಒಳ್ಳೆಯದು. ಜೊತೆಗೆ ಇದು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಹಾಗಾದರೆ ನಿಮ್ಮ ಕೈಗಳನ್ನು ಉಜ್ಜುವುದರಿಂದ ಯಾವ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ