AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PCOS Diet: ಪಿಸಿಒಎಸ್ ರೋಗಲಕ್ಷಣಗಳನ್ನು ಹತೋಟಿಯಲ್ಲಿಡಲು ಇಲ್ಲಿವೆ 5 ಗಿಡಮೂಲಿಕೆಗಳು

ಪಿಸಿಒಎಸ್​​ಗೆ ಶಾಶ್ವತ ಚಿಕಿತ್ಸೆ ಇಲ್ಲವಾದರೂ, ನಿಮ್ಮ ಆಹಾರ ಮತ್ತು ಜೀವನಶೈಲಿಯಲ್ಲಿ ನಿರ್ದಿಷ್ಟ ಹೊಂದಾಣಿಕೆಗಳನ್ನು ಮಾಡುವ ಮೂಲಕ ಇದನ್ನು ಹತೋಟಿಯಲ್ಲಿಟ್ಟುಕೊಳ್ಳಬಹುದು. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

PCOS Diet: ಪಿಸಿಒಎಸ್ ರೋಗಲಕ್ಷಣಗಳನ್ನು ಹತೋಟಿಯಲ್ಲಿಡಲು ಇಲ್ಲಿವೆ 5 ಗಿಡಮೂಲಿಕೆಗಳು
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 14, 2023 | 5:33 PM

ಇತ್ತೀಚಿನ ದಿನಗಳಲ್ಲಿ ಹರೆಯದ ಹೆಣ್ಣುಮಕ್ಕಳನ್ನು ಬಾಧಿಸುತ್ತಿರುವ ಸಮಸ್ಯೆಗಳಲ್ಲಿ ಪಿಸಿಓಡಿ ಸಮಸ್ಯೆ (ಪಾಲಿಸಿಸ್ಟಿಕ್ ಒವೇರಿಯನ್ ಡಿಸೀಸ್) ಕೂಡ ಒಂದು. ಇದು ದೇಹದಲ್ಲಿ ಆಂಡ್ರೊಜೆನ್​​​ಗಳ ಅಸಮತೋಲನವನ್ನು ಉಂಟುಮಾಡುತ್ತದೆ, ಬಂಜೆತನಕ್ಕೆ ಕಾರಣವಾಗಬಲ್ಲ ಈ ಸಮಸ್ಯೆಯಿಂದ ಇತರ ಅನೇಕ ರೋಗಗಳು ಕಾಣಿಸಿಕೊಳ್ಳಬಹುದು. ಅನೇಕ ಸ್ತ್ರೀಯರಲ್ಲಿ ಆಹಾರ ಪದ್ಧತಿಯಲ್ಲಿ ಯಾವುದೇ ವ್ಯತ್ಯಾಸವಿಲ್ಲದಿದ್ದರೂ ಅಧಿಕ ತೂಕ, ಕೂದಲು ಉದುರುವಿಕೆ, ಮೊಡವೆ, ಗಂಡಸರಂತೆ ಕೂದಲು ಬರುವುದು ಮೊದಲಾದ ಸಮಸ್ಯೆಗಳನ್ನು ಕಾಣಬಹುದು. ಪಿಸಿಒಎಸ್ ಗೆ ಶಾಶ್ವತ ಚಿಕಿತ್ಸೆ ಇಲ್ಲವಾದರೂ, ನಿಮ್ಮ ಆಹಾರ ಮತ್ತು ಜೀವನಶೈಲಿಯಲ್ಲಿ ನಿರ್ದಿಷ್ಟ ಹೊಂದಾಣಿಕೆಗಳನ್ನು ಮಾಡುವ ಮೂಲಕ ಇದನ್ನು ಕಂಟ್ರೋಲ್ ಮಾಡಬಹುದು. ಇದನ್ನು ಗಮನದಲ್ಲಿಟ್ಟುಕೊಂಡು, ಪಿಸಿಒಎಸ್ ರೋಗಲಕ್ಷಣಗಳನ್ನು ನೈಸರ್ಗಿಕವಾಗಿ ಸರಾಗಗೊಳಿಸಲು ಸಹಾಯ ಮಾಡುವ ಕೆಲವು ಗಿಡಮೂಲಿಕೆಗಳು ಮತ್ತು ಮಸಾಲೆಗಲ ಬಗ್ಗೆಇಲ್ಲಿದೆ ಮಾಹಿತಿ.

ಪಿಸಿಓಎಸ್​​ನ ಲಕ್ಷಣಗಳು ಯಾವುವು?

ಮುಖ, ಹೊಟ್ಟೆ ಮತ್ತು ಬೆನ್ನು ಸೇರಿದಂತೆ ಶರೀರದ ಮೇಲೆ ಅಧಿಕವಾಗಿ ಕೂದಲು ಕಾಣಿಸಿಕೊಳ್ಳುವುದು.

ಅನಿಯಮಿತ ಋತುಚಕ್ರಗಳು

ತೂಕ ಹೆಚ್ಚಾಗುವುದು

ಕೂದಲು ಉದುರುವುದು

ಬಂಜೆತನ

ಋತುಚಕ್ರ ಕಾಣಿಸಿಕೊಂಡಾಗ ಅತಿ ತೀವ್ರವಾದ ನೋವು ಕಾಣಿಸಿಕೊಳ್ಳುವುದು

ಪಿಸಿಒಎಸ್ ರೋಗಲಕ್ಷಣಗಳನ್ನು ಹತೋಟಿಯಲ್ಲಿಡಲು ಸಹಾಯ ಮಾಡುವ 5 ಗಿಡಮೂಲಿಕೆಗಳು ಮತ್ತು ಮಸಾಲೆ ಬಗ್ಗೆ ಇಲ್ಲಿವೆ ಮಾಹಿತಿ:

1. ದಾಲ್ಚಿನ್ನಿ ಪಿಸಿಒಎಸ್ ರೋಗಲಕ್ಷಣಗಳನ್ನು ಹಿಡಿತದಲ್ಲಿಟ್ಟುಕೊಳ್ಳಲು ಅತ್ಯುತ್ತಮ ಮಸಾಲೆಯಾಗಿದೆ. ಇದು ಸಿನ್ನಮಾಲ್ಡಿಹೈಡ್ ಎಂಬ ರಾಸಾಯನಿಕವನ್ನು ಹೊಂದಿರುತ್ತದೆ, ಇದು ಪ್ರೊಜೆಸ್ಟರಾನ್ ಅನ್ನು ಹೆಚ್ಚಿಸುತ್ತದೆ ಮತ್ತು ಮಹಿಳೆಯರಲ್ಲಿ ಟೆಸ್ಟೋಸ್ಟೆರಾನ್ (ಪುರುಷ ಲೈಂಗಿಕ ಹಾರ್ಮೋನ್) ಅನ್ನು ಕಡಿಮೆ ಮಾಡುತ್ತದೆ ಎಂದು ಅಧ್ಯಯನಗಳಿಂದ ಸಾಬೀತಾಗಿದೆ. ನಿಮ್ಮ ಆಹಾರದಲ್ಲಿ ದಾಲ್ಚಿನ್ನಿಯನ್ನು ಸೇರಿಸುವುದರಿಂದ ಇನ್ಸುಲಿನ್ ಪ್ರತಿರೋಧ ಮತ್ತು ಋತುಚಕ್ರವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ (ಎನ್ಐಎಚ್) ಸೂಚಿಸುತ್ತದೆ. ಜೊತೆಗೆ ದಾಲ್ಚಿನ್ನಿ ಚಹಾವನ್ನು ಹೀರುವ ಮೂಲಕ ನೀವು ಈ ಮಸಾಲೆಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

2. ಅರಿಶಿನ, ಪಿಸಿಒಎಸ್ ಚಿಕಿತ್ಸೆಯ ಸಾಮರ್ಥ್ಯ ಸೇರಿದಂತೆ ವಿವಿಧ ಆರೋಗ್ಯ ಪ್ರಯೋಜನಗಳೊಂದಿಗೆ ಸಂಬಂಧ ಹೊಂದಿದೆ. ಕರ್ಕ್ಯುಮಿನ್ ಎಂಬ ಉತ್ಕರ್ಷಣ ನಿರೋಧಕ ಇದರಲ್ಲಿದ್ದು ಇನ್ಸುಲಿನ್ ಪ್ರತಿರೋಧ ಮತ್ತು ಅಧಿಕ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆಯುರ್ವೇದದ ಪ್ರಕಾರ, ಅರಿಶಿನವು ಋತುಚಕ್ರವನ್ನು ನಿಯಂತ್ರಿಸಲು ಮತ್ತು ಒಟ್ಟಾರೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

3. ತುಳಸಿ, ಆಂಟಿ- ಆಂಡ್ರೊಜೆನಿಕ್ ಗುಣಲಕ್ಷಣಗಳನ್ನು ಹೊಂದಿದೆ, ಇದು ಮಹಿಳೆಯರಲ್ಲಿ ಪುರುಷ ಲೈಂಗಿಕ ಹಾರ್ಮೋನ್ ಟೆಸ್ಟೋಸ್ಟೆರಾನ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಅತಿಯಾದ ಕೂದಲು ಬೆಳವಣಿಗೆ ಮತ್ತು ಮೊಡವೆಗಳಂತಹ ರೋಗಲಕ್ಷಣಗಳನ್ನು ನಿಯಂತ್ರಿಸುತ್ತದೆ. ಅಡಾಪ್ಟೋಜೆನ್ ಆಗಿ, ಇದು ಕಾರ್ಟಿಸೋಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಆ ಮೂಲಕ ಇನ್ಸುಲಿನ್ ಮಟ್ಟವನ್ನು ಕಾಪಾಡಿಕೊಳ್ಳುತ್ತದೆ. ಜೊತೆಗೆ ಪಿಸಿಒಎಸ್ ರೋಗಲಕ್ಷಣಗಳನ್ನು ನೈಸರ್ಗಿಕವಾಗಿ ಹತೋಟಿಯಲ್ಲಿಡಲು ನಿಮ್ಮ ಸಲಾಡ್ ಅಥವಾ ಚಹಾಕ್ಕೆ ತುಳಸಿಯನ್ನು ಸೇರಿಸಿಕೊಳ್ಳಬಹುದು.

ಇದನ್ನೂ ಓದಿ:  ಪಿಸಿಓಎಸ್ ರೋಗಲಕ್ಷಣಗಳನ್ನು ನಿರ್ವಹಿಸಲು 6 ಮನೆಮದ್ದುಗಳು

4. ಅಶ್ವಗಂಧವನ್ನು ಶತಮಾನಗಳಿಂದ ಔಷಧೀಯ ಗಿಡಮೂಲಿಕೆಯಾಗಿ ಬಳಸಲಾಗುತ್ತಿದೆ. ಪಿಸಿಒಎಸ್ ಸಂಬಂಧಿತ ರೋಗಲಕ್ಷಣಗಳನ್ನು ನಿರ್ವಹಿಸಲು ಸಹ ಇದು ಸಹಾಯ ಮಾಡುತ್ತದೆ. ಜೊತೆಗೆ ಕಾರ್ಟಿಸೋಲ್ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ಆ ಮೂಲಕ ಒತ್ತಡ-ಸಂಬಂಧಿತ ತೂಕ ಹೆಚ್ಚಳವನ್ನು ಕಡಿಮೆ ಮಾಡುತ್ತದೆ. ಹೆಚ್ಚುವರಿಯಾಗಿ, ಇದು ಆತಂಕ, ಆಯಾಸ ಮತ್ತು ಖಿನ್ನತೆಯಂತಹ ರೋಗಲಕ್ಷಣಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.

5. ನಾವು ಸಾಮಾನ್ಯವಾಗಿ ಮೆಂತ್ಯವನ್ನು ಜೀರ್ಣಕಾರಿ ಶಕ್ತಿಯನ್ನು ಹೆಚ್ಚಿಸಲು ಬಳಸುತ್ತಿದ್ದರೂ, ಪಿಸಿಒಎಸ್ ಅನ್ನು ಮುಷ್ಟಿಯಲ್ಲಿಟ್ಟುಕೊಳ್ಳಲು ಇದು ಸಾಕಷ್ಟು ಪ್ರಯೋಜನಕಾರಿಯಾಗಿದೆ. ಮೆಂತ್ಯ ಬೀಜಗಳನ್ನು ಆಹಾರದಲ್ಲಿ ಸೇವಿಸುವುದರಿಂದ ಇನ್ಸುಲಿನ್ ಮಟ್ಟ ಮತ್ತು ಗ್ಲೂಕೋಸ್ ಅಸಹಿಷ್ಣುತೆಯನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ ಎಂದು ಹಲವಾರು ಅಧ್ಯಯನಗಳು ಸೂಚಿಸುತ್ತವೆ. ಇದು ಟೆಸ್ಟೋಸ್ಟೆರಾನ್ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಅದರ ಪ್ರಯೋಜನಗಳನ್ನು ಪಡೆಯಲು, ಕೆಲವು ಮೆಂತ್ಯ ಬೀಜಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ, ಮರುದಿನ ಬೆಳಿಗ್ಗೆ ಕುದಿಸಿ, ಸೋಸಿ, ಮತ್ತು ಮಿಶ್ರಣವನ್ನು ಸ್ವಲ್ಪ ಬೆಲ್ಲದೊಂದಿಗೆ ತಿನ್ನಬಹುದು.

ಪಿಸಿಒಎಸ್ ರೋಗಲಕ್ಷಣಗಳನ್ನು ನೈಸರ್ಗಿಕವಾಗಿ ಹತೋಟಿಯಲ್ಲಿಡಲು ಈ ಗಿಡಮೂಲಿಕೆಗಳು ಮತ್ತು ಮಸಾಲೆಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿ. ಆದರೆ ನಿಮ್ಮ ಆಹಾರದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳನ್ನು ಮಾಡುವ ಮೊದಲು ನಿಮ್ಮ ವೈದ್ಯರು ಅಥವಾ ಪೌಷ್ಟಿಕತಜ್ಞರನ್ನು ಸಂಪರ್ಕಿಸುವುದು ಬಹಳ ಮುಖ್ಯ.

ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ