ಪಪ್ಪಾಯಿ ಹಣ್ಣು ಸವಿಯಲು ಇಷ್ಟಾನಾ? ಮಧುಮೇಹ ಸಮಸ್ಯೆಯಿಂದ ಪರಿಹಾರ ಪಡೆಯಲು ಉತ್ತಮ ಮಾರ್ಗ

ದೇಹದಲ್ಲಿ ಇನ್ಸುಲಿನ್ ಸರಿಯಾಗಿ ಕೆಲಸ ನಿರ್ವಹಿಸಿದರೆ ಮಧುಮೇಹಿಗಳಲ್ಲಿ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿರುತ್ತದೆ. ಆರೋಗ್ಯ ತಜ್ಞರ ಪ್ರಕಾರ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ನಿಮ್ಮ ಆಹಾರ ಕ್ರಮ ಬದಲಾಗಬೇಕಿದೆ.

ಪಪ್ಪಾಯಿ ಹಣ್ಣು ಸವಿಯಲು ಇಷ್ಟಾನಾ? ಮಧುಮೇಹ ಸಮಸ್ಯೆಯಿಂದ ಪರಿಹಾರ ಪಡೆಯಲು ಉತ್ತಮ ಮಾರ್ಗ
ಪಪ್ಪಾಯಿ ಹಣ್ಣು

ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಆಹಾರ ಮತ್ತು ಜೀವನ ಶೈಲಿಯ ಬಗ್ಗೆ ಹೆಚ್ಚು ಗಮನವಹಿಸಬೇಕಾಗುತ್ತದೆ. ಅಧಿಕ ಸಕ್ಕರೆ ಅಂಶವನ್ನು ಹೊಂದಿರುವ ಆಹಾರ ಪದಾರ್ಥಗಳನ್ನು ಸೇವಿಸದಿರುವುದು ಉತ್ತಮ. ಹಾಗಿರುವಾಗ ಪಪ್ಪಾಯಿ ಹಣ್ಣು ಮಧುಮೇಹಿಗಳಿಗೆ ಉತ್ತಮ ಔಷಧವಾಗಿದೆ. ಇದರ ಸೇವನೆಯಿಂದ ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯಾಗುತ್ತದೆ. ದೇಹದಲ್ಲಿ ಇನ್ಸುಲಿನ್ ಬಹಳ ಮುಖ್ಯ. ಗ್ಲೂಕೋಸ್ಅನ್ನು ಆಹಾರದ ಮೂಲಕ ಜೀವಕೋಶಗಳಿಗೆ ಸಾಗಿಸಲು ಸಹಾಯ ಮಾಡುತ್ತದೆ. ಇದು ನಮ್ಮ ದೇಹಕ್ಕೆ ಶಕ್ತಿಯನ್ನು ಬಿಡುಗಡೆ ಮಾಡುತ್ತದೆ. ದೇಹದಲ್ಲಿನ ಇನ್ಸುಲಿನ್ ಸೂಕ್ಷ್ಮತೆಯಿಂದಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವು ಹೆಚ್ಚಾಗುವ ಸಾಧ್ಯತೆಗಳಿರುತ್ತದೆ.

ದೇಹದಲ್ಲಿ ಇನ್ಸುಲಿನ್ ಸರಿಯಾಗಿ ಕೆಲಸ ನಿರ್ವಹಿಸಿದರೆ ಮಧುಮೇಹಿಗಳಲ್ಲಿ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿರುತ್ತದೆ. ಆರೋಗ್ಯ ತಜ್ಞರ ಪ್ರಕಾರ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ನಿಮ್ಮ ಆಹಾರ ಕ್ರಮ ಬದಲಾಗಬೇಕಿದೆ. ಪ್ರತಿನಿತ್ಯ ವ್ಯಾಯಾಮದ ಮೂಲಕ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

ಪಪ್ಪಾಯಿ ಹಣ್ಣಿನಲ್ಲಿ ಜೀವಸತ್ವಗಳು, ಖನಿಜಗಳು, ಉತ್ಕರ್ಷಣ ನಿರೋಧಕಗಳು ಮತ್ತು ಫೈಬರ್ ಸಮೃದ್ಧವಾಗಿರುತ್ತದೆ. ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆ ಮತ್ತು ಚಯಾಪಚಯವನ್ನು ಸುಧಾರಿಸುತ್ತದೆ. ಪಪ್ಪಾಯವು ಫ್ಲೇವೊನೈಡ್​ಗಳನ್ನು ಹೊಂದಿರುತ್ತದೆ. ನಿಮ್ಮ ಆಹಾರ ಪದ್ಧತಿಯಲ್ಲಿ ಒಂದು ಅಥವಾ ಎರಡು ಹಣ್ಣನ್ನು ಸೇವಿಸುವ ಪದ್ಧತಿಯಿರಲಿ ಅಷ್ಟೆ. ಅತಿಯಾದರೆ ಅಮೃತವೂ ವಿಷ ಎಂಬ ಮಾತನಂತೆ ಹೆಚ್ಚಾಗಿ ಪಪ್ಪಾಯಿ ಹಣ್ಣನ್ನು ಸೇವಿಸುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು.

ನಿಮ್ಮ ಆರೋಗ್ಯದಲ್ಲಿ ತಾಜಾ ಹಣ್ಣು ಮತ್ತು ತರಕಾರಿಗಳ ಸೇವನೆ ಇರಲಿ. ಏನೇ ಏರು ಪೇರು ಉಂಟಾದರೂ ಹತ್ತಿರದ ವೈದ್ಯರಲ್ಲಿ ಸಲಹೆ ಪಡೆಯುವುದು ಉತ್ತಮ. ಆರೋಗ್ಯಕ್ಕೆ ಪ್ರಮುಖವಾಗಿ ಪೌಷ್ಟಿಕತೆ ಮುಖ್ಯ. ಹಾಗಾಗಿ ನಿಮ್ಮ ಆಹಾರ ಕ್ರಮ ಮತ್ತು ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಿ.

ಇದನ್ನೂ ಓದಿ:

Papaya: ಪಪ್ಪಾಯಿ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬಹುದೇ?

Health Tips: ಈ 5 ಹಣ್ಣಿನ ಸಂಯೋಜನೆಗಳು ನಿಮ್ಮ ಆರೋಗ್ಯಕ್ಕೆ ಹಾನಿ ತರಬಹುದು! ಆರೋಗ್ಯದ ಕುರಿತು ಗಮನವಿರಲಿ

Read Full Article

Click on your DTH Provider to Add TV9 Kannada