Papaya Benefits: ಪಪ್ಪಾಯಿ ಹಣ್ಣು ತಿನ್ನುವುದರಿಂದ ಹೊಟ್ಟೆ ಉಬ್ಬರ ಸಮಸ್ಯೆಯನ್ನು ನಿವಾರಿಸಬಹುದು

ಎಲ್ಲಾ ಹಣ್ಣುಗಳು ಒಂದಲ್ಲಾ ಒಂದು ರೀತಿಯಲ್ಲಿ ಆರೋಗ್ಯ ಪ್ರಯೋಜನವನ್ನು ನೀಡುತ್ತವೆ. ಹಾಗೆಯೇ ಪಪ್ಪಾಯಿ ಹಣ್ಣನ್ನು ತಿನ್ನುವುದರಿಂದ ಹೊಟ್ಟೆ ಉಬ್ಬರದ ಸಮಸ್ಯೆಯನ್ನು ಕಡಿಮೆ ಮಾಡಬಹುದು.

Papaya Benefits: ಪಪ್ಪಾಯಿ ಹಣ್ಣು ತಿನ್ನುವುದರಿಂದ ಹೊಟ್ಟೆ ಉಬ್ಬರ ಸಮಸ್ಯೆಯನ್ನು ನಿವಾರಿಸಬಹುದು
Papaya
Follow us
TV9 Web
| Updated By: ನಯನಾ ರಾಜೀವ್

Updated on: Aug 10, 2022 | 1:19 PM

ಎಲ್ಲಾ ಹಣ್ಣುಗಳು ಒಂದಲ್ಲಾ ಒಂದು ರೀತಿಯಲ್ಲಿ ಆರೋಗ್ಯ ಪ್ರಯೋಜನವನ್ನು ನೀಡುತ್ತವೆ. ಹಾಗೆಯೇ ಪಪ್ಪಾಯಿ ಹಣ್ಣನ್ನು ತಿನ್ನುವುದರಿಂದ ಹೊಟ್ಟೆ ಉಬ್ಬರದ ಸಮಸ್ಯೆಯನ್ನು ಕಡಿಮೆ ಮಾಡಬಹುದು. ಪಪ್ಪಾಯಿ ಕೂಡ ರುಚಿ ಮತ್ತು ಪೌಷ್ಟಿಕಾಂಶ ಎರಡರಲ್ಲೂ ಅಗ್ರಸ್ಥಾನದಲ್ಲಿರುವ ಹಣ್ಣುಗಳಲ್ಲಿ ಒಂದು ಎಂದು ಹೇಳಬಹುದು.

ಕೆಲವು ಹಣ್ಣುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ತಿಂದರೆ ದೇಹಕ್ಕೆ ಹೆಚ್ಚಿನ ಪ್ರಯೋಜನಗಳಾಗಬಹುದು. ಮಧುಮೇಹದಿಂದ ಬಳಲುತ್ತಿರುವರು ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನಬೇಕು. ಇದರಲ್ಲಿ ನೈಸರ್ಗಿಕ ಸಕ್ಕರೆ ಇದೆ ಮತ್ತು ಇದರ ಆಂಟಿ ಆಕ್ಸಿಡೆಂಟ್ ಗುಣದಿಂದಾಗಿ, ಇದು ಸಕ್ಕರೆ ರೋಗಿಗಳಿಗೆ ಉತ್ತಮ ಆಯ್ಕೆಯಾಗಿದೆ.

ಇದು ದೇಹದ ಮೇಲೆ ಹೈಪೋಗ್ಲೈಸೆಮಿಕ್ ಪರಿಣಾಮವನ್ನು ಬೀರುತ್ತದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಪಪ್ಪಾಯಿಯಲ್ಲಿ ಕಡಿಮೆ ಕ್ಯಾಲೋರಿಗಳು ಮತ್ತು ಫೈಬರ್ ಅಂಶ ಅಧಿಕವಾಗಿರುತ್ತದೆ. ಇದೇ ಕಾರಣಕ್ಕೆ ಇದು ತೂಕವನ್ನು ಕಡಿಮೆ ಮಾಡಲು ನೆರವಾಗುತ್ತದೆ ಮತ್ತು ಕೊಲೆಸ್ಟ್ರಾಲ್ ಅನ್ನು ಸಹ ನಿಯಂತ್ರಿಸುತ್ತದೆ.

ಜೀರ್ಣಕ್ರಿಯೆ ಸರಿಯಾಗಿರುವುದಿಲ್ಲ ಎಂದು ಹೇಳುವ ಜನರು ದಿನನಿತ್ಯ ಪಪ್ಪಾಯಿ ತಿನ್ನುವುದು ಅತ್ಯಗತ್ಯ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ ಮತ್ತು ಆಹಾರವನ್ನು ವೇಗವಾಗಿ ಚಯಾಪಚಯಗೊಳಿಸಲು ಸಹಾಯ ಮಾಡುತ್ತದೆ.

ಪಪ್ಪಾಯಿಯಲ್ಲಿ ಪಪಿನ್ ಎಂಬ ಕಿಣ್ವವಿದೆ, ಇದು ಆಹಾರವನ್ನು ವೇಗವಾಗಿ ಒಡೆಯಲು ಸಹಾಯ ಮಾಡುತ್ತದೆ. ಇದಲ್ಲದೆ, ಪಪ್ಪಾಯಿ ಹೆಚ್ಚಿನ ನೀರಿನ ಅಂಶವನ್ನು ಹೊಂದಿದೆ, ಇದು ಮಲಬದ್ಧತೆಯ ಅಪಾಯವನ್ನು ತಡೆಯುತ್ತದೆ.

ಹೊಟ್ಟೆ ಉಬ್ಬರದ ನಿಯಂತ್ರಣಕ್ಕೆ ಸಹಾಯ ಮಾಡುವ ತರಕಾರಿಗಳು

ಸೌತೆಕಾಯಿ: ಈ ತರಕಾರಿಯಲ್ಲಿ ಹೆಚ್ಚಿನ ಪ್ರಮಾಣದ ನೀರು ಇರುತ್ತದೆ, ಇದು ಹೊಟ್ಟೆ ಉಬ್ಬರವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಅದೇ ಕಾರಣದಿಂದ, ಸೌತೆಕಾಯಿಯು ದೇಹವನ್ನು ತೇವವಾಗಿಡಲು ಸಹಾಯ ಮಾಡುತ್ತದೆ.

ಮೊಸರು: ಮೊಸರಿನಲ್ಲಿ ಪ್ರೋಬಯಾಟಿಕ್‌ಗಳಿದ್ದು, ಇದು ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ಪ್ರೋಬಯಾಟಿಕ್‌ಗಳು ಉಬ್ಬಸ ಮತ್ತು ಅಜೀರ್ಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಬಾಳೆಹಣ್ಣು: ಇದರಲ್ಲಿ ನಾರಿನಂಶ ಹೆಚ್ಚಿದ್ದು ಹೊಟ್ಟೆ ಉಬ್ಬರಕ್ಕೆ ಸಹಾಯ ಮಾಡುತ್ತದೆ. ಇದರೊಂದಿಗೆ, ಇದರಲ್ಲಿ ಪೊಟ್ಯಾಸಿಯಮ್ ಕೂಡ ಇದೆ, ಇದು ದೇಹದಲ್ಲಿ ದ್ರವದ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಅದು ಉಬ್ಬುವಿಕೆಯನ್ನು ನಿವಾರಿಸುತ್ತದೆ.

ಪಪ್ಪಾಯಿ: ಇದರಲ್ಲಿ ಮತ್ತೆ ನೀರಿನಂಶ ಮತ್ತು ನಾರಿನಂಶ ಅಧಿಕವಾಗಿದ್ದು ಉಬ್ಬುವಿಕೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ, ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ