Papaya Leaf Juice: ಈ ಎಲೆಯ ರಸವನ್ನು ಸ್ವಲ್ಪ ಕುಡಿದರೆ ಸಾಕು ಎಲ್ಲಾ ರೋಗಗಳು ದೂರವಾಗುತ್ತೆ

ಪಪ್ಪಾಯಿ ಹಣ್ಣು ಮಾತ್ರವಲ್ಲದೆ ಅದರ ಎಲೆಗಳು ಸಹ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಆಯುರ್ವೇದ ತಜ್ಞರ ಪ್ರಕಾರ ಪಪ್ಪಾಯಿ ಸಸ್ಯದ ಪ್ರತಿಯೊಂದು ಭಾಗವು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಆದ್ದರಿಂದ ಇದನ್ನು ಅನೇಕ ರೋಗಗಳನ್ನು ಗುಣಪಡಿಸಲು ಬಳಸಲಾಗುತ್ತದೆ. ಹಾಗಾದರೆ ಪಪ್ಪಾಯಿ ಎಲೆಯ, ರಸವನ್ನು ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಈ ಬಗ್ಗೆ ತಜ್ಞರು ಹೇಳುವುದೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

Papaya Leaf Juice: ಈ ಎಲೆಯ ರಸವನ್ನು ಸ್ವಲ್ಪ ಕುಡಿದರೆ ಸಾಕು ಎಲ್ಲಾ ರೋಗಗಳು ದೂರವಾಗುತ್ತೆ
Edited By:

Updated on: Jun 10, 2024 | 11:45 AM

ಪಪ್ಪಾಯಿ ಹಣ್ಣು ಎಲ್ಲಾ ಋತುಗಳಲ್ಲಿ ಸಾಮಾನ್ಯವಾಗಿ ಲಭ್ಯವಿರುತ್ತದೆ. ಈ ರುಚಿಕರವಾದ ಹಣ್ಣಿನಲ್ಲಿ ಅನೇಕ ಔಷಧೀಯ ಗುಣಗಳು ಮತ್ತು ಪೋಷಕಾಂಶಗಳು ಅಡಗಿವೆ. ಇದು ದೇಹಕ್ಕೆ ತುಂಬಾ ಒಳ್ಳೆಯದು. ಆದರೆ ಪಪ್ಪಾಯಿ ಹಣ್ಣು ಮಾತ್ರವಲ್ಲ, ಅದರ ಎಲೆಗಳು ಸಹ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದು, ಪಪ್ಪಾಯಿ ಸಸ್ಯದ ಪ್ರತಿಯೊಂದು ಭಾಗವು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಇವುಗಳನ್ನು ಆಯುರ್ವೇದದಲ್ಲಿಯೂ ಅನೇಕ ರೋಗಗಳನ್ನು ಗುಣಪಡಿಸಲು ಬಳಸಲಾಗುತ್ತದೆ. ಹಾಗಾದರೆ ಪಪ್ಪಾಯಿ ಎಲೆಯ, ರಸವನ್ನು ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಈ ಬಗ್ಗೆ ತಜ್ಞರು ಹೇಳುವುದೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಪಪ್ಪಾಯಿ ಎಲೆಯ ರಸ ಕುಡಿಯುವುದರಿಂದ ಆಗುವ ಪ್ರಯೋಜನಗಳು;

  • ಪಪ್ಪಾಯಿಯಲ್ಲಿ ಪೋಷಕಾಂಶಗಳು, ಫೈಬರ್, ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ ಮತ್ತು ವಿಟಮಿನ್ ಇ ಸಮೃದ್ಧವಾಗಿದೆ. ಇದರಲ್ಲಿರುವ ಫೋಲಿಕ್ ಆಮ್ಲವು ದೇಹದಲ್ಲಿನ ಕೆಟ್ಟ ಅಮೈನೋ ಆಮ್ಲಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಡೆಂಗ್ಯೂನಿಂದ ಜ್ವರ ಹೆಚ್ಚಾದಾಗ ಪಪ್ಪಾಯಿ ಎಲೆಯ ರಸವನ್ನು ಕುಡಿಯುವುದು ತುಂಬಾ ಒಳ್ಳೆಯದು. ಅಲ್ಲದೆ ಇದು ರಕ್ತದಲ್ಲಿ ಪ್ಲೇಟ್ಲೆಟ್ಗಳನ್ನು ಹೆಚ್ಚಿಸಲು ಕೆಲಸ ಮಾಡುತ್ತದೆ.
  • ಪಪ್ಪಾಯಿಯಂತೆ, ಇದರ ಎಲೆಯ ರಸವೂ ಕೂಡ ಜೀರ್ಣಕ್ರಿಯೆಗೆ ಬಹಳ ಒಳ್ಳೆಯದು. ಅಲ್ಲದೆ ಈ ಎಲೆಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಮತ್ತು ಫೈಬರ್ ಇರುವುದರಿಂದ, ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಲು ತುಂಬಾ ಸಹಾಯಕವಾಗಿವೆ.
  • ಪಪ್ಪಾಯಿ ಎಲೆಯ ರಸದಲ್ಲಿರುವ ಕಿಣ್ವಗಳು ಉರಿಯೂತವನ್ನು ಕಡಿಮೆ ಮಾಡುತ್ತವೆ.
  • ಈ ರಸದಲ್ಲಿ ಪಪೈನ್ ಕಡಿಮೆ ಇದ್ದು. ಗಾಯಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಅಲ್ಲದೆ ಇದನ್ನು ಕುಡಿಯುವುದರಿಂದ ಫ್ರೀ ರಾಡಿಕಲ್ಗಳ ಅಪಾಯವನ್ನು ಕಡಿಮೆ ಮಾಡಬಹುದು.
  • ಜ್ಯೂಸ್ ಮಾಡುವ ಮೊದಲು ತಾಜಾ ಪಪ್ಪಾಯಿ ಎಲೆಗಳನ್ನು ತೊಳೆದು ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ, ನಂತರ ಅದನ್ನು ಸೋಸಿ ಕುಡಿಯಿರಿ. (ಹೆಚ್ಚಿನ ಪ್ರಮಾಣದಲ್ಲಿ ಸೇವನೆ ಮಾಡಬೇಡಿ) ಅದನ್ನು ಮಿತವಾಗಿ ಮಾತ್ರ ಬಳಸಿ.

(ಸೂಚನೆ: ಇಲ್ಲಿ ನೀಡಲಾದ ಆರೋಗ್ಯ ಮಾಹಿತಿಗಳನ್ನು ಅನುಸರಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.)

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

 

Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us