AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಮಲಗುವ ಮುನ್ನ ಈ ಒಂದು ಅಭ್ಯಾಸ ರೂಢಿಸಿಕೊಂಡರೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳೇ ಬರಲ್ಲ!

ಕೆಲವರು ಬೆಳಿಗ್ಗೆ ಹಣ್ಣುಗಳನ್ನು ತಿನ್ನುತ್ತಾರೆ, ಇನ್ನು ಕೆಲವರು ಸಂಜೆ ತಿನ್ನುತ್ತಾರೆ. ಈ ರೀತಿ ಪ್ರತಿನಿತ್ಯ ಒಂದಲ್ಲಾ ಒಂದು ಹಣ್ಣುಗಳನ್ನು ತಿನ್ನುವ ಅಭ್ಯಾಸ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದರಲ್ಲಿಯೂ ನಮ್ಮಲ್ಲಿಯೇ ಹೇರಳವಾಗಿ ಲಭ್ಯವಿರುವ ಪಪ್ಪಾಯಿ ಹಣ್ಣನ್ನು ಸೇವನೆ ಮಾಡುವುದು ದೇಹಕ್ಕೆ ಬಹಳ ಪ್ರಯೋಜನಕಾರಿ ಮಾತ್ರವಲ್ಲ, ಈ ಹಣ್ಣನ್ನು ಮಲಗುವ ಮುನ್ನ ಸೇವನೆ ಮಾಡುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂಬುದು ನಿಮಗೆ ತಿಳಿದಿದೆಯೇ? ಹೌದು. ಈ ಹಣ್ಣನ್ನು ರಾತ್ರಿ ತಿನ್ನುವುದೇ ಒಳ್ಳೆಯದು ಎನ್ನಲಾಗುತ್ತದೆ. ಹಾಗಾದರೆ ಯಾಕೆ ಮಲಗುವ ಮೊದಲು ಈ ಹಣ್ಣನ್ನು ಸೇವನೆ ಮಾಡಬೇಕು, ಇದರಿಂದ ಸಿಗುವ ಪ್ರಯೋಜನಗಳೇನು ಎಂಬುದನ್ನು ತಿಳಿದುಕೊಳ್ಳಿ. ಈ ಕುರಿತ ಮತ್ತಷ್ಟು ಮಾಹಿತಿ ಇಲ್ಲಿದೆ.

ರಾತ್ರಿ ಮಲಗುವ ಮುನ್ನ ಈ ಒಂದು ಅಭ್ಯಾಸ ರೂಢಿಸಿಕೊಂಡರೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳೇ ಬರಲ್ಲ!
Eating Papaya Before Bed
ಪ್ರೀತಿ ಭಟ್​, ಗುಣವಂತೆ
|

Updated on: Nov 06, 2025 | 6:15 PM

Share

ಪಪ್ಪಾಯಿ (Papaya) ಹಣ್ಣಿನ ಪರಿಚಯ ಸಾಮಾನ್ಯವಾಗಿ ಎಲ್ಲರಿಗೂ ಇರುತ್ತದೆ. ಆದರೆ ಇದನ್ನು ಕೊಂಡು ತಿನ್ನುವವರ ಸಂಖ್ಯೆ ಮಾತ್ರ ಬಹಳ ಕಡಿಮೆ. ಮಾರುಕಟ್ಟೆಯಲ್ಲಿ ವಿದೇಶಿ ಹಣ್ಣುಗಳಿಗಿರುವ ಸ್ಥಾನಮಾನ ಇದಕ್ಕೆ ಸಿಗುವುದು ತೀರಾ ಕಡಿಮೆ. ಮಾತ್ರವಲ್ಲ ಇದರ ಪ್ರಯೋಜನಗಳ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ನಮ್ಮ ನೆಲದಲ್ಲಿಯೇ ಆಗುವ ಈ ಒಂದು ಹಣ್ಣಿನಲ್ಲಿ ನೀವು ಊಹಿಸಲೂ ಸಾಧ್ಯವಾಗದಂತಹ ಶಕ್ತಿ ಇದೆ. ಹೌದು, ಪಪ್ಪಾಯಿ ಹಣ್ಣನ್ನು ಸರಿಯಾದ ಸಮಯದಲ್ಲಿ ಸೇವನೆ ಮಾಡಿದರೆ ಇದರಿಂದ ಸಿಗುವ ಪ್ರಯೋಜನಗಳು ಯಾವ ಹಣ್ಣಿನಲ್ಲಿಯೂ ಸಿಗಲ್ಲ. ಅದರಲ್ಲಿಯೂ ಆರೋಗ್ಯ (Health) ತಜ್ಞರು ಹೇಳುವ ಪ್ರಕಾರ, ಮಲಗುವ ಮುನ್ನ ಪಪ್ಪಾಯಿ ತಿನ್ನುವುದರಿಂದ ದೇಹಕ್ಕೆ ಹೆಚ್ಚಿನ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಸಾಮಾನ್ಯವಾಗಿ ರಾತ್ರಿ ಹಣ್ಣುಗಳ ಸೇವನೆ ಮಾಡಬಾರದು ಎಂದು ಹೇಳುತ್ತಾರೆ. ಆದರೆ ಈ ಹಣ್ಣನ್ನು ಮಾತ್ರ ರಾತ್ರಿ ತಿನ್ನುವುದೇ ಒಳ್ಳೆಯದು ಎನ್ನಲಾಗುತ್ತದೆ. ಹಾಗಾದರೆ ಯಾಕೆ ಮಲಗುವ ಮೊದಲು ಈ ಹಣ್ಣನ್ನು ಸೇವನೆ ಮಾಡಬೇಕು, ಇದರಿಂದ ಸಿಗುವ ಪ್ರಯೋಜನಗಳೇನು ಎಂಬುದನ್ನು ತಿಳಿದುಕೊಳ್ಳಿ. ಈ ಕುರಿತ ಮತ್ತಷ್ಟು ಮಾಹಿತಿ ಇಲ್ಲಿದೆ.

ಮಲಗುವ ಮುನ್ನ ನಾವು ಸೇವನೆ ಮಾಡುವ ಆಹಾರದಲ್ಲಿ ಪಪ್ಪಾಯಿಯನ್ನು ಸೇರಿಸಿಕೊಳ್ಳುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇಂತಹ ಅಭ್ಯಾಸ ದೇಹಕ್ಕೆ ಹೆಚ್ಚಿನ ಪ್ರಯೋಜನಗಳನ್ನು ನೀಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಸಾಮಾನ್ಯವಾಗಿ ಪಪ್ಪಾಯಿಯಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ನಾರಿನಂಶಗಳು ಸಮೃದ್ಧವಾಗಿದ್ದು ಈ ಹಣ್ಣನ್ನು ಮಲಗುವ ಮುನ್ನ ಸೇವನೆ ಮಾಡುವುದರಿಂದ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಜೀರ್ಣಕ್ರಿಯೆ ಸಮಸ್ಯೆ, ಮಲಬದ್ಧತೆ, ತೂಕ ಹೆಚ್ಚಳ ಸೇರಿದಂತೆ ನಾನಾ ರೀತಿಯ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಬಹುದು.

ಇದನ್ನೂ ಓದಿ: ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಅತಿಯಾಗಿ ಈ ಹಣ್ಣನ್ನು ಸೇವನೆ ಮಾಡಿದ್ರೆ ಸಮಸ್ಯೆಗಳು ಸಾಲು ಸಾಲಾಗಿ ಬರುತ್ತೆ

ರಾತ್ರಿ ಸಮಯದ್ಲಲೇಕೆ ಪಪ್ಪಾಯಿ ತಿನ್ನಬೇಕು?

  • ಪಪ್ಪಾಯಿಯಲ್ಲಿ ಪಪೈನ್ ಎಂಬ ಕಿಣ್ವವಿದ್ದು, ಇದು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಹಾಗಾಗಿ ರಾತ್ರಿ ಊಟದ ನಂತರ ಪಪ್ಪಾಯಿ ತಿಂದರೆ, ಅದು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ. ಮಾತ್ರವಲ್ಲ ಇದು ಗ್ಯಾಸ್, ಆಮ್ಲೀಯತೆ ಅಥವಾ ಮಲಬದ್ಧತೆಯಂತಹ ಸಮಸ್ಯೆಗಳಿಂದಲೂ ಪರಿಹಾರವನ್ನು ನೀಡುತ್ತದೆ.
  • ತೂಕ ಇಳಿಸಿಕೊಳ್ಳಲು ಹೆಣಗಾಡುತ್ತಿರುವವರು ರಾತ್ರಿ ಸಮಯದಲ್ಲಿ ಪಪ್ಪಾಯಿ ಹಣ್ಣನ್ನು ತಿನ್ನುವುದು ಬಹಳ ಉತ್ತಮ. ಏಕೆಂದರೆ ಇದರಲ್ಲಿ ಕ್ಯಾಲೋರಿಗಳು ಕಡಿಮೆ ಮತ್ತು ಫೈಬರ್ ಅಧಿಕವಾಗಿದ್ದು, ಇದು ದೀರ್ಘಕಾಲದ ವರೆಗೆ ಹೊಟ್ಟೆ ತುಂಬಿರುವಂತೆ ನೋಡಿಕೊಳ್ಳುತ್ತದೆ. ಇದರಿಂದ ತಡರಾತ್ರಿಯಲ್ಲಿ ಏನನ್ನಾದರೂ ತಿನ್ನುವ ಬಯಕೆ ಕೂಡ ಕಡಿಮೆಯಾಗುತ್ತದೆ. ಮಾತ್ರವಲ್ಲ ಈ ಹಣ್ಣಿನ ಸೇವನೆ ದೇಹದ ಚಯಾಪಚಯ ಕ್ರಿಯೆಯನ್ನು ವೇಗಗೊಳಿಸುವುದರ ಜೊತೆಗೆ ಕೊಬ್ಬನ್ನು ಬರ್ನ್ ಮಾಡಲು ಸಹಾಯ ಮಾಡುತ್ತದೆ.
  • ಪಪ್ಪಾಯಿಯಲ್ಲಿ ವಿಟಮಿನ್ ಎ, ಸಿ ಮತ್ತು ಇ ಸಮೃದ್ಧವಾಗಿದ್ದು, ಇದು ಚರ್ಮಕ್ಕೆ ಒಳಗಿನಿಂದ ಹೊಳಪು ನೀಡುತ್ತದೆ. ಅದಕ್ಕಾಗಿ ಮಲಗುವ ಮುನ್ನ ಪಪ್ಪಾಯಿ ಹಣ್ಣನ್ನು ತಿನ್ನುವುದರಿಂದ ದೇಹದಿಂದ ವಿಷವನ್ನು ತೆಗೆದು ಹೊರಹಾಕಲು ಸಹಾಯ ಮಾಡುತ್ತದೆ, ಮಾತ್ರವಲ್ಲ ಇದರ ನಿಯಮಿತ ಸೇವನೆ ಮೊಡವೆಗಳು ಮತ್ತು ಕಲೆಗಳನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಹಾಗಾಗಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ ಪಡೆಯಲು ಪಪ್ಪಾಯಿ ಸೇವನೆ ಬಹಳ ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ