AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಕ್ಕೆ ಒಂದು ಮುಷ್ಟಿ ಕಡಲೆಕಾಯಿ ನಮ್ಮ ಹೃದಯವನ್ನು ಆರೋಗ್ಯವಾಗಿಟ್ಟುಕೊಳ್ಳಲು ಸಹಾಯ ಮಾಡುತ್ತದೆಯೇ?

ಇತ್ತೀಚಿನ ದಿನಗಳಲ್ಲಿ, ವಯಸ್ಸಿನ ಹೊರತಾಗಿಯೂ ಬಹಳಷ್ಟು ಜನ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ರಕ್ತನಾಳಗಳಲ್ಲಿ ಕೊಬ್ಬು ಶೇಖರಣೆಯಾಗಿ ರಕ್ತದ ಹರಿವನ್ನು ತಡೆದಾಗ ಹೃದಯಾಘಾತವಾಗುತ್ತದೆ. ಆದರೆ ಅಡುಗೆ ಮನೆಯಲ್ಲಿ ಸುಲಭವಾಗಿ ಸಿಗುವ ಕಡಲೆಕಾಯಿ ಈ ಅಪಾಯವನ್ನು ತಡೆಯಬಹುದು ಎಂದರೆ ನಂಬುತ್ತೀರಾ? ಹೌದು, ಬಡವರ ಬಾದಾಮಿಗೆ ಹೃದಯದ ಆರೋಗ್ಯ ಕಾಪಾಡುವ ಶಕ್ತಿ ಇದೆ. ಹಾಗಾದರೆ ಹೇಗೆ ಕಾಪಾಡುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ದಿನಕ್ಕೆ ಒಂದು ಮುಷ್ಟಿ ಕಡಲೆಕಾಯಿ ನಮ್ಮ ಹೃದಯವನ್ನು ಆರೋಗ್ಯವಾಗಿಟ್ಟುಕೊಳ್ಳಲು ಸಹಾಯ ಮಾಡುತ್ತದೆಯೇ?
Peanuts And Heart HealthImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 19, 2026 | 9:28 PM

Share

ಇಂದಿನ ಜೀವನಶೈಲಿ ಮತ್ತು ಆಹಾರ ಪದ್ಧತಿಗಳ ಬದಲಾವಣೆಯಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚುತ್ತಿದೆ. ಆದರೆ ಪ್ರತಿದಿನ ಒಂದು ಮುಷ್ಟಿ ಕಡಲೆಕಾಯಿ (Peanuts) ಸೇವಿಸುವುದರಿಂದ ಹೃದಯದ ಆರೋಗ್ಯವನ್ನು (Heart Health) ಕಾಪಾಡಿಕೊಳ್ಳಲು ಸಹಾಯವಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಕಡಲೆಕಾಯಿಯಲ್ಲಿ ಆರೋಗ್ಯಕರ ಕೊಬ್ಬು, ಪ್ರೋಟೀನ್, ನಾರಿನಾಂಶ, ಮೆಗ್ನೀಷಿಯಂ ಹಾಗೂ ಪೊಟ್ಯಾಸಿಯಂ ಸಮೃದ್ಧವಾಗಿದ್ದು ನಮ್ಮ ಆರೋಗ್ಯಕ್ಕೆ ಬಹಳ ಸಹಾಯಕಾರಿ. ಹಾಗಾದರೆ ಇದರಿಂದ ಯಾವ ರೀತಿ ಅನುಕೂಲವಿದೆ, ಹೇಗೆ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಧಮನಿಗಳಲ್ಲಿ ಕೊಬ್ಬು ಜಮೆಯಾಗುವುದನ್ನು ತಡೆಯಬಹುದು

ಹೃದಯಕ್ಕೆ ರಕ್ತ ಪೂರೈಸುವ ಧಮನಿಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ (LDL) ಜಮೆಯಾಗುವುದನ್ನು ಪ್ಲಾಕ್ ಎಂದು ಕರೆಯಲಾಗುತ್ತದೆ. ಇದು ರಕ್ತನಾಳಗಳನ್ನು ಕಿರಿದಾಗಿಸಿ ಹೃದಯಾಘಾತದ ಅಪಾಯ ಹೆಚ್ಚಿಸುತ್ತದೆ. ಆದರೆ ಕಡಲೆಕಾಯಿಯಲ್ಲಿರುವ ಮೊನೋ ಅನ್‌ಸ್ಯಾಚುರೇಟೆಡ್ ಮತ್ತು ಪಾಲಿ ಅನ್‌ಸ್ಯಾಚುರೇಟೆಡ್ ಕೊಬ್ಬುಗಳು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.

ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ

ಕಡಲೆಕಾಯಿಯಲ್ಲಿರುವ ಮೆಗ್ನೀಷಿಯಂ ಮತ್ತು ಪೊಟ್ಯಾಸಿಯಂ ರಕ್ತನಾಳಗಳನ್ನು ಸಡಿಲಗೊಳಿಸಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ನೆರವಾಗುತ್ತವೆ. ಜೊತೆಗೆ ಇದರಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಇದನ್ನೂ ಓದಿ: ಪ್ರತಿದಿನ ಕೇವಲ 2 ಲವಂಗ ತಿಂದು ನೋಡಿ! ನಿಮಗೆ ಈ ಆರೋಗ್ಯ ಸಮಸ್ಯೆಯೇ ಬರಲ್ಲ

ತೂಕ ನಿಯಂತ್ರಣಕ್ಕೂ ಸಹಕಾರಿ

ಕಡಲೆಕಾಯಿಯಲ್ಲಿ ಪ್ರೋಟೀನ್ ಮತ್ತು ಫೈಬರ್ ಅಧಿಕವಾಗಿರುವುದರಿಂದ ಹೊಟ್ಟೆ ತುಂಬಿದ ಭಾವನೆಯನ್ನು ನೀಡುತ್ತದೆ. ಇದರಿಂದ ಅತಿಯಾಗಿ ತಿನ್ನುವ ಅಭ್ಯಾಸ ಕಡಿಮೆಯಾಗಿ ತೂಕ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ. ತೂಕ ನಿಯಂತ್ರಣದಲ್ಲಿದ್ದರೆ ಹೃದಯದ ಮೇಲಿನ ಒತ್ತಡವೂ ಕಡಿಮೆಯಾಗುತ್ತದೆ.

ಹೇಗೆ ಸೇವಿಸಬೇಕು?

ಪ್ರತಿದಿನ ಸುಮಾರು 25– 30 ಗ್ರಾಂ ಕಡಲೆಕಾಯಿ ಸೇವಿಸುವುದು ಸಾಕು. ಎಣ್ಣೆಯಲ್ಲಿ ಕರಿದ ಅಥವಾ ಹೆಚ್ಚು ಉಪ್ಪು ಹಾಕಿದ ಕಡಲೆಕಾಯಿಗಿಂತ ನೆನೆಸಿದ ಅಥವಾ ಡ್ರೈ ರೋಸ್ಟ್ ಮಾಡಿದ ಕಡಲೆಕಾಯಿ ಹೆಚ್ಚು ಆರೋಗ್ಯಕರ. ಮಧುಮೇಹ ಅಥವಾ ಹೃದಯ ಸಂಬಂಧಿ ಸಮಸ್ಯೆಗಳ ಅಪಾಯ ಇರುವವರು ತಮ್ಮ ದೈನಂದಿನ ಆಹಾರದಲ್ಲಿ ಕಡಲೆಕಾಯಿಯನ್ನು ಸೇರಿಸಿಕೊಳ್ಳಬಹುದು.

ಸೂಚನೆ: ಕಡಲೆಕಾಯಿ ಆರೋಗ್ಯಕರ ಆಹಾರವಾದರೂ, ಇದು ಯಾವುದೇ ಕಾಯಿಲೆಗೆ ನೇರ ಔಷಧವಲ್ಲ. ಸಮತೋಲನ ಆಹಾರ ಮತ್ತು ನಿಯಮಿತ ವ್ಯಾಯಾಮದ ಜೊತೆಗೆ ಸೇವಿಸಿದಾಗ ಹೆಚ್ಚಿನ ಪ್ರಯೋಜನ ದೊರೆಯುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ